ಬೆಂಗಳೂರು: ‘ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕಲು ಅನ್ಯಾಯದ ಬ್ರಹ್ಮಾಸ್ತ್ರದ ಮಾರ್ಗಗಳನ್ನು ಸರ್ಕಾರ ಅನುಸರಿಸುತ್ತಿದೆ. ಅದನ್ನು ಬಿಟ್ಟು ಮಾತುಕತೆಗೆ ಮುಂದಾಗಬೇಕು’ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು. ‘ಸಾರಿಗೆ ಸಿಬ್ಬಂದಿಗೆ ನೋಟಿಸ್ ನೀಡಲಾಗುತ್ತಿದೆ. ತರಬೇತಿ ಮತ್ತು ಪ್ರೊಬೇಷನರಿ ಅವಧಿಯಲ್ಲಿರುವ ಸಿಬ್ಬಂದಿಯನ್ನು ವಜಾಗೊಳಿಸಲಾಗುತ್ತಿದೆ. ನಿಗಮ ನೀಡಿರುವ ಮನೆಗಳನ್ನು ಖಾಲಿ ಮಾಡಿಸುವ ಪ್ರಯತ್ನಗಳೂ ನಡೆಯುತ್ತಿವೆ. ನೌಕರರನ್ನು ಮನೆಗಳಿಂದ ದಬ್ಬುವ ಪ್ರಯತ್ನ ಸರಿಯಲ್ಲ. ಇವೆಲ್ಲವೂ ಪ್ರಜಾಪ್ರಭುತ್ವ ವಿರೋಧಿ ನಡೆಗಳು’ ಎಂದು ಗುರುವಾರ …
Read More »ಏಪ್ರಿಲ್ 10ರಿಂದ ರಾಜ್ಯದಲ್ಲಿ ‘ಕೊರೊನಾ ಕರ್ಫ್ಯೂ’: ಸಿಎಂ ಬಿಎಸ್‌ವೈ
ಬೆಂಗಳೂರು: ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕಾರಣ ರಾಜಧಾನಿ ಬೆಂಗಳೂರು ನಗರ ಸೇರಿ ರಾಜ್ಯದ ಏಳು ಜಿಲ್ಲಾ ಕೇಂದ್ರ ಮತ್ತು ಮಣಿಪಾಲದಲ್ಲಿ ಏ. 10ರಿಂದ 20ರವರೆಗೆ ‘ಕೊರೊನಾ ಕರ್ಫ್ಯೂ’ (ರಾತ್ರಿ ಕರ್ಫ್ಯೂ) ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಗುರುವಾರ ಸಂಜೆ ವಿಡಿಯೊ ಸಂವಾದದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ಬೆಂಗಳೂರು ನಗರ, ಮೈಸೂರು, ಮಂಗಳೂರು, ಕಲಬುರ್ಗಿ, ಬೀದರ್, ತುಮಕೂರು, ಉಡುಪಿ ನಗರದ ಜೊತೆಗೆ …
Read More »Covid-19 Karnataka Update: 50 ಸಾವಿರ ದಾಟಿದ ಸಕ್ರಿಯ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಸತತ ಮೂರನೇ ದಿನ ಕೂಡ ಆರು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 6,570 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 53,395ಕ್ಕೆ ತಲುಪಿದೆ. ಕಳೆದ ತಿಂಗಳು ರಾಜ್ಯದಲ್ಲಿ ಈ ವೇಳೆ ಕೇವಲ 6,815 ಸಕ್ರಿಯ ಪ್ರಕರಣಗಳಿದ್ದವು. ಬಳಿಕ ಹೊಸ ಪ್ರಕರಣಗಳು ಏರುಗತಿ ಪಡೆದುಕೊಂಡಿದ್ದು, ಈಗ ಕೇವಲ ಮೂರು ದಿನಗಳ ಅವಧಿಯಲ್ಲಿಯೇ 19,941 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ರಾಜ್ಯದ …
Read More »ಏಪ್ರಿಲ್ 10 ರಂದು ‘ಬೆಂಗಳೂರು ವಿವಿ’ ಪದವಿ ಪರೀಕ್ಷೆ ನಿಗದಿ
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಬೆಂಗಳೂರು ವಿಶ್ವ ವಿದ್ಯಾಲಯದ 1 ಮತ್ತು ಮೂರನೇ ವರ್ಷದ ಸ್ನಾತಕ ಪದ್ದತಿಯ ಬಿಕಾಂ, ಬಿಎ. ಬಿಎಸ್ಸಿ, ಬಿಬಿಎಂ, ಬಿಬಿಎ, ಬಿ ಹೆಚ್ ಎಂ ಹಾಗೂ ದೂರ ಶಿಕ್ಷಣ ಪರೀಕ್ಷೆಗಳು ಇದೇ ತಿಂಗಳ 10 ರಂದು ನಡೆಯಲಿದೆ. ಈ ಬಗ್ಗೆ ಬೆಂಗಳೂರು ವಿವಿ ಕುಲಸಚಿವರು ( ಮೌಲ್ಯಮಾಪನ) ಪ್ರಕಟಣೆ ಹೊರಡಿಸಿದ್ದು, ಇದೇ 7 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಸಾರಿಗೆ ನೌಕರರ ಮುಷ್ಕರ …
