ಬೆಂಗಳೂರು,ಫೆ.18-ಕಾನೂನು ತಜ್ಞರ ಜೊತೆ ಚರ್ಚಿಸಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಆಶ್ವಾಸನೆ ನೀಡಿದ್ದಾರೆಂದು ಶಾಸಕ ರಾಜುಗೌಡ ನಾಯಕ್ ಹೇಳಿದ್ದಾರೆ. ಸಿಎಂ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಮ್ಮ ಸಮುದಾಯದ ಮುಖಂಡರು, ಯಡಿಯೂರಪ್ಪನವರೊಂದಿಗೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಚರ್ಚೆ ಮಾಡಿದ್ದೇವೆ. ನಮ್ಮ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ನಮ್ಮ ಸಮುದಾಯ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ …
Read More »ನಟ ರಾಘವೇಂದ್ರ ರಾಜ್ ಕುಮಾರ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಅನಾರೋಗ್ಯದಿಂದ ಫೆಬ್ರವರಿ 16ರಂದು ಸಂಜೆ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದ ನಟ-ನಿರ್ಮಾಪಕ ರಾಘವೇಂದ್ರ ರಾಜ್‌ಕುಮಾರ್ ಅವ್ರು ಸಧ್ಯ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ನಂತ್ರ ಮಾತನಾಡದ ರಾಘಣ್ಣ ‘ಬೆಳಕು ಸಿನಿಮಾದ ಶೂಟಿಂಗ್ನಲ್ಲಿದ್ದೆ. ಆ ಸಮಯದಲ್ಲಿ ಹೃದಯ ಬಡಿತದಲ್ಲಿ ಏರು ಪೇರು ಕಾಣಿಸಿಕೊಳ್ತು. ಆಗಲೇ ಆಸ್ಪತ್ರಗೆ ಬಂದು ಅಡ್ಮಿಟ್ ಆದೆ. ಇದೇ ಆಸ್ಪತ್ರೆಯಲ್ಲಿ ನಾನು ಏಳು ವರ್ಷದ ಹಿಂದೆ ಸ್ಟ್ರೋಕ್ ಆದಾಗಲೂ ಅಡ್ಮಿಟ್ ಆಗಿದ್ದೆ. ಇಲ್ಲಿ ಬಂದು ಆಯಂಜಿಯೋಗ್ರಾಮ್ ಮಾಡಿ …
Read More »ಹೊಸ ಚಿತ್ರದಲ್ಲಿ ಕುರಿ ಪ್ರತಾಪ್ ಹೀರೋ.. ಆದ್ರೆ ನಾಯಕಿಯ ಭೇಟಿಗೆ ಅವಕಾಶವೇ ಇಲ್ಲ!
ಕಾಮಿಡಿಯನ್ಗಳಾಗಿ ಕಾಣಿಸಿಕೊಂಡ ನಂತರ ಹೀರೋ ಆಗುವ ಪ್ರಯತ್ನವನ್ನು ಕನ್ನಡ ಚಿತ್ರರಂಗದಲ್ಲಿ ಅನೇಕರು ಮಾಡಿದ್ದಾರೆ. ಇದರಲ್ಲಿ ಕೆಲವರು ಯಶಸ್ಸು ಕಂಡರೆ, ಇನ್ನೂ ಕೆಲವರು ಸೋತಿದ್ದಾರೆ. ಈಗ ಕನ್ನಡದ ಹಾಸ್ಯ ನಟ ಕುರಿ ಪ್ರತಾಪ್ (Kuri Prathap) ಇದೇ ರೀತಿಯ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಹೀರೋ ಆಗಿ ತೆರೆಮೇಲೆ ಬರುತ್ತಿದ್ದಾರೆ. ಚಿತ್ರಕ್ಕೆ ‘ಆರ್ಸಿ ಬ್ರದರ್’ ಎಂದು ನಾಮಕರಣ ಮಾಡಲಾಗಿದೆ. ನಿರ್ದೇಶಕ ಪ್ರಕಾಶ್ ಕುಮಾರ್ ಈ ಚಿತ್ರಕ್ಕೆ ಆಯಕ್ಷನ್ …
Read More »ಬಾಗಲೂರು: ಮದ್ಯ ಸೇವಿಸಬೇಡ ಎಂದು ಬುದ್ದಿ ಹೇಳಿದ್ದಕ್ಕೆ ಪತಿಯನ್ನೇ ಬಿಟ್ಟು ಹೋದ ಪತ್ನಿ
