Breaking News

ಬೆಂಗಳೂರು

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಚಾಲನೆ : ಸಿದ್ಧತಾ ಸಭೆ ನಡೆಸಿದ ಸರ್ಕಾರ

ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಈಗ ಅಧಿಕೃತ ಚಾಲನೆ ಲಭಿಸಿದ್ದು ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.   ಸಮ್ಮೇಳನ ನಡೆಯುವ ಸ್ಥಳ ಪರಿಶೀಲನರ ಹಾಗೂ ಪೂರ್ವಭಾವಿ ಸಭೆ ನಡೆಸಿದ ಉಭಯ ಸಚಿವರು, ಹಿಂದಿನ ಎಲ್ಲ ಸಮ್ಮೇಳನಕ್ಕಿಂತಲೂ ಯಶಸ್ವಿಯಾಗಿ …

Read More »

S.S.C.: ಮತ್ತೆ ಕನ್ನಡ ಕಡೆಗಣನೆ, ಇಂಗ್ಲಿಷ್‌, ಹಿಂದಿಯಲ್ಲಿ ಮಾತ್ರ ಪರೀಕ್ಷೆ

ಬೆಂಗಳೂರು: ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ) ಮತ್ತೊಮ್ಮೆ ಪ್ರಾದೇಶಿಕ ಭಾಷೆಗಳ ವಿರೋಧಿ ನೀತಿ ಅನುಸರಿಸಿದೆ. ಎಸ್‌ಎಸ್‌ಸಿ ನಡೆಸುವ ಪರೀಕ್ಷೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್‌ ಮಾತ್ರ ಕಡ್ಡಾಯಗೊಳಿಸಿರುವುದಕ್ಕೆ ಕನ್ನಡ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಎಸ್‌ಎಸ್‌ಸಿ ಧೋರಣೆಯಿಂದ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಸಂಘಟನೆ ಗಳ ಕಾರ್ಯಕರ್ತರು ಕಿಡಿಕಾರಿದ್ದಾರೆ. ಗಡಿ ಭದ್ರತಾ ಪಡೆ(ಬಿಎಸ್‌ಎಫ್‌), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌), ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌), …

Read More »

ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್‌ ಆಕ್ಟಿಂಗ್‌ : ಸಾಮಾಜಿಕ ಜಾಲತಾಣದಲ್ಲಿ ಟೀಕೆ

ಬೆಂಗಳೂರು: ನಿರೂಪಕಿ ಅನುಶ್ರೀ ಅವರ ನಿರೂಪಣೆ ಬಗ್ಗೆ ಸದಾ ಒಂದಲ್ಲ ಒಂದು ವಿವಾದ ಇದ್ದೇ ಇರುತ್ತದೆ. ನಿರೂಪಣೆ ಮಾಡೋದು ಬಿಟ್ಟು ಬಾಕಿ ಎಲ್ಲ ಮಾಡ್ತಾರೆ ಅನ್ನೋದು ಅನೇಕರ ಅಭಿಪ್ರಾಯ ಕೂಡ. ಟಿವಿ ಟಿಆರ್‌ಪಿಗಾಗಿ, ದುಡ್ಡಿಗಾಗಿ ಅನುಶ್ರೀ ನಡೆದುಕೊಳ್ಳುತ್ತಿದ್ದಾರೆ ಅಂತ ಅವರ ನಿರೂಪಣೆ ರೀತಿಯನ್ನು ಟೀಕೆ ಮಾಡುವವರು ಕೂಡ ಇದ್ದಾರೆ. ಈ ನಡುವೆ ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್‌ ಆಕ್ಟಿಂಗ್‌ ಮಾಡುತ್ತಿದ್ದಾರೆ ಅಂತ ಅನೇಕ ಮಂದಿ ಅನುಶ್ರೀಯವರ ನಡೆಯನ್ನು ಕಿಡಿಕಾರುತ್ತಿದ್ದಾರೆ. …

Read More »

ನ.1ರಂದು ಪುನೀತ್ ಗೆ ಕರ್ನಾಟಕರತ್ನ ಪ್ರಶಸ್ತಿ; ರಜಿನಿಕಾಂತ್, ಜೂ.ಎನ್‌ಟಿಆರ್‌ ಭಾಗಿ: CMಘೋಷಣೆ

ಬೆಂಗಳೂರು: ಈ ಬಾರಿ ನವೆಂಬರ್ ಒಂದನೇ ತಾರೀಕು ದಿವಂಗತ ನಟ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನವೆಂಬರ್ ಒಂದರಂದು ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತೇವೆ. ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ …

Read More »

ಅಪ್ಪು ಕನಸಿನ ಗಂಧದಗುಡಿ ದರ್ಶನ ಫಸ್ಟ್ ಡೇ ಫಸ್ಟ್ ಶೋಗೆ ಭರ್ಜರಿ ರೆಸ್ಪಾನ್ಸ್

ಬೆಂಗಳೂರು: ಪುನೀತ್‌ ರಾಜ್‌ ಕುಮಾರ್ (puneeth Raj Kumar) ಕೊನೆಯ ಚಿತ್ರ ಗಂದಧಗುಡಿ (Gandhada Gudi) ಬೆಳ್ಳಿತೆರೆಯಲ್ಲಿ ರಾರಾಜಿಸಿದೆ. ಗಂಧದಗುಡಿ ಚಿತ್ರ ಇಂದು ಆಫಿಷಿಯಲ್ ತೆರೆಕಂಡಿದೆ. ಪರಮಾತ್ಮ’ನ ಕನಸಿನ ಕೂಸು ಬೆಳ್ಳಿ ತೆರೆಗೆ ಬಂದಿದೆ. ರಾಜ್ಯಾದ್ಯಂತ ಗಂಧದಗುಡಿ ಸಾಕ್ಷ್ಯಚಿತ್ರ ಪ್ರದರ್ಶನವಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದಲೇ ಥಿಯೇಟರ್ ಗಳಲ್ಲಿ ಗಂಧದಗುಡಿ ಪ್ರದರ್ಶನ ಕಂಡಿದೆ. ಅಭಿಮಾನಿಗಳು ದೊಡ್ಮನೆ ಹುಡುಗನನ್ನ ಕಣ್ತುಂಬಿಸಿಕೊಂಡಿದ್ದಾರೆ. ಥಿಯೇಟರ್ ಗಳೆಲ್ಲಾ ಹೌಸ್‍ಫುಲ್ ಆಗಿದ್ದು, ಎಲ್ಲೆಲ್ಲೂ ಅಪ್ಪು ಜಾತ್ರೆ ನಡೆಯುತ್ತಿದೆ. ಟೀಶರ್ಟ್, …

Read More »

ಜಮೀನು ನಕ್ಷೆಗಳು ಆನ್ ಲೈನ್ ನಲ್ಲೇ ಲಭ್ಯ; ನಕ್ಷೆ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಜಮೀನಿಗೆ ಸಂಬಂಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್‌, ಹದ್ದುಬಸ್ತು ಮತ್ತು ಇತರ ನಕ್ಷೆಗಳು ಇನ್ನು ಮುಂದೆ ಆನ್‌ ಲೈನ್‌ ನಲ್ಲೇ ಸಿಗುವುದಕ್ಕೆ ಈಗ ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ. 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್‌, ಹದ್ದುಬಸ್ತು ಮತ್ತು ಇತರೆ ನಕ್ಷೆಗಳಿಗೆ ಅರ್ಜಿ ಸಲ್ಲಿಸಿದ ನಾಗರಿಕರು https:// 103,138.196.154/service19/Report/ ವೆಬ್​ಸೈಟ್ ಮೂಲಕ ತಮ್ಮ ಅರ್ಜಿಯ ಸ್ಥಿತಿಗತಿಯನ್ನು ಸಹ ವೀಕ್ಷಿಸಬಹುದು.   ಅರ್ಜಿ ಸ್ವೀಕಾರಗೊಂಡು ಸರ್ವೇ ಸಿಬ್ಬಂದಿ ತಮ್ಮ ಜಮೀನಿಗೆ ಬಂದು …

Read More »

