ನೆಲಮಂಗಲ(ಮಾ.07): ಬದುಕು ಕಟ್ಟಿಕೊಳ್ಳಲು ದೂರದೂರುಗಳಿಂದ ಬೆಂಗಳೂರಿಗೆ ಬಂದಿದ್ದವರು, ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿ ತಿಂಗಳಾದ್ರೆ ಮನೆ ಬಾಡಿಗೆ, ರೇಷನ್, ಮಕ್ಕಳ ಸ್ಕೂಲ್ ಫೀಸ್ ಎಲ್ಲಾ ಖರ್ಚು ಕಳೆದು ಉಳಿತಾಯಕ್ಕಾಗಿ ಚಾಚೂ ತಪ್ಪದೆ ಚೀಟಿ ಕಟ್ಟುತ್ತಿದ್ದರು. ಚೀಟಿ ಹಣ ಸಿಗುತ್ತೆ, ಇನ್ನೇನು ನಮ್ಮ ಬದುಕು ಹಸನಾಗುತ್ತೆ ಅಂತ ನಿಟ್ಟುಸಿರು ಬಿಡುವಷ್ಟರಲ್ಲಿ ಬದುಕು ಬೀದಿಗೆ ಬಂದು ನಿಂತಿದೆ. ಚೀಟಿಂಗ್ ದಂಪತಿ ಅರೆಸ್ಟ್: ದಿನಪೂರ್ತಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುವ ಮಹಿಳೆಯರು ಸಂಜೆಯಾದ್ರೆ ಚೀಟಿ ವ್ಯವಹಾರ ಮಾಡುತ್ತಿದ್ದವರ …
Read More »ಮನೆಯಲ್ಲಿ ಕೂರದೇ ರಮೇಶ ಜಾರಕಿಹೊಳಿ ಹೊರ ಬರಬೇಕು.: ಬಾಲಚಂದ್ರ ಜಾರಕಿಹೊಳಿ
ಮನೆಯಲ್ಲಿ ಕೂರದೇ ರಮೇಶ ಜಾರಕಿಹೊಳಿ ಹೊರ ಬರಬೇಕು. ಮಾಧ್ಯಮದವರ ಎದುರು ಬಂದು ಹೇಳಿಕೆ ನೀಡಬೇಕು ಎಂದು ವಿನಂತಿ ಮಾಡುತ್ತೇನೆ. ರಮೇಶ್ ಜಾರಕಿಹೊಳಿ ದೂರು ನೀಡದಿದ್ದರೆ ನಾವೇ ದೂರು ನೀಡುತ್ತೇವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ನಾಳೆಯಿಂದ ಇದು ಯಾವ ಟರ್ನ್ ಪಡೆಯುತ್ತದೆಯೋ ಗೊತ್ತಿಲ್ಲ. ಫೇಕ್ ವಿಡಿಯೋ ಇದೆ. ಲ್ಯಾಬ್ ಟೆಸ್ಟ್ ನಡೆದರೆ ಅದರ ಸತ್ಯಾಸತ್ಯತೆ ಹೊರ ಬರಲಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ತನಿಖೆಗೆ …
Read More »ಅಶ್ಲೀಲ ಸಿಡಿ ಪ್ರಕರಣ: ಕೊಟ್ಟ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ!
ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ಹೊಸ ತಿರುವು ಮೂಡಿದೆ. ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ, ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಪೊಲೀಸರಿಗೆ ನೀಡಿದ್ದ ದೂರನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ಹೌದು, ತಮ್ಮ ವಕೀಲರ ಸಲಹೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ದೂರು ಹಿಂಪಡೆಯುತ್ತಿರುವುದಾಗಿ ವಕೀಲ ಕುಮಾರ್ ಪಾಟೀಲ್ ಅವರಿಗೆ ಪತ್ರ ರವಾನಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದಿನೇಶ್ ಪರ ವಕೀಲರು ದೂರು …
Read More »ನಟೋರಿಯಸ್ ರೌಡಿ ಚಡ್ಡಿ ಕಿರಣ್‌ಗೆ ಪೊಲೀಸರ ಗುಂಡೇಟು..!
