ಬೆಂಗಳೂರು: ಪ್ರಕರಣವೊಂದರಲ್ಲಿ ಎಫ್‌ಐಆರ್ ದಾಖಲಿಸಲು ದೂರುದಾರರಿಂದ ₹ 1 ಲಕ್ಷ ಲಂಚ ಪಡೆಯುತ್ತಿದ್ದ ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸೌಮ್ಯಾ ಮತ್ತು ಹೆಡ್ ಕಾನ್ ಸ್ಟೆಬಲ್ ಜೆ.ಪಿ. ರೆಡ್ಡಿ ಎಂಬುವವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಂಗಳವಾರ ಬಂಧಿಸಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಪಡೆಯುತ್ತಿದ್ದಾಗ ದಾಳಿಮಾಡಿದ ಎಸಿಬಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ನಡೆಯುತ್ತಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಎಸಿಬಿ ಕಾರ್ಯಾಚರಣೆ ವೇಳೆ …
Read More »ಮಗಳ ಮದುವೆಗೆ ಸಿಎಂ ಬಿಎಸ್ ವೈಗೆ ಆಹ್ವಾನ ನೀಡಿದ ಜಮೀರ್ ಅಹ್ಮದ್ ಖಾನ್
ಬೆಂಗಳೂರು : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ತಮ್ಮ ಮಗಳ ಮದುವೆಗೆ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡುಉತ್ತಿದ್ದು, ನಿನ್ನೆ ಜಮೀರ್ ಅಹ್ಮದ್ ಖಾನ್ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಭೇಟಿಯಾಗಿ ಆಹ್ವಾನ ನೀಡಿದ್ದಾರೆ. ನಿನ್ನೆ ರಾತ್ರಿ ಸಿಎಂ ನಿವಾಸ ಕಾವೇರಿಗೆ ಆಗಮಿಸಿದ ಜಮೀರ್ ಅಹ್ಮದ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಗಳ ಮದುವೆಗೆ ಆಮಂತ್ರಣ ನೀಡಿ ಮದುವೆಗೆ ದಯಮಾಡಿ ಬರಬೇಕು ಸಾರ್ ಎಂದರು. ಇದೇ ವೇಳೆ ಯಡಿಯೂರಪ್ಪ ಪುತ್ರ …
Read More »BREAKING : ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಬಂಧನ
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾನನ್ನು ಸಿಸಿಬಿ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ಆಳ್ವಾ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾನನ್ನು ಪೊಲೀಸರು ನಿನ್ನೆ ರಾತ್ರಿ ಚೆನ್ನೈನಲ್ಲಿ ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದ 6 ನೇ ಆರೋಪಿಯಾಗಿರುವ ಆದಿತ್ಯ ಆಳ್ವಾನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಚಾಮರಾಜನಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ವಿಚಾರಣೆ …
Read More »ಸಂಪುಟ ವಿಸ್ತರಣೆಯೋ,ಪುನರ್ ರಚನೆಯೋ ಇಂದೇ ಗೊತ್ತಾಗತ್ತೆ: ಸಿಎಂ ಸಚಿವ ಆಕಾಂಕ್ಷಿಗಳಲ್ಲಿ ಹೆಚ್ಚಿದ ಟೆನ್ಸನ್!!
