Breaking News
Home / ಜಿಲ್ಲೆ / ಬೆಂಗಳೂರು (page 18)

ಬೆಂಗಳೂರು

ಸರ್ಕಾರ ಇ ಕಚೇರಿ ಜಾರಿಗೊಳಿಸಿದೆ. ಆದ್ರೆ ಅದಕ್ಕೆ ಬೇಕಾದ ಸಾಮಗ್ರಿಗಳನ್ನು ಪೂರೈಸುವಲ್ಲಿ ಸರ್ಕಾರ ವಿಫಲ

ಬೆಂಗಳೂರು: ಸಾರ್ವಜನಿಕರಿಗೆ ಒದಗಿಸುವ ಮಾಹಿತಿಯಲ್ಲಿ ಪಾರದರ್ಶಕತೆ ಮತ್ತು ನಿಖರತೆಯೊಂದಿಗೆ ಸರ್ಕಾರದ ಆಡಳಿತಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಲ್ಲಿ ಇ ಕಚೇರಿ ಕಡ್ಡಾಯಗೊಳಿಸಲಾಗಿದೆ. ಇ-ಕಚೇರಿಯನ್ನೇನೋ ಕಡ್ಡಾಯಗೊಳಿಸಿದೆ ಆದರೆ ಅದಕ್ಕೆ ಬೇಕಾಗಿರುವ ಸ್ಕ್ಯಾನರ್ ಮತ್ತು ಪ್ರಿಂಟರ್​​ಗಳನ್ನು ಪೂರೈಸಲು ಸರ್ಕಾರ ಮರೆತಿದೆ. ಮಾಹಿತಿ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದರಲ್ಲಿ ಕರ್ನಾಟಕ ಸರ್ಕಾರ ಮುಂಚೂಣಿಯಲ್ಲಿದೆ. ಅದರ ನಿದರ್ಶನವಾಗಿ ಇ-ಆಡಳಿತ ಕೇಂದ್ರದ ಮೂಲಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆ ಎಲ್ಲಾ ಇಲಾಖೆಗಳಲ್ಲಿ ಇ …

Read More »

P.F.I. ನನ್ನಿಂದಲೇ ಬೆಳೆದಿದ್ದು ಅನ್ನುವುದು ಸುಳ್ಳು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್‌ಐ ಮೇಲಿನ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗಿತ್ತು ಎನ್ನುವ ಬಿಜೆಪಿ ಆರೋಪವನ್ನು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.   “ಸುಳ್ಳು” ಬಿಜೆಪಿ ಮತ್ತು ಸಂಘ ಪರಿವಾರದವರ ಮನೆ ದೇವರು. ಆಧಾರ ರಹಿತ ಸುಳ್ಳು ಪ್ರಚಾರಗಳಿಂದಲೇ ತಮ್ಮ ಅಸ್ತಿತ್ವ ಉಳಿಸಿಕೊಂಡಿರುವ ಈ ಪರಿವಾರ ನನ್ನ ವಿರುದ್ಧ ಇದುವರೆಗೂ ಸಾವಿರದೊಂದು ಸುಳ್ಳುಗಳನ್ನು ಪ್ರಚಾರ ಮಾಡಿದೆ. ಈ ಸುಳ್ಳುಗಳಲ್ಲಿ ಪಿಎಫ್‌ಐ …

Read More »

ಅಂತಾರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ರಾಜ್ಯ ಶೀಘ್ರ ಸೇರ್ಪಡೆ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಮುಂದಿನ ಕೆಲವೇ ದಿನಗಳಲ್ಲಿ ಅಂತಾರಾಷ್ಟ್ರೀಯ ನಕ್ಷೆಯಲ್ಲಿ ಸೇರ್ಪಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ರಾಜ್ಯಕ್ಕೆ ಆಗಮಿಸುತ್ತಿರುವ 30 ಲಕ್ಷ ಪ್ರವಾಸಿಗರನ್ನು ಮುಂದಿನ ಮೂರು ವರ್ಷದಲ್ಲಿ ಒಂದು ಕೋಟಿಗೆ ಮುಟ್ಟಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಬೇಕು ಎಂದು ಹೇಳಿದರು.   ರಾಜ್ಯದಲ್ಲಿ ಪ್ರವಾಸಿಗರ ಹೆಜ್ಜೆಗಳನ್ನು ಹೆಚ್ಚಿಸಬೇಕು. ವಿದೇಶಿಯರನ್ನು ಆಕರ್ಷಿಸಿ, ಸ್ಥಳೀಯರಿಗೆ ಕೆಲಸ ಕೊಡಬೇಕು. ಪ್ರವಾಸೋದ್ಯಮಕ್ಕೆ ಸೂಕ್ತವಾಗಿರುವ ಹಲವು …

Read More »

ರಾಜ್ಯ ಸರ್ಕಾರದಿಂದ `ಅನರ್ಹ ಪಿಂಚಣಿದಾರ’ರಿಗೆ ಬಿಗ್ ಶಾಕ್ : 7 ಲಕ್ಷ ಅರ್ಜಿ ರದ್ದು

ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದ್ದು, 2019 ರಿಂದ 7 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿ ಅರ್ಜಿಗಳನ್ನು ತಿರಸ್ಕರಿಸಿದ್ದು, ಅನರ್ಹ ಫಲಾನುಭವಿಗಳನ್ನು ಕಂಡುಹಿಡಿಯಲು ಮೂರು ನಾಗರಿಕ ಡೇಟಾಬೇಸ್ ಗಳನ್ನು ಸಂಯೋಜಿಸುವ ಮೂಲಕ ರದ್ದುಗೊಳಿಸಿದೆ.     ಕಂದಾಯ ಇಲಾಖೆಯ ಅಂಕಿಅಂಶಗಳ ಪ್ರಕಾರ, 2019 ರಿಂದ ಇಲ್ಲಿಯವರೆಗೆ 30 ಲಕ್ಷ ಅರ್ಜಿಗಳ ಪೈಕಿ 22.69 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಮಂಜೂರು ಮಾಡಲಾಗಿದೆ. 39,597 ಪಿಂಚಣಿ …

Read More »

ಎರಡ್ಮೂರು ದಿನದಲ್ಲಿ ಸಂಪುಟ ವಿಸ್ತರಣೆ; ನವರಾತ್ರಿಯಲ್ಲೇ ಹಲವರಿಗೆ ಶುಭ ಯೋಗ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವಾರ ದೆಹಲಿಗೆ ಭೇಟಿ ನೀಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಈ ತಿಂಗಳ ಅಂತ್ಯದೊಳಗೆ ನಡೆಯುವ ಸಾಧ್ಯತೆ ಇರುವುದರಿಂದ ವರಿಷ್ಠರ ಅನುಮತಿ ಪಡೆಯಲು ದೆಹಲಿಗೆ ತೆರಳಲಿದ್ದಾರೆ. ಒಂದು ಮೂಲದ ಪ್ರಕಾರ ಗುರುವಾರ ಇಲ್ಲವೇ ಶುಕ್ರವಾರವೇ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗುವ ಸಾಧ್ಯತೆ ಇದೆ. ‌ಇಲ್ಲವಾದರೆ ನವರಾತ್ರಿ ಬಳಿಕ‌ ಮುಹೂರ್ತ ಕೂಡಿ …

Read More »

ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗೆ 12 ವಾರ ಗಡುವು

ಬೆಂಗಳೂರು: ರಾಜ್ಯದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ರೀತಿಯ ಮೀಸಲಾತಿಯನ್ನು 12 ವಾರದೊಳಗೆ ಮರು ನಿಗದಿಪಡಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.   ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮ ಸ್ವರಾಜ್ (ತಿದ್ದುಪಡಿ) ಕಾಯ್ದೆ- 2021ರ ಜಾರಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ್ದ ಗೆಜೆಟ್ ಅಧಿಸೂಚನೆ ಪ್ರಶ್ನಿಸಿ ರಾಜ್ಯ …

