ಬೆಂಗಳೂರು : ಅಕ್ಕಿ ಕಡಿತದ ಬಗ್ಗೆ ಬಾಯಿಗೆ ಬಂದಂತೆ ರೈತನ ಜೊತೆಗೆ ಮಾತನಾಡಿದ್ದಂತ ಸಚಿವ ಉಮೇಶ್ ಕತ್ತಿ, ಟೀಕೆಗೆ ಗುರಿಯಾಗಿದ್ದರು. ಈ ಬಗ್ಗೆ ಸ್ವತಹ ಸಿಎಂ ಯಡಿಯೂರಪ್ಪ ಅವರೇ ವಿಷಾದ ವ್ಯಕ್ತ ಪಡಿಸಿದ್ದರು. ಈ ಎಲ್ಲಾ ಘಟನೆ ನಂತ್ರ, ಸಚಿವ ಉಮೇಶ್ ಕತ್ತಿ ರಾಜ್ಯದ ಜನರ ಕ್ಷಮೆಯನ್ನು ಕೇಳಿದ್ದಾರೆ. ರೈತನ ಜೊತೆಗೆ ಮಾತನಾಡಿದಂತ ಆಡಿಯೋ ವೈರಲ್ ಆಗುತ್ತಿದ್ದಂತೆ, ಸಚಿವ ಉಮೇಶ್ ಕತ್ತಿ ಅಕ್ಕಿ ಕೇಳಿದ ರೈತನಿಗೆ ಸಾಯಲಿ ಅಂತ ಹೇಳಿದ್ದು …
Read More »ರಾಜ್ಯಾದ್ಯಂತಶೇ.50ರಷ್ಟು ನೌಕರರೊಂದಿಗೆ ಗಾರ್ಮೆಂಟ್ಸ್ ಓಪನ್ -ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜ್ಯಾದ್ಯಂತ ಗಾರ್ಮೆಂಟ್ಸ್ ನಲ್ಲಿ ಶೇ.50ರಷ್ಟು ನೌಕರರು ಕೆಲಸ ಮಾಡುವುದಕ್ಕೆ ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಲಾಗಿದೆ. ಇದೇ ವೇಳೆ ಆದೇಶದಲ್ಲಿ ಸೂಕ್ತ ಮುಂಜಾಗ್ರತ ಕ್ರಮಗಳನ್ನು ಅನುಸರಿಸಿ ಎಲ್ಲಾ ರೀತಿ ಕ್ರಮಗಳನ್ನು ತೆಗೆದುಕೊಂಡು ಬೆಂಗಳೂರು ನಗರದಲ್ಲಿರುವ ಗಾರ್ಮೆಂಟ್ಸ್ ಶೇ.50ರಷ್ಟು ನೌಕರರು ಕೆಲಸ ಮಾಡಲು ಅವಕಾಶ ನೀಡಲಾಗಿದೆ ಅಂತ ಹೇಳಲಾಗಿದೆ. ಕೆಲಸಕ್ಕೆ ತೆರಳುವವರು ಸೂಕ್ತವಾದ ದಾಖಲೆಗಳನ್ನು ಕೂಡ ಹೊಂದಿರಬೇಕು ಅಂತ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ. ಹೀಗಾಗಿ ಗಾರ್ಮೆಂಟ್ಸ್ ಕೆಲಸಕ್ಕೆ ತೆರಳುವವರು ಸೂಕ್ತವಾದ ದಾಖಲೆಗಳನ್ನು …
Read More »ತಲಾ 10 ಕೆ.ಜಿ ಉಚಿತ ಅಕ್ಕಿ, ಬಡ ಕುಟುಂಬಗಳಿಗೆ ₹10,000 ಕೊಡಬೇಕು: ಪ್ರಧಾನಿಗೆ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾದಿಂದ ಜನರನ್ನ ರಕ್ಷಣೆ ಮಾಡಲು ಅಗತ್ಯವಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಸಲಹೆ ನೀಡಿದ ಬೆನ್ನಲ್ಲೇ, ಪ್ರಧಾನಿ ಮೋದಿಗೂ ಪತ್ರದ ಮೂಲಕ ಹಲವು ಸಲಹೆಗಳನ್ನ ನೀಡಿದ್ದಾರೆ. ಭಾರತ ಪ್ರತಿದಿನ 3.5 ಲಕ್ಷಕ್ಕೂ ಹೆಚ್ಚು ಹೊಸ ಕೊರೊನಾ ಪ್ರಕರಣಗಳನ್ನು ದಾಖಲಿಸುತ್ತಿದೆ. ತಜ್ಞರು ಮೇ ಮಧ್ಯದ ವೇಳೆಗೆ ಪ್ರಕರಣಗಳು ಹೆಚ್ಚುವ ಮುನ್ಸೂಚನೆ ನೀಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 35 ಲಕ್ಷಕ್ಕೆ ತಲುಪಬಹುದು. ದೈನಂದಿನ ಪ್ರಕರಣಗಳು …