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಏನೆಂಬುದು ಇಂದೇ ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ಆ ಮೂಲಕ ಸಚಿವರು ಹಾಗೂ ಆಕಾಂಕ್ಷಿಗಳಲ್ಲಿ ಎದೆಬಡಿತ ಹೆಚ್ಚಿಸಿದ್ದಾರೆ. ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ 54ನೇ ಪುಣ್ಯತಿಥಿ ನಿಮಿತ್ತ ವಿಧಾನಸೌಧದ ಬಳಿ ಅವರ ಭಾವಚಿತ್ರಕ್ಕೆ ಸೋಮವಾರ ಮಾಲಾರ್ಪಣೆ ಮಾಡಿದ ಬಳಿಕ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು. ಖಾಲಿಯಿರುವ 7 ಸ್ಥಾನಗಳನ್ನು ತುಂಬುವುದು ಖಚಿತ. ಬುಧವಾರ ಇಲ್ಲವೇ ಗುರುವಾರ ನೂತನ …
Read More »ಗೋಹತ್ಯೆ ನಿಷೇಧಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಸುಗ್ರೀವಾಜ್ಞೆ ಸಿಂಧುವಲ್ಲ. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು: ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ
ಬೆಂಗಳೂರು: ‘ಗೋಹತ್ಯೆ ನಿಷೇಧಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಸುಗ್ರೀವಾಜ್ಞೆ ಸಿಂಧುವಲ್ಲ. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು’ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರು ಭಾನುವಾರ ಹೇಳಿದರು. ಕರ್ನಾಟಕ ರಾಜ್ಯ ರೈತ ಸಂಘ ಆಯೋಜಿಸಿದ್ದ ‘ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ರೈತರ ಪಾಲಿಗೆ ಮರಣ ಶಾಸನ ಆಗಲಿದೆಯೆ?’ ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ‘ಸಂವಿಧಾನದತ್ತವಾಗಿರುವ ಮೂಲಭೂತ ಹಕ್ಕುಗಳು, ನಿರ್ದೇಶಕ ತತ್ವಗಳ ವಿರುದ್ಧವಾಗಿ …
Read More »ಬಿಜೆಪಿ ದರಿದ್ರ ಸರ್ಕಾರ:ಸಿದ್ದರಾಮಯ್ಯ ಲೇವಡಿ
ಬೆಂಗಳೂರು (ಜ. 10): ಗೋಹತ್ಯೆ ನಿಷೇಧ ಮಾಡಬೇಕಾದರೆ ಇಡೀ ದೇಶದಲ್ಲಿ ಬ್ಯಾನ್ ಮಾಡಿ. ದೇಶದಲ್ಲಿ ಗೋ ಮಾಂಸ ರಫ್ತು, ಆಮದು ಮಾಡೋದನ್ನು ಮೊದಲು ನಿಲ್ಲಿಸಿ. ಬಿಜೆಪಿಯವರು ಸಗಣಿ ಎತ್ತಿಲ್ಲ, ಗಂಜಲ ಬಾಚಿಲ್ಲ. ಆದರೆ ಗೋಮಾತೆ ಪೂಜೆ ಮಾಡುತ್ತೇವೆ ಎನ್ನುತ್ತಾರೆ. ಬಿಜೆಪಿ ಬೆಂಬಲಿಗರೇ ದನದ ಮಾಂಸ ರಫ್ತು ಮಾಡುತ್ತಾರೆ. ಬಿಜೆಪಿಯದ್ದು ದರಿದ್ರ ಸರ್ಕಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಸರ್ಕಾರದ ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ …
Read More »‘ಆನ್‌ಲೈನ್ ಮಾರುಕಟ್ಟೆ ಬಳಸಿಕೊಂಡು ಮಾರಾಟಗಾರರು ಗ್ರಾಹಕರಿಗೆ ಮಾಡುವ ಮೋಸಕ್ಕೆ ಇ- ಕಾಮರ್ಸ್ ಸಂಸ್ಥೆಗಳು ಜವಾಬ್ದಾರಿ ಆಗುವುದಿಲ್ಲ’ ಎಂದಹೈಕೋರ್ಟ್
