Breaking News

ಬೆಂಗಳೂರು

ಲವರ್​ ಜತೆ ಮದುವೆಗೆ ಸಿದ್ಧಳಾಗಿದ್ದ ಸಿಡಿ ಲೇಡಿ: ಉತ್ತರ ಕರ್ನಾಟಕದ ಇಂಜಿನಿಯರಿಂಗ್​ ಯುವತಿಯ ಸ್ಟೋರಿ ಇದು.

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿಯ ಸಿ.ಡಿ ಕೇಸ್​ ಕ್ಷಣಕ್ಷಣಕ್ಕೂ ಕುತೂಹಲದ ತಿರುವು ಪಡೆದುಕೊಳ್ಳುತ್ತಿದೆ. ಇದಾಗಲೇ ಕೆಲವರನ್ನು ವಿಶೇಷ ತನಿಖಾ ತಂಡದ (ಎಸ್​ಐಟಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದು, ಇನ್ನು ಕೆಲವರಿಗಾಗಿ ಜಾಲ ಬೀಸಿದ್ದಾರೆ. ಈ ನಡುವೆಯೇ ಸಿ.ಡಿಯಲ್ಲಿ ಇರುವ ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿಗೂ ತನಿಖಾಧಿಕಾರಿಗಳು ನೋಟಿಸ್​ ಜಾರಿ ಮಾಡಿದ್ದಾರೆ. ಘಟನೆಯ ನಂತರದ ಬೆಳವಣಿಗೆಗಳ ಬಳಿಕ ಕಾಣೆಯಾಗಿದ್ದ ಯುವತಿ, ಕೊನೆಗೂ ಸಿಕ್ಕಿದ್ದು, ಆಕೆಯನ್ನು ವಿಚಾರಣೆ ಮಾಡುವ ಸಲುವಾಗಿ ನೋಟಿಸ್​ ಜಾರಿಗೊಳಿಸಲಾಗಿದೆ. …

Read More »

ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಆರೋಪಿಗಳು ಪ್ಲಾನ್ ಮಾಡಿದ್ದರೆಂಬ ವಿಷಯ ಇದೀಗ ಬಹಿರಂಗವಾಗಿದೆ.

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಸುದ್ದಿಗಳು ಹೊರಬರುತ್ತಲೇ ಇದೆ. ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಆರೋಪಿಗಳು ಪ್ಲಾನ್ ಮಾಡಿದ್ದರೆಂಬ ವಿಷಯ ಇದೀಗ ಬಹಿರಂಗವಾಗಿದೆ. ಸಿಡಿ ಪ್ರಕರಣದ ಕಿಂಗ್ ಪಿನ್ ಪತ್ರಕರ್ತ, ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನ ನಡೆಸಲು ಯೋಜನೆ ರೂಪಿಸಿದ್ದ. ಡೀಲ್ ದುಡ್ಡಲ್ಲಿ ಜಾತ್ರೆ ನಡೆಸಲು ಕೂಡ ಸಿದ್ಧತೆ ನಡೆಸಿದ್ದ ಎನ್ನಲಾಗಿದೆ.   ಮಹಿಂದ್ರಾ ಕಂಪನಿಯ ಎರಡು ಕಾರ್ ಖರೀದಿಸಲು ಮುಂದಾಗಿದ್ದ ಆತ …

Read More »

ಸಾಹುಕಾರ್ ಸಿಡಿ ಕೇಸ್ – ಯುವತಿಗೆ ನೋಟಿಸ್ ಜಾರಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣದ ಬಗ್ಗೆ ರಮೇಶ್ ಜಾರಕಿಹೊಳಿ ನಿನ್ನೆ ದೂರು ದಾಖಲಿಸಿದ ಬೆನ್ನಲ್ಲೇ ಪ್ರತ್ಯಕ್ಷವಾದ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಳು. ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ರಕ್ಷಣೆ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಳು. …

Read More »

ನನ್ನ ವಿರುದ್ಧ ಕೆಲವರು ಷಡ್ಯಂತ್ರ ರೂಪಿಸಿ ನಕಲಿ ಸಿಡಿ ಬಿತ್ತರಗೊಳ್ಳುವಂತೆ ನೋಡಿಕೊಂಡು ನನ್ನ ರಾಜಕೀಯ ಜೀವನ ಹಾಳು ಮಾಡಿದ್ದಾರೆ : ರಮೇಶ್ ಜಾರಕಿಹೊಳಿ

