ಬೆಂಗಳೂರು,ಫೆ.5- ಬೆಂಗೂರು,ಫೆ.5- ಮುಂಬರುವ ಎರಡು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ. ಇದನ್ನು ಇದಂದೇ ಬರೆದಿಟ್ಟುಕೊಳ್ಳಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸವಾಲು ಹಾಕಿದರು. ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದೇ ಗೆಲ್ಲುತ್ತದೆ. ಯಾವುದೇ ಕಾರಣಕ್ಕೂ ಕಾಂಗ್ರೆಸಿಗರು ಗೆಲ್ಲುವುದಿಲ್ಲ. ಇದನ್ನು ಈ ಸದನದಲ್ಲಿ ನಾನು ಹೇಳುತ್ತೇನೆ ಎಂದರು. ಜನರ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಮುಂದೆ ಯಾವ ಚುನಾವಣೆಯನ್ನು …
Read More »k.p.c.c. ಸಾಮಾಜಿಕ ಜಾಲತಾಣ ಮುಖ್ಯಸ್ಥರಾಗಿ ಬಿ.ಆರ್.ನಾಯ್ಡು ನೇಮಕ
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರಾಗಿ ಯುವ ಮುಖಂಡ ಬಿ.ಆರ್.ನಾಯ್ಡು ನೇಮಕಗೊಂಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಕರ್ನಾಟಕ ರಾಜ್ಯದ ಸಾಮಾಜಿಕ ಜಾಲತಾಣದ ಜವಾಬ್ದಾರಿಯನ್ನು ಬಿ.ಆರ್.ನಾಯ್ಡು ಅವರಿಗೆ ವಹಿಸಿದ್ದಾರೆ. ಈ ವರೆಗೆ ನಟರಾಜ ಗೌಡ ಈ ಹುದ್ದೆಯನ್ನು ನಿರ್ವಹಿಸುತ್ತಿದ್ದರು. ಇದೀಗ ಇವರನ್ನು ನೇಮಕ ಮಾಡಲಾಗಿದೆ.
Read More »ಅಸೆಂಬ್ಲಿ ನಡೆಸೋದು ಬೇಡ ನಡೀರಿ, ಎಲ್ಲರೂ ಪಿಕ್‍ನಿಕ್‍ಗೆ ಹೋಗೋಣ: ಸಿದ್ದರಾಮಯ್ಯ
ಬೆಂಗಳೂರು: ಕಲಾಪ ನಡೆಸೋದು ಬೇಡ ನಡೀರಿ, ಎಲ್ಲರೂ ಪಿಕ್‍ನಿಕ್‍ಗೆ ಹೋಗೋಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನಸಭಾ ಕಲಾಪದ ಸಂದರ್ಭದಲ್ಲಿ ಸಚಿವರು ಹಾಗೂ ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಗರಂ ಆದ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೀತಿದೆ. ಇಂತಹ ಸಂದರ್ಭದಲ್ಲಿ ಸಚಿವರು, ಅಧಿಕಾರಿಗಳು ಇರಬೇಕು. ಇವರು ಇಲ್ಲದೆ ಚರ್ಚೆ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಹೀಗಂದ ಕೂಡಲೇ ಡಿಸಿಎಂ ಗೋವಿಂದ ಕಾರಜೋಳ ಎದ್ದು ನಿಂತು …
Read More »ಕೋರ್ಟ್ ಆವರಣದಲ್ಲಿ ಸಾಹಿತಿ ಕೆ.ಎಸ್ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ
ಬೆಂಗಳೂರು, : ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆನ್ನಲಾದ ಚಿಂತಕ, ಹಿರಿಯ ಸಾಹಿತಿ ಕೆ.ಎಸ್ ಭಗವಾನ್ ಅವರ ಮುಖಕ್ಕೆ ಬಿಜೆಪಿ ಕಾರ್ಯಕರ್ತೆ, ವಕೀಲೆಯೊಬ್ಬರು ಮಸಿ ಬಳಿದ ಘಟನೆ ನಗರದ 2ನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಇಂದು ಮದ್ಯಾಹ್ನ ನಡೆದಿದೆ. ವಕೀಲೆ ಮೀರಾ ರಾಘವೇಂದ್ರ ಅವರು ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದು, ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಈ ಕೃತ್ಯ ಎಸಗಲಾಗಿದೆ ಎಂದು …
Read More »ಸಾಹಿತಿಗಳು, ನಟ-ನಟಿಯವರು ರೈತರ ಪ್ರತಿಭಟನೆ ಬೆಂಬಲಿಸಬೇಕು: ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರೈತರ ಪ್ರತಿಭಟನೆಗೆ ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ನಟ-ನಟಿಯರು ಬೆಂಬಲಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರೈತರ ಪರವಾಗಿ ಬೆಂಬಲ ನೀಡುವಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು. ನಾವೆಲ್ಲರೂ ರೈತರು ಬೆಳೆದ …
