ಬೆಂಗಳೂರು : ‘ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ. ಕೊರೋನಾ ಸಮಯದಲ್ಲಿ ಸರ್ಕಾರವೇ ಲಾಕ್ ಡೌನ್, ಸೀಲ್ ಡೌನ್ ಮಾಡಿ ಈಗ ಜನ ಸಾಮಾನ್ಯರ ಮೇಲೆ ತೆರಿಗೆ ಹೊರೆ ಹಾಕುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕೊರೋನಾ ಮತ್ತು ಆರ್ಥಿಕ ಸಂಕಷ್ಟ ಸಂದರ್ಭದಲ್ಲಿ ರಾಜ್ಯ ಸರಕಾರವು ಜನರ ಮೇಲೆ ನಾನಾ ತೆರಿಗೆ ವಿಧಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ …
Read More »4 ಕೆಜಿ ಚಿನ್ನವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ): 2.25 ಕೋಟಿ ರೂ. ಮೊತ್ತದ 4 ಕೆಜಿ ಚಿನ್ನವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ, ದೆಹಲಿ, ಹರಿಯಾಣಗಳಿಂದ ಕರ್ನಾಟಕಕ್ಕೆ ಬಂದು ಸರಣಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ ಸಿಸಿಬಿ ಪೊಲೀಸರು 4 ಕೆ.ಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಫಯೂಮ್ ಹಾಗೂ ಮುರಸಲೀಂ ಮೊಹಮದ್ ಬಂಧಿತ ಆರೋಪಿಗಳಾಗಿದ್ದಾರೆ. ಉತ್ತರ ಪ್ರದೇಶ, ದೆಹಲಿ, ಹರಿಯಾಣ …
Read More »ಅರುಣ್ ಸಿಂಗ್ ಅವರನ್ನು ಶನಿವಾರ ಭೇಟಿಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ತ್ವರಿತವಾಗಿ ಅನುಮತಿ ನೀಡುವಂತೆ ಮನವಿ
ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಶನಿವಾರ ಭೇಟಿಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ತ್ವರಿತವಾಗಿ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ನಡೆಯುವ ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳ ಸಭೆ ಮತ್ತು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ಅರುಣ್ ಸಿಂಗ್ ಅವರನ್ನು ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿಮಾಡಿದ ಯಡಿಯೂರಪ್ಪ, ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಮತ್ತು …
Read More »ರಾಜ್ಯ ಹೈಕೋರ್ಟ್ʼನಿಂದ ಮಹತ್ವದ ಆದೇಶ: ʼಥರ್ಡ್ ಪಾರ್ಟಿ ವಿಮೆʼಯಿಂದ ಅಪಘಾತಕ್ಕೀಡಾದವ್ರಿಗೆ ʼಪರಿಹಾರ ಸಿಗಲ್ಲʼ
ಬೆಂಗಳೂರು: ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ಆದೇಶ ಹೊರಬಿದ್ದಿದ್ದು, ಥರ್ಡ್ ಪಾರ್ಟಿ ವಿಮೆಯಿಂದ ಅಪಘಾತಕ್ಕೀಡಾದವರಿಗೆ ಪರಿಹಾರ ನೀಡಲಾಗುವುದು. ಆದ್ರೆ, ಅಪಘಾತ ಮಾಡಿದ ವಾಹನದ ಹಿಂಬದಿ ಸವಾರ ಮತ್ತು ಸಹ ಪ್ರಯಾಣಿಕರಿಗೆ ಥರ್ಡ್ ಪಾರ್ಟಿ ವಿಮೆ ಪರಿಹಾರ ಸಿಗುವುದಿಲ್ಲ. ಆದ್ರೆ, ಪ್ರತ್ಯೇಕ ವಿಮೆ ಮೊತ್ತ ಭರಿಸಿದ್ರೆ ಮಾತ್ರ ಹಿಂಬದಿ ಸವಾರ, ಸಹ ಪ್ರಯಾಣಿಕರಿಗೂ ಪರಿಹಾರ ಅನ್ವಯವಾಗುತ್ತೆ. ಇಲ್ಲವಾದರೆ ವಿಮೆ ಕಂಪನಿ ಪರಿಹಾರ ನೀಡಬೇಕಿಲ್ಲ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಕಾನೂನಿನಡಿ …
Read More »ಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷಾ ಟೆಂಟೆಟಿವ್ ವೇಳಾಪಟ್ಟಿ
ಬೆಂಗಳೂರು – ರಾಜ್ಯದಲ್ಲಿ 2020-2021ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸಲು ರಾಜ್ಯಸರಕಾರ ಸಿದ್ಧತೆ ಮಾಡುತ್ತಿದೆ. ಮಂಗಳವಾರ ಅಥವಾ ಬುಧವಾರ ಈ ಎರಡೂ ಪರಿಕ್ಷೆಗಳ ಟೆಂಟೆಟಿವ್ ವೇಳಾಪಟ್ಟಿ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಮಾಹಿತಿ ನೀಡಿದ್ದಾರೆ. ಮಕ್ಕಳಿಗೆ ಓದುವುದಕ್ಕೆ ಸಾಕಷ್ಟು ಸಮಯಾವಕಾಶ ಇರುವಂತೆ ವೇಳಾಪಟ್ಟಿ ಪ್ರಕಟಿಸಲಾಗುವುದು. ಈಗ ಪ್ರಕಟಿಸಲಾಗುವ ವೇಳಾಪಟ್ಟಿಯೇ ಅಂತಿಮವೂ ಆಗಬಹುದು ಅಥವಾ ಅಲ್ಪಸ್ವಲ್ಪ …
Read More »ಸಿಎಂ B.S.Y.ಗೆ ಸ್ವತಃ ತಮ್ಮ ಕುರ್ಚಿ ಮೇಲೆ ಅನುಮಾನ – ಡಿಕೆಶಿ
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಇನ್ನೂ ಎರಡು ವರ್ಷ ನಾನೇ ಮುಂದುವರೆಯುವೆ ಎಂದು ಪದೇಪದೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳುತ್ತಲೇ ಇದ್ದು, ಈ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕರೇ ಬೇರೆ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಮಗೆ ತಾವೇ ಪ್ರಮಾಣ ಪತ್ರ ಕೊಟ್ಟುಕೊಳ್ಳುವ ಸ್ಥಿತಿ ಎದುರಾಗಿದೆ ಎಂದರೆ ಎಲ್ಲೋ ಏನೋ ಎಡವಟ್ಟಾಗಿದ್ದು, ಅಪಾಯ ಎದುರಾಗಿದೆ ಎಂಬ ಅನುಮಾನ ಮೂಡುತ್ತದೆ. ಸಿಎಂ ಆದವರು ನಾನೇ ಇನ್ನೂ ೨ …
Read More »ಹೊಸ ವರ್ಷದ ದಿನದಂದು ಬೆಂಗಳೂರಿನಲ್ಲಿ ಕೆಎಂಎಫ್ ಹಿರಿಯ ಅಧಿಕಾರಿಗಳ ಸಭೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಸರ್ಕಾರದಿಂದ ಕೆಎಂಎಫ್‍ಗೆ 32 ಎಕರೆ ಜಮೀನನ್ನು ನೀಡುತ್