ಬೆಂಗಳೂರು, ಮಾ.14- ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣದ ಸಾಚಾತನ ಪತ್ತೆಹಚ್ಚುವ ಸವಾಲು ಎಸ್‍ಐಟಿಗೆ ಎದುರಾಗಿದೆ. ನನ್ನ ವಿರುದ್ಧ ಕೆಲವರು ಷಡ್ಯಂತ್ರ ರೂಪಿಸಿ ನಕಲಿ ಸಿಡಿ ಬಿತ್ತರಗೊಳ್ಳುವಂತೆ ನೋಡಿಕೊಂಡು ನನ್ನ ರಾಜಕೀಯ ಜೀವನ ಹಾಳು ಮಾಡಿದ್ದಾರೆ ಎನ್ನುವುದು ರಮೇಶ್ ಜಾರಕಿಹೊಳಿ ಅವರ ಆರೋಪವಾಗಿದೆ. ಇದರ ಬೆನ್ನಲ್ಲೇ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ವಿಡಿಯೋ ತುಣುಕಿನಲ್ಲಿ ಆ ರೀತಿಯ ಸಿಡಿ ಯಾರು …

Read More »

ಕೆಪಿಸಿಸಿ ಅಧ್ಯಕ್ಷರಿಗೆ ಸತೀಶ್ ಜಾರಕಿಹೊಳಿ ತಿರುಗೇಟು

ಬೆಂಗಳೂರು,ಮಾ.14- ಯಾರು ಯಾರನ್ನು ಸಿಲಿಕಿಸಲು ಆಗುವುದಿಲ್ಲ. ಪ್ರಕರಣ ಸಂಬಂಧ ತನಿಖೆಯಾಗಬೇಕು. ಪೊಲೀಸರೇ ಅಂತಿಮ ತೀರ್ಮಾನ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿ.ಡಿ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಲಾಗುತ್ತಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಂಬಂಧಿಸಿದಂತೆ ಬೆಳಗಾವಿ ತಾಲ್ಲೂಕಿನ ಮಚ್ಚೆಗ್ರಾಮದಲ್ಲಿ ಸುದ್ದಿಗಾರರೊಂದಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಯಾರು ಯಾರನ್ನೂ ಸಿಲಿಕಿಸಲು ಆಗುವುದಿಲ್ಲ. ಪೊಲೀಸ್ ತನಿಖೆಯಾಗಬೇಕು. ಸತ್ಯಾಂಶ ಹೊರಬರಬೇಕು. ನಾನು ಪದೇ ಪದೇ ಹೇಳೋದು ಅದನ್ನೇ ಎಂದರು. ಸಿ.ಡಿಯಲ್ಲಿದ್ದ ಯುವತಿ ವಿಡಿಯೋ ಹೇಳಿಕೆ …

Read More »

ಸಿಡಿ ಪ್ರಕರಣದಲ್ಲಿ ಇಬ್ಬರು ವಶಕ್ಕೆ, ಎಸ್‍ಐಟಿ ತನಿಖೆ ಚುರುಕು

ಬೆಂಗಳೂರು, ಮಾ.14- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‍ಐಟಿ ಪೊಲೀಸರು ಇಂದು ಮತ್ತಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಸಿಡಿ ಪ್ರಕರಣ ಕುರಿತಂತೆ ಜಾರಕಿಹೊಳಿ ಅವರು ಪೊಲೀಸರಿಗೆ ದೂರು ನೀಡಿರುವುದು ಹಾಗೂ ಯುವತಿ ಸಾಮಾಜಿಕ ಜಾಲತಾಣದಲ್ಲಿ ತದ್ವಿರುದ್ಧ ಹೇಳಿಕೆ ನೀಡಿರುವುದರಿಂದ ತನಿಖೆಯ ವೇಗವನ್ನು ಎಸ್‍ಐಟಿ ಚುರುಕುಗೊಳಿಸಿದೆ.ಸಿಡಿಯಲ್ಲಿದ್ದಾರೆ ಎಂಬ ಯುವತಿಯ ಬಾಯ್‍ಫ್ರೆಂಡ್ ಮತ್ತು ಆತನ ಸ್ನೇಹಿತನನ್ನು ಎಸ್‍ಐಟಿ ಈಗ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿ …

Read More »

“ವಿಡಿಯೋದಲ್ಲಿ ಹೇಳಿದರೆ ಸಾಲದು, ಖುದ್ದು ದೂರು ನೀಡಬೇಕು”

ಬೆಂಗಳೂರು, ಮಾ.14- ಸಾಮಾಜಿಕ ಜಾಲತಾಣಗಳ ವಿಡಿಯೋ ತುಣುಕುಗಳನ್ನಾಧರಿಸಿ ದೂರು ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದರು ಎನ್ನಲಾದ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡು ಜೀವಭಯವಿದೆ, ಭದ್ರತೆ ನೀಡುವಂತೆ ಗೃಹ ಸಚಿವರಿಗೆ ಮನವಿ ಮಾಡಿಕೊಂಡ ಹೇಳಿಕೆ ಆಧರಿಸಿ ದೂರು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಯಾವುದೇ ಒಬ್ಬ ವ್ಯಕ್ತಿ ತಮಗಾದ ಅನ್ಯಾಯದ ವಿರುದ್ಧ ದೂರು ನೀಡಬೇಕಾದರೆ …

Read More »

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ..?

ಬೆಂಗಳೂರು,ಮಾ.14- ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ ಜಾರಿಗೊಳಿಸುವ ಬಗ್ಗೆ ಈವರೆಗೂ ಯಾವುದೇ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆ ಕರೆದಿದ್ದಾರೆ. ಸಭೆಯಲ್ಲಿ ಚರ್ಚಿಸಿದ ಬಳಿಕ ಮುಖ್ಯಮಂತ್ರಿಗಳ ಸೂಚನೆ ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಸದ್ಯಕ್ಕೆ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ …

Read More »

ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಸುದ್ದಿ ಸುಳ್ಳು : ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು : ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕಲಿಯುತ್ತಿರುವ ಒಂದರಿಂದ ಆರನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ‌ ಬೇಸಿಗೆ ರಜೆ ಘೋಷಣೆ, ಪರೀಕ್ಷೆ ಇಲ್ಲದೇ‌ ಮುಂದಿನ ತರಗತಿಗೆ ಪಾಸ್ ಎಂಬ ಸುದ್ದಿ ದೃಶ್ಯ‌ಮಾಧ್ಯಮದ ಚಾನೆಲ್ ಒಂದರಲ್ಲಿ ಬಿತ್ತರವಾಗಿದ್ದು ಇದು ಸತ್ಯಕ್ಕೆ‌ ದೂರವಾದ ಸಂಗತಿ‌ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ‌ ಪರ್ಯಾಯ ಕಲಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಬಗ್ಗೆ ಮುಕ್ತ ನಿಲುವನ್ನು ಹೊಂದಿದೆ. …

Read More »

ಬಿಗ್​ ಬಾಸ್​ ಮನೆಯಲ್ಲಿ ಹೆಣ್ಮಕ್ಳನ್ನು ಟೈಟ್​ ಆಗಿ ತಬ್ಬಿಕೊಳ್ಳುವ ಪ್ರಶಾಂತ್​ ಸಂಬರಗಿಗೆ ಸುದೀಪ್​ ಖಡಕ್​ ವಾರ್ನಿಂಗ್​

ಬಿಗ್​ ಬಾಸ್​ ಮನೆ ಸೇರಿರುವ ಪ್ರಶಾಂತ್​ ಸಂಬರಗಿ ತುಂಬಾನೇ ಚರ್ಚೆಗೆ ಕಾರಣವಾಗಿತ್ತು. ಇದಕ್ಕೆ ಕಾರಣ ಅವರು ಎಲ್ಲಾ ಸ್ಪರ್ಧಿಗಳ ಬಗ್ಗೆ ರೇಗೋದು. ಮತ್ತೊಂದು ಎಂದರೆ, ಪ್ರಶಾಂತ್​ ಸಂಬರಗಿ ಹೆಣ್ಣುಮಕ್ಕಳನ್ನು ಟೈಟ್​ ಆಗಿ ಹಗ್​ ಮಾಡಿಕೊಳ್ಳುವುದು. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಟ್ರೋಲ್​ ಕೂಡ ಹರಿದಾಡಿತ್ತು. ಈಗ ಈ ವಿಚಾರದಲ್ಲಿ ಪ್ರಶಾಂತ್​ಗೆ ಸುದೀಪ್​ ಖಡಕ್​ ಆಗಿ ವಾರ್ನಿಂಗ್​ ನೀಡಿದ್ದಾರೆ. ವೈರಸ್​ …

Read More »