ಬೆಂಗಳೂರು : ಎಣ್ಣೆ ಪಾರ್ಟಿಯಲ್ಲಿ ಜೊತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಜುಲೈ 11ರಂದು ರಾತ್ರಿ ಚಾಮರಾಜಪೇಟೆ ಠಾಣೆ ವ್ಯಾಪ್ತಿಯ ರುದ್ರಪ್ಪ ಗಾರ್ಡನ್‌ನಲ್ಲಿ ಘಟನೆ ನಡೆದಿದ್ದು, ದುಷ್ಕರ್ಮಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ತೇಜಸ್ (24) ಎಂಬಾತನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತನ ಸ್ನೇಹಿತರಿಂದ ಹಲ್ಲೆ : ಆಟೋ ಚಾಲಕನಾಗಿದ್ದ ತೇಜಸ್, ಶುಕ್ರವಾರ ರಾತ್ರಿ ಕೆಲಸ ಮುಗಿದ ಬಳಿಕ ಸ್ನೇಹಿತ ಸಂತೋಷ್ ಜೊತೆ ರುದ್ರಪ್ಪ …
Read More »ಸಿಗ್ನಲ್‌ನಲ್ಲಿ ದಾರಿ ಬಿಡದಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಮೂವರಿಂದ ಹಲ್ಲೆ
ಬೆಂಗಳೂರು: ರಸ್ತೆ ಸಿಗ್ನಲ್‌ನಲ್ಲಿ ದಾರಿ ಬಿಡಲಿಲ್ಲ ಎಂದು ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಹಲ್ಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೋದಿ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದ್ದು, ಪೀಮ್‌ರಾಮ್ ಎಂಬಾತನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ರಾಜಸ್ಥಾನ ಮೂಲದ ಪೀಮ್‌ರಾಮ್ ನಗರದಲ್ಲಿ ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಭಾನುವಾರ ರಾತ್ರಿ ಮೋದಿ ಆಸ್ಪತ್ರೆ ಬಳಿ ರೆಡ್ ಸಿಗ್ನಲ್ ಇದ್ದಾಗ ಬೈಕ್ ನಿಲ್ಲಿಸಿದ್ದ. …
Read More »ಶಾಸಕರ ಜೊತೆಗಿನ ಒನ್ ಟು ಒನ್ ಸಭೆ ಬಳಿಕ ಇದೀಗ ಸುರ್ಜೇವಾಲರಿಂದ ಮಿನಿಸ್ಟರ್ ಜೊತೆ One to One ಸಭೆ
ಬೆಂಗಳೂರು: ಶಾಸಕರೊಟ್ಟಿಗಿನ ಒನ್ ಟು ಒನ್ ಸಭೆ ಬಳಿಕ ಇದೀಗ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಸಚಿವರ ಜೊತೆ ಒನ್ ಒನ್ ಸಭೆ ಆರಂಭಿಸಿದ್ದಾರೆ. ಸಚಿವರುಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಅನ್ನೋ ಶಾಸಕರ ಆರೋಪದ ಬೆನ್ನಲ್ಲೇ ಸಚಿವರ ಜೊತೆ ಸಭೆಗೆ ನಡೆಸುತ್ತಿರೋ ಸುರ್ಜೇವಾಲ ಸೋಮವಾರ ನಾಲ್ವರು ಸಚಿವರ ಜೊತೆ ಮಾತುಕತೆ ನಡೆಸಿದರು. ಶಾಸಕರ ಜೊತೆಗಿನ ಸಭೆಯಲ್ಲಿ ಸಚಿವರು ಸರಿಯಾಗಿ ಸ್ಪರ್ಧಿಸುತ್ತಿಲ್ಲ, ಉಸ್ತುವಾರಿ ಸಚಿವರುಗಳು ನಮ್ಮನ್ನು ಸರಿಯಾಗಿ ನಡೆಸಿಕೊಳ್ತಿಲ್ಲ, ನಮ್ಮ ಲೆಟರ್ ಗಳಿಗೆ ಬೆಲೆ …
Read More »ಪಾಲಿಕೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್: ಮಂಗಳವಾರ ಸಚಿವರೊಂದಿಗೆ ಸಭೆ
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾಮೂಹಿಕ ರಜೆ ಪಡೆಯುವ ಮೂಲಕ ಬಿಬಿಎಂಪಿ ಸೇರಿದಂತೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಬೇಡಿಕೆಗಳ ಕುರಿತು ಜುಲೈ 12ರಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಸೋಮವಾರ ಹಾಗೂ ಮಂಗಳವಾರ ಎಂದಿನಂತೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ.ಅಮೃತರಾಜ್ …
Read More »ಆಹಾರ ಇಲಾಖೆಯಿಂದ ರಾಜ್ಯದ ಹಲವು ಮಳಿಗೆಗಳು, ಹೋಟೆಲ್ಗಳಿಗೆ ನೋಟಿಸ್, ಭಾರಿ ದಂಡ
ಬೆಂಗಳೂರು, ಜುಲೈ 11: ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆಹಾರ ಇಲಾಖೆ (Food Department) ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಹೊಟೇಲ್ (Hotel), ರೆಸ್ಟೋರೆಂಟ್, ಬೀದಿ ಬದಿ ವ್ಯಾಪಾರ ಘಟಕಗಳಲ್ಲಿ ಪರಿಶೀಲನೆ ನಡೆಸಿದೆ. ಆಹಾರ ಇಲಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಕಳಪೆ ಗುಣಮಟ್ಟದ ಆಹಾರ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಇಲಾಖೆಯು ಹೊಟೇಲ್, ರೆಸ್ಟೋರೆಂಟ್ ಮತ್ತು ಬೀದಿ ಬದಿ ವ್ಯಾಪಾರ ಘಟಕಗಳಿಗೆ ನೋಟಿಸ್ ನೀಡಿ, ದಂಡ ವಿಧಿಸಿದೆ. ಆಹಾರ ಇಲಾಖೆಯು ರಾಜ್ಯಾದ್ಯಂತ 720 ಹೋಟೆಲ್ …
