ಬೆಂಗಳೂರು : ರಾಜ್ಯದ ಪ್ರತಿಯೊಬ್ಬರಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಉಚಿತ ಕೊರೊನಾ ಲಸಿಕೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ …
Read More »ಬಿಎಸ್ ವೈ ಅವರೇ ಈ ಕೆಲಸಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು: ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ …
Read More »ವೀಕೆಂಡ್ ಲಾಕ್’ಡೌನ್: ಬಿಟ್ ಬಿಡಿ ಸಾರ್ ನಾನೇ ಮದ್ವೆ ಗಂಡು ಪೊಲೀಸರಿಗೆ ವರನ ಮನವಿ
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಹೆಚ್ಚಳದ ಹಿನ್ನಲೆಯಲ್ಲಿ, ಮದುವೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿದೆ. ಇದರಿಂದಾಗಿ ಕಲ್ಯಾಣ ಮಂಟಪದ ಬದಲಾಗಿ ಸರಳ ವಿವಾಹಕ್ಕೆ ಅನೇಕರು ಮೊರೆ ಹೋಗಿದ್ದಾರೆ. ಹೀಗೆ ದೇವಸ್ಥಾನದಲ್ಲೇ ಮದುವೆ ಆಗೋದಕ್ಕೆ ತಂದೆಯ ಜೊತೆಗೆ ಹೋಗುತ್ತಿದ್ದಂತ ಮಧು ಮಗನಿಗೂ, ವೀಕ್ ಎಂಡ್ ಕರ್ಪ್ಯೂ ಬಿಸಿ, ಬೆಂಗಳೂರಿನಲ್ಲಿ ತಟ್ಟಿದೆ. ಇಂದು ವೀಕ್ ಎಂಡ್ ಕರ್ಪ್ಯೂ ಹಿನ್ನಲೆಯಲ್ಲಿ, ಕಲ್ಯಾಣ ಮಂಟಪದಲ್ಲಿ ನಡೆಯಬೇಕಿದ್ದಂತ ವಿವಾಹದ ಬದಲಾಗಿ, ದೇವಸ್ಥಾನದಲ್ಲೇ ವಿವಾಹ ಆಗೋದಕ್ಕೆ …
Read More »ರೆಮಿಡಿಸಿವಿರ್ ಮರುಹಂಚಿಕೆ : ರಾಜ್ಯಕ್ಕೆ 1.22 ಲಕ್ಷ ವಯಲ್
ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಬೇಡಿಕೆಗೆ ಅನುಗುಣವಾಗಿ ಶನಿವಾರ ರೆಮಿಡಿಸಿವಿರ್ ಮರು ಹಂಚಿಕೆ ಮಾಡಿದ್ದೇವೆ. ಕರ್ನಾಟಕದ ಪಾಲು 1.22 ಲಕ್ಷ ವಯಲ್‌ಗಳಿಗೆ ಏರಿಕೆಯಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ. ನಾನು ನಿರ್ವಹಿಸುವ ಔಷಧ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಉನ್ನತಾಧಿಕಾರದ ಸಮಿತಿಯು ಈ ನಿರ್ಣಯ ಕೈಗೊಂಡಿದೆ ಎಂದು ಡಿವಿಎಸ್ ಟ್ವೀಟ್ ಮಾಡಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯಕ್ಕೆ ನಾವು ಸಂಪೂರ್ಣ ಸಹಕಾರ, …
Read More »ನಿನ್ನೆಗಿಂತ ಹೆಚ್ಚು ಪ್ರಕರಣ : ರಾಜ್ಯದಲ್ಲಿಂದು 29438 ಕೋವಿಡ್ ಹೊಸ ಕೇಸ್ ಪತ್ತೆ
ಬೆಂಗಳೂರು : ಇಂದೂ ಕೂಡ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಮುಖದಲ್ಲಿಯೇ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 29438 ಹೊಸ ಕೇಸ್‍ಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 234483ಕ್ಕೆ ಏರಿಕೆಯಾಗಿದೆ. ಇಂದು ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಇಂದು 9058 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಾಗೂ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ …
Read More »ನಟ ಮಂಡ್ಯ ರಮೇಶ್ಗೆ ಎಸ್ಐ ಪುಟ್ಟರಾಜು ತರಾಟೆಗೆ ತೆಗೆದುಕೊಂಡಿದ್ದಾರೆ.
