ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರ ವಿಚಾರದಲ್ಲಿ ನಮ್ಮ ಸರ್ಕಾರ ಎಷ್ಟೇ ಸಮಾಧಾನ, ಸೌಹಾರ್ದದ ಕ್ರಮ ಅನುಸರಿಸುತ್ತಿದ್ದರೂ ಸಹ ಕಳೆದ 7 ದಿನಗಳಲ್ಲಿ ರಾಜ್ಯಾದ್ಯಂತ 60 ಸರ್ಕಾರಿ ಬಸ್ಸುಗಳ ಮೇಲೆ ದಾಳಿ ಮಾಡಿ ಹಾನಿಗೊಳಿಸಿದ್ದು ತೀರ ಖಂಡನೀಯ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಕುರಿತು ಇಂದು ತಮ್ಮ ಅಧಿಕೃತ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಅವರು, ಕೆ.ಎಸ್.ಆರ್.ಟಿ.ಸಿ.ಯ 34, ಬಿ.ಎಂ.ಟಿ.ಸಿ.ಯ 3, ಈಶಾನ್ಯ ಸಾರಿಗೆಯ …
Read More »ಮುಷ್ಕರನಿರತ ಸಾರಿಗೆ ನೌಕರರಿಗೆ ಸರ್ಕಾರದಿಂದ ಶಾಕ್: 271 ಚಾಲಕರು, ನಿರ್ವಾಹಕರು ಸಸ್ಪೆಂಡ್
ಬೆಂಗಳೂರು: ಮುಷ್ಕರನಿರತ ನೌಕರರ ಮೇಲೆ ಬಿಎಂಟಿಸಿ ಶಿಸ್ತು ಕ್ರಮ ಕೈಗೊಂಡಿದೆ. 271 ಚಾಲಕರು ಮತ್ತು ನಿರ್ವಾಹಕರನ್ನು ಅಮಾನತು ಮಾಡಲಾಗಿದೆ. ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕರು ಮತ್ತು ನಿರ್ವಾಹಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಳೆದ 8 ದಿನದಲ್ಲಿ 495 ನೌಕರರ ಮೇಲೆ ಶಿಸ್ತಿನ ಅಸ್ತ್ರ ಪ್ರಯೋಗಿಸಲಾಗಿದೆ. ಸಾರಿಗೆ ನೌಕರರ ಮುಷ್ಕರ 9 ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಂಜೆ ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಗುವುದು. ಸಾರಿಗೆ ನೌಕರರ ಮುಷ್ಕರವನ್ನು …
Read More »ಮಯನ್ಮಾರ್ನಿಂದ ಬೆಂಗಳೂರಿನವರೆಗೆ ಮಿಕ್ಸರ್, ಗ್ರೈಂಡರ್ ಬಾಕ್ಸ್ ನಲ್ಲಿ ಡ್ರಗ್ಸ್ ಸಾಗಾಟ ಜಾಲ ; ಪೋಲೀಸ್ ಬಲೆಗೆ
ಬೆಂಗಳೂರು : ಬೌನ್ಸ್ ಕಂಪನಿಯ ಬೈಕ್ಗಳ ಮುಖಾಂತರ ಗ್ರಾಹಕರಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ಅಂತಾರಾಜ್ಯ ದಂಧೆಕೋರರನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಣಿಪುರ ಮೂಲದ ಮೊಹಮ್ಮದ್ ಸಜೀದ್ ಖಾನ್, ಮೊಹಮ್ಮದ್ ಅಜಾದ್ ಹಾಗೂ ಸಪಮ್ ಸೀತಲ್ ಕುಮಾರ್ ಸಿಂಗ್ ಬಂಧಿತ ಆರೋಪಿಗಳು. ಬಂಧಿತರಿಂದ 60 ಲಕ್ಷ ರೂ. ಮೌಲ್ಯದ 130 ಗ್ರಾಂ ಹೆರಾಯಿನ್, 2480 ಎಕ್ಸೆಟೆನ್ಸಿ ಮಾತ್ರೆಗಳನ್ನ ವಶಪಡಿಸಿಕೊಳ್ಳಲಾಗಿದೆ. .ಆರೋಪಿಗಳು ಕೆಲಸ ಅರಸಿ ಮೂರು ವರ್ಷಗಳ ಹಿಂದೆ ರಾಜಧಾನಿಗೆ ಬಂದಿದ್ದರು. …
Read More »ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್
