ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇದರ ಪರಿಣಾಮ ಕೊರೋನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಖಾಸಗಿ ಆಸ್ಪತ್ರೆಯಲ್ಲಿ ಅರ್ದಕ್ಕರ್ದದಷ್ಟು ಬೆಡ್ ಗಳು ಕೊರೋನಾದಿಂದ ಫುಲ್ ಆಗುತ್ತಿವೆ. ಇದೇ ವೇಗದಲ್ಲಿ ಕೊರೊನಾ ಕೇಸ್ ಹೆಚ್ಚಾದ್ರೆ ಆಸ್ಪತ್ರೆಗಳಲ್ಲಿ ಬೆಡ್ಗಳೇ ಸಿಗೋದು ಡೌಟು. ರಾಜ್ಯದಲ್ಲಿ 2ನೆ ಅಲೆ ಕೊರೊನಾ ಅತಿ ಹೆಚ್ಚು ಪರಿಣಾಮಕಾರಿಯಾಗಿದೆ. ಕಳೆದ ವರುಷವಂತೂ ಕೊರೊನಾಗೆ ಸಾಕಷ್ಟು ನಲುಗಿದ್ದ ಜನತೆ ಈ ಬಾರಿಯೂ ಎರಡನೇ ಅಲೆಗೆ ತೊಂದರೆ ಎದುರಿಸುತ್ತಿದ್ದಾರೆ. …
Read More »ಕೆಲಸಕ್ಕೆ ಹಾಜರಾಗದಿದ್ದರೆ ಮಾರ್ಚ್ ತಿಂಗಳ ವೇತನ ಕಟ್ :ಬಿಎಂಟಿಸಿ ಎಂಡಿ ಶಿಖಾ
ಬೆಂಗಳೂರು : ರಾಜ್ಯಾದ್ಯಂತ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗದೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರ ಪರಿಣಾಮ 135 ಬಸ್ಗಳು ಮಾತ್ರ ಇವತ್ತು ಸಂಚಾರ ಮಾಡುತ್ತಿವೆ. ನಗರದ ಯಶವಂತಪುರ ಬಸ್ ನಿಲ್ದಾಣಕ್ಕೆ ಬಿಎಂಟಿಸಿ ಎಂಡಿ ಶಿಖಾ ಆಗಮಿಸಿ ಪರಿಶೀಲನೆ ನಡೆಸಿದರು. ಬಳಿಕ ಮಾತಾನಾಡಿದ ಅವರು, ಬೆಂಗಳೂರಿನಲ್ಲಿ ಈವರೆಗೆ 135 ಬಿಎಂಟಿಸಿ ಬಸ್ಗಳು ಮಾತ್ರ ಸಂಚರಿಸುತ್ತಿವೆ. ಮಂಗಳವಾರದ ಸಭೆಯಲ್ಲಿನ ತೀರ್ಮಾನದಂತೆ ಪರ್ಯಾಯವಾಗಿ ಖಾಸಗಿ ಬಸ್ಗಳನ್ನ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಸ್ವಲ್ಪ …
Read More »ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಯಲಿದೆ : ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು, ಏ.7- ಆರನೆ ವೇತನ ಜಾರಿಯಾಗುವವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಬಸ್‍ಗಳಿಂದ ಸರ್ಕಾರಕ್ಕೆ ನಷ್ಟವೇ ಹೊರತು ಲಾಭವಿಲ್ಲ. ಸರ್ಕಾರ ಅವೈಜ್ಞಾನಿಕ ಪ್ರಯತ್ನ ಮಾಡುತ್ತಿದೆ. ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದರು. ಬಂದ್ ಯಶಸ್ಸಿಗೆ ಸಾರಿಗೆ ನೌಕರರ ನೋವುಗಳೇ ಕಾರಣ. ಹಲವು ದಿನಗಳಿಂದ ಅವರಿಗೆ ಸಾಕಷ್ಟು ಸಮಸ್ಯೆಗಳಿವೆ. ವ್ಯಕ್ತಿ ಪ್ರತಿಷ್ಠೆಗಿಂತ ನೌಕರರ ಸಮಸ್ಯೆ ಬಗೆಹರಿಸುವುದು …
Read More »ಮನವಿ ಮಾಡಿದ್ರೂ ನೌಕರರು ಡೋಂಟ್ ಕೇರ್: ಸಾರಿಗೆ ನೌಕರರಿಗೆ ಶಾಕ್ ನೀಡಲು ಮುಂದಾದ ಸರ್ಕಾರ!
