ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24 ರ ಸಾಲಿನ ಮಧ್ಯಂತರ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ನಡುವೆ ಹಲವು ಯೋಜನೆಗಳಿಗೆ ಒತ್ತು ನೀಡಿ ಮಂಡಿಸಿರುವ ಸಿದ್ದರಾಮಯ್ಯ ಬಜೆಟ್ನಲ್ಲಿ ಈ ಹಿಂದಿನ ಸರ್ಕಾರವನ್ನು ಟೀಕಿಸಿದರು. ರಾಜ್ಯದ ಅರ್ಥವ್ಯವಸ್ಥೆಯು ಹಿಂದಿನ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿರುತ್ತದೆ. ಕೋವಿಡ್‌ನಿಂದ ತತ್ತರಿಸಿದ ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಈ ಹಿಂದಿದ್ದ ಸರ್ಕಾರವು ವಿಫಲವಾಗಿದೆ ಎಂದು ದೂರಿದರು. ಕಲ್ಯಾಣ ರಾಜ್ಯದ ಕನಸಿನ ಬಜೆಟ್ ಅನ್ನು ಮಂಡಿಸಿರುತ್ತಿರುವುದಾಗಿ ಹೇಳಿದ ಅವರು, …
Read More »BUDJET :ಜನರಿಗೆ ತೆರಿಗೆ ಹೊರೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ.: ಬೊಮ್ಮಾಯಿ
ಬೆಂಗಳೂರು : ಜನರ ಮೇಲೆ ತೆರಿಗೆ ಹೊರೆ ಹಾಕದೇ, ಹೆಚ್ಚು ಸಾಲ ಮಾಡದೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಜನರಿಗೆ ತೆರಿಗೆ ಹೊರೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ. ಹೆಚ್ಚು ಸಾಲ ತೆಗೆದು ಕೊಳ್ಳದೇ, ಜನರ ಮೇಲೆ ತೆರಿಗೆ ಹಾಕದೇ ಗ್ಯಾರಂಟಿಗಳನ್ನು ಕೊಡಬೇಕು. ಮಾಡಿಲ್ಲ ಅಂದರೆ ಜನರ …
Read More »ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ ಶಾಲ ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು: ಜೂನ್‌ನಲ್ಲಿ ತೀವ್ರ ಮಳೆ ಅಭಾವ ಎದುರಿಸಿದ್ದ ರಾಜ್ಯವು ಜುಲೈನಲ್ಲಿ ತುಸು ಚೇತರಿಕೆ ಹಾದಿಯತ್ತ ಸಾಗಿದೆ. ಜುಲೈ 1ರಿಂದ ಜುಲೈ 6ರವರೆಗೆ ವಾಡಿಕೆಗಿಂತ ತುಸು ಅಧಿಕವಾಗಿ ವರ್ಷಧಾರೆಯಾಗಿದೆ. ಇದರಿಂದಾಗಿ ಮಳೆ ಕೊರತೆಯಿಂದ ದಯನೀಯ ಸ್ಥಿತಿಗೆ ಒಳಗಾಗಿದ್ದ ರೈತಾಪಿ ವರ್ಗ ನಿಟ್ಟಿಸಿರುವ ಬಿಡುವಂತಾಗಿದೆ. ಆದರೆ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಪ್ರಸಕ್ತ ತಿಂಗಳ ಮೊದಲ ವಾರದಲ್ಲಿಯೂ ಮಳೆ ಕೊರತೆ ಮುಂದುವರಿದಿದೆ. ಇದರಿಂದಾಗಿ ಮೈಸೂರು ಭಾಗದಲ್ಲಿ ಕೃಷಿ …
Read More »ಬೇರೆ ರಾಜ್ಯಗಳಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಎಂಟು ಆರೋಪಿಗಳನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಆಂಧ್ರಪ್ರದೇಶ ಹಾಗೂ ಒಡಿಶಾ ಸೇರಿ ವಿವಿಧ ರಾಜ್ಯಗಳಿಂದ ನಗರಕ್ಕೆ ತಂದು ಗಾಂಜಾ ಮಾರಾಟ ಮಾಡುತ್ತಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಮಹಿಳೆ ಸೇರಿ ಒಟ್ಟು ಎಂಟು ಮಂದಿ ಆರೋಪಿಗಳನ್ನು ಬಂಧಿಸಿ 79 ಕೆ.ಜಿ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ರೈಲು ಹಾಗೂ ಬಸ್ ಮಾರ್ಗವಾಗಿ ನಗರದಲ್ಲಿ ಅವ್ಯವಾಹತವಾಗಿ ನಗರಕ್ಕೆ ತಂದು ಸಣ್ಣ ಪೊಟ್ಟಣಗಳಲ್ಲಿ ಇಟ್ಟು ಗಾಂಜಾ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಮಧುಸ್ಮಿತಾ, ನರೇಶ್, ದಿಲ್ಮಾಜ್, ಸುಬ್ರತ್ …
Read More »ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ ಹೆಚ್ಚಳಕ್ಕೆ ಅತಿವೇಗವೇ ಕಾರಣ: ಜಾರಕಿಹೊಳಿ
ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ದಲ್ಲಿ ಅಪಘಾತ ಹೆಚ್ಚಳ ಸೇರಿದಂತೆ ಇರುವ ನ್ಯೂನತೆ ಕುರಿತು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ತಂದಿದ್ದು, ಸುರಕ್ಷಿತ ಪ್ರಯಾಣ ಮತ್ತು ನ್ಯೂನತೆ ಸರಿಪಡಿಸಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಕ್ಸ್‌ಪ್ರೆಸ್ ವೇ …
Read More »ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ: ₹10 ಕೋಟಿಗೆ ಹುದ್ದೆ:H.D.K.
