Breaking News

ಬೆಂಗಳೂರು

ಬೆಂಗಳೂರಿನ ಮೂವರಿಗೆ ರೂಪಾಂತರ ಸೋಂಕು ದೃಢ: ಸಚಿವ ಡಾ.ಸುಧಾಕರ್ ಜ. 1 ರಿಂದ ಶಾಲಾ ಆರಂಭಕ್ಕೆ ತೊಂದರೆ ಇಲ್ಲ!!

ಬೆಂಗಳೂರು: ಇಂಗ್ಲೆಂಡ್​ನಲ್ಲಿ ಪತ್ತೆಯಾದ ಮ್ಯೂಟಂಟ್​ ಕೊರೊನಾ ವೈರಸ್​ ಭಾರತಕ್ಕೂ ಕಾಲಿಟ್ಟಿದ್ದು, 6 ಮಂದಿಯಲ್ಲಿ ರೂಪಾಂತರ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಬೆಂಗಳೂರಿನಲ್ಲಿ ಮೂವರಿಗೆ ವೈರಸ್ ತಗುಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 10 ಲ್ಯಾಬ್ ಇದೆ. ಇಂಗ್ಲೆಂಡ್​ನಿಂದ ಬಂದ 1614 ಜನರ ಪೈಕಿ 26 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜೆನೆಟಿಕ್ ಸೀಕ್ವೆನ್ಸಿಂಗ್ ಆದ …

Read More »

ನಾನು ದನದ ಮಾಂಸ ತಿನ್ನುತ್ತೇನೆ. ಬೇಡ ಎನ್ನಲು ನೀನು ಯಾವನು: ಸಿದ್ದರಾಮಯ್ಯ

ಬೆಂಗಳೂರು, ಡಿ.28- ನಾನು ದನದ ಮಾಂಸ ತಿನ್ನುತ್ತೇನೆ. ಅದನ್ನು ಬೇಡ ಎನ್ನಲು ನೀನು ಯಾವನು ಎಂದು ಪ್ರಶ್ನಿಸುವ ಮೂಲಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನನ್ನು ಬಲವಾಗಿ ವಿರೋಧಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಕಾಂಗ್ರೆಸ್‍ನ 136ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಹೊಸದಲ್ಲ. 1964ರಲ್ಲೆ ಕಾಂಗ್ರೆಸ್ ಜಾರಿಗೆ ತಂದಿತ್ತು. ಈಗ ಅದನ್ನು ಪರಿಷ್ಕರಣೆ ಮಾಡಿ …

Read More »

ರೂಪಾಂತರ ವೈರಸ್ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲೇ ಬಂದಿರಬಹುದು. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

,ಡಿ.28- ಒಂದು ವೈರಸ್ ರೂಪಾಂತರಗೊಳ್ಳುವುದು ಅದರ ಸಾಮಾನ್ಯ ನಡವಳಿಕೆ. ಇದರ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ತಿಳಿಸಿದ್ದಾರೆ. ಕೊರೊನಾ ವೈರಸ್ ನಮ್ಮ ದೇಶಕ್ಕೆ ಕಾಲಿಟ್ಟು 10 ತಿಂಗಳು ಮುಗಿದಿದೆ. ಒಂದು ವೈರಸ್ ರೂಪಾಂತರಗೊಳ್ಳುವುದು ಅದರ ಸಾಮಾನ್ಯ ನಡವಳಿಕೆ. ಇದರ ಬಗ್ಗೆ ಆತಂಕಪಡಬೇಕಾಗಿಲ್ಲ. ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಕೊರೊನಾ ವೈರಸ್ ಬಂದಾಗ ನಮ್ಮ ದೇಶ ಸಮರ್ಥವಾಗಿ ನಿಭಾಯಿಸಿದೆ ಎಂದರು. ಫೆಬ್ರವರಿ, ಮಾರ್ಚ್‍ನಲ್ಲಿ 2ನೇ ಅಲೆ …

Read More »

ನಿರ್ಭಯಾ ಸೇಫ್ ಸಿಟಿ ಪ್ರಾಜೆಕ್ಟ್ ಟೆಂಡರ್ ಪ್ರಕರಣ ಗೃಹ ಕಾರ್ಯದರ್ಶಿ ಡಿ.ರೂಪಾ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನಡುವಿನ ಸಮರಕ್ಕೆ ಕಾರಣ