Read More »ಹೈಕಮಾಂಡ್ ಎಲ್ಲವನ್ನ ಗಮನಿಸುತ್ತಿದೆ: ಯತ್ನಾಳ್ ವಿರುದ್ಧ ರಾಘವೇಂದ್ರ ಕಿಡಿ
ಚಿಕ್ಕಮಗಳೂರು: ಯಡಿಯೂರಪ್ಪನವರು ನನ್ನ ತಂದೆ, ವಿಜಯೇಂದ್ರ ನನ್ನ ತಮ್ಮನೇ ಆಗಿದ್ದರೂ ಕೂಡ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಗಳು, ವಿಜಯೇಂದ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸಂಘಟನೆ ಕೆಲಸ ಮಾಡುತ್ತಿದ್ದಾರೆ. ವೈಯಕ್ತಿಕ ಅಲ್ಲದಿದ್ರು ಪಕ್ಷಕ್ಕೆ ಮುಜಗರವಾಗುವಂತಹ ಕೆಲಸ-ಕಾರ್ಯಗಳು ನಡೆಯುತ್ತಿದೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ಸಮಯ-ಸಂದರ್ಭ ಬಂದಾಗ ಯಾರು-ಯಾವ ತೀರ್ಮಾನ ತೆಗೆದುಕೊಳ್ಳಬೇಕು ತೆಗೆದುಕೊಳ್ತಾರೆ ಎಂದು ಯತ್ನಾಳ್ ವಿರುದ್ಧ ಶಿವಮೊಗ್ಗ ಸಂಸದ ರಾಘವೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ವೀರಶೈವ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, …
Read More »ಸಾರಿಗೆ ನೌಕರರ ಮುಷ್ಕರ ಎಫೆಕ್ಟ್ :ಖಾಸಗಿ ಬಸ್ಗಳ ಟಾಪ್ ನಲ್ಲಿ ಕುಳಿತು ಪ್ರಯಾಣ
ಬೆಂಗಳೂರು : ಗಂಡ ಹೆಂಡ್ತಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಮಾತು ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳೇ ಸಾಕ್ಷಿ. ಸಾರಿಗೆ ನೌಕರರು ಮತ್ತು ಸರ್ಕಾರದ ನಡುವಿನ ಜಟಾಪಟಿ ಎರಡನೇ ದಿನವೂ ಮುಂದುವರೆದಿದ್ದು, ಇವರಿಬ್ಬರ ಮಧ್ಯೆ ಸಿಲುಕಿರುವ ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗಲೆಂದು ಸರ್ಕಾರವೇನೋ ಖಾಸಗಿ ಬಸ್, ಮ್ಯಾಕ್ಸಿಕ್ಯಾಬ್ಗಳ ಮೊರೆ ಹೋಗಿದೆ. ಆದರೆ, ಸರಿಯಾದ ಸಮಯಕ್ಕೆ ನಿಗದಿತ ಸ್ಥಳಕ್ಕೆ ತಲುಪಲಾಗದೇ ಸಾಮಾನ್ಯ ಜನರು ಹೈರಾಣಾಗಿದ್ದಾರೆ. ನಗರ ಸಾರಿಗೆ ಬಸ್‌ಗಳು …
Read More »ಖಾಸಗಿ ವಾಹನಗಳಿಗೆ ತೆರಿಗೆ ವಿನಾಯಿತಿ, ಪರ್ಯಾಯ ಸಾರಿಗೆ ವ್ಯವಸ್ಥೆ: ಡಿಸಿಎಂ ಸವದಿ
ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಿದ್ದರೂ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಮೂಲಕ ಮುಷ್ಕರ ಮುಂದುವರೆಸುವ ನಿರ್ಧಾರವನ್ನು ಸಾರಿಗೆ ನೌಕರರ ಒಕ್ಕೂಟದ ಮುಖಂಡರು ಕೈಗೊಂಡಿರುವುದು ನಿಜಕ್ಕೂ ದುರ್ದೈವದ ವಿಚಾರವಾಗಿದೆ ಎಂದು ಸಾರಿಗೆ ಸಚಿವರಾದ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಮುಷ್ಕರದಿಂದ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಸರ್ಕಾರವು ಹಲವು ರೀತಿಯಲ್ಲಿ ಪರ್ಯಾಯ ವ್ಯವಸ್ಥೆ ಕೈಗೊಂಡಿರುವುದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು. ಸಾರಿಗೆ ನೌಕರರ ವೇತನ …