ಬೆಂಗಳೂರು: ಇಂಧನ ಇಲಾಖೆಯಲ್ಲಿ ಹುದ್ದೆಗೆ ತಲಾ 10 ಕೋಟಿ ರೂಪಾಯಿ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ನೇರ ಆರೋಪ ಮಾಡಿದರು. ಈ ಸರಕಾರ ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ಪೂರ್ಣವಾಗಿ ನಿರತವಾಗಿದೆ ಎಂದು ನೇರ ಆರೋಪ ಮಾಡಿದ ಅವರು, ಈ ಸರ್ಕಾರ ಸಂಪೂರ್ಣವಾಗಿ ಕಾಸಿಗಾಗಿ ಹುದ್ದೆ ದಂಧೆಯಲ್ಲಿ ತೊಡಗಿದೆ ಎಂದು ಹೇಳಿ ತಮ್ಮ ಬಳಿ ಮಹತ್ವದ ದಾಖಲೆ ಇದೆ ಎಂದು ಒಂದು …
Read More »ಇಂದೇ ಪ್ರತಿಪಕ್ಷ ನಾಯಕರ ಹೆಸರು ಪ್ರಕಟ?:BSY
ಬೆಂಗಳೂರು: ಉಭಯ ಸದನಗಳ ಪ್ರತಿಪಕ್ಷ ನಾಯಕರು ಮತ್ತು ನೂತನ ರಾಜ್ಯಾಧ್ಯಕ್ಷರ ನೇಮಕ ಕುರಿತು ಕೇಂದ್ರದಿಂದ ಆಗಮಿಸಿದ್ದ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿ ವಾಪಸಾಗಿದ್ದು ಇಂದೇ ಹೈಕಮಾಂಡ್ ಹೆಸರುಗಳನ್ನು ಪ್ರಕಟಿಸುವ ಸಾಧ್ಯತೆ ಇದೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸ ಧವಳಗಿರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಯಾರಾಗಬೇಕು …
Read More »ಸರ್ಕಾರದ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಆರೋಪಗಳಿಗೆ ನಮ್ಮ ಬೆಂಬಲವಿದೆ: ಬಿ ಎಸ್ ಯಡಿಯೂರಪ್ಪ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳನ್ನು ನಾನು ಸ್ವಾಗತಿಸುತ್ತೇನೆ. ಕುಮಾರಸ್ವಾಮಿ ಅವರಿಗೆ ನಮ್ಮ ಪೂರ್ಣ ಬೆಂಬಲ ಇದೆ. ಕುಮಾರಸ್ವಾಮಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟ ಮಾಡುತ್ತೇವೆ ಎಂದು ಹೆಚ್ಡಿಕೆ ಹೇಳಿಕೆಗಳನ್ನು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳನ್ನು ನಾನು ಸ್ವಾಗತಿಸುತ್ತೇನೆ. ಕುಮಾರಸ್ವಾಮಿ …
Read More »ದ್ವಿತೀಯ ಪಿಯುಸಿ ಪಾಸ್ ಔಟ್ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿ ಲಾಕರ್ನಲ್ಲಿ ಲಭ್ಯ
ಬೆಂಗಳೂರು : 2023ರ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ 5,24,128 ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ಡಿಜಿ ಲಾಕರ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಆಧಾರ್ ಸಂಖ್ಯೆ ನಮೂದಿಸುವ ಮೂಲಕ ಅಂಕಪಟ್ಟಿಯನ್ನ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. 2023ರ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಜೂನ್ 26 ರಿಂದಲೇ ಡಿಜಿ ಲಾಕರ್ಗೆ ಅಪ್ಲೋಡ್ಗೆ ಮಾಡಲಾಗಿದೆ. ಹಾಗಾಗಿ …
Read More »ಮಹಾರಾಷ್ಟ್ರದಂತೆ ರಾಜ್ಯದಲ್ಲೂ ಒಬ್ಬ ಅಜಿತ್ ಪವಾರ್ ಹುಟ್ಟಿಕೊಳ್ಳಬಹುದು : ಕುಮಾರಸ್ವಾಮಿ ಭವಿಷ್ಯ
ಬೆಂಗಳೂರು: ಮಹಾರಾಷ್ಟ್ರ ರಾಜಕಾರಣದ ಬಗ್ಗೆ ನಾವು ಯಾರೂ ಕೂಡ ಊಹೆಯೂ ಮಾಡಿರಲಿಲ್ಲ. ಯಾಕೆಂದರೆ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಅಂತಹ ವ್ಯವಸ್ಥೆ ಹುಟ್ಟುಹಾಕುವ ಸಾಮರ್ಥ್ಯ ಇರುವಾಗ, ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಒಬ್ಬ ಅಜಿತ್ ಪವಾರ್ ಹುಟ್ಟಿಕೊಳ್ಳಲೂಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ಡಿಕೆ, ಮಹಾರಾಷ್ಟ್ರ ರಾಜಕಾರಣದ ಬಗ್ಗೆ ನಾವು ಯಾರೂ ಕೂಡ ಊಹೆಯೂ ಮಾಡಿರಲಿಲ್ಲ. ಅಜಿತ್ ಪವಾರ್ …
Read More »