Read More »ಸಿಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್ಸಿ ರವಿಕುಮಾರ್ಗೆ ಜಾಮೀನು
ಬೆಂಗಳೂರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ರವಿಕುಮಾರ್ ಗೆ ಜಾಮೀನು ಸಿಕ್ಕಿದೆ. ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ವೇಳೆ ಸಿಎಸ್ ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬಳಿಕ ರವಿಕುಮಾರ್ (BJP MLC N Ravikumar) ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ. …
Read More »ಶಾಪಿಂಗ್ಗೆ ಹೋಗಿ ಬಂದ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ
ಬೆಂಗಳೂರು: ಪತ್ನಿ ಶಾಪಿಂಗ್ಗೆ ಹೋಗಿ ಬಂದಿದ್ದಕ್ಕೆ ತಗಾದೆ ತೆಗೆದು ಕತ್ತು ಹಿಸುಕಿ ಹತ್ಯೆಗೈದಿದ್ದ ಪತಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹರೀಶ್ ಬಂಧಿತ ಆರೋಪಿ. ಪದ್ಮಜಾ (29) ಕೊಲೆಯಾದವರು. ಜುಲೈ 6ರಂದು ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಮರುದಿನ ಆಸ್ಪತ್ರೆಯಿಂದ ಬಂದ ಮಾಹಿತಿ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದರು. ಕೋಲಾರದ ಶ್ರೀನಿವಾಸಪುರ ಮೂಲದ ದಂಪತಿ ಇಬ್ಬರು ಮಕ್ಕಳೊಂದಿಗೆ ಬೊಮ್ಮನಹಳ್ಳಿಯಲ್ಲಿ ನೆಲೆಸಿದ್ದರು. ಪದ್ಮಜಾ ಅವರು ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ಸ್ ವಿಭಾಗದಲ್ಲಿ ಬಿಇ …
Read More »ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್, ಹಣ ಸುಲಿಗೆ ಆರೋಪ: ಮೂವರು ಆರೋಪಿಗಳ ಬಂಧನ
ಬೆಂಗಳೂರು: ನಗರದಲ್ಲಿ ಮಹಿಳೆ ಮೇಲೆ ಸಾಮೂಹಿಕ ಆತ್ಯಾಚಾರವೆಸಗಿ ಬಳಿಕ ಹಣ ಸುಲಿಗೆ ಮಾಡಿದ್ದಲ್ಲದೆ ಮನೆಯಲ್ಲಿದ್ದ ಪಿಠೋಪಕರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ಧಾರೆ. 35 ವರ್ಷದ ಮಹಿಳೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಘು, ಕೆಂಚೇಗೌಡ ಹಾಗೂ ಮಾದೇಶ್ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಹೆಬ್ಬಗೋಡಿ ಸುತ್ತಮುತ್ತಲಿನ …
Read More »ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿ: ಹೈಕೋರ್ಟ್
ಬೆಂಗಳೂರು: ಮನೆ ಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಹೈಕೋರ್ಟ್ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶಿಸಿತು. ಸುಪ್ರೀಂ ಕೋರ್ಟ್ ಆದೇಶಗಳ ಪ್ರಕಾರ ಮೊದಲಿಗೆ ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಬೇಕು. ಈ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ಮುಂದಿನ 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಅತ್ಯಾಚಾರ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಎರಡನೇ ಬಾರಿಗೆ ಜಾಮೀನು …
Read More »ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರತಾಪ್ ಸಿಂಹಗೆ ಏಕೆ ಮೋದಿ ಟಿಕೆಟ್ ಕೊಡಲಿಲ್ಲ?: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಬಿಜೆಪಿಯ ಕಳಪೆ ಪ್ರಾಡಕ್ಟ್ಗಳಿಗೆ ನಾನು ಬೇಕಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ನಾನು ಟ್ಯಾಲೆಂಟ್ ಅಂತಾರೆ. ಮತ್ತೇಕೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿಯವರು ಟಿಕೆಟ್ ಕೊಡಲಿಲ್ಲ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಆಡಿಯೋ ಕೇಳಿದ್ರಾ? ಅಥವಾ ಮೊಬೈಲ್ ಸೀಸ್ ಆಗಿದ್ದಾಗ ಏನಾದ್ರು ಸಿಕ್ತಾ? ಯಾಕೆ ನಿಮಗೆ ಟಿಕೆಟ್ ಕೊಡಲಿಲ್ಲ ಅನ್ನೋದನ್ನು …
Read More »
Laxmi News 24×7