ಬೆಂಗಳೂರು: ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್ ಮಾಡಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ಸ್ ಪೆಕ್ಟರ್ ಕಿಶೋರ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದು, ಆರೋಪಿ ಮಂಜುನಾಥ್ ನನ್ನು ಬಂಧಿಸಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಬಲ್ ಮರ್ಡರ್ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದು, ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. …
Read More »ಮೊಬೈಲ್‍ನಲ್ಲಿ ಮಾತಾಡಿ ಜೇಬಲ್ಲಿ ಇಟ್ಟುಕೊಳ್ಳುವಾಗ ಬಡೀತು ಸಿಡಿಲು- ವ್ಯಕ್ತಿ ಸಾವು
ಬೆಂಗಳೂರು: ಅಕಾಲಿಕ ಮಳೆಯಿಂದ ಜನ ಕಂಗಾಲಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ವರುಣನ ಅಬ್ಬರದಿಂದ ಹಲವು ಅನಾಹುತಗಳು ಸಂಭವಿಸುತ್ತಿವೆ. ಸಿಡಿಲು ಬಡಿದು ಟಿಎಪಿಸಿಎಂಎಸ್ ಅಧ್ಯಕ್ಷ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮದ ಬಳಿ ನಡೆದಿದೆ. ಸೋಮಣ್ಣ ಬೀರಪ್ಪ ತೇರದಾಳ(40) ಸಿಡಿಲು ಬಡಿದು ಸಾವಿಗೀಡಾದ ದುರ್ದೈವಿ. 100 ಕುರಿ ಸಾಕಿದ್ದ ಸೋಮಣ್ಣ ಬೀರಪ್ಪ ತೇರದಾಳ, ಮಧ್ಯಾಹ್ನ ಕುರಿ ಕಾಯುವ ಆಳಿನ ಜೊತೆ ನೋಡಲು ಹೋಗಿದ್ದ. ಈ ವೇಳೆ ಮೊಬೈಲ್‍ನಲ್ಲಿ …
Read More »10 ನಗರಗಳಲ್ಲಿ ನೈಟ್ ಕರ್ಫ್ಯೂ ಇನ್ನಷ್ಟು ಬಿಗಿಗೊಳಿಸಿ; ಅಧಿಕಾರಿಗಳಿಗೆ ಸಿಎಂ ಬಿಎಸ್ವೈ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು: ಪ್ರಾಯೋಗಿಕವಾಗಿ ಹತ್ತು ನಗರಗಳಲ್ಲಿ ಜಾರಿ ಮಾಡಲಾಗಿರುವ ನೈಟ್ ಕರ್ಫ್ಯೂ ಇನ್ನಷ್ಟು ಬಿಗಿಗೊಳಿಸಬೇಕೆಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಯುಗಾದಿ ದಿನವೂ ಹಿರಿಯ ಅಧಿಕಾರಿಗಳ ಜೊತೆ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಕಮಿಷನರ್ ಕಮಲ್ ಪಂಥ್, ಸಾರಿಗೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. ಮೊದಲು ಸಾರಿಗೆ ನೌಕರರ ಮುಷ್ಕರದ ಬಗ್ಗೆ …
Read More »ಹಬ್ಬದ ಶಾಪಿಂಗ್‌ನಲ್ಲಿ ದಂಪತಿ ಬಿಜಿ: ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಮಗುವಿನ ಹೋರಾಟ
ಬೆಂಗಳೂರು: ಕಾರಿನಲ್ಲಿ ಮಗುವನ್ನು ಬಿಟ್ಟು ಯುಗಾದಿ ಹಬ್ಬದ ಶಾಪಿಂಗ್‌ಗೆ ತೆರಳಿದ ಪರಿಣಾಮ ಮಗು ಉಸಿರುಗಟ್ಟಿ ನರಳಾಡಿದ ಘಟನೆ ನಗರದ ಜಾಲಹಳ್ಳಿಯ ನ್ಯೂ ಬಿಇಎಲ್ನಲ್ಲಿ ನಡೆದಿದೆ. ದೃಷ್ಟವಶಾತ್ ಸ್ಥಳೀಯರ ಸಮಯಪ್ರಜ್ಞೆಯಿಂದ ಮಗುವಿನ ಪ್ರಾಣ ಉಳಿದೆ. ಜಾಲಹಳ್ಳಿಯ ನ್ಯೂ ಬಿಇಎಲ್ನಲ್ಲಿ ಸೋಮವಾರ ರಾತ್ರಿ ನಾಲ್ಕು ವರ್ಷದ ಮಗುವನ್ನು ಕಾರಿನಲ್ಲೇ ಬಿಟ್ಟು ದಂಪತಿ ಶಾಪಿಂಗ್‌ಗೆ ತೆರಳಿದ್ದರು. ಕೀ ಕಾರಿನಲ್ಲೇ ಇದ್ದಿದ್ರಿಂದ ಆಟೋಮೆಟಿಕ್ ಲಾಕ್ ಆಗಿತ್ತು. ಇದಾದ ಕೆಲವೊತ್ತಿನಲ್ಲೇ ಉಸಿರುಗಟ್ಟಲು ಆರಂಭಿಸಿ ಮಗು ಚೀರಾಡಲು ಶುರು …