ಅಪ್ಪು ಗಂಧದಗುಡಿ ರಿಲೀಸ್‍ಗೆ ಕೌಂಟ್‍ಡೌನ್- ಮೊದಲ ಬಾರಿಗೆ ಅಶ್ವಿನಿ ವಿಶೇಷ ಸಂದರ್ಶನ

ಬೆಂಗಳೂರು: ಇಡೀ ಕರುನಾಡೇ ಕಾಯುತ್ತಿರೋ ಅಪ್ಪು ಕನಸಿನ ಕೊನೆಯ ಚಿತ್ರ ಗಂಧದಗುಡಿ (Gandhadagudi) ನಾಳೆ ತೆರೆಗೆ ಬರುತ್ತಿದೆ. ಇದರಲ್ಲಿ ಪುನೀತ್ ಅಭಿನಯಿಸಿದ್ದಾರೆ ಅನ್ನೋದಕ್ಕಿಂತ ಅಪ್ಪು ಅಪ್ಪುವಾಗಿಯೇ ಇದ್ರು ಅನ್ನೋದು ಸತ್ಯ. ಗಂಧದಗುಡಿ, ಪುನೀತ ಪರ್ವ (Puneetha Parva) ಕಾರ್ಯಕ್ರಮದ ಬಗ್ಗೆ ಇದೀಗ ಅಶ್ವಿನಿ ಪುನೀತ್ ರಾಜ್‍ಕುಮಾರ್ ಮಾತನಾಡಿದ್ದಾರೆ. ನಿರ್ದೇಶಕ ಸಂತೋಷ್ ಆನಂದ್‍ರಾಮ್ (Santhosh Ananddram) ಸಂದರ್ಶನದಲ್ಲಿ ಅಶ್ವಿನಿ ಮಾತನಾಡಿದ್ದು, ಶೂಟಿಂಗ್ ಸಂದರ್ಭದ ಕೆಲ ಘಟನೆಗಳನ್ನ ಹಂಚಿಕೊಂಡಿದ್ದಾರೆ ಪುನೀತ್ ಪರ್ವ ಮಾಡಿದ್ದೇ ಅಭಿಮಾನಿಗಳು. …

Read More »

ರಾಜ್ಯದಲ್ಲಿ ತಾಪಮಾನ ಭಾರಿ ಕುಸಿತ : ಮೈನಡುಗುವ ಚಳಿಗೆ ಹೊರಬಾರದ ಜನ!

ಬೆಂಗಳೂರು : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ.   ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ. ರಾಜ್ಯದ ಶೇ. 73 ರಷ್ಟು ಭೂ ಭಾಗದಲ್ಲಿ 12 ರಿಂ ದ16 ಡಿಗ್ರಿ ಸೆಲ್ಸಿಯಸ್ …

Read More »

ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು: ಕಾಂಗ್ರೆಸ್ ಟೀಕೆ

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ವಪಕ್ಷದ ನಾಯಕರ ವಿರುದ್ಧವೇ ನಡೆಸುವ ಟೀಕೆಗಳನ್ನು ಕಾಂಗ್ರೆಸ್ ಅಸ್ತ್ರ ಮಾಡಿಕೊಳ್ಳುತ್ತಿದೆ. ಇದೀಗ ‘ನನ್ನ ತಂಟೆಗೆ ಬಂದರೆ ಹಾವು ಬಿಡುತ್ತೇನೆ’ ಎಂದು ಯತ್ನಾಳ್ ಹೇಳಿಕೆ ಬಳಸಿಕೊಂಡು ಕಾಂಗ್ರೆಸ್ ವ್ಯಂಗ್ಯವಾಡಿದೆ.   ಕಾಂಗ್ರೆಸ್ ಕಿಟಿಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ ಬಿಜೆಪಿ ವರ್ಸಸ್ ಬಿಜೆಪಿ ಕದನದಲ್ಲಿ ಬಿಜೆಪಿಗರೆಲ್ಲ ಈಗ ಹಾವಾಡಿಗರಾಗಿದ್ದಾರೆ, ಅವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಬಿಜೆಪಿಗೇ ತಿಳಿಯುತ್ತಿಲ್ಲ! …

Read More »

ಕರ್ನಾಟಕ ರಾಜ್ಯೋತ್ಸವ: 67 ಪ್ರಶಸ್ತಿಗೆ 28 ಸಾವಿರ ಅರ್ಜಿಗಳು!

ಬೆಂಗಳೂರು: ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ನಾಡಿನ ವಿವಿಧ ವಲಯದಿಂದ 28 ಸಾವಿರ ಅರ್ಜಿಗಳ ಸಲ್ಲಿಕೆಯಾಗಿವೆ. ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇಮಕ ಮಾಡಿದ್ದ ಉಪಸಮಿತಿ, ಸಲಹಾ ಸಮಿತಿ ಅರ್ಜಿ ಪ್ರಕ್ರಿಯೆಯ ಪರಿಶೀಲನೆ ಪೂರ್ಣಗೊಳಿಸಿದ್ದು ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಸಭೆ ನಡೆಯಲಿದ್ದು ಇಲ್ಲಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.   ಈ ವರ್ಷ 67ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ವಿವಿಧ …

Read More »