Read More »ಕಲ್ಲು ಕ್ವಾರಿಗಳಲ್ಲಿ ಸುರಕ್ಷತಾ ನಿಯಮಗಳ ಪಾಲನೆ: ವರದಿ ಸಲ್ಲಿಸಲು ಹೈಕೋರ್ಟ್ ಆದೇಶ
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಕ್ವಾರಿಗಳಲ್ಲಿ ಸುರಕ್ಷತಾ ನಿಯಮಾವಳಿ ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ಸರ್ವೇ ನಡೆಸಿ ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಸಮಾಜ ಪರಿವರ್ತನಾ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ಈ ನಿರ್ದೇಶನ ನೀಡಿದೆ. ರಾಜ್ಯದಲ್ಲಿರುವ ಕ್ವಾರಿಗಳ ಸರ್ವೇ ನಡೆಸಿ ಸುರಕ್ಷತಾ ನಿಯಮಾವಳಿ ಪಾಲಿಸ ಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸ ಬೇಕು. ಒಂದೊಮ್ಮೆ …
Read More »ದಲಿತ ಮಕ್ಕಳಿಗೆ ನಾಲ್ಕು ಸೈನಿಕ ಶಾಲೆ: ಗೋವಿಂದ ಕಾರಜೋಳ
ಬೆಂಗಳೂರು: ಎಸ್ಸಿ, ಎಸ್ಟಿ ಸಮುದಾಯದ ಮಕ್ಕಳಿಗೆ ರಾಜ್ಯದಲ್ಲಿ ನಾಲ್ಕು ಸೈನಿಕ ವಸತಿ ಶಾಲೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಅನುದಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸದಸ್ಯ ಅರವಿಂದ ಕುಮಾರ್ ಅರಳಿ ಪ್ರಶ್ನೆಗೆ ಉತ್ತರಿಸಿ, ವಿಜಯಪುರ ಹಾಗೂ ಮಡಿಕೇರಿಯಲ್ಲಿರುವ ಸೈನಿಕ ಶಾಲೆಗಳ ಮಾದರಿಯಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಮಕ್ಕಳಿಗೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದೊಂದು ಸೈನಿಕ ವಸತಿ ಶಾಲೆ …
Read More »ಏರೋ ಇಂಡಿಯಾ 2021 ಕಾರ್ಯಕ್ರಮದಲ್ಲಿ ಕಣ್ಮರೆಯಾಗಿದೆ ಕನ್ನಡ : H.D.K.
ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ …
Read More »ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯ : ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾದ ರೈತರ ನಿಯೋಗ
ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಹೇಳಿದರು. ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ*, ನಮ್ಮ ಪಾಲಿನ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು. ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ …
Read More »ಏರೋ ಇಂಡಿಯಾ 2021 ಚಾಲನೆಗೆ ಕ್ಷಣಗಣನೆ : ಟ್ರಾಫಿಕ್ ದಟ್ಟಣೆ
ಬೆಂಗಳೂರು ಐತಿಹಾಸಿಕ 13ನೇ ಆವೃತ್ತಿಯ ಏರೋ ಇಂಡಿಯಾ 2021ಗೆ ಕ್ಷಣಗಣನೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಏರೋ ಇಂಡಿಯಾ 2021 ಉದ್ಘಾಟಿಸಲಿದ್ದಾರೆ.. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ಫೆ.3ರಿಂದ 5ರ ತನಕ ಏರ್ ಶೋ ನಡೆಯಲಿದೆ. ಏರ್ ಶೋ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶವಿದ್ದು, ಬೆಳ್ಳಂಬೆಳಗ್ಗೆಯೇ ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿಯಿಂದಲೇ ಟ್ರಾಫಿಕ್ ಜಾಮ್ ಶುರುವಾಗಿದೆ. ಸಾರ್ವಜನಿಕರು ಏರ್ ಶೋ ವೀಕ್ಷಿಸಲು …
Read More »
Laxmi News 24×7