Read More »ಸಂಚರಿಸದ KSRTC-BMTC ಬಸ್‌ಗಳು: ಪ್ರಯಾಣಿಕರ ಸಂಚಾರಕ್ಕೆ ಅಡಚಣೆ
ಬೆಂಗಳೂರು : ವಿವಿಧ ಬೇಡಿಕೆಗಳು ಹಾಗೂ ಆರನೇ ವೇತನ ಆಯೋಗ ಜಾರಿಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ನಾಲ್ಕೂ ಸಾರಿಗೆ ನಿಗಮಗಳ ಸಾರಿಗೆ ನೌಕರರು ಮುಂಜಾನೆಯಿಂದ ಬಸ್‌ಗಳನ್ನು ಡಿಪೋಗಳಿಂದ ಹೊರತೆಗೆಯದೇ ಪ್ರತಿಭಟನೆ ಮಾಡುತ್ತಿದ್ದು, ಪ್ರಯಾಣಿಕರಿಗೆ ಅಡಚಣೆ ಉಂಟಾಗಿದೆ. ಸದಾ ಜನಜಂಗುಳಿಯಿಂದ ಜುನುಗುಡುತ್ತಿದ್ದ ಕೆಂಪೇಗೌಡ ಬಸ್ ನಿಲ್ದಾಣದ ಬಸ್‌ಗಳಿಲ್ಲದೇ ಬಣಗುಡುತ್ತಿದೆ. ಮುಂಜಾನೆ 5 ಗಂಟೆಯಿಂದ ಕೆಲ ಖಾಸಗಿ ಬಸ್‌ಗಳು ಮಾತ್ರ ಸಂಚಾರ ಆರಂಭಿಸಿವೆ. ಆದರೆ ಸಮರ್ಪಕ ಸೇವೆ ಸಿಗದೇ ಪ್ರಯಾಣಿಕರು ತೀವ್ರ ಬೇಸರವನ್ನು ಹೊರಹಾಕುತ್ತಿದ್ದಾರೆ. …
Read More »ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಬಳಕೆ, ಪ್ರಯಾಣಿಕರ ಪರದಾಟ
ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಅತ್ತ ಸರ್ಕಾರ ಖಾಸಗಿ ಬಸ್ ಗಳನ್ನು ಬಳಸಲು ಅವಕಾಶ ನೀಡಿದ್ದರೆ, ಇತ್ತರ ಸಾರಿಗೆ ನೌಕರರೂ ಪಟ್ಟು ಬಿಡದೆ ಮುಷ್ಕರ ಮುಂದುವರಿಸಿದ್ದಾರೆ. ಇಂದು ಸಹ ಯಾವುದೇ ಸಾರಿಗೆ ಬಸ್ ಸಂಚಾರ ಕಂಡುಬಂದಿಲ್ಲ. ಹೆಚ್ಚಿನೆಡೆ ಖಾಸಗಿ ಬಸ್ ಗಳನ್ನು ಬಳಸಲಾಗುತ್ತಿದೆ. ಆದರೆ ಪ್ರಯಾಣಿಕರು ಮಾತ್ರ ಪರದಾಡುವಂತಾಗಿದೆ. ಒಂದೆಡೆ ಅನಿರ್ದಿಷ್ಟಾವಧಿ ಖಾಸಗಿ ವಾಹನಗಳ ಕಾರ್ಯಾಚರಣೆಗೆ ಸರ್ಕಾರ …
Read More »ಖಾಸಗಿ ಆಸ್ಪತ್ರೆಗಳ ಅರ್ಧದಷ್ಟು ಬೆಡ್ಗಳು ಕೊರೋನಾ ಸೋಂಕಿತರಿಂದಲೇ ಭರ್ತಿ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇದರ ಪರಿಣಾಮ ಕೊರೋನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಖಾಸಗಿ ಆಸ್ಪತ್ರೆಯಲ್ಲಿ ಅರ್ದಕ್ಕರ್ದದಷ್ಟು ಬೆಡ್ ಗಳು ಕೊರೋನಾದಿಂದ ಫುಲ್ ಆಗುತ್ತಿವೆ. ಇದೇ ವೇಗದಲ್ಲಿ ಕೊರೊನಾ ಕೇಸ್ ಹೆಚ್ಚಾದ್ರೆ ಆಸ್ಪತ್ರೆಗಳಲ್ಲಿ ಬೆಡ್ಗಳೇ ಸಿಗೋದು ಡೌಟು. ರಾಜ್ಯದಲ್ಲಿ 2ನೆ ಅಲೆ ಕೊರೊನಾ ಅತಿ ಹೆಚ್ಚು ಪರಿಣಾಮಕಾರಿಯಾಗಿದೆ. ಕಳೆದ ವರುಷವಂತೂ ಕೊರೊನಾಗೆ ಸಾಕಷ್ಟು ನಲುಗಿದ್ದ ಜನತೆ ಈ ಬಾರಿಯೂ ಎರಡನೇ ಅಲೆಗೆ ತೊಂದರೆ ಎದುರಿಸುತ್ತಿದ್ದಾರೆ. …
Read More »