Breaking News

ಬೆಂಗಳೂರು

ಪ್ರಾಣ ಉಳಿಸೋ ಸಂಜೀವಿನಿ, ಜೀವಾಮೃತ ಅಂತೆಲ್ಲಾ ಕರೆಸಿಕೊಳ್ತಿದ್ದ ವ್ಯಾಕ್ಸಿನ್‍ಗೆ ಡಿಮ್ಯಾಂಡೇ ಇಲ್ಲ.

ಬೆಂಗಳೂರು: ಆಬಾಲ ವೃದ್ಧರಾದಿಯಾಗಿ ಎಲ್ಲರನ್ನೂ ಹಿಂಡಿ ಹಿಪ್ಪೆ ಮಾಡಿರೋ ‘ಚೀನಿ ವೈರಸ್’ ಕೊರೊನಾಗೆ ಇಷ್ಟು ದಿನ ವ್ಯಾಕ್ಸಿನ್ ಬಂದ್ರೆ ಸಾಕಪ್ಪಾ ಅಂತ ಜನ ಕಾಯುತ್ತಿದ್ದರು. ಆದ್ರೆ ಕೊವಿಶೀಲ್ಡ್ ವ್ಯಾಕ್ಸಿನ್ ವಿತರಣೆಯ ಮಹಾಯಜ್ಞಕ್ಕೆ ಚಾಲನೆ ಸಿಕ್ಕು ನಾಲ್ಕನೇ ದಿನ ಆದರೂ ಟಾರ್ಗೆಟ್ ರೀಚ್ ಆಗೋಕೆ ಒದ್ದಾಡುವಂತಾಗಿದೆ. ಪ್ರಾಣ ಉಳಿಸೋ ಸಂಜೀವಿನಿ, ಜೀವಾಮೃತ ಅಂತೆಲ್ಲಾ ಕರೆಸಿಕೊಳ್ತಿದ್ದ ವ್ಯಾಕ್ಸಿನ್‍ಗೆ ಡಿಮ್ಯಾಂಡೇ ಇಲ್ಲ. ರಾಜ್ಯವೂ ಸೇರಿದಂತೆ ದೇಶಾದ್ಯಂತ ಮೊದಲ ಹಂತದ ಕೊರೋನಾ ವಾರಿಯರ್ಸ್ ವ್ಯಾಕ್ಸಿನೇಷನ್‍ಗೆ ನಿರೀಕ್ಷಿತ …

Read More »

ದೆಹಲಿಯತ್ತ ಹೊರಟ ಅಸಮಾಧಾನಿತ B.J.P.ಶಾಸಕರು,

ಬೆಂಗಳೂರು,ಜ.19- ಆಡಳಿತಾರೂಢ ಬಿಜೆಪಿಯಲ್ಲಿ ಎಲ್ಲ ಬಿಕ್ಕಟ್ಟು ನಿವಾರಣೆಯಾಗಿದೆ ಎನ್ನುವಷ್ಟರಲ್ಲೇ ಸಂಪುಟದಲ್ಲಿ ಸ್ಥಾನಮಾನ ಸಿಗದ ಅಸಮಾಧಾನಿತ ಶಾಸಕರು ದೆಹಲಿ ತೆರಳಿರುವುದು ಕಮಲ ಪಾಳೆಯದಲ್ಲಿ ಸಂಚಲನ ಸೃಷ್ಟಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರಮಾಪ್ತ ಹಾಗೂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮತ್ತು ಶಾಸಕ ಅರವಿಂದ್ ಬೆಲ್ಲದ್ ದಿಢೀರನೆ ರಾಷ್ಟ್ರೀಯ ನಾಯಕರ ಭೇಟಿಗೆ ತೆರಳಿರುವುದು ಕಮಲ ಪಾಳೆಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಸಾಬೀತು ಮಾಡಿದೆ. ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಇಂದು ಮುಂಜಾನೆ ದಿಢೀರನೆ …

Read More »