Read More »

ದಸರಾ ವೈಭವ ಆರಂಭ: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದ ರಾಷ್ಟ್ರಪತಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮಿಸಿದ್ದು, ಬೆಳಿಗ್ಗೆ 9.45 ರಿಂದ‌10.05ರ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.   ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಂತೆಯೇ ಮೊದಲು ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ತೆರಳಿದ ರಾಷ್ಟ್ರಪತಿಗಳು ತಾಯಿಯ ದರ್ಶನ ಪಡೆದರು. …

Read More »

ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ಹಾಲಿನ ಬೆಲೆ ಹೆಚ್ಚಳ ಪ್ರಸ್ತಾವನೆಗೆ ಸಿಎಂ ಬೊಮ್ಮಾಯಿ ಬ್ರೇಕ್!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ನೆಮ್ಮದಿಯ ಸುದ್ದಿ ನೀಡಿದ್ದು, ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ.   ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.   ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ …

Read More »

ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದು, ವೈದ್ಯರ ತಂಡ ಆರೈಕೆ ಮಾಡ್ತಿದೆ: ಎಸ್‍ಎಂಕೆ ಹೆಲ್ತ್ ಬುಲೆಟಿನ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (S.M Krishna) ಅವರು ಸದ್ಯ ಐಸಿಯು (ICU) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರ ತಂಡ ಆರೈಕೆ ಮಾಡುತ್ತಿದೆ ಎಂದು ಮಣಿಪಾಲ್‌ ಆಸ್ಪತ್ರೆಯಿಂದ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಲಾಗಿದೆ. ಶ್ವಾಸಕೋಶದ (Lungs) ಸೊಂಕಿನಿಂದ ಬಳಲುತ್ತಿರುವ ಎಸ್‍ಎಂಕೆಗೆ ಡಾ ಸತ್ಯನಾರಾಯಣ್ ಮತ್ತು ಡಾ ಸುನೀಲ್ ಕಾರಂತ್ ರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದು ವೈದ್ಯರ ತಂಡ ಆರೈಕೆ ಮಾಡ್ತಾ ಇದೆ. ಶ್ವಾಸಕೋಶದ ಒಳಗಡೆ ಆಕ್ಸಿಜನ್ …

Read More »

ಆರೋಗ್ಯ ಇಲಾಖೆ 108ಗೆ ಅನಾರೋಗ್ಯ; ರಾಜ್ಯಾದ್ಯಂತ ಆಂಬುಲೆನ್ಸ್ ಸೇವೆ ಬಂದ್; ಸಾರ್ವಜನಿಕರ ಆಕ್ರೋಶ

ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ಆರೋಗ್ಯ ಇಲಾಖೆ 108 ಆಂಬುಲೆನ್ಸ್ ಸೇವೆ ಬಂದ್ ಆಗಿದೆ ಎಂಬ ಮಾತು ಕೇಳಿಬರುತ್ತಿವೆ. ತಾಂತ್ರಿಕ ದೋಷದಿಂದಾಗಿ 108 ಗೆ ಕರೆ ಮಾಡಿದರೂ ಯಾರೂ ಸಹ ಕರೆ ಸ್ವೀಕರಿಸುತ್ತಿಲ್ಲ. ಹಾಗಾಗಿ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವುಂಟಾಗಿದೆ ಎಂದು ತಿಳಿದುಬಂದಿದೆ.   ಜಿವಿಕೆ ಏಜನ್ಸಿ ಮೂಲಕ 108 ಆಂಬುಲೆನ್ಸ್ ಸೇವೆ ನಡೆಯುತ್ತಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ತುರ್ತು ಸೇವೆ ಬಂದ್ ಆಗಿದೆ. ಎರಡು ದಿನಗಳಿಂದ ಈ ಸಮಸ್ಯೆಯಾಗಿದ್ದರೂ ಆರೋಗ್ಯ …

Read More »