ಬೆಂಗಳೂರು: ನಿರ್ಭಯಾ ಸೇಫ್ ಸಿಟಿ ಪ್ರಾಜೆಕ್ಟ್ ಟೆಂಡರ್ ಪ್ರಕರಣ ಗೃಹ ಕಾರ್ಯದರ್ಶಿ ಡಿ.ರೂಪಾ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನಡುವಿನ ಸಮರಕ್ಕೆ ಕಾರಣವಾಗಿದೆ. ಸೇಫ್ ಸಿಟಿ ಟೆಂಡರ್ ಕುರಿತಾಗಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ ಡಿ.ರೂಪಾ, ಹೇಮಂತ್ ನಿಂಬಾಳ್ಕರ್, 1067 ಕೋಟಿ ಟೆಂಡರ್ ನಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ. ಈ ಟೆಂಡರ್ ನಲ್ಲಿ ಅನೇಕ ಅಕ್ರಮಗಳು ನಡೆದಿವೆ.ಸರ್ಕಾರಕ್ಕೆ ತಪ್ಪು ಮಾಹಿತಿ ಸಲ್ಲಿಸಲಾಗುತ್ತಿದೆ. ನಿಂಬಾಳ್ಕರ್ ಸರ್ಕಾರದ ದಾರಿ ತಪ್ಪಿಸುವ ಕೆಲಸ …

Read More »

ಹಂಪಿ ವಿವಿ ಉಳಿಸಲು ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ

ಬೆಂಗಳೂರು,ಡಿ.27- ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಉಳಿಸಿ ಹೋರಾಟ ಉಗ್ರರೂಪ ತಾಳುವ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡು ಅನುದಾನ ಬಿಡುಗಡೆ ಮಾಡುವಂತೆ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕೊಟ್ಟಿಗೆ ಪಾಳ್ಯದಲ್ಲಿ ನಡೆದ ಕರವೇ ಸಭೆಯಲ್ಲಿ ಮಾತನಾಡಿದ ಅವರು, ಹಂಪಿ ಕನ್ನಡ ವಿವಿಗೆ ಅನುದಾನ ನೀಡುವುದು ಸೇರಿದಂತೆ ವಿಶ್ವವಿದ್ಯಾಲಯ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿದರು. ಟ್ವಿಟರ್‍ನಲ್ಲಿ ಹಂಪಿ ಕನ್ನಡ ವಿವಿ ಉಳಿಸಿ ಎಂಬ ಅಭಿಯಾನಕ್ಕೆ ಈಗಾಗಲೇ 4,500 ಲಕ್ಷ …

Read More »

ಈ ಬಾರಿ ಹೊಸ ವರ್ಷಾಚರಣೆಗೆ ಸಂಪೂರ್ಣ ನಿರ್ಬಂಧ: ಬಸವರಾಜ್ ಬೊಮ್ಮಾಯಿ

ಬೆಂಗಳೂರು,ಡಿ.27- ರಾಜ್ಯದಲ್ಲಿ ಬ್ರಿಟನ್ ಮಾದರಿಯ ರೂಪಾಂತರಗೊಂಡ ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಈ ಬಾರಿ ಹೊಸ ವರ್ಷಾಚರಣೆಗೆ ಸಂಪೂರ್ಣ ನಿರ್ಬಂಧ ಹಾಕಿದೆ. ಕೋವಿಡ್ ರೂಪಾಂತರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ವರ್ಷಾಚರಣೆ ಸಂಬಂಧ ಸರ್ಕಾರದ ವತಿಯಿಂದ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದೇವೆ. ಸಾರ್ವಜನಿಕರು ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರಕ್ಕೆ ಸಹಕಾರ ನೀಡಬೇಕೆಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದರು. ವಿಧಾನಸೌಧದ ಪೂರ್ವ ದ್ವಾರದ …

Read More »

ಐದು ಕಾರುಗಳ ನಡುವೆ ಸರಣಿ ಅಪಘಾತ,. ಎರಡು ಕಾರು ಪಲ್ಟಿ

ಬೆಂಗಳೂರು: ಏರ್​ಪೋರ್ಟ್ ರಸ್ತೆಯ ಬ್ಯಾಟರಾಯನಪುರ ಫ್ಲೈಓವರ್ ಬಳಿ ಐದು ಕಾರುಗಳ ನಡುವೆ ಸರಣಿ ಅಪಘಾತವಾಗಿದೆ. ಎರಡು ಕಾರು ಪಲ್ಟಿಯಾಗಿದ್ದು. ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರರ ಜಾಲಿ ರೈಡ್ ನಿಂದಾಗಿ ಈ ಸರಣಿ ಅಪಘಾತ ಸಂಭವಿಸಿದೆ. ನಂದಿಬೆಟ್ಟಕ್ಕೆ ಜಾಲಿ ರೈಡ್ ಹೋಗುತ್ತಿದ್ದ ಬೈಕ್ ಸವಾರರ ಟೀಂ ವೇಗವಾಗಿ ಬಂದು ಕಾರ್ ಓವರ್ ಟೆಕ್ ಮಾಡಿದ್ದಾರೆ. ಗಾಬರಿಯಾದ ಕಾರ್ ಚಾಲಕ ಎದುರು ರಸ್ತೆಗೆ ನುಗ್ಗಿದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. …