ಬೆಂಗಳೂರು: ಆರನೇ ವೇತನ ಆಯೋಗ ಶಿಫಾರಸಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಮುಷ್ಕರ ಹೂಡಿದ್ದು, ಯಾವುದೇ ಕೆಎಸ್‌ಆರ್ ಟಿಸಿ, ಬಿಎಂಟಿಸಿ ಬಸ್ ಗಳು ರಸ್ತೆಗಿಳಿದಿಲ್ಲ. ಸರ್ಕಾರ, ಅಧಿಕಾರಿಗಳ ಮನವಿಗೆ ನೌಕರರು ಸೊಪ್ಪು ಹಾಕದೆ ಇರುವುದರಿಂದ ನೌಕರರಿಗೆ ಶಾಕ್ ನೀಡಲು ಸರ್ಕಾರ ನಿರ್ಧರಿಸಿದೆ. ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವ ನೌಕರರ ಮಾರ್ಚ್ ತಿಂಗಳ ವೇತನ ತಡೆಯಲು ಸರ್ಕಾರ ಮುಂದಾಗಿದೆ. ಪ್ರತಿ ತಿಂಗಳು 10ನೇ ತಾರೀಖಿನೊಳಗೆ ನಿಗಮಗಳು ನೌಕರರಿಗೆ ವೇತನ ನೀಡುತ್ತಿದ್ದವು. ಆದರೆ …
Read More »ಬಸ್ ಗಳಿಲ್ಲದೇ ವೃದ್ಧನ ಪರದಾಟ – ಹೃದಯಾಘಾತದಿಂದ ಸಾವು
ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಬೆಳಿಗ್ಗೆಯಿಂದಲೇ ರಾಜ್ಯಾದ್ಯಂತ ಮುಷ್ಕರ ಆರಂಭಿಸಿದ್ದು, ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಖಾಸಗಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆಯಾದರೂ ದುಪ್ಪಟ್ಟು ಹಣ, ಬಸ್ ಸಂಚಾರ ಸಮರ್ಪಕವಾಗಿಲ್ಲದ ಕಾರಣ ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ನಡುವೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೃದ್ಧ ಅಂಗವಿಕಲರೊಬ್ಬರು ಹೃದಾಯಾಘಾತದಿಂದ ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ. ! ಜಿಗಣಿಯಿಂದ ಬಂದಿದ್ದ ಚೆನ್ನಪ್ಪ ಮೆಜೆಸ್ಟಿಕ್ ನಲ್ಲಿ …
Read More »ಮುತ್ತಪ್ಪ ರೈ ಆಸ್ತಿ ಪರಭಾರೆಗೆ ಸಿವಿಲ್ ಕೋರ್ಟ್ ಬ್ರೇಕ್
ಬೆಂಗಳೂರು: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಆಸ್ತಿ ವಿಭಾಗ ಸಂಬಂಧ ಪತ್ನಿ ಅನುರಾಧಾ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿವಿಲ್ ಕೋರ್ಟ್ ಸದ್ಯ ಆಸ್ತಿ ಪರಭಾರೆ ಮಾಡದಂತೆ ಮಧ್ಯಂತರ ಆದೇಶ ನೀಡಿದೆ. ಮುತ್ತಪ್ಪ ರೈ ಅವರು ನಿಧನರಾದ ಬಳಿಕ ಎರಡನೇ ಪತ್ನಿ ಅನುರಾಧಾ ಅವರು ಪತಿಯ ಆಸ್ತಿಯನ್ನು ಪರಭಾರೆ ವಿಚಾರ ಸಂಬಂಧ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮುತ್ತಪ್ಪ ರೈ ಪುತ್ರ ರಾಕಿ, …
Read More »7 ಜಿಲ್ಲೆಗಳಲ್ಲಿ ಶತಕ ದಾಟಿದ ಕೊರೊನಾ ಅಬ್ಬರ
ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಶತಕ ದಾಟಿದ್ದು, ರಾಜ್ಯದ ಇತರೆ ಜಿಲ್ಲೆಗಳಲ್ಲೂ ದಿನೇದಿನೆ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 4266 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಎಂದಿನಂತೆ ಅಪಾಯದ ಕರೆಗಂಟೆ ಬಾರಿಸುತ್ತಿದೆ. ಕಲಬುರಗಿಯಲ್ಲಿ 261, ಮೈಸೂರಿನಲ್ಲಿ 237, ತುಮಕೂರು 157, ಮಂಡ್ಯ 102, ಹಾಸನ 110 ಮತ್ತು ಬೀದರ್ ನಲ್ಲಿ 167 ಪ್ರಕರಣಗಳು …
Read More »ಜನತೆಗೆ ತಟ್ಟಿದ ಸಾರಿಗೆ ಮುಷ್ಕರ ಬಿಸಿ, ಖಾಸಗಿ ವಾಹನಗಳಿಂದ ಸುಲಿಗೆ -ಪ್ರಯಾಣಿಕರ ಪರದಾಟ
ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಗೊಂಡಿದ್ದು, ರಾಜ್ಯದ ಜನತೆಗೆ ಮುಷ್ಕರದ ಬಿಸಿ ತಟ್ಟಿದ್ದು ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ನಡುವೆ ಖಾಸಗಿ ಬಸ್ ಗಳಲ್ಲಿ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎನ್ನುವ ದೂರುಗಳು ಕೇಳಿಬಂದಿವೆ. ಮುಷ್ಕರ ಆರಂಭವಾಗುತ್ತಿದ್ದಂತೆ ಡೀಸೆಲ್ ದರ 80 ರ ರೂಪಾಯಿ ಇದೆ ಎಂದು ಹೇಳುತ್ತಿರುವ ಖಾಸಗಿ ಬಸ್ ಗಳಲ್ಲಿ ಹೆಚ್ಚಿನ ಪ್ರಯಾಣ ದರ ವಸೂಲಿ ಮಾಡಲಾಗುತ್ತಿದೆ. ಸಾರಿಗೆ ಇಲಾಖೆ ಬದಲಿ …
Read More »ನಾಳೆ 5 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚಾರ, ಬೆಳಿಗ್ಗೆ 7 ರಿಂದ ರಾತ್ರಿ 9ರವರೆಗೆ ಓಡಾಟ
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ನಾಳೆ ಮುಷ್ಕರವನ್ನ ಮಾಡ್ತಿದ್ದು, ಪ್ರಯಾಣಿಕರಿಗೆ ಅನುಕಾಲಕ್ಕಾಗಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ. ಬಸ್ ಇಲ್ಲದೇ ಪ್ರಯಾಣಿಕರು ಪರದಾಡಬಾರದು ಅನ್ನೋ ದೃಷ್ಠಿಯಲ್ಲಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೆಟ್ರೋ ಓಡಾಟವಿರಲಿದೆ.
Read More »ಬೆಳಗಾವಿ ಉಪಚುನಾವಣೆ ಅಖಾಡಕ್ಕೆ ಸಿಎಂ ಯಡಿಯೂರಪ್ಪ: ಮಂಗಲಾ ಅಂಗಡಿ ಪರ ಮತಯಾಚನೆ
ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ಪ್ರಮುಖ ಪಕ್ಷಗಳ ನಾಯಕರು ಕ್ಷೇತ್ರಗಳಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ್ ಅಂಗಡಿ ಪರ ಮುಖ್ಯಮಂತ್ರು ಬಿ.ಎಸ್.ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ. ಸಿಎಂ ಯಡಿಯೂರಪ್ಪ ಇಂದು ಕೆಂಪೇಗೌಡ ಏರ್ ಪೋರ್ಟ್ ಮೂಲಕ ಹುಬ್ಬಳಿಗೆ ಪ್ರಯಾಣ ಬೆಳೆಸಿದರು. ಹುಬ್ಬಳ್ಳಿಯಿಂದ ರಸ್ತೆ ಮಾರ್ಗದ ಮೂಲಕ ಬೆಳಗಾವಿಗೆ ಪ್ರಯಾಣ ಮಾಡಲಿದ್ದು, ಇಂದು …
Read More »