ಬೆಂಗಳೂರು, ಮಾ.7- ನಗರದಲ್ಲಿ ಮತ್ತೆ ಪೊಲೀಸರ ಪಿಸ್ತೂಲು ಸದ್ದು ಮಾಡಿದೆ. ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರಾಜಗೋಪಾಲ ನಗರದ ನಟೋರಿಯಸ್ ರೌಡಿ ಕಿರಣ್ ಅಲಿಯಾಸ್ ಚಡ್ಡಿ ಕಿರಣ್ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿಯುವಲ್ಲಿ ನಂದಿನಿ ಲೇಔಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ರೌಡಿ ಕಿರಣ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ನಂದಿನಿ ಲೇಔಟ್ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ …
Read More »ದಿನೇಶ್ ಕಲ್ಲಹಳ್ಳಿ ದೂರು ವಾಪಸ್: ತುರ್ತು ಸುದ್ದಿಗೋಷ್ಠಿ ಕರೆದ ಬಾಲಚಂದ್ರ ಜಾರಕಿಹೊಳಿ !!
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ದೂರು ವಾಪಸ್ ಪಡೆದುಕೊಳ್ಳಲು ಮುಂದಾಗಿದ್ದು, ಈ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ಆಹ್ವಾನಿಸಿದ್ದಾರೆ. ಸಂಜೆ 5 ಗಂಟೆಗೆ ಕುಮಾರ ಕೃಪಾ ಹೋಟೆಲ್ ನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.
Read More »ಮುಖ್ಯಮಂತ್ರಿಗಳೇ ನೀವು ತಡೆಯಾಜ್ಞೆ ತರುವುದಿಲ್ಲವೇ..? : ಯತ್ನಾಳ್ ಲೇವಡಿ
ಬೆಂಗಳೂರು,ಮಾ.6- ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿರುವಂತೆ ಕಣ್ಣಿನಲ್ಲಿ ನೋಡಲಾಗದ ಸಿಡಿ ಇವೆಯಂತೆ. ಅದರ ವಿರುದ್ಧ ನೀವು ತಡೆಯಾಜ್ಞೆ ತರುವುದಿಲ್ಲವೇ ಎಂದು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಲೇವಡಿ ಮಾಡಿದೆ. ಪ್ರಮುಖ ಸಾಮಾಜಿಕ ಜಾಲತಾಣವಾದ ಟ್ವಿಟರ್‍ನಲ್ಲಿ ಕಾಂಗ್ರೆಸ್ ಬಿಜೆಪಿಯ ವಿರುದ್ಧ ಹರಿಹಾಯ್ದಿದ್ದು, ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದೆ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯ ಸಚಿವರು ಏಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಸಿಡಿ ಶಬ್ಧ ಕೇಳಿದರೆ ಇಡೀ ಸಂಪುಟವೇ ಏಕೆ …
Read More »ಸಂಸದರ ಮಾನ ಹರಾಜು ಹಾಕಿದ ವಾಟಾಳ್..
ಬೆಂಗಳೂರು,ಮಾ.6- ಮಹದಾಯಿ, ಮೇಕೆದಾಟು ಯೋಜನೆ ಆರಂಭಕ್ಕೆ ಒತ್ತಾಯಿಸಿ ಹಾಗೂ ತಮಿಳುನಾಡಿನಲ್ಲಿ ಕಾವೇರಿ ನದಿ ಜೋಡಣೆ ಕಾಮಗಾರಿ ಕೈಗೆತ್ತಿಕೊಂಡರೂ ಮೌನ ವಹಿಸಿರುವ ಸರ್ಕಾರದ ಕ್ರಮ ವಿರೋಸಿ ಕನ್ನಡ ಒಕ್ಕೂಟ ಸಂಸದರನ್ನು ಹರಾಜು ಹಾಕುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಅನ್ಯಾಯದ ವಿರುದ್ದ ಲೋಕಸಭಾ ಸದಸ್ಯರು ಧ್ವನಿ ಎತ್ತದಿರುವುದು ತೀವ್ರ ಖಂಡನೀಯ ಎಂದರು. ತಮಿಳುನಾಡಿನಲ್ಲಿ ಕಾವೇರಿ ನದಿಜೋಡಣೆಗೆ ಸಂಬಂಸಿದಂತೆ 118 ಕಿ.ಮೀ ಉದ್ದದ …