Read More »ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊರೊನಾ ಸೋಂಕಿನ ಭೀತಿ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊರೊನಾ ಸೋಂಕಿನ ಭೀತಿ ಎದುರಾಗಿದೆ. ಹೀಗಾಗಿ ಸೋಂಕು ಹರಡದಂತೆ ತಡೆಯಲು ಜೈಲಿನಲ್ಲಿ ಸುರಕ್ಷತೆಗೆ ಪೂರಕ ವ್ಯವಸ್ಥೆ ಮಾಡಲಾಗಿದೆ. ಕೈದಿಗಳಿಗೆ ಕೊರೊನಾ ನೆಗಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಪ್ರತಿದಿನ ಬರುವ ಕೈದಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗ್ತಿದೆ. ಈವರೆಗೆ ಒಟ್ಟು 44 ಕೈದಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆದ್ರೆ ಬಹುತೇಕ ಕೈದಿಗಳಿಗೆ ಏಸಿಂಪ್ಟಮ್ಯಾಟಿಕ್ ಇದೆ. ಅಂದ್ರೆ ಅವರಿಗೆ ರೋಗಲಕ್ಷಣ ಕಾಣಿಸಿಕೊಂಡಿಲ್ಲ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಟ್ಟು 5,062 …
Read More »ಕೊರೊನಾ ರೋಗಿಯನ್ನ ಕೊಲೆಗೈದಿದ್ದಾರೆಂದು ಫೇಕ್ ವಿಡಿಯೋ ಅಪ್ಲೋಡ್ ಮಾಡಿದ ಯುವಕನಿಂದ ಕ್ಷಮೆ ಯಾಚನೆ
ಬೆಂಗಳೂರು: ಕೊರೊನಾ ಸೋಂಕು ಪ್ರಕರಣಗಳ ಏರಿಕೆ ಜನರನ್ನ ಆತಂಕಕ್ಕೀಡುಮಾಡಿದೆ. ಇಂಥ ಹೊತ್ತಲ್ಲಿ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳನ್ನ ಹರಿಬಿಟ್ಟು ಜನರ ದಾರಿ ತಪ್ಪಿಸುತ್ತಿರೋದು ಬೆಳಕಿಗೆ ಬಂದಿದೆ. ಕೊರೊನಾ ಆಸ್ಪತ್ರೆಯೊಂದರಲ್ಲಿ ದುಡ್ಡಿಗಾಗಿ ರೋಗಿಯ ಕತ್ತುಹಿಸುಕು ಸಾಯಿಸಿದ್ದಾರೆ ಎನ್ನಲಾದ ವಿಡಿಯೋ, ಮತ್ತೊಂದು ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ರೋಗಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ವಿಡಿಯೋ ತುಣುಕು ಜೊತೆಗೆ ಯುವತಿಯೊಬ್ಬಳು ತನ್ನ ತಂದೆಯನ್ನ ಕಳೆದುಕೊಂಡು ರೋಧಿಸಿದ್ದ ವಿಡಿಯೋವನ್ನ ಸೇರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, …
Read More »ಲಾಕ್‌ಡೌನ್: ಆಟೋ, ಟ್ಯಾಕ್ಸಿ ಇಲ್ಲ, 150 ಬಿಎಂಟಿಸಿ ಬಸ್ ಸಂಚಾರ
ಬೆಂಗಳೂರು: ಲಾಕ್‌ಡೌನ್ ಇದ್ದರೂ ಕಾರ್ಯನಿರ್ವಹಿಸುವ ಜನರ ಸಂಚಾರಕ್ಕೆ ಅನುಕೂಲ ಆಗುವಂತೆ 150 ಬಸ್‌ಗಳನ್ನು ರಸ್ತೆಗಳಿಸಲು ಬಿಎಂಟಿಸಿ ನಿರ್ಧರಿಸಿದೆ. ಬೆಳಿಗ್ಗೆ 6ರಿಂದ ರಾತ್ರಿ 7 ಗಂಟೆ ತನಕ ಈ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯಾಚರಣೆ ಮಾಡುವ 6 ಬಸ್‌ಗಳು ದಿನದ 24 ಗಂಟೆಯೂ ಕಾರ್ಯಾಚರಣೆ ಮಾಡಲಿವೆ ಎಂದು ಬಿಎಂಟಿಸಿ ತಿಳಿಸಿದೆ. ಸಾಮಾನ್ಯ ಬಸ್‌ಗಳು ಶಿವಾಜಿನಗರ, ಕೆಂಪೇಗೌಡ ಬಸ್ ನಿಲ್ದಾಣ, ಮಲ್ಲೇಶ್ವರ, ಹಂಪಿನಗರ, ಬನಶಂಕರಿ, …
Read More »ಕರ್ನಾಟಕ ಲಾಕ್‌ಡೌನ್; ಜನರಿಗೆ ಮತ್ತೊಮ್ಮೆ ಮನವಿ ಮಾಡಿದ ಸಿಎಂ
