Breaking News

ಬೆಂಗಳೂರು

ಯೋಗೇಶ್‌ ಗೌಡ ಹತ್ಯೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ

ಬೆಂಗಳೂರು: ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ ಎಂದು ಕೋರ್ಟ್‌ ಮಹತ್ವದ  ತೀರ್ಪು ನೀಡಿದೆ. ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ಗೌಡ  ಕೊಲೆ ಪ್ರಕರಣ ವಿಚಾರಣೆ ನಡೆಸಿದ್ದ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಿತು.  ಶಿಕ್ಷೆಯ ಪ್ರಮಾಣವನ್ನು ಕೋರ್ಟ್‌ ನಾಳೆ ಪ್ರಕಟಿಸಲಿದೆ. 21 ಆರೋಪಿಗಳ ಪೈಕಿ 17 ಮಂದಿ ದೋಷಿಗಳಾಗಿದ್ದಾರೆ.  20ನೇ ಆರೋಪಿ ವಾಸುದೇವ ನಿಲಕೇಣಿ, 21ನೇ ಆರೋಪಿ …

Read More »

ಹೆಚ್​​ಎಎಲ್ ಏರ್​ಪೋರ್ಟ್​ನಲ್ಲಿ​ ಪ್ರಧಾನಿ ಮೋದಿ ಸ್ವಾಗತಿಸಿ 18 ವಿವಿಧ ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿಗಾಗಿ 26,000 ಕೋಟಿ ರೂ.ಗಳ ವಿಶೇಷ ಅನುದಾನ, ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಪ್ರಸ್ತಾವನೆ ಸೇರಿ ಪ್ರಧಾನಿ ಮೋದಿ ಅವರಿಗೆ ವಿವಿಧ ಬೇಡಿಕೆಗಳನ್ನು ಸಿಎಂ ಸಿದ್ದರಾಮಯ್ಯ ಸಲ್ಲಿಸಿದರು.ಆದಿಚುಂಚನಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ, ಇಂದು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು. ಈ ವೇಳೆ, ಸಿಎಂ ರಾಜ್ಯದ 18 ವಿವಿಧ ಬೇಡಿಕೆಗಳ ಪಟ್ಟಿಯನ್ನು ಪ್ರಧಾನಿಗೆ ಸಲ್ಲಿಸಿದರು. …

Read More »

7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ದಾವಣಗೆರೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದಿದ್ದು ನಿಜ: ಜಮೀರ್‌

ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್‌ಗಾಗಿ 7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ಗೆಲ್ಲಿಸಿಕೊಂಡು ಬರದಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ ಅಂತ ಕೆಪಿಸಿಸಿ ಸಭೆಯಲ್ಲಿ ಡಿಕೆ ಶಿವಕುಮಾರ್‌, ಸುರ್ಜೇವಾಲಾ ಅವರ ಎದುರಲ್ಲೇ ಓಪನ್ ಆಗಿ ಹೇಳಿದ್ದೆ ಎಂದು ಸಚಿವ ಜಮೀರ್‌ ಅಹ್ಮದ್‌ ತಿಳಿಸಿದರು. ಬೆಂಗಳೂರಿನಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ಟಿಕೆಟ್‌ ಕೊಡದಿದ್ದಕ್ಕೆ ಅಸಮಾಧಾನ ಇದ್ದದ್ದು ನಿಜ, ಆ ನಂತರ ಎಲ್ಲವೂ ಸರಿಹೋಗಿದೆ. ಜಬ್ಬಾರ್‌ ಜೊತೆಗೆ 7 ಮುಸ್ಲಿಂ …

Read More »

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

ಮಂಡ್ಯ: 2028ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ನಮಗೆ ಅಧಿಕಾರಕ್ಕೆ ಬರುವುದು ಮುಖ್ಯವೇ ಹೊರತು ಸಿಎಂ ಯಾರಾಗಬೇಕು ಎಂಬುದು ಮುಖ್ಯವಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್  ಹೇಳಿದ್ದಾರೆ. ನಾಳೆ ಮಂಡ್ಯ  ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಹಿನ್ನೆಲೆಯಲ್ಲಿ ಇಂದು ಶ್ರೀಕ್ಷೇತ್ರಕ್ಕೆ ಆಗಮಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನಿರ್ಮಲಾನಂದನಾಥ ಸ್ವಾಮೀಜಿಗಳೊಂದಿಗೆ ಸಿದ್ಧತೆ …

Read More »