ಮೈಸೂರು: ವಾರಾಂತ್ಯದ ಕರ್ಫ್ಯೂ ನಿಯಮ ಉಲ್ಲಂಘಿಸಿ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯ ಬಳಿ ಕಾರಿನಲ್ಲಿ ತೆರಳುತ್ತಿದ್ದ ಪ್ರಸಿದ್ಧ ನಟ ಮಂಡ್ಯ ರಮೇಶ್ಗೆ ಎಸ್ಐ ಪುಟ್ಟರಾಜು ಕರ್ಫ್ಯೂ ನಿಯಮ ಉಲ್ಲಂಘಿಸದಂತೆ ಬುದ್ಧಿವಾದ ಹೇಳಿದ್ದಾರೆ. ಅಲ್ಲದೇ ಮೈಸೂರಿನ ಗ್ರಾಮೀಣ ಪ್ರದೇಶಗಳಲ್ಲೂ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದ ಜನರಿಗೆ ಪೊಲೀಸರು ತಡೆ ಒಡ್ಡಿದ್ದಾರೆ. ಕುಂಟು ನೆಪ ಹೇಳಿ ತಿರುಗಾಡುವವರನ್ನು ಖಾಕಿ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಸಬ್ ಇನ್ಸಪೆಕ್ಟರ್ ಪುಟ್ಟರಾಜು ಮತ್ತು ಇತರ …
Read More »ರಾಜ್ಯದ ಕೋವಿಡ್ ಪರಿಸ್ಥಿತಿ ನಮ್ಮ ನಿಯಂತ್ರಣದಲ್ಲಿಲ್ಲ: ಬಿ.ಎಸ್ . ಯಡಿಯೂರಪ್ಪ
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಬೆಡ್ , ಐಸಿಯು , ವೆಂಟಿಲೇಟರ್ ಬೆಡ್’ಗಳ ಕೊರತೆ ಕಂಡುಬಂದಿದ್ದು , ಪರಿಸ್ಥಿತಿ ನಿಯಂತ್ರಣದಲ್ಲಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಹೇಳಿದ್ದಾರೆ . ಸಾವಿನ ಸಂಖ್ಯೆ ಹಾಗೂ ಸೋಂಕಿತ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹೆನ್ನೇಳೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೇನೆಡೆಸಿದ ಬಿಎಸ್’ವೈ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರೊಂದಿಗೆ, ಬೆಂಗಳೂರಿನಲ್ಲಿ ವೆಂಟಿಲೇಟರ್ ಹಾಸಿಗೆಗಳನ್ನು 10 ಪಟ್ಟು ಹೆಚ್ಚಳ ಮಾಡುವಂತೆ ಆದೇಶಿಸಿದ್ದಾರೆ …
Read More »ಎರಡೇ ದಿನದಲ್ಲಿ ಇಬ್ಬರನ್ನು ಕಳೆದುಕೊಂಡೆ – ಸರ್ಕಾರದ ವಿರುದ್ಧ ನಟ ಪವನ್ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಕೈಮೀರುತ್ತಿದೆ. ಈ ನಡುವೆ ಕಿರುತೆರೆ ಕಲಾವಿದ ಗಟ್ಟಿಮೇಳದ ಪವನ್ ಕುಮಾರ್ ತಮ್ಮ ಕುಟುಂಬದ ಇಬ್ಬರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಕೊರೊನಾದಿಂದಾಗಿ ಮರಣ ಹೊಂದಿದ್ದಾರೆ. ರಾಜ್ಯ ಸರ್ಕಾರ ಜನರ ಜೀವಕ್ಕೆ ಬೆಲೆ ಕೊಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಪವನ್ ತಮ್ಮ ಕುಟುಂಬದವರನ್ನು ಕಳೆದುಕೊಂಡ ದುಖಃದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡುವ ಮೂಲಕ ಕೊರೊನಾ ಬಗ್ಗೆ ಜನರಿಗೆ ಅರಿವು ಮೂಡಿಸಿದ್ದಾರೆ. ಪವನ್ ಕುಟುಂಬದಲ್ಲಿ …
Read More »ವೀಕೆಂಡ್ ಕರ್ಫ್ಯೂ ಸೋಮವಾರ ಮುಗಿಯುತ್ತಿದ್ದಂತೆಯೇ ವಾರಪೂರ್ತಿ ಕರ್ಫ್ಯೂ ಮುಂದುವರೆಸಲು ರಾಜ್ಯ ಸರ್ಕಾರ ಚಿಂತನೆ?
ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ನೀಡಲು ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ. ಕೊರೊನಾ ಚೈನ್ ಲಿಂಕ್ ಕಟ್ ಮಾಡಲು ವೀಕೆಂಡ್ ಕರ್ಫ್ಯೂ ಸೋಮವಾರ ಮುಗಿಯುತ್ತಿದ್ದಂತೆಯೇ ವಾರಪೂರ್ತಿ ಕರ್ಫ್ಯೂ ಮುಂದುವರೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ವೀಕೆಂಡ್ ಅಲ್ಲ ವಾರಪೂರ್ತಿ ಕರ್ಫ್ಯೂ ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಆದರೆ …
Read More »ಬೆಂಗಳೂರು: ಕೊರೊನಾ ಸೋಂಕಿತ ಆಸ್ಪತ್ರೆಯಲ್ಲೇ ಆತ್ಮಹತ್ಯೆ
ಬೆಂಗಳೂರು: ಕೊರೊನಾ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮಣ್ಣ (61) ಎಂಬುವರು ಆಸ್ಪತ್ರೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಅಂಜನಾನಗರದ ರಾಮಣ್ಣ, ವಿಜಯನಗರದ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದರು. ಶುಕ್ರವಾರ ತಡರಾತ್ರಿ ಆಸ್ಪತ್ರೆಯ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ ತಿಳಿಸಿದರು. ‘ಘಟನೆ ಸಂಬಂಧ ಮಗನಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಹೇಳಿದರು.
Read More »
Laxmi News 24×7