ಬೆಂಗಳೂರು: ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್ ಕಂಪನಿಯು 2,000 ಕೋಟಿ ರೂ. ಹೂಡಿಕೆ ಮಾಡಿ ರಾಜ್ಯದಲ್ಲಿ ಮೂರು ಸಾಮಾನ್ಯ ಎಂಜಿನಿಯರಿಂಗ್ ಸೌಲಭ್ಯಗಳ ಕೇಂದ್ರ (ಸಿಇಎಫ್‌ಸಿ- ಕಾಮನ್ ಎಂಜಿನಿಯರಿಂಗ್ ಫೆಸಿಲಿಟಿ ಸೆಂಟರ್)ಗಳನ್ನು ಸ್ಥಾಪಿಸಲು ಮುಂದೆ ಬಂದಿದೆ. ವಿಧಾನಸೌಧದಲ್ಲಿ ಬುಧವಾರ ಕಂಪನಿಯ ಉನ್ನತ ಅಧಿಕಾರಿಗಳು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರನ್ನು ಭೇಟಿಯಾಗಿ ಈ ಸಂಬಂಧ ಪ್ರಸ್ತಾವನೆ ಸಲ್ಲಿಸಿ ಮಾತುಕತೆ ನಡೆಸಿದ್ದಾರೆ. ವಿಶೇಷವಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ …
Read More »ರೈತರಿಂದ ವಶಪಡಿಸಿಕೊಂಡ ಜಮೀನಿಗೆ ಸೂಕ್ತ ಪರಿಹಾರದ ಹಣ ನೀಡಲು ಈ ವರ್ಷ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ನಾವು ಬಸವರಾಜ ಬೊಮ್ಮಾಯಿ ಅವರ ಬಜೆಟ್ ಅನ್ನು ಸ್ವಲ್ಪ ಮಾರ್ಪಾಡಿಸಿ ಮಂಡಿಸಿದ್ದೇವೆ. ಹೀಗಾಗಿ ಈ ವರ್ಷ ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಪ್ರತ್ಯೇಕವಾಗಿ ಹೆಚ್ಚಿನ ಅನುದಾನ ನೀಡಲು ಮತ್ತು ಈ ನೀರಾವರಿ ಯೋಜನೆಗಳಿಗೆ ರೈತರಿಂದ ವಶಪಡಿಸಿಕೊಂಡ ಜಮೀನಿಗೆ ಸೂಕ್ತ ಪರಿಹಾರದ ಹಣ ನೀಡಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಮಂಗಳವಾರ ನಿಯಮ 72ರ ಅಡಿ ಬಿಜೆಪಿ ಸದಸ್ಯ ಹನುಮಂತ ನಿರಾಣಿ ಮಂಡಿಸಿದ ಗಮನ ಸೆಳೆಯುವ …
Read More »ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ಸೌಲಭ್ಯ ಇಲ್ಲ, ಸ್ಮಾರ್ಟ್ ಫೋನ್ ನೀಡುವ ಬಗ್ಗೆ ಪರಿಶೀಲನೆ :ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಆಶಾ ಕಾರ್ಯಕರ್ತೆಯರು ಖಾಯಂ ನೌಕರರಲ್ಲ ಹಾಗಾಗಿ ಅವರಿಗೆ ಪಿಂಚಣಿ ವ್ಯವಸ್ಥೆ ಕಲ್ಪಿಸಲು ಸಾಧ್ಯವಿಲ್ಲ, ಆದರೆ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೆಲ್ಲವೂ ಅವರಿಗೆ ಅನ್ವಯವಾಗಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಶಾ ಕಾರ್ಯಕರ್ತೆಯರ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ, ಅವರು ಸ್ವಯಂ ಪ್ರೇರಿತರಾಗಿ ಕೆಲಸ ಮಾಡುತ್ತಿದ್ದಾರೆ ಎಂದರು. ಅದಕ್ಕಾಗಿ ರಾಜ್ಯ ಸರ್ಕಾರ ಅವರಿಗೆ ಐದು ಸಾವಿರ …
Read More »ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ C.M. ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಅವರೇನು …
Read More »ಕೃಷಿ ಭೂಮಿಯಲ್ಲಿ ಅನಧಿಕೃತ ಹೋಂ ಸ್ಟೇ ನಡೆಸಲು ಅವಕಾಶವಿಲ್ಲ: ರೆಡ್ಡಿ ಪ್ರಶ್ನೆಗೆ ಸಚಿವ ಭೈರತಿ ಸುರೇಶ್ ಸ್ಪಷ್ಟನೆ
ಬೆಂಗಳೂರು : ಹಂಪಿ ಯೋಜನಾ ಪ್ರಾಧಿಕಾರ ವ್ಯಾಪ್ತಿಯ ಆನೆಗೊಂದಿ ಪ್ರದೇಶದಲ್ಲಿ ಕೃಷಿ ಭೂಮಿಯಲ್ಲಿ ಅನಧಿಕೃತ ಹೋಂ ಸ್ಟೇ ನಡೆಸಲು ಅವಕಾಶವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿಧಾನಸಭೆಗೆ ಸ್ಪಷ್ಟಪಡಿಸಿದ್ದಾರೆ. ಇಂದು ಶೂನ್ಯವೇಳೆಯಲ್ಲಿ ಸದಸ್ಯ ಜಿ ಜನಾರ್ದನರೆಡ್ಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಹಂಪಿ ಯೋಜನಾ ಪ್ರಾಧಿಕಾರ ವ್ಯಾಪ್ತಿಯಲ್ಲಿ 15 ಗ್ರಾಮಗಳು ಬರುತ್ತವೆ. 2008ರಲ್ಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದರು. ಹಂಪಿ ಪ್ರಾಧಿಕಾರದ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ 58 ಅನಧಿಕೃತ ಹೋಂ ಸ್ಟೇಗಳಿವೆ. …
Read More »ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಐಸಿಸ್ ಚಿತಾವಣೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಗಂಭೀರ ಆರೋಪ
ಬೆಂಗಳೂರು : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಐಸಿಸ್ ಚಿತಾವಣೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಿತ್ರಹಿಂಸೆ ಮಾಡಿ ಕರೆಂಟ್ ಶಾಕ್ ಕೊಟ್ಟು ಸ್ವಾಮೀಜಿ ಅವರನ್ನು ಕೊಂದಿದ್ದಾರೆ. ಇದರ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ. ಇನ್ನು, ಭಯಾನಕ ಘಟನೆ ಭವಿಷ್ಯದಲ್ಲಿ ಕಾಣುವ ಆತಂಕ ಇದೆ. ಘಟನೆ ಹಿಂದೆ …
Read More »ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ :C.M.