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

ಬೆಂಗಳೂರು: 17 ವರ್ಷದ ಮಗಳನ್ನು  ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‌ಫೀಲ್ಡ್  ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 40 ವರ್ಷದ ಸುವರ್ಣ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಶರಣಾಗಿರುವ ತಾಯಿ. ಕಾರುಣ್ಯ ತಾಯಿಯಿಂದ ಹತ್ಯೆಯಾದ ಮಗಳು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಮೆಸೇಜ್‌, ಕಾಲ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಬೆಂಗಳೂರು: ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಸಹೋದ್ಯೋಗಿಯೊಬ್ಬರು ಮೆಸೇಜ್‌ ಹಾಗೂ ಕಾಲ್‌ ಮಾಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿಸಿದ್ದಾರೆ. ಈ ಸಂಬಂಧ ಸಂತ್ರಸ್ತೆ ಹೆಚ್‌ಎಸ್‌ಆರ್ ಲೇಔಟ್   ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದ 9 ತಿಂಗಳಿಂದ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಆಸ್ಪತ್ರೆ ಮುಖ್ಯಸ್ಥ ರಾಕೇಶ್ ಜಯಪ್ರಕಾಶ್ ಸಂತ್ರಸ್ತೆಯನ್ನ ನೋಡಿ, ಅವರೊಂದಿಗೆ ಅನುಚಿತವಾಗಿ ಮಾತಾಡಿದ್ದಾರೆ. ಅಲ್ಲದೇ ಮಿಸ್ ಯು ಅಂತ ಅನುಚಿತವಾಗಿ ಮೆಸೇಜ್ …

Read More »

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹ್ಮದ್‌  ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹ್ಮದ್‌ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ.  ಸೋಮವಾರ (ಏ.13) ರಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್‌ಗೆ ಡೆಡ್‌ಲೈನ್‌ ನೀಡಿದ್ದರು. ಜೊತೆಗೆ ಸಂಜೆಯೊಳಗೆ ರಾಜೀನಾಮೆ ನೀಡಬೇಕೆಂದು ಸೂಚಿಸಿದ್ದರು. ಒಂದು ವೇಳೆ …

Read More »

ಪಿಯುಸಿ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ: ಕೆಇಎ

ಬೆಂಗಳೂರು: ದ್ವಿತೀಯ ಪಿಯುಸಿ  ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ- 1 ಮತ್ತು ಪರೀಕ್ಷೆ-2ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೋ ಆ ಅಂಕಗಳನ್ನೇ ಸಿಇಟಿ  ಫಲಿತಾಂಶಕ್ಕೆ ಪರಿಗಣಿಸಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ಕೆಲ ಅಭ್ಯರ್ಥಿಗಳು ಪರೀಕ್ಷೆ-1ರಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆ ಕೂಡ ತೆಗೆದುಕೊಳ್ಳುತ್ತಿದ್ದಾರೆ. ಅಂತಹವರಿಗೆ ಕಳೆದ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನು …

Read More »

SSLC ಪರೀಕ್ಷೆಗೆ 525 ಅಂಕ – ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ (525 ಅಂಕ ನೀಡುವ ನಿಯಮ ಬದಲಾವಣೆ ಮಾಡಿರುವ ವಿಚಾರದಲ್ಲಿ ಶಿಕ್ಷಣ ಇಲಾಖೆ  ಕರಡು ಅಧಿಸೂಚನೆ ಹೊರಡಿಸಿದೆ. ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 7 ದಿನ ಅವಕಾಶ ನೀಡಲಾಗಿದ್ದು ಆಕ್ಷೇಪಣೆ ಸಲ್ಲಿಸಬಹುದಾಗಿದೆ‌‌. ಅಧಿಸೂಚನೆಯಲ್ಲಿ 525 ಅಂಕಗಳ ಅನುಷ್ಠಾನ ಹೇಗೆ ನಡೆಯಲಿದೆ ಎಂಬುದನ್ನು ತಿಳಿಸಲಾಗಿದೆ. ಅದರಂತೆ ತೃತೀಯ ಭಾಷೆ ವಿಷಯದಲ್ಲಿ ಅಂಕಗಳ ಬದಲಾಗಿ ಗ್ರೇಡ್ ಸಿಸ್ಟಮ್ ವಿವರಿಸಲಾಗಿದೆ. ಈ ಮೊದಲು 625 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ …

Read More »

ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ

ನೆಲಮಂಗಲದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಮೃತ ಯುವಕನನ್ನು 28 ವರ್ಷದ ದಿಲೀಪ್ ಎಂದು ಗುರುತಿಸಲಾಗಿದೆ. ಇವರು ನೆಲಮಂಗಲ ಟೌನ್‌ನ ವಾಜರಹಳ್ಳಿಯಲ್ಲಿ ವಾಸವಾಗಿದ್ದು, ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದರು. ದಿಲೀಪ್ ಅವರಿಗೆ ಜಿಮ್‌ನಲ್ಲಿ ಯೋಗಿತಾ ಎಂಬ ಮಹಿಳೆಯ ಪರಿಚಯವಾಗಿದ್ದು, ನಂತರ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು ಎನ್ನಲಾಗಿದೆ. ಆರೋಪಿ ಯೋಗಿತಾ (42) ಮದುವೆಯಾಗಿದ್ದರೂ ದಿಲೀಪ್ ಜೊತೆ ಸಂಬಂಧ ಬೆಳೆಸಿ, …

Read More »