Read More »

ವಿಷ್ಣುವರ್ಧನ್ ಪ್ರತಿಮೆ ಧ್ವಂಸಕರಿಗೆ ಸುದೀಪ್ ಎಚ್ಚರಿಕೆ

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ ಪ್ರತಿಮೆ ಧ್ವಂಸಕರಿಗೆ ಅಭಿನಯ ಚಕ್ರವರ್ತಿ ರನ್ನ ಸುದೀಪ್ ಖಡಕ್ ಎಚ್ಚರಿಕೆ ನೀಡಿದ್ದು, ನಿಮ್ಮ ಹೆಸರು ತಿಳಿಯುವ ಮೊದಲು ದೇಶ ಬಿಟ್ಟು ಹೋಗಿ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಎಚ್ಚರಿಕೆ ನೀಡಿರುವ ವೀಡಿಯೋ ಶೇರ್ ಮಾಡಿಕೊಂಡಿದ್ದಾರೆ. ವಿಷ್ಣು ಸರ್ ಪ್ರತಿಮೆ ಧ್ವಂಸಗೊಳಿಸಿರುವ ವಿಷಯ ನನಗೆ ತಡವಾಗಿ ತಿಳಿಯಿತು. ವಿಷ್ಣು ಸರ್ ಅಭಿಮಾನಿಯಾಗಿ ಮೂರ್ತಿಯನ್ನ ಒಡೆದು ಹಾಕಿರೋರಿಗೆ ಕೆಲ ವಿಷಯಗಳನ್ನ ಹೇಳಲು ಇಷ್ಟಪಡುತ್ತೇನೆ. …

Read More »

ಹೊಸ ವರ್ಷಕ್ಕೆ ಪ್ರತ್ಯೇಕವಾಗಿ ಮಾರ್ಗಸೂಚಿ 30 ಮತ್ತು 31 ರಂದು ಟಫ್ ರೂಲ್ಸ್ ಇರಲಿದೆ

ಬೆಂಗಳೂರು: ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಮಾರ್ಗಸೂಚಿ ಬರುವುದು ಫಿಕ್ಸ್ ಆಗಿದೆ. ಡಿಸೆಂಬರ್ 30 ಮತ್ತು 31ಕ್ಕೆ ಕಟ್ಟು ನಿಟ್ಟಿನ ಕ್ರಮ ಇರುತ್ತೆ ಅಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಬ್ರಿಟನ್‍ನಿಂದ ಬೆಂಗಳೂರಿಗೆ ಬಂದವರ ಪೈಕಿ 150 ಜನ ನಾಪತ್ತೆಯಾಗಿರೋದು ಒಂದುಕಡೆ ಆತಂಕ ಹೆಚ್ಚಿಸಿದೆ. ಇದರ ಮಧ್ಯೆಯೇ ಹೊಸ ವರ್ಷಕ್ಕೆ ಬೆಂಗಳೂರು ಸಜ್ಜಾಗ್ತಿದೆ. ಈಗ ಬ್ರಿಟನ್ ಕೊರೊನಾ ಹರಡುವುದನ್ನು ನಿಯಂತ್ರಣ ಮಾಡುವ ಸಲುವಾಗಿ ಬೆಂಗಳೂರಿನಲ್ಲಿ 2 …

Read More »

ಮತದಾರರನ್ನು ಸೆಳೆಯಲು ಕೆಲವು ಪ್ರಮುಖ ರಾಜಕೀಯ ನಾಯಕರ ಭಾವಚಿತ್ರ

ಬೆಂಗಳೂರು,ಡಿ.27- ಮತದಾರರನ್ನು ಸೆಳೆಯಲು ಕೆಲವು ಪ್ರಮುಖ ರಾಜಕೀಯ ನಾಯಕರ ಭಾವಚಿತ್ರ ಮತ್ತು ಪ್ರಮುಖ ರಾಜಕೀಯ ಪಕ್ಷಗಳ ಗುರುತನ್ನು ಬಳಸಿರುವುದು ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಸಮಸ್ಯೆ ತಂದೊಡ್ಡಿದೆ. ಈ ಸಂಬಂಧ ಹಲವು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿದೆ ಎಂದು ರಾಜ್ಯ ಚುನಾವಣಾ ಆಯೋಗ ದಾಖಲಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಭ್ಯರ್ಥಿಗಳು ಎಲ್ಲಾ ಪಕ್ಷಗಳೊಂದಿಗೆ ಗುರುತಿಸಿಕೊಂಡಂತೆ ಕಂಡುಬರುತ್ತಿದೆ. ತಮ್ಮ ಗೆಲುವಿಗಾಗಿ ಮತದಾರರನ್ನು ಸೆಳೆಯಲು ಪ್ರಧಾನ ಮಂತ್ರಿ ನರೇಂದ್ರ ಮೋದಿ, …

Read More »