ಬೆಂಗಳೂರು: ಮದ್ಯ ಸೇವಿಸುವ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ತವರು ಮನೆ ಸೇರಿದ ಅದೆಷ್ಟೋ ಪ್ರಸಂಗಗಳು ದಿನ ನಿತ್ಯ ನಡೆಯುತ್ತಲೇ ಇರುತ್ತವೆ. ಆದ್ರೆ ಇಲ್ಲೊಂಚೂರು ಬೇರೆ. ಮದ್ಯ ಸೇವಿಸಬೇಡ ಎಂದಿದ್ದಕ್ಕೆ ಪತಿಯನ್ನ ಪತ್ನಿ ಬಿಟ್ಟುಹೋಗಿದ್ದಾರೆ. ಇಂತಹದೊಂದು ಘಟನೆ ಬೆಂಗಳೂರಿನ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದ್ಯ ಸೇವಿಸಬೇಡ ಎಂದು ಬೈದು ಬುದ್ಧಿ ಹೇಳಿದಕ್ಕೆ ಗಂಡನನ್ನೇ ಬಿಟ್ಟು ಹೆಂಡತಿ ನಾಪತ್ತೆಯಾಗಿದ್ದಳು. ಈ ಬಗ್ಗೆ ದೂರು ದಾಖಲಾದ ಬಳಿಕ ಪೊಲೀಸರು ಮಹಿಳೆಯ ಮನವೊಲಿಸಿ …
Read More »ಆನ್ ಲೈನ್ ಜೂಜಾಟ: ಸಂಪುಟ ನಿರ್ಧಾರ ಕೇಳಿದ ಹೈಕೋರ್ಟ್
ಬೆಂಗಳೂರು: ಆನ್ ಲೈನ್ ಜೂಜಾಟ ನಿಲ್ಲಿಸಬೇಕು ಎಂದು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್, ಈ ಬಗ್ಗೆ ರಾಜ್ಯ ಸಚಿವ ಸಂಪುಟ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪ್ರಶ್ನಿಸಿದೆ. ಸಚಿವ ಸಂಪುಟವು ತೆಗೆದುಕೊಳ್ಳುವ ನಿರ್ಧಾರವನ್ನು ಕೋರ್ಟ್ ಮುಂದೆ ದಾಖಲಿಸಬೇಕು ಎಂದು ಆನ್ ಲೈನ್ ಬೆಟ್ಟಿಂಗ್ ವಿಷಯವನ್ನು ಸಂಪುಟದ ಮುಂದೆ ಇಡಲಾಗಿದೆ ಮತ್ತು ಇದರ ಬಗ್ಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ …
Read More »ಈ ಬಾರಿಯ ಬಜೆಟ್ ನಿಂದ ಆರೋಗ್ಯ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಫೆಬ್ರವರಿ 16 : ವೈದ್ಯರು ಪ್ರತಿ ರೋಗಿಯನ್ನು ತಮ್ಮ ಕುಟುಂಬ ಸದಸ್ಯರಂತೆ ಕಂಡು ಸೇವೆ ನೀಡಿದರೆ ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ ನಿರೀಕ್ಷಿತ ಸೇವೆ ನೀಡಲು ಸಾಧ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ 3 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಸರ್ಕಾರಿ ಆರೋಗ್ಯ ಕೇಂದ್ರಗಳು ನಿರೀಕ್ಷೆಗೆ ತಕ್ಕಂತೆ …
Read More »ನಟ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಿದ್ಧತೆ
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಮೂಲಗಳ ಪ್ರಕಾರ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅಭಿಮಾನಿಗಳು ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಭದ್ರತೆಗಾಗಿ ಆಸ್ಪತ್ರೆ ಸುತ್ತ ಕೆ.ಎಸ್.ಆರ್.ಪಿ. ತುಕಡಿ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು …
Read More »ಐವರು ಹಿರಿಯ ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
ಬೆಂಗಳೂರು : ಇತ್ತೀಚೆಗಷ್ಟೇ ಐಎಎಸ್ ಅಧಿಕಾರಿಗಳ ಮಟ್ಟದಲ್ಲಿ ಭಾರೀ ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಐಪಿಎಸ್ ಅಧಿಕಾರಿಗಳಿಗೂ ವರ್ಗಾವಣೆಯ ಬಿಸಿ ಮುಟ್ಟಿಸಿದೆ. ಇಂದು ಸಂಜೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ದಿಢೀರನೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಐಪಿಎಸ್ ಅಧಿಕಾರಿಗಳ ಪೈಕಿ ಐವರು ಎಡಿಜಿಪಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಅವರನ್ನು ರೈಲ್ವೆ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು …
Read More »ಬಾಲಿವುಡ್ಗೆ ರವಿ ಬಸ್ರೂರು
ಬೆಂಗಳೂರು: ರವಿ ಬಸ್ರೂರು ಈಗಾಗಲೇ ‘ಕೆಜಿಎಫ್’ ಚಿತ್ರಗಳ ಮೂಲಕ ಬೇರೆ ಭಾಷೆಯ ಚಿತ್ರರಂಗಗಳಿಗೂ ಪರಿಚಿತರಾಗಿದ್ದಾರೆ. ಇನ್ನು, ಈಗಾಗಲೇ ತೆಲುಗು, ಮಲಯಾಳಂ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಾಲಿವುಡ್ಗೂ ಕಾಲಿಟ್ಟಿದ್ದಾರೆ. ಬಾಲಿವುಡ್ನ ಜನಪ್ರಿಯ ನಟ-ನಿರ್ದೇಶಕ ಫರ್ಹಾನ್ ಅಖ್ತರ್, ‘ಯುದ್ರ’ ಎಂಬ ಚಿತ್ರವನ್ನು ನಿರ್ವಿುಸುತ್ತಿದ್ದು, ಈ ಚಿತ್ರಕ್ಕೆ ರವಿ ಬಸ್ರೂರು ಹಿನ್ನೆಲೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು, ಮತ್ತೊಬ್ಬ ಕನ್ನಡಿಗ ರವಿ ಉದ್ಯಾವರ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಸೋಮವಾರ ಸೋಷಿಯಲ್ ಮೀಡಿಯಾ …
Read More »ಕೋವಿಡ್ ವಾರಿಯರ್ಸ್ ಗೆ ಸಿಗದ ವಿಮೆ ಪರಿಹಾರ: ಲೋಕಾಯುಕ್ತದಿಂದ ಸ್ವಯಂ ಪ್ರೇರಿತ ದೂರು ದಾಖಲು; ಸರ್ಕಾರಕ್ಕೆ ನೋಟಿಸ್
ಬೆಂಗಳೂರು: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಕರ್ತವ್ಯ ನಿರ್ವಹಿಸಿ ಮೃತಪಟ್ಟ ಕೋವಿಡ್ ವಾರಿಯರ್ಸ್ ಗೆ ಸರ್ಕಾರ ಘೋಷಣೆ ಮಾಡಿದ್ದ ವಿಮೆ ಪರಿಹಾರ ಪಾವತಿಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಕೋವಿಡ್ ಕರ್ತವ್ಯದಲ್ಲಿ ಭಾಗಿಯಾಗಿ ಮೃತಪಟ್ಟ ಕೋವಿಡ್ ವಾರಿಯರ್ಸ್ ಕುಟುಂಬಗಳಿಗೆ ವಿಮಾ ಪರಿಹಾರ ಪಾವತಿಯಾಗದ ವಿಷಯವನ್ನು ಕರ್ನಾಟಕ ಲೋಕಾಯುಕ್ತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಸ್ವಯಂ ಪ್ರೇರಿತ ಅರ್ಜಿ …
Read More »