ಬೆಂಗಳೂರು : ನಾಳೆ ರಾಜ್ಯಾಧ್ಯಂಕ ಕೊರೋನಾ ಸೋಂಕಿನ ನಿಯಂತ್ರವಾಗಿ ವೀಕ್ ಎಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ. ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಯಲ್ಲಿ ಇರಲಿದ್ದು, ಮನೆಯಿಂದ ಅನಗತ್ಯವಾಗಿ ಹೊರ ಬರೋರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ಕೂಡ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಗತ್ಯ ಸೇವೆ ಒದಗಿಸುವಂತೆ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಬಸ್ ಸಂಚಾರಕ್ಕೆ …
Read More »ಖಾಸಗಿ ಕಂಪೆನಿಗಳೊಂದಿಗೆ ಸಾರಿಗೆ ಅಧಿಕಾರಿಗಳ ದೋಸ್ತಿ, ಬೈಕ್ಟ್ಯಾಕ್ಸಿ ಚಾಲಕರ ಜತೆ ಕುಸ್ತಿ
ಬೆಂಗಳೂರು,ಏ.22- ಖಾಸಗಿ ಕಂಪೆನಿ ಗಳ ಲಾಭದಾಸೆ, ಅಧಿಕಾರಿಗಳ ಬೇಜವಾಬ್ದಾರಿತನ ದಿಂದಾಗಿ ಬೈಕ್ ಟ್ಯಾಕ್ಸಿ ಸೇವೆಯಲ್ಲಿ ಭಾರೀ ಗೊಂದಲಗಳು ಉಂಟಾಗಿದ್ದು, ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ರ್ಯಾಪಿಡೋ, ಓಲಾ, ಊಬರ್ ಸೇರಿದಂತೆ ಹಲವಾರು ಕಂಪೆನಿಗಳು ಬೈಕ್ ಟ್ಯಾಕ್ಸಿ ಸೇವೆಯನ್ನು ಒದಗಿಸುತ್ತಿವೆ. ಇದು ಸಂಪೂರ್ಣ ಅಕ್ರಮ ಅನಕೃತ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಔಪಚಾರಿಕವಾಗಿ ಹೇಳುತ್ತಿದ್ದಾರೆ. ಆದರೆ, ರ್ಯಾಪಿಡೊ ಸೇರಿದಂತೆ ಬಹಳಷ್ಟು ಖಾಸಗಿ ಕಂಪೆನಿಗಳು ರಾಜಾರೋಷವಾಗಿ ದೃಶ್ಯ ಮಾಧ್ಯಮಗಳಲ್ಲಿ ಜಾಹಿರಾತು ನೀಡಿ ಗ್ರಾಹಕ …
Read More »I.P.L. ಸ್ಕೋರ್ ಹೇಳದಕ್ಕೆ ಗಲಾಟೆ – ಜಗಳ ಬಿಡಿಸಲು ಹೋದವನ ಮೇಲೆ ಮಾರಣಾಂತಿಕ ಹಲ್ಲೆ
ಧಾರವಾಡ: ಜಗಳ ಬಿಡಿಸಲು ಹೋದವರಿಗೆನೇ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಧಾರವಾಡ ನಗರದ ಹನುಮಂತನನಗರ ಬಡಾವಣೆಯಲ್ಲಿ ನಡೆದಿದೆ. ರೌಡಿಶೀಟರ್ ಮಂಜುನಾಥ್ ಹಿರೇಮನಿ ಹಾಗೂ ಆತನ ಸಹೋದರರಿಂದಲೇ ಈ ಹಲ್ಲೆ ನಡೆದಿದ್ದು, ಇಟ್ಟಿಗೆಗಳಿಂದ ಹಲ್ಲೆ ಮಾಡಿ ಗಾಯಗೊಳಿಸಲಾಗಿದೆ. ಐಪಿಎಲ್ ಸ್ಕೋರ್ ವಿಚಾರದಲ್ಲಿ ಅಣ್ಣಪ್ಪ ಹಾಗೂ ಲಕ್ಷ್ಮಣ್ ಎಂಬಾತನ ನಡುವೆ ಈ ಜಗಳ ಆರಂಭವಾಗಿತ್ತು. ಅಣ್ಣಪ್ಪ ಕಳೆದ ರಾತ್ರಿ ಲಕ್ಷ್ಮಣನಿಗೆ ಐಪಿಎಲ್ ಸ್ಕೋರ್ ಕೇಳಿದ್ದಾನೆ. ಆಗ ಲಕ್ಷ್ಮಣ್ ಗೊತ್ತಿಲ್ಲ ಎಂದಿದ್ದಕ್ಕೆ ಹಲ್ಲೆ ನಡೆಸಿದ್ದಾರೆ. …
Read More »ಹೇಗಿರುತ್ತೆ ವೀಕೆಂಡ್ ಕರ್ಫ್ಯೂ
ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯಾದ್ಯಂತ ಕಠಿಣ ನಿಯಮಗಳು ಜಾರಿಯಾಗಿದ್ದು, ಎರಡು ದಿನಗಳ ಕಾಲ ಕರ್ನಾಟಕ ಸಂಪೂರ್ಣ ಬಂದ್ ಆಗಲಿದೆ. ಇಂದು ರಾತ್ರಿ 9ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಏನೆಲ್ಲ ಇರುತ್ತೆ, ಯಾರಿಗೆಲ್ಲ ನಿರ್ಬಂಧ ವಿಧಿಸಲಾಗಿದೆ ಎಂಬುದನ್ನು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಎರಡು ದಿನಗಳ ಕಾಲ ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿದ್ದು, ಸಂಪೂರ್ಣ ಬಂದ್ ವಾತಾವರಣವಿರಲಿದೆ. ಮೆಡಿಕಲ್ ಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ನಿರ್ಬಂಧ …
Read More »ಅಂದಿನ ತಪ್ಪಿಗೆ ಇಂದು ಬೆಲೆ ತೆರಬೇಕಾಗಿದೆ; ರಾಜ್ಯ ಸರ್ಕಾರದ ನಡೆಗೆ ಸಿ.ಟಿ.ರವಿ ಆಕ್ರೋಶ
ಬೆಂಗಳೂರು: ಕೊರೊನಾ ಸೋಂಕು ಕಟ್ಟುನಿಟ್ಟಾಗಿ ನಿಯಂತ್ರಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕಾಗಿದೆ. ಯಾರೋ ಬಂದು ಹೇಳಿದ ಮಾತ್ರಕ್ಕೆ ನಿಯಮಗಳನ್ನೇ ವಾಪಸ್ ಪಡೆದುಕೊಳ್ಳುವುದು ಸರಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಕಳೆದ ಒಂದು ವಾರದಲ್ಲಿ 15 ಪಟ್ಟು ಕೋವಿಡ್ ಪ್ರಕರಣಗಳು ಹೆಚ್ಚಾಗಿವೆ. ಆದರೂ ಆ ನಿಟ್ಟಿನಲ್ಲಿ ಸರ್ಕಾರ ಸಿದ್ಧತೆ ಮಾಡಿಕೊಂಡಂತೆ ಕಾಣುತ್ತಿಲ್ಲ. ಕಳೆದ ಎಂಟು ದಿನಗಳ ಹಿಂದೆ ಥಿಯೇಟರ್, …
Read More »ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್: ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ
ಬೆಂಗಳೂರು: ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್ ಜಾರಿ ಮಾಡಲಾಗಿದೆ. ಮೇ 4 ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದ ಸರ್ಕಾರ ಜನತೆಗೆ ದಿಢೀರ್ ಶಾಕ್ ನೀಡಿದೆ. ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ ನೀಡಿದೆ. ಮೇ 4 ರ ವರೆಗೆ ವಾಣಿಜ್ಯ ಮಳಿಗೆ, ಅಂಗಡಿ ಮುಂಗಟ್ಟು ಬಂದ್ ಆಗಲಿವೆ. ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಮಾತ್ರ ಅಂಗಡಿ ಬಂದ್ ಮಾಡಬೇಕು ಎಂದುಕೊಂಡಿದ್ದವರಿಗೆ ಶಾಕ್ ನೀಡಿದೆ. ಅಗತ್ಯ ವಸ್ತುಗಳ …
Read More »ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ
ಬೆಂಗಳೂರು: ಕಳೆದ ಒಂದು ವಾರದಲ್ಲಿ 15 ಪಟ್ಟು ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಆದರೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಂಡಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಗಂಭೀರತೆ ಬಗ್ಗೆ ಇಷ್ಟು ದಿನ ನಾನೂ ಮಾಧ್ಯಮಗಳಲ್ಲಿ ನೋಡುತ್ತಿದ್ದೆ. ಇಂದು ಸ್ವತ: ಖುದ್ದಾಗಿ ಬಂದು ಪರಿಸ್ಥಿತಿ ಗಮನಿಸುತ್ತಿದ್ದೇನೆ. ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತು ಗಂಭೀರವಾಗಿ ಸಿದ್ಧತೆ ಮಾಡಿಕೊಳ್ಳಬೇಕು …
Read More »ಲಾಕ್ ಡೌನ್ ಮಾದರಿಯಲ್ಲಿ ಬಿಗಿ ಕ್ರಮ ಕೈಗೊಳ್ಳಿ- ಬಸವರಾಜ ಬೊಮ್ಮಾಯಿ
ಬೆಂಗಳೂರು: ದಿನೇದಿನೇ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ಶೇ. 50ರಷ್ಟು ಹಾಸಿಗೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಂಟಿ ಕಾರ್ಯಾಚರಣೆ ಮಾಡುವಂತೆ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ …
Read More »ರಾಜ್ಯ ಸರ್ಕಾರದಿಂದ ‘ನೈಟ್ ಅಂಡ್ ವೀಕ್ ಎಂಡ್ ಕರ್ಪ್ಯೂ’ ಪರಿಷ್ಕೃತ ಮಾರ್ಗಸೂಚಿ ರಿಲೀಸ್ : ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ
ಬೆಂಗಳೂರು : ರಾಜ್ಯ ಸರ್ಕಾರ ನಿನ್ನೆ ಬಿಡುಗಡೆ ಮಾಡಿರುವಂತ ಕೊರೋನಾ ನೈಟ್ ಕಪ್ಯೂ ಹಾಗೂ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿದೆ. ಈ ಮೊದಲು ಅಗತ್ಯ ವಸ್ತು ಸೇವೆ ಜೊತೆಗೆ, ಇತರೆ ಶಾಪ್ ಗಳಿಗು ತೆರೆಯಲು ಅನುಮತಿ ನೀಡಿತ್ತು. ಆದ್ರೇ.. ಇಂದು ದಿಢೀರ್ ಶಾಕ್ ನೀಡುವಂತೆ ಪರಿಷ್ಕೃತ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿಯಂತೆ, ಈಗ ಅಗತ್ಯಸೇವೆ ಒದಗಿಸುವಂತ ಶಾಪ್ ಹೊರತಾಗಿ ಎಲ್ಲಾ ಶಾಪ್ ಬಂದ್ ಮಾಡುವಂತೆ ಸೂಚಿಸಿದೆ. ಈ ಕುರಿತಂತೆ …
Read More »ಮೆಡಿಕಲ್ ಆಕ್ಸಿಜನ್ ಕೊರತೆ: ಉಕ್ಕಿನ ಕಾರ್ಖಾನೆಗಳ ಜೊತೆ ಶೆಟ್ಟರ್- ಮುರುಗೇಶ್ ನಿರಾಣಿ ಸಭೆ
ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಆಮ್ಲಜನಕ ಕೊರತೆ ಸರಿದೂಗಿಸಲು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾಗೂ ಗಣಿ ಸಚಿವ ಮುರುಗೇಶ್ ನಿರಾಣಿ ಬುಧವಾರ ಉಕ್ಕು ತಯಾರಿಕಾ ಕಾರ್ಖಾನೆಗಳ ಜೊತೆ ಸಭೆ ನಡೆಸಿದ್ದಾರೆ. ಜೆಎಸ್ ಡಬ್ಲ್ಯೂ ಮಂಗಳವಾರ ಪ್ರತಿದಿನ 400 ಟನ್ ಆಕ್ಸಿಜನ್ ಪೂರೈಕೆ ಮಾಡುವುದಾಗಿ ತಿಳಿಸಿದ ನಂತರ, ಬಲ್ದೋಟಾ, ಜಿಂದಾಲ್ ಸೇರಿದಂತೆ ಹಲವು ಉಕ್ಕಿನ ಕಾರ್ಖಾನೆಗಳು ಮೆಡಿಕಲ್ ಆಕ್ಸಿಜನ್ ಉತ್ಪಾದನೆ ಮಾಡುವುದಾಗಿ ತಿಳಿಸಿವೆ. ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ಸಂಬಂಧ ರಾಜ್ಯ …
Read More »