ಬೆಂಗಳೂರು: ಜೈ ಶ್ರೀರಾಮ್, ಜೈ ಹನುಮಾನ್ ಎಂದು ಘೋಷಣೆ ಕೂಗಿದರೇ ಅಗತ್ಯ ವಸ್ತುಗಳ ಬೆಲೆ ಇಳಿಯಿತ್ತದೆಯೇ ಎಂದು ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಬುಧವಾರ ಪ್ರಶ್ನಿಸಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯಲ್ಲಿ ಗಣನೀಯ ಏರಿಕೆ ಉಂಟಾಗಿರುವ ಹೆಚ್ಚಳದ ಕುರಿತು ಪ್ರಸ್ತಾಪಿಸುತ್ತಾ ಅವರು ಈ ಪ್ರಶ್ನೆ ಹಾಕಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. …
Read More »ಜಾರಕಿಹೊಳಿ ಸಿಡಿ ಪ್ರಕರಣ: ಯುವತಿಗೆ ನೋಟಿಸ್ ಜಾರಿ, ಆಕೆಯಿಂದ ಸ್ಪಂದನೆ ಇಲ್ಲ
ಬೆಂಗಳೂರು: ರಾಜ್ಯರಾಜಕಾರಣದಲ್ಲಿ ಕೋಲಾಹಲಕ್ಕೆ ಕಾರಣವಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ) ಅಧಿಕಾರಿಗಳು ಸೋಮವಾರ 2 ಗಂಟೆಗಳ ಕಾಲ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸೋಮವಾರ ತಡರಾತ್ರಿ ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ಅವರ ನಿವಾಸಕ್ಕೆ ತೆರಳಿ ವಿಚಾರಣೆಗೆ ನಡೆಸಿದ್ದು, ಎಸ್‍ಐಟಿ ಪೊಲೀಸರ ಎದುರು 4 ಪುಟಗಳ ಹೇಳಿಕೆ ದಾಖಲಿಸಿದ್ದು, ಈತನಿಗೆ ಸಮಯದಲ್ಲಿ ಎಸಿಪಿ ಧರ್ಮೆಂದ್ರ ಎದುರು ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. …
Read More »ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ, ನೆರವಿಗೆ ಬನ್ನಿ – ವಿಧಾನಸಭೆಯಲ್ಲಿ ಅಭಯ ಪಾಟೀಲ
ಬೆಂಗಳೂರು – ರಾಜ್ಯದಲ್ಲಿ ಕೊರೋನಾದಿಂದ ತತ್ತರಿಸಿರುವ ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ. ಕೆಲವರು ಗುಳೆ ಹೋಗಿದ್ದರೆ ಇನ್ನು ಕೆಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರಕಾರ ತಕ್ಷಣ ಅವರ ನೆರವಿಗೆ ಬರಬೇಕು ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಬುಧವಾರ ಮಾತನಾಡಿದ ಅವರು ನೇಕಾರ ಸಮ್ಮಾನ್ ನಿಧಿಯನ್ನು 2 ಸಾವಿರ ರೂ.ಗಳಿಂದ 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. ವಿದ್ಯುತ್ ಮಗ್ಗ ನೆಕಾರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು. ಜವಳಿ ಸಚಿವರು ನಮ್ಮ …
Read More »‘ರಾಜ್ಯದಲ್ಲಿ ಉಚಿತ ಮರಳು ನೀತಿ ತರಲು ಚಿಂತನೆ ನಡೆಸಿದ್ದೇವೆ’: ಸಚಿವ ನಿರಾಣಿ