ಬೆಂಗಳೂರು: ‘ಆನ್‌ಲೈನ್ ಮಾರುಕಟ್ಟೆ ಬಳಸಿಕೊಂಡು ಮಾರಾಟಗಾರರು ಗ್ರಾಹಕರಿಗೆ ಮಾಡುವ ಮೋಸಕ್ಕೆ ಇ- ಕಾಮರ್ಸ್ ಸಂಸ್ಥೆಗಳು ಜವಾಬ್ದಾರಿ ಆಗುವುದಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸ್ನ್ಯಾಪ್‌ಡೀಲ್ ಸಂಸ್ಥೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆ ರದ್ದು ಪಡಿಸಿದ ನ್ಯಾಯಾಲಯ, ಈ ಅಭಿಪ್ರಾಯಪಟ್ಟಿದೆ. ವೆಬ್‌ಸೈಟ್‌ನಲ್ಲಿ ಜಾಹೀರಾತು ಪ್ರದರ್ಶಿಸಿರುವ ಉತ್ಪನ್ನವೊಂದು ಔಷಧ ಮತ್ತು ಸೌಂದರ್ಯವರ್ಧಕ ಕಾಯ್ದೆಗೆ ವಿರುದ್ಧವಾಗಿದೆ ಸ್ನ್ಯಾಪ್‌ಡೀಲ್ ವಿರುದ್ಧ ಮೈಸೂರಿನ ಉಪ ಔಷಧ ನಿಯಂತ್ರಕರು ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಸ್ನ್ಯಾಪ್‌ಡೀಲ್ ಪರವಾಗಿ ಹಾಜರಾದ ಹಿರಿಯ ವಕೀಲ …
Read More »ಯಶ್ ಅಭಿಮಾನಿಗಳ ಪ್ರೀತಿ ಮತ್ತು ಸಹಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
ಬೆಂಗಳೂರು: ಕೆಜಿಎಫ್-2 ಚಿತ್ರದ ಟೀಸರ್ ನೋಡಿ ಯಶ್‍ಗೆ ಅಭಿಮಾನಿಗಳೂ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರ ಟೀಸರ್ ನಿಂದಲೇ ದಾಖಲೆ ನಿರ್ಮಿಸಲು ಹೊರಡುತ್ತಿದ್ದಂತೆ ಯಶ್ ಅಭಿಮಾನಿಗಳ ಪ್ರೀತಿ ಮತ್ತು ಸಹಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಕೆಜಿಎಫ್-2 ಚಿತ್ರದ ಟೀಸರ್ ಗುರುವಾರ ರಾತ್ರಿ ಬಿಡುಗಡೆ ಗೊಳಿಸಿದ್ದರು. ಈಗಾಗಲೇ ಸುಮಾರು 10 ಕೋಟಿಗೂ ಅಧಿಕ ವ್ಯೂವ್, ಲೈಕ್ ಮತ್ತು ಕಮೆಂಟ್‍ಗಳನ್ನು ಹಾಕುವ ಮೂಲಕ ಕನ್ನಡ ಚಿತ್ರವೊಂದು ಎಲ್ಲಾ ಯೂಟ್ಯೂಬ್ ದಾಖಲೆಗಳನ್ನು ಪುಡಿಗಟ್ಟಿದೆ. ಈ ಸಂಭ್ರಮವನ್ನು ಇದೀಗ್ ಯಶ್ …
Read More »ಸಿಎಂಗೆ ಮತ್ತೆ ಕೊರೊನಾ ಆತಂಕ:
ಬೆಂಗಳೂರು,ಜ.9- ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಗಡಿ, ಕೆಮ್ಮು ಕಾಣಿಸಿಕೊಂಡ ಕಾರಣ ಅವರು ಕೊರೊನಾ ತಪಾಸಣೆಗಾಗಿ ಗಂಟಲು ದ್ರವವನ್ನು ರಾಯಚೂರಿನಲ್ಲಿ ಪರೀಕ್ಷೆ ಮಾಡಿಸಿದ್ದರು. ಕೊರೊನಾ ದೃಢಪಟ್ಟಿರುವುದರಿಂದ ನಗರದ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೋವಿಡ್-19 ಐಸೋಲೋಷನ್ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಕೋವಿಡ್ ದೃಢಪಟ್ಟಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು, ಶಾಸಕರು, ಚುನಾಯಿತ …
Read More »ಸಿಲಿಕಾನ್ ಸಿಟಿ’ ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ : ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಕಟ್ಟಡ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಲಕ್ಕಸಂದ್ರದ ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಇಡೀ ಗೋಡನ್ ಗೆ ಬೆಂಕಿ ತಗುಲಿದ್ದು, ಈಗಾಗಲೇ ಐದಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಬಾಪೂಜಿನಗರದ ಹೊಸಗುಡ್ಡದಹಳ್ಳಿಯಲ್ಲಿ ನಡೆದ ಅಗ್ನಿ ಅವಘಡ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ.
Read More »
Laxmi News 24×7