Breaking News

ಬೆಂಗಳೂರು

ನಾಳೆ ಮುಷ್ಕರ ನಡೆಸುವ ಸಾರಿಗೆ ನೌಕರರಿಗೆ ಎಸ್ಮಾ ಜಾರಿ; ಪರ್ಯಾಯ ವ್ಯವಸ್ಥೆಗೂ ಸಿದ್ಧತೆ: ಎಚ್ಚರಿಕೆ ನೀಡಿದ ಸರ್ಕಾರ

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಏ.7 ರಂದು ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರಿಗೆ ಸರ್ಕಾರ ಎಸ್ಮಾ ಎಚ್ಚರಿಕೆ ನೀಡಿದೆ. ಆರನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ, ಸಾರಿಗೆ ನೌಕರರೊಂದಿಗೆ ಮತ್ತೆ ಮಾತುಕತೆಯ ಪ್ರಶ್ನೆಯೂ ಇಲ್ಲ, ಮುಷ್ಕರಕ್ಕೆ ಮುಂದಾದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ,ಎಸ್ಮಾ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಷ್ಕರಕ್ಕೆ ಕರೆ …

Read More »

402 PSI ಹುದ್ದೆಗಳಿಗೆ ಅರ್ಜಿ ಆಹ್ವಾನ ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಪತ್ರದ ಅಧಿಸೂಚನೆ ಸಂಖ್ಯೆ 08/ನೇಮಕಾತಿ-2/2021-22, ದಿನಾಂಕ :03-03-2021 ನ್ನು ಮುಂದುವರೆಸುತ್ತಾ ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 402 ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಆಹ್ವಾನ ಮಾಡಲಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ 01/04/2021 ಆನ್‌ಲೈನ್ ಅರ್ಜಿ ಸೃಜಿಸಲು ಕೊನೆಯ ದಿನಾಂಕ 03/05/2021 ಆನ್‌ಲೈನ್ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ …

Read More »

ಮನೆಗೇ ಬರಲಿದ್ದಾರೆ ಶಿಕ್ಷಕರು : ಹೊಸ ಮಾದರಿಯಲ್ಲಿ ವಿದ್ಯಾಗಮ ಜಾರಿ

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಿದ್ಯಾಗಮ ಮತ್ತು ನೇರ ತರಗತಿಯನ್ನು ಸರಕಾರ ಸ್ಥಗಿತಗೊಳಿಸಿದ್ದರೂ ಮನೆ ಮನೆಗೆ ಭೇಟಿ ನೀಡುವಂತೆ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಮೂಲಕ ವಿದ್ಯಾಗಮವನ್ನು ಹೊಸ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಮುಂದಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ, ಕ್ಲಸ್ಟರ್‌ಗಳ ಸಿಆರ್‌ಪಿಗಳಿಗೆ ಈ ಬಗ್ಗೆ ಜ್ಞಾಪನ ಪತ್ರ ಕಳುಹಿಸಿದ್ದಾರೆ. 1ರಿಂದ 5ನೇ ತರಗತಿಯ ಮಕ್ಕಳಿಗೆ ವಿದ್ಯಾಗಮದಂತೆ ಮನೆ ಮನೆಗೆ …

Read More »

ಸಿಡಿ ಕೇಸ್ – ಸರ್ಕಾರ, ಎಸ್‍ಐಟಿಗೆ ಹೈಕೋರ್ಟ್ ನೋಟಿಸ್ ಜಾರಿ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ(ಎಸ್‍ಐಟಿ) ಮತ್ತು ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕೆಂದು ಕೋರಿ ವಕೀಲ ಉಮೇಶ್ ಅವರು ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ವಿಭಾಗೀಯ ಪೀಠದಲ್ಲಿ ನಡೆಯಿತು. ವಿಚಾರಣೆ ನಡೆಸಿದ ಕೋರ್ಟ್, ಮುಚ್ಚಿದ ಲಕೋಟೆಯಲ್ಲಿ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಎಸ್‍ಐಟಿಗೆ  ಸೂಚನೆ ನೀಡಿದೆ. ಈ ಅರ್ಜಿಯ ವಿಚಾರಣೆಯನ್ನು ಏ.17ಕ್ಕೆ ಹೈಕೋರ್ಟ್ …

Read More »

ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

ಬೆಂಗಳೂರು: ಕೆಐಎಡಿಬಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕೆಐಎಡಿಬಿ 20 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಎಂಬುವವರು ಸಿಎಂ ಯಡಿಯೂರಪ್ಪ ಹಾಗೂ ಸಚಿವ ನಿರಾಣಿ ವಿರುದ್ಧ ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ದೂರು …

Read More »

ಸಿಡಿ ಕೇಸ್: ರಕ್ಷಣೆ ನೀಡುವಂತೆ ಕೋರಿ ಪೊಲೀಸ್ ಆಯುಕ್ತರ ಮೊರೆ ಹೋದ ಋಷಿಕುಮಾರ ಸ್ವಾಮೀಜಿ

ಬೆಂಗಳೂರು; ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಋಷಿಕುಮಾರ ಸ್ವಾಮೀಜಿ ಇದೀಗ ರಕ್ಷಣೆ ನೀಡುವಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಮನವಿ ಮಾಡಿರುವ ಘಟನೆ ನಡೆದಿದೆ ರಮೇಶ್ ಜಾರಕಿಹೊಳಿ ಪರ ಮಾತನಾಡಿದ್ದಕ್ಕೆ ಬರುವ ಅಮವಾಸ್ಯೆಗೆ ನಿನ್ನನ್ನು ಮುಗಿಸುತ್ತೇವೆ ಎಂದು ಅಪರಿಚಿತ ವ್ಯಕ್ತಿಗಳು ತನಗೆ ಬೆದರಿಕೆಯೊಡ್ಡುತ್ತಿದ್ದು, ಸೂಕ್ತ ಭದ್ರತೆ ನೀಡುವಂತೆ ಋಷಿಕುಮಾರ ಸ್ವಾಮೀಜಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಸಿಡಿ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ …

Read More »

ಊಹಾಪೋಹ ಕ್ಕೆ ವಿಡಿಯೋ ಕಾಲ ಮೂಲಕ ಸ್ಪಷ್ಟನೆ ಕೊಟ್ಟ ಗೋಕಾಕ ವೈದ್ಯಾಧಿಕಾರಿ

ಬೆಂಗಳೂರು: ಮಾಜಿ ಸಚಿವ ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ ಇಂದು ಕೊರೊನಾ ಸೋಂಕಿನವರೆಗೂ ಬಂದು ನಿಂತಿದೆ. ಶಾಸಕ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಗೋಕಾಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ ಇಂದು ಬೆಳಗ್ಗೆ ಮಾಹಿತಿ ನೀಡಿದ್ದರು. ಏಪ್ರಿಲ್​ 1ರಂದು ಗೋಕಾಕ ಆಸ್ಪತ್ರೆಗೆ ಬಂದು ಕೊವಿಡ್​ ಟೆಸ್ಟ್​ ಮಾಡಿಸಿದ್ದ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ ಎಂದು ಆರೋಗ್ಯಾಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದರು. ಇದೀಗ …

Read More »

ಒಂದರಿಂದ 9ನೇ ತರಗತಿವರೆಗಿನ ಪರೀಕ್ಷೆ ನಡೆಸಲು ಶಿಕ್ಷಣ ಸಂಸ್ಥೆಗಳ ಒತ್ತಾಯ

ಬೆಂಗಳೂರು, ಏ.5- ಒಂದರಿಂದ 9ನೇ ತರಗತಿವರೆಗೆ ಪರೀಕ್ಷೆ ನಡೆಸಬೇಕೆಂಬ ಅಭಿಪ್ರಾಯವನ್ನು ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘಟನೆಗಳ ಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗಿದೆ. ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿ, ಒಂದರಿಂದ 5ನೇ ತರಗತಿವರೆಗೆ ಆನ್‍ಲೈನ್ ಪರೀಕ್ಷೆ, 6ರಿಂದ 9ನೇ ತರಗತಿವರೆಗೆ ಈಗಾಗಲೇ ಅರ್ಧಂಬರ್ಧ ಪರೀಕ್ಷೆಗಳು ನಡೆದಿದ್ದು, ಎರಡೂ ಪಾಳಿಯಲ್ಲಾದರೂ ಪರೀಕ್ಷೆ ನಡೆಸಲು ಅವಕಾಶ ನೀಡುವಂತೆ ಮನವಿ …

Read More »

ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಜ್ವರದಿಂದ ಗುಣಮುಖರಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಣಿಪಾಲ್ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾದರು. ವೈದ್ಯರಾದ ಡಾ.ಸುದರ್ಶನ್ ಬಲ್ಲಾಳ್, ಸತ್ಯನಾರಾಯಣ ಮೈಸೂರು ಮಾಜಿ ಪ್ರಧಾನಿ ದೇವೇಗೌಡರಿಗೆ ಶುಭಕೋರಿದರು. ದೇವೇಗೌಡರು ಮಾ.31 ರಂದು ಆಸ್ಪತ್ರೆ ದಾಖಲಾಗಿದ್ದರು. ಕೊರೊನಾ ಸೋಂಕು ದೃಢಪಟ್ಟಿರುವ ಅವರ ಪತ್ನಿ ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೊನ್ನೆ ಮಾರ್ಚ್ 31ರಂದು ಹೆಚ್ ಡಿ ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮರಿಗೆ …

Read More »

ಶಾಸಕ ಜಮೀರ್‌ ಮನೆಗೆ ಜೆಡಿಎಸ್‌ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಸಭೆಯಲ್ಲಿ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಕುರಿತು ಜನಾಂಗೀಯ ನಿಂದನೆಯ ಮಾಡಿರುವ ಆರೋಪದ ಮೇಲೆ ಜೆಡಿಎಸ್‌ ಯುವ ಘಟಕದ ಕಾರ್ಯಕರ್ತರು ಭಾನುವಾರ ಕಾಂಗ್ರೆಸ್‌ ಶಾಸಕ ಬಿ.ಜೆಡ್‌. ಜಮೀರ್‌ ಅಹಮ್ಮದ್ ಖಾನ್‌ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಜೆಡಿಎಸ್‌ ಬೆಂಗಳೂರು ಮಹಾನಗರ ಯುವ ಘಟಕದ ಅಧ್ಯಕ್ಷ ಪ್ರವೀಣ್‌ ಕುಮಾರ್‌ ನೇತೃತ್ವದಲ್ಲಿ ಶಿವಾಜಿನಗರ ಕಂಟೋನ್ಮೆಂಟ್‌ ಪ್ರದೇಶದಲ್ಲಿರುವ ಜಮೀರ್‌ ಅಹಮ್ಮದ್ ಮನೆಯ ಪ್ರವೇಶ ದ್ವಾರದ …

Read More »