ಬೆಂಗಳೂರು: ಗಣಿಗಾರಿಕೆ ವಿಚಾರವಾಗಿ ಭ್ರಷ್ಟಾಚಾರ ನಡೆಯುತ್ತಿರುವುದು ಸತ್ಯ ಎಂದು ವಿಧಾನಪರಿಷತ್ನಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವ ನಿರಾಣಿ ಒಪ್ಪಿಕೊಂಡಿದ್ದಾರೆ. ಗಣಿ ಮಾಲೀಕರ ಬಳಿ ಹಫ್ತಾ ವಸೂಲಿ ಮಾಡ್ತಿರುವುದೂ ಸತ್ಯ. ಗಣಿ & ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಹಫ್ತಾ ವಸೂಲಿ ನಡೆಯುತ್ತಿದೆ. ಆದರೆ, ಇಲಾಖೆಗೆ ನಾನು ಬಂದ ನಂತರ ಹಫ್ತಾ ನೀಡದಂತೆ ಸೂಚನೆ ಕೊಟ್ಟಿದ್ದೇನೆ. ಹಫ್ತಾ ನೀಡದಂತೆ ಗಣಿ ಮಾಲೀಕರಿಗೆ ಸೂಚನೆ ನೀಡಿದ್ದೇನೆ ಎಂದು ನಿರಾಣಿ ಹೇಳಿದರು. ಅಧಿಕಾರಿ ಎಷ್ಟೇ ಪ್ರಭಾವಿ …
Read More »ರಾಜ್ಯ ರಸ್ತೆ ಸಾರಿಗೆ ನೌಕರರಿಂದ ಮತ್ತೆ ಮುಷ್ಕರ;
ಬೆಂಗಳೂರು: ರಾಜ್ಯ ಸರ್ಕಾರ ಮೂರು ತಿಂಗಳ ಗಡುವಿನೊಳಗೆ ಸಾರಿಗೆ ನೌಕರರ ಒಂಬತ್ತು ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಏಪ್ರಿಲ್ 7ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದೆ. ಈ ಕುರಿತಂತೆ ಕೂಟವು ಮುಖ್ಯಮಂತ್ರಿ, ಸಾರಿಗೆ ಸಚಿವ, ರಸ್ತೆ ಸಾರಿಗೆಯ ನಾಲ್ಕು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಾರ್ಮಿಕ ಇಲಾಖೆ ಆಯುಕ್ತರಿಗೆ ಮಂಗಳವಾರ ಮುಷ್ಕರದ ನೋಟಿಸ್ ನೀಡಿದೆ. ಕಾರ್ಮಿಕ ಕಾಯ್ದೆ ನಿಯಮದ ಪ್ರಕಾರ ನೋಟಿಸ್ ನೀಡಿದ 22 …
Read More »ಉಪಚುನಾವಣೆ: ಬಿಜೆಪಿ- ಕಾಂಗ್ರೆಸ್ ಸಿದ್ಧತೆ: ಸ್ಪರ್ಧೆ ಬಗ್ಗೆ ತೀರ್ಮಾನಿಸದ ಜೆಡಿಎಸ್
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ವೇದಿಕೆ ಸಜ್ಜುಪಡಿಸಿಕೊಂಡಿದ್ದು, ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಜೆಡಿಎಸ್ ತೀರ್ಮಾನ ಇನ್ನಷ್ಟೇ ಹೊರಬೀಳಬೇಕಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಲ್ಲೂ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚೇ ಇದೆ. ಬಿಜೆಪಿಯಿಂದ ದಿವಂಗತ ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್, ರಮೇಶ ಕತ್ತಿ, ಪ್ರಭಾಕರ ಕೋರೆ, ಮಹಂತೇಶ ಕವಟಗಿಮಠ ಅವರ …
Read More »HD Revanna: ‘2023ರಲ್ಲಿ ಹೆಚ್‌ಡಿಕೆ ಸಿಎಂ: ಕುಮಾರಸ್ವಾಮಿ ಬಳಿ ಇದ್ದ ಗ್ರಹಗಳು ಈಗ ಡಿಕೆಶಿ ಬಳಿ’
ಬೆಂಗಳೂರು: ರಾಜ್ಯದಲ್ಲಿ 2023ಕ್ಕೆ ಮತ್ತೊಮ್ಮೆ ಹೆಚ್.ಡಿ.ಕುಮಾರಸ್ವಾಮಿ ನೇತೃತದ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ರೇವಣ್ಣ(HD Revanna), ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತದೆಯೋ, ಮೈತ್ರಿ ಸರ್ಕಾರ ಬರುತ್ತದೆಯೋ ಹೇಳುವುದಿಲ್ಲ. ಆದರೆ, ಅಧಿಕಾರಕ್ಕೆ ಬರುವುದು ಪಕ್ಕಾ. ಕುಮಾರಸ್ವಾಮಿ ಹತ್ತಿರ ಕೆಲವು ಗ್ರಹಗಳು ಇದ್ದವು. ಅವು ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹತ್ತಿರ ಸೇರಿವೆ. ಕುಮಾರಸ್ವಾಮಿ ಕೆಲ …
