ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ಸಭೆ ನಡೆಸುತ್ತಿದ್ದು, ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ನಡುವೆಯೇ ಬಿಜೆಪಿ ಹಿರಿಯ ಮುಖಂಡ ಲಕ್ಷ್ಮಣ ಸವದಿ ಟಿಕೇಟ್ ವಿಷಯದಲ್ಲಿ ಮುನಿಸಿಕೊಂಡಿದ್ದು ಕಾಂಗ್ರೆಸ್ ಸೇರ್ಪಡೆಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಪೈಪೋಟಿ ಆರಂಭವಾಗಿದ್ದು, ಟಿಕೆಟ್ ಗಾಗಿ ಬಿಜೆಪಿ ಹಿರಿಯ …
Read More »ಅಂತಿಮಗೊಳ್ಳದ Congress ತೃತೀಯ ಪಟ್ಟಿ
ಬೆಂಗಳೂರು: ಕಾಂಗ್ರೆಸ್‌ನ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಅಂತಿಮಗೊಳಿಸಲು ರವಿವಾರ ಹೊಸದಿಲ್ಲಿ ಯಲ್ಲಿ ಹಿರಿಯ ನಾಯಕರ ಸಭೆ ನಡೆದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಕೆಲವು ಪ್ರತಿಷ್ಠಿತ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಬಾಕಿ 58 ಕ್ಷೇತ್ರ ಗಳಿಗೆ ಈ ಪಟ್ಟಿಯಲ್ಲಿ ಟಿಕೆಟ್ ಘೋಷಿಸಲಾಗುತ್ತದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳ್ಳುತ್ತಿರುವಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಭೆ ಕಾಂಗ್ರೆಸ್‌ನ ಮೂರನೇ ಮತ್ತು ಅಂತಿಮ …
Read More »ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇದೇ ವೇಳೆ ಏಪ್ರಿಲ್ 12ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಾರ್ವಜನಿಕರಿಗೆ ಮುನ್ಸೂಚನೆ ನೀಡಿದೆ.
Read More »ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ
ಬೆಂಗಳೂರು : ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರಿಗೆ ಕೈ ಟಿಕೆಟ್ ತಪ್ಪಿದ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಮುಂದಿನ ವಿಧಾನ ಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಸಿಗುವ ಅಕಾಂಕ್ಷೆಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ ಎಂದು ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ …
Read More »ಸೌಮ್ಯಾ ರೆಡ್ಡಿ ಗಿಫ್ಟ್ ಪಾಲಿಟಿಕ್ಸ್ʼ :ಗಿಫ್ಟ್‌ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಮುಂದಿನ ವಿಧಾನಸಭೆ ಚುನಾವಣೆ ಮತದಾರರ ಸೆಳೆಯೋದಕ್ಕೆ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಗಿಫ್ಟ್‌ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಲಾಗಿದೆ. ಮತದಾರರಿಗೆ ಹಂಚೋದಕ್ಕೆ ವಸ್ತುಗಳ ಕೊಂಡೊಯ್ಯುವಾಗ ವಸ್ತುಗಳನ್ನು ಜಪ್ತಿಯಾಗಿದ್ದು, ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ಮುಖಂಡರಾದ ಎನ್ಆರ್ ರಮೇಶ್, ಭಾಸ್ಕರ್ ರಾವ್ ದೂರು ನೀಡಿದೆ. ಅಷ್ಟೇ ಅಲ್ಲದೇ ಶಾಸಕಿ ಸೌಮ್ಯಾ ರೆಡ್ಡಿ ಮಾಲೀಕತ್ವದ ಕಾರನ್ನು ಚೆಕ್ಪೋಸ್ಟ್ನಲ್ಲಿ ರಾಮಚಂದ್ರ ಕಾರು ಚಾಲಕ …
Read More »ಬೊಮ್ಮಾಯಿ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ – ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ
ಬೆಂಗಳೂರು: ಬಿಜೆಪಿ ಸರ್ಕಾರದ ವೈಫಲ್ಯ, ಬಸವರಾಜ ಬೊಮ್ಮಾಯಿ ಅವರ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ. ಚುನಾವಣೆಗಾಗಿ ಏಕಾಏಕಿ ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಹುಟ್ಟಿ ವಾರಕ್ಕೊಮ್ಮೆ ಕರ್ನಾಟಕಕ್ಕೆ ಬರುವ ಮೊ-ಶಾ ಜೋಡಿ ಮಹಾರಾಷ್ಟ್ರದಲ್ಲಿನ ತಮ್ಮದೇ ಸರ್ಕಾರದ ಉದ್ಧಟತನಕ್ಕೆ ಕಡಿವಾಣ ಹಾಕುತ್ತಿಲ್ಲವೇಕೆ ಬಿಜೆಪಿ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.ಈ ಕುರಿತಂತೆ ಟ್ವಿಟ್ ಮಾಡಿದ್ದು, ರಮೇಶ್ ಜಾರಕಿಹೊಳಿ ಬಿಜೆಪಿಗೆ ದುಬಾರಿ ಮನುಷ್ಯನಾಗಿದ್ದಾರೆ, ಒಂದೆಡೆ ಸವದಿ ಜೊತೆ ಕಿರಿಕ್, ಇನ್ನೊಂದೆಡೆ ಈರಣ್ಣ …
Read More »ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ; ಈ ಬಗ್ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದೇನು..?