ಬೆಂಗಳೂರು : ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ನುಡಿದಂತೆ ನಡೆಯುತ್ತೇವೆ, ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರಾಜ್ಯದ ಹಲವು ಕಡೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿದೆ. ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, …
Read More »ಶೀತ, ಕೆಮ್ಮು, ಗಂಟಲು ನೋವು.. ವಿಶ್ರಾಂತಿಗೆ ಜಾರಿದ ಸಿಎಂ
ಬೆಂಗಳೂರು: ಶೀತ, ಕೆಮ್ಮು, ಗಂಟಲು ನೋವಿನಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ರಾಂತಿಗೆ ಜಾರಿದ್ದಾರೆ. ನಿನ್ನೆಯಿಂದಲೇ ಸಿದ್ದರಾಮಯ್ಯ ಅವರಿಗೆ ಶೀತ ಕಾಣಿಸಿಕೊಂಡು ಕೆಮ್ಮು ಇತ್ತು. ಇಂದು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿಗಳು ಯಾರನ್ನೂ ಭೇಟಿ ಮಾಡುತ್ತಿಲ್ಲ. ಅವರ ಭೇಟಿಗೆ ಬಂದ ಅಧಿಕಾರಿಗಳು ಮತ್ತು ರಾಜಕಾರಣಿಗಳು ವಾಪಸ್ ಆಗಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರ ಇಂದಿನ ಕಾರ್ಯಕ್ರಮಗಳು ರದ್ದಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ನಿನ್ನೆ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದ ವೇಳೆ …
Read More »ಗೃಹ ಜ್ಯೋತಿಗೆ ಅರ್ಜಿ ರಿಜಿಸ್ಟರ್ ಆಗಿದ್ಯೋ ಇಲ್ಲವೋ ಎಂದು ತಿಳಿಯಲು ಹೀಗೆ ಮಾಡಿ
ಬೆಂಗಳೂರು : ಗೃಹಜ್ಯೋತಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸುವಿಕೆ ಶುರುವಾಗಿದ್ದು, ರಾಜ್ಯದಲ್ಲಿ ಇಲ್ಲಿ ತನಕ ಸರಿ ಸುಮಾರು ಒಂದೂವರೆ ಕೋಟಿ ಮಂದಿ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಿಗೆ ಗೊಂದಲವಿದ್ದು, ತಮ್ಮ ಅರ್ಜಿ ಸಲ್ಲಿಕೆಯಾಗಿದೆ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲು ರಾಜ್ಯ ಸರ್ಕಾರ ಅದಕ್ಕಾಗಿ ಪ್ರತ್ಯೇಕ ಲಿಂಕ್ ಅನ್ನು ಬಿಡುಗಡೆ ಮಾಡಿದೆ. ಈ ಕೆಳಕಂಡ ಲಿಂಕ್‌ಗೆ ಭೇಟಿ ನೀಡಿ ನೀವು ನಿಮ್ಮ ಅರ್ಜಿ ಸಲ್ಲಿಕೆಯಾಗಿದ್ಯ ಇಲ್ಲವೇ ಎನ್ನುವುದನ್ನು ಕಂಡು …
Read More »ಡೆಲಿವರಿ ಬಾಯ್ಸ್‌ಗೆ ಬಿಗ್ ರಿಲೀಫ್! 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ಕೊಡುವುದಾಗೊ ಘೋಷಿಸಿದೆ.
ಸಿಎಂ ಸಿದ್ದರಾಮಯ್ಯ (CM Siddaramaiah) ಅವರು 14ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಕಾಂಗ್ರೆಸ್ (Congress) ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ ಈ ಬಾರಿಯ ಬಜೆಟ್ ಕೂತುಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ, ಹಣಕಾಸು ಸಚಿವರಾಗಿ 1995-96 ರಲ್ಲಿ ಮಂಡಿಸಿದ ಮೊದಲ ಬಾರಿಗೆ ಬಜೆಟ್ ಮಂಡಿಸಿದ್ದರು. ಬಜೆಟ್ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಬಜೆಟ್ ಆರಂಭದಲ್ಲೇ ಅಬಕಾರಿ ತೆರಿಗೆ ಹೆಚ್ಚಳ ಮಾಡಿರುವುದನ್ನು …
Read More »