Read More »ಹಾದಿಬೀದಿಲಿ ಮಾತನಾಡದೆ ಹೊನ್ನಾಳಿಗೆ ಬನ್ನಿ, ಯತ್ನಾಳ್‍ಗೆ ರೇಣುಕಾಚಾರ್ಯ ಸವಾಲು
ಬೆಂಗಳೂರು,ಮಾ.16- ಆಡಳಿತ ಪಕ್ಷದ ಶಾಸಕರಾಗಿ ಹಾದಿಬೀದಿಯಲ್ಲಿ ಮಾತನಾಡುವ ಬದಲು ತಾಕತ್ತಿದ್ದರೆ ನನ್ನ ಮತ ಕ್ಷೇತ್ರ ಹೊನ್ನಾಳಿಗೆ ಬಂದು ಮಾತನಾಡಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದ್ದಾರೆ. ವಿಧಾನಸೌಧ ಮೊಗಸಾಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಚೌಕಟ್ಟು ಅಥವಾ ಶಾಸಕಾಂಗ ಸಭೆಯಲ್ಲಿ ಮಾತನಾಡುವ ಬದಲು ಯತ್ನಾಳ್ ಹಾದಿಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಯತ್ನಾಳ್ ನಮ್ಮ …
Read More »ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆ ದಾಖಲಿಸಿಕೊಂಡ SIT
ಬೆಂಗಳೂರು: CD ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಗಳು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಯನ್ನ ಪಡೆದುಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಐಒ ಎಸಿಪಿ ಧರ್ಮೇಂದ್ರ ಅವರು ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆಯನ್ನ ದಾಖಲಿಸಿಕೊಂಡಿದ್ದಾರೆ. ನನಗೆ ನಾಲ್ಕು ತಿಂಗಳಿಂದ ಬ್ಲಾಕ್ ಮೇಲ್ ಮಾಡಲಾಗ್ತಿತ್ತು. ಹಣ ನೀಡಿ.. ಇಲ್ಲದಿದ್ರೆ ನಿನ್ನನ್ನ ರಾಜಕೀಯವಾಗಿ ಮುಗಿಸ್ತೀವಿ ಅಂತಾ ಆಪ್ತ ನಾಗರಾಜ್ ಮೂಲಕ ಬ್ಲ್ಯಾಕ್ ಮೇಲ್ ಮಾಡಿದ್ದರು. ಆದರೆ ನಾನು ಅವರ ಒತ್ತಾಯಕ್ಕೆ ಮಣಿದಿಲ್ಲ ಅಂತಾ …
Read More »ಇನ್‌ಸ್ಪೆಕ್ಟರ್ ವಿಕ್ಟರ್‌ಗೆ ನ್ಯಾಯಾಂಗ ಬಂಧನ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿರುವ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಇನ್‌ಸ್ಪೆಕ್ಟರ್ ವಿಕ್ಟರ್ ಸೈಮನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಾರ್ಚ್ 9ರಂದು ವಿಕ್ಟರ್ ಅವರ ಮನೆ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು ಶೋಧ ನಡೆಸಿದ್ದರು. ತನಿಖೆಗೆ ಸಹಕರಿಸದ ಆರೋಪದ ಮೇಲೆ ಮಾ.10ರಂದು ಅವರನ್ನು ಬಂಧಿಸಲಾಗಿತ್ತು. ಸೋಮವಾರವರೆಗೂ ವಿಚಾರಣೆಗಾಗಿ ಆರೋಪಿ ಅಧಿಕಾರಿಯನ್ನು ಎಸಿಬಿ ತನಿಖಾ ತಂಡದ ವಶಕ್ಕೆ ನೀಡಿ …
Read More »