ಪರಪ್ಪನ ಅಗ್ರಹಾರ ಕಾರಾಗೃಹ ಸೇರಿದ ಮಾಜಿ ಸಚಿವರ ಪುತ್ರ; ಡ್ರಗ್ ಪೂರೈಕೆ ಪ್ರಕರಣದಲ್ಲಿ ಮತ್ತೋರ್ವನ ಬಂಧನ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ತನಿಖೆಯನ್ನು ಸಿಸಿಬಿ ಚುರುಕುಗೊಳಿಸಿದೆ. ಈ ನಡುವೆ ಪ್ರಮುಖ ಆರೋಪಿಗಳಿಗೆ ಡಗ್ಸ್ ಪೂರೈಕೆ ಮಾಡ್ತಿದ್ದ ಫೆಡ್ಲರ್ ಗಳಿಗೂ ಬಿಸಿ ಮುಟ್ಟಿಸಲಾಗುತ್ತಿದೆ. ಲೂಮ್ ಪೆಪ್ಪರ್, ಬೆನಾಲ್ಡ್ ಅಲ್ಲದೇ ಮತ್ತೊಬ್ಬ ಪೆಡ್ಲರ್​ ಈಗ ಅಂದರ್ ಆಗಿದ್ದಾನೆ. ಈ ನಡುವೆ ವಿರೇನ್ ಖನ್ನಾ ಶಿಷ್ಯನನ್ನು ಮತ್ತೆ ಬಾಡಿವಾರೆಂಟ್ ಪಡೆಯಲಾಗಿದೆ. ಹೌದು ಆದಿತ್ಯಾ ಆಳ್ವ ಬಂಧನ ಬೆನ್ನಲ್ಲೇ ಫೆಡ್ಲರ್ ಗಳಿಗೆ ಬಿಸಿ ಮುಟ್ಟಿಸಲು ಸಿಸಿಬಿ ಮುಂದಾಗಿದೆ. ಈ ನಡುವೆ ಹಲವು …

Read More »

ಜ.22 ರಂದು ಮುಸ್ಲಿಂ ಸಂಘಟನೆಗಳಿಂದ ಬೆಂಗಳೂರು ಬಂದ್‌ – ಬೇಡಿಕೆಗಳು ಏನು?

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟ ಜ.22 ರಂದು ಶಾಂತಿಯುತ ಬೆಂಗಳೂರು ಬಂದ್‌ಗೆ ಕರೆ ನೀಡಿವೆ. ಈ ಬಂದ್‌ಗೆ 22 ಕ್ಕೂ ಹೆಚ್ಚು ಮುಸ್ಲಿಂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಬಂದ್ ಬಗ್ಗೆ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟಗಳ ಸಮನ್ವಯಕಾರ ಮಸೂದ್ ಅಬ್ದುಲ್ ಖಾದರ್ ಪ್ರತಿಕ್ರಿಯಿಸಿ, ಈ ಬಂದ್ ಶಾಂತಿಯುತವಾಗಿ ಇರಲಿದೆ. ಯಾವುದೇ ರೀತಿ ಗುಂಪು ಮಾಡಿ ಪ್ರತಿಭಟನೆ ಇರುವುದಿಲ್ಲ. ‌ ಸ್ವಯಂಪ್ರೇರಿತವಾಗಿ ಬೆಂಗಳೂರಿನಲ್ಲಿ …

Read More »

ರಥ ಸಪ್ತಮಿ ದಿನದಂದು ‘ಪೊಗರು’ ರಿಲೀಸ್

ಬೆಂಗಳೂರು: ಇದೇ ಫೆಬ್ರವರಿ 19ಕ್ಕೆ ಚಂದನವನದ ಬಹುನಿರೀಕ್ಷಿತ ಪೊಗರು ಸಿನಿಮಾ ತೆರೆಗೆ ಅಪ್ಪಳಿಸಲಿದೆ ಎಂದು ನಟ ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಇನ್‍ಸ್ಟಾಗ್ರಾಂನಲ್ಲಿ ಲೈವ್ ಬಂದ ಅದ್ಧೂರಿ ಹುಡುಗ ಧ್ರುವ ಸರ್ಜಾ ಅಭಿಮಾನಿಗಳ ಜೊತೆ ಪೊಗರು ಚಿತ್ರದ ಬಗೆಗಿನ ಮಹತ್ವದ ವಿಷಯಗಳನ್ನು ಹಂಚಿಕೊಂಡರು. ಕಥೆ ಸಾಕಷ್ಟು ಶೇಡ್, ಸರ್ಪ್ರೈ ಸ್ ಹೊಂದಿದ್ದರಿಂದ ಬರೋಬ್ಬರಿ ಮೂರುವರೆ ವರ್ಷ ಸಿನಿಮಾ ಮಾಡಲಾಗಿದೆ. ಇದೊಂದು ಕೇವಲ ಮಾಸ್ ಸಿನಿಮಾ ಅಲ್ಲ. …

Read More »

ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಪ್ರಯತ್ನ ನಡೆದರೆ ರಕ್ತಕ್ರಾಂತಿ ಆಗುತ್ತೆ : ವಾಟಾಳ್ ನಾಗರಾಜ್ ಎಚ್ಚರಿಕೆ