ಬೆಂಗಳೂರು, ಏಪ್ರಿಲ್ 28: ಮಂಗಳವಾರ ರಾತ್ರಿಯಿಂದ ರಾಜ್ಯದಲ್ಲಿ ಹದಿನಾಲ್ಕು ದಿನಗಳ ಅವಧಿಯ ಲಾಕ್‌ಡೌನ್ ಆರಂಭವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನರಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ. ಕೊರೊನಾ ಸರಪಳಿಯನ್ನು ಮುರಿಯಲು ಎರಡು ವಾರಗಳ ಕಠಿಣ ಲಾಕ್‌ಡೌನ್ ಹೇರಲಾಗಿದೆ. ರಾಜ್ಯದ ಪ್ರತಿಯೊಬ್ಬರಿಗೂ ನಾನು ಕೇಳಿಕೊಳ್ಳುತ್ತೇನೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರಕ್ಕೆ ಬೆಂಬಲ ನೀಡಿ. ಮನೆಯೊಳಗೇ ಇರಿ. ನಾವೆಲ್ಲರೂ ಒಟ್ಟಾದರೆ ಕೊರೊನಾವನ್ನು ಸೋಲಿಸುವುದು ಸುಲಭವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ …
Read More »ಕೊರೊನಾಗೆ ಪುಟ್ಟಣ್ಣ ಕಣಗಾಲ್ ಮಗ ರಾಮು ಕಣಗಾಲ್ ಬಲಿ
ಬೆಂಗಳೂರು, ಎಪ್ರಿಲ್ 28: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯ ಹಿನ್ನೆಲೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾಗ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರಾಮು ಕಣಗಾಲ್ರವರ ಆರೋಗ್ಯ ಕಳೆದ ಐದು ದಿನಗಳಿಂದ ತುಂಬಾ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ರಾಮು ಕಣಗಾಲ್ ನಿಧನರಾಗಿದ್ದಾರೆ. ಚೆನ್ನೈನಲ್ಲಿ ವಿದ್ಯಾಭ್ಯಾಸ ಪಡೆದಿದ್ದ ರಾಮು ಅವರು …
Read More »ಕೊರೊನಾ ನಿಯಂತ್ರಣ, ಚಿಕಿತ್ಸೆ: ಮುಖ್ಯಮಂತ್ರಿ ಯಡಿಯೂರಪ್ಪಗೆ 11 ಸಲಹೆ ನೀಡಿದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿರುವ ಕೊರೊನಾ ಸೋಂಕನ್ನು ನಿಯಂತ್ರಣ ಮಾಡಲು ಮತ್ತು ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುವ ಸಂಬಂಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು 11 ಸಲಹೆಗಳನ್ನು ನೀಡಿದ್ದಾರೆ. ಸಿಎಂ ಬಿಎಸ್‌ವೈಗೆ 11 ಸಲಹೆ ನೀಡಿದ ಸಿದ್ದರಾಮಯ್ಯ: ರಾಜ್ಯದ ಜನರ ರಕ್ಷಣೆಯ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇ. 50ರಷ್ಟು ಕೊವಿಡ್‌ಗೆ ಬೆಡ್ …
Read More »ಅಘೋಷಿತ ಲಾಕ್‌ಡೌನ್ ವೇಳೆಯೂ ಬಿಎಂಟಿಸಿ ಬಸ್ ಸಂಚಾರಕ್ಕೆ ಅನುಮತಿ; ಇವರಷ್ಟೇ ಮಾತ್ರ ಪ್ರಯಾಣಿಸಬಹುದು?
ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ 14 ದಿನಗಳ ಕಾಲ ರಾಜ್ಯದಲ್ಲಿ ಅಘೋಷಿತ ಲಾಕ್‌ಡೌನ್ ಘೋಷಣೆ ಮಾಡಿದೆ. ಈ ವೇಳೆ ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಈ ವೇಳೆ ಎಲ್ಲ ಸಾರಿಗೆ ಓಡಾಟವನ್ನು ನಿಷೇಧಿಸಲಾಗಿದೆ. ಆದರೆ, ಕೆಲವು ನಿರ್ದಿಷ್ಟ ಉದ್ಯೋಗಿಗಳ ಓಡಾಟದ ಅನುಕೂಲಕ್ಕಾಗಿ ಬಿಎಂಟಿಸಿ ಬಸ್ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಬೆಳಗ್ಗೆ 6 ರಿಂದ ಸಂಜೆ 7ರವರೆಗೆ ಬಿಎಂಟಿಸಿ ಬಸ್ …
Read More »