Read More »ಕೋವಿಡ್ ಪರಿಸ್ಥಿತಿ; ಸರ್ವಪಕ್ಷಗಳ ಸಭೆ ಕರೆದ ಯಡಿಯೂರಪ್ಪ
ಬೆಂಗಳೂರು, ಏಪ್ರಿಲ್ 13; “ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲು ಏಪ್ರಿಲ್ 18ರಂದು ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ. ಸದ್ಯಕ್ಕೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ” ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು. ಬಸವಕಲ್ಯಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, “ಮೇ 2ರ ತನಕ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ” ಎಂದರು. ತಾಂತ್ರಿಕ ಸಹಲಾ ಸಮಿತಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ …
Read More »ನೌಕರರ ಷರತ್ತು ಒಪ್ಪಿಕೊಳ್ಳಲು ಸಾಧ್ಯವಿಲ್ಲ- ಸಿಎಂ ಬಿಎಸ್ ವೈ
ಬೆಂಗಳೂರು : ಇಂದು ಯುಗಾದಿ ಹಬ್ಬದ ಹಿನ್ನಲೆಯಲ್ಲಿ ನಾಡಿನ ಸಮಸ್ತ ಜನರಿಗೆ ಸಿಎಂ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ಬಳಿಕ ನೌಕರರ ಮುಷ್ಕರದ ಬಗ್ಗೆ ಬಸವ ಕಲ್ಯಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನೌಕರರ ಷರತ್ತು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹಬ್ಬಹರಿದಿನಗಳಲ್ಲಿ ಈ ರೀತಿ ಮಾಡೋದು ಸರಿಯಿಲ್ಲ. ಹಠವನ್ನು ಬಿಟ್ಟು ಕೆಲಸಕ್ಕೆ ಹಾಜರಾಗಬೇಕು. ಕೆಲಸಕ್ಕೆ ಹಾಜರಾಗದವರಿಗೆ ಸಂಬಳ ಕೊಡಲ್ಲ ಎಂದು ಹೇಳಿದ್ದಾರೆ. ಸದ್ಯಕ್ಕೆ ಲಾಕ್ ಡೌನ್ ಇಲ್ಲ. ಏ.18, 19ಕ್ಕೆ ಸರ್ವಪಕ್ಷದ ಸಭೆ …
Read More »7 ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಇಂದು ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆ
ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದುಉ 7 ನೇ ದಿನಕ್ಕೆ ಕಾಲಿಟ್ಟಿದ್ದು, ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ. ಸಾರಿಗೆ ನೌಕರರು ತಟ್ಟೆ ಲೋಟ ಹಿಡಿದು ಕುಟುಂಬದ ಜೊತೆ ಭಿಕ್ಷಾಟನೆ ಮಾಡಲು ನಿರ್ಧರಿಸಿದ್ದು, ಯಾವುದೇ ಕಾರಣಕ್ಕು ಕರ್ತವ್ಯಕ್ಕೆ ಮರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಈ ಕುರಿತು ಮಾತನಾಡಿರುವ …
Read More »
Laxmi News 24×7