ಬೆಂಗಳೂರು : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿವೆ. ಸುದ್ದಿಗಾರರೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಪ್ರಯತ್ನ ನಡೆದರೆ ರಕ್ತಕ್ರಾಂತಿ ಆಗುತ್ತೆ. ಸಿಎಂ ಯಡಿಯೂರಪ್ಪಗೆ ಶಕ್ತಿ, ಪ್ರೀತಿ, ಬದ್ಧತೆ ಇಲ್ಲ. ಬೆಳಗಾವಿ, ಕಾರವಾರದ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ. ಬೆಳಗಾವಿ ಮಹಾರಾಷ್ಟ್ರ ಗಡಿ ಬಂದ್ ಆಗಲೇಬೇಕು. ಎಂಇಎಸ್ , ಶಿವಸೇನೆಯನ್ನು …

Read More »

ಎಂಇಎಸ್‍ಗೆ ಸರಿಯಾದ ಪೆಟ್ಟು ಕೊಟ್ಟಿದ್ರೆ ಈ ಮಾತುಗಳ ಬರ್ತಿರಲಿಲ್ಲ

ಬೆಂಗಳೂರು: ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಒಂದು ಬಾರಿ ಇತಿಹಾಸವನ್ನ ಅವಲೋಕಿಸಿದ್ರೆ ಯಾರು ಯಾರ ಭಾಗವನ್ನ ಅತಿಕ್ರಮಿಸಿಕೊಂಡಿದ್ದಾರೆ ಅನ್ನೋದು ಅರಿವಾಗಲಿದೆ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಖಡಕ್ ತಿರುಗೇಟು ನೀಡಿದ್ದಾರೆ. ಒಮ್ಮೆ ಇತಿಹಾಸವನ್ನ ಅವಲೋಕಿಸಿ: ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ …

Read More »

ಗಡಿ ವಿಚಾರದಲ್ಲಿ ಮಹಾ ಸಿಎಂ ಉದ್ಧವ್ ಉದ್ಧಟತನ ಪ್ರದರ್ಶನ..ಸಿಎಂ ಬಿಎಸ್‍ವೈ ಆಕ್ರೋಶ

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಉದ್ಧವ್ ಠಾಕ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಟ್ವೀಟ್ ಮೂಲಕ ತಕ್ಕ ಉತ್ತರ ನೀಡಿರುವ ಸಿಎಂ ಬಿಎಸ್‍ವೈ ಹೀಗಿರುವಾಗ …

Read More »

ಬೆಳಗಾವಿ ನಮ್ಮದು, ಮಹಾರಾಷ್ಟ್ರ ಸಿಎಂ ಠಾಕ್ರೆಗೆ ಸಿದ್ಧರಾಮಯ್ಯ ಖಡಕ್ ವಾರ್ನಿಗ್

ಬೆಂಗಳೂರು : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದ ಮಹಾರಾಷ್ಟ್ರ ಸಿಎಂ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವಿಟ್ ಮೂಲಕ ಕಿಡಿಕಾರಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಬಗ್ಗೆ ಉದ್ಧವ್ ಠಾಕ್ರೆ ನೀಡಿರುವುದು ಅಧಿಕಪ್ರಸಂಗತನದ ಹೇಳಿಕೆ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವ ಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ …

Read More »

ಕನ್ನಡತಿಯ ಹೊಸ ಅವಸ್ಥಾಂತರ: ರಂಜನಿ-ವಿಜಯ್ ಹೊಸ ಸಂಚಾರ

ಬೆಂಗಳೂರು: ಲಾಕ್​ಡೌನ್ ನಂತರ ‘ಕನ್ನಡತಿ’ ರಂಜನಿ ರಾಘವನ್ ಬಹಳ ಬ್ಯುಸಿಯಾಗಿದ್ದಾರೆ. ಒಂದು ಕಡೆ ಕಿರುತೆರೆಯ ಧಾರಾವಾಹಿಯಾದರೆ, ಇನ್ನೊಂದು ಕಡೆ ಸಿನಿಮಾಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ರಂಜನಿ, ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣ ಇಲ್ಲ’ ಎಂಬ ದಿಗಂತ್ ಅಭಿನಯದ ಚಿತ್ರ ಮುಗಿಸಿದ್ದಾರೆ. ಇದೀಗ ಅವರು ಸಂಚಾರಿ ವಿಜಯ್ ಜತೆಗೆ ‘ಅವಸ್ಥಾಂತರ’ ಎಂಬ ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಸಂಚಾರಿ ವಿಜಯ್​ಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ‘ಅವಸ್ಥಾಂತರ’ ಚಿತ್ರವು ಈಗಾಗಲೇ ಪ್ರಾರಂಭವಾಗಿದ್ದು, ಈ ಚಿತ್ರದಲ್ಲಿ ಪ್ರೀತಿ ಎಂಬ …

Read More »