ಸ್ಯಾಂಡಲ್ವುಡ್ ಖ್ಯಾತ ನಟ ಕಿಚ್ಚ ಸುದೀಪ್ ಬಿಜೆಪಿ ಪರ ಕ್ಯಾಂಪೇನ್ ಮಾಡುವುದಾಗಿ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ಸುದೀಪ್ ಬಿಜೆಪಿಗೆ ಬೆಂಬಲ ನೀಡಿದರ ಬಗ್ಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮಾತಾಡಿದ್ದಾರೆ. ಬಿಜೆಪಿ ಪರ ಸುದೀಪ್ ಪ್ರಚಾರ ಮಾಡುವುದರ ಬಗ್ಗೆ ನಾನು ಟೀಕೆ ಮಾಡಲು ಹೋಗುವುದಿಲ್ಲ. ನನ್ನ ಕಾರ್ಯಕರ್ತರೇ ನಮ್ಮ ಪಕ್ಷದ ಸ್ಟಾರ್ ಪ್ರಚಾರಕರು. ಸುದೀಪ್ ಪ್ರಚಾರಕ್ಕೆ ಅಭಿಮಾನಿಗಳು ಜೈಕಾರ ಹಾಕಬಹುದು. ಆದರೆ, ಅದು ಮತವಾಗಿ ಪರಿವರ್ತನೆ …
Read More »ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆ?
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯ ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ತಮಿಳುನಾಡಿನಲ್ಲಿ 9 ಮೀಟರ್ ಗಾಳಿಯ ದಿಕ್ಕಿನಲ್ಲಿ ಬದಲಾವಣೆ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. …
Read More »24ರ ಸಾರಿಗೆ ಮುಷ್ಕರ ಕೈಬಿಡಲ್ಲ: ಆರ್. ಚಂದ್ರಶೇಖರ್
ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ಕೈಬಿಡುವಂತೆ ಅಧಿಕಾರಿಗಳು ನಡೆಸಿದ ಸಂಧಾನ ಸಭೆಯು ವಿಫಲವಾಗಿದ್ದು, ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಅವರ ನೇತೃತ್ವದಲ್ಲಿ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಬಳಿ ಚಾಲಕರು ಹಾಗೂ ನಿರ್ವಾಹಕರು ಉಪವಾಸ ಸತ್ಯಾಗ್ರಹ ಆರಂಭಿಸಿದರು. ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ, ಕರೆ ನೀಡಲಾಗಿರುವ ಮುಷ್ಕರದ ಪೂರ್ವಭಾವಿ ಹೋರಾಟಕ್ಕೆ ಮಂಗಳವಾರ ರಾತ್ರಿಯೇ ಚಾಲನೆ ದೊರೆಯಿತು. ಸರ್ಕಾರವು ಶೇ 15ರಷ್ಟು ವೇತನ ಹೆಚ್ಚಳಕ್ಕೆ …
Read More »ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ನ ಇಬ್ಬರು ಅಧಿಕಾರಿಗಳು
ಬೆಂಗಳೂರು: ಪವರ್ ಸಪ್ಲೈ ಅಪ್ ಗ್ರೇಡ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಂಧಿತ ಅಧಿಕಾರಿಗಳನ್ನು ಸುಮನಹಳ್ಳಿ ಬೆಸ್ಕಾಂ ಎಇಇ ಭಾರತಿ ಹಾಗೂ ಎಇ ಕುನಾಲ್ ಕುಮಾರ್ ಎಂದು ಗುರುತಿಸಲಾಗಿದೆ. ಪವರ್ ಸಪ್ಲೈಗಾಗಿ ಅನಂತರಾಜು ಎಂಬುವವರು ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿಕೊಡಲು 25 ಸಾವಿರ ರೂಪಾಯಿ ಹಣ ನೀಡುವಂತೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅನಂತರಾಜು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನನ್ವಯ ಲೋಕಾಯುಕ್ತ …
Read More »