Read More »‘ರಾಜಕಾರಣಿಗಳು ಅಂದರೆ ಲಫಂಗರು ಅನ್ನುವ ರೀತಿ ಆಗುತ್ತಿದೆ’ ಸುಧಾಕರ್ ಅವರದೂ ಸಿಡಿ ಇದೆಯಾ? ಎಂದ ಸಿದ್ದರಾಮಯ್ಯ
ಬೆಂಗಳೂರು: ‘ರಾಜಕಾರಣಿಗಳು ಅಂದರೆ ಲಫಂಗರು ಅನ್ನುವ ರೀತಿ ಆಗುತ್ತಿದೆ’ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಯಾವುದೇ ಮಾಧ್ಯಮಗಳು ಯಾವುದೇ ರೀತಿಯ ಸುದ್ದಿ ಪ್ರಸಾರ ಮಾಡದಂತೆ ಕೆಲ ಸಚಿವರುಗಳು ಮುಂಜಾಗ್ರತೆಯಾಗಿ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸಿಡಿ ಇದೆ ಎಂದು ಗೊತ್ತಿದ್ದರೆ ಮಾತ್ರ ಅದನ್ನು ರಾಜಕೀಯ ಷಡ್ಯಂತ್ರ ಎಂದು ಹೇಳಿಕೊಳ್ಳುತ್ತಾರೆ. ಹಾಗಾದರೆ ಸಚಿವ ಸುಧಾಕರ್ ಅವರದು …
Read More »“ಕುಂಬಳಕಾಯಿ ಕಳ್ಳ ಎಂದರೆ 6 ಸಚಿವರಿಗೇಕೆ ಭಯ?”: ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು, ಮಾರ್ಚ್.06: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಹೊರ ಬರುತ್ತಿದ್ದಂತೆ ಆರು ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಬಾಂಬೆ ಫ್ರೆಂಡ್ಸ್ ಎಂತಲೇ ಕರೆಸಿಕೊಳ್ಳುವ ಸಚಿವರ ನಡೆಯನ್ನು ಕಾಂಗ್ರೆಸ್ ಟೀಕಿಸಿದೆ. “ಕುಂಬಳಕಾಯಿ ಕಳ್ಳ ಅಂದರೆ ಕರ್ನಾಟಕದ ಬಿಜೆಪಿ ಸಚಿವರೇಕೆ ಹೆಗಲು ಮುಟ್ಟಿ ನೋಡಿಕೊಳ್ತಿದ್ದಾರೆ?. ಸಿಡಿ ಶಬ್ದ ಕೇಳಿದರೆ ಸರ್ಕಾರದ ಇಡೀ ಸಂಪುಟವೇ ಏಕೆ ಬೆಚ್ಚಿ ಬೀಳುತ್ತಿದೆ?.” ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ಸಿಡಿ …
Read More »ಮತ್ತೆ ಶುರು ‘ಕನ್ನಡದ ಕೋಟ್ಯಧಿಪತಿ’ ಹವಾ.!
ಬೆಂಗಳೂರು: ಕಿರುತೆರೆಯ ಜನಪ್ರಿಯ ಕಾರ್ಯಕ್ರಮ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೊದಲ ಬಾರಿಗೆ ಕನ್ನಡ ಕೋಟ್ಯಧಿಪತಿ ರಿಯಾಲಿಟಿ ಶೋ ಪ್ರಸಾರವಾಗಲಿದೆ. ಜೂನ್ 22ರಂದು ಮೊದಲ ಸಂಚಿಕೆ ಪ್ರಸಾರವಾಗಲಿದ್ದು, ಪ್ರತಿ ಶನಿವಾರ ಭಾನುವಾರ ಕಾರ್ಯಕ್ರಮ ಪ್ರಸಾರವಾಗಲಿದೆ. ರಾತ್ರಿ 8 ಗಂಟೆಗೆ ನಿಗದಿಯಾಗಿರೋ ಈ ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ನಿರೂಪಣೆ ಮಾಡಲಿದ್ದಾರೆ. ಇನ್ನು ಈ ಸೀಸನ್ ನ ಕನ್ನಡದ ಕೋಟ್ಯಧಿಪತಿ ಯಾರಾಗಲಿದ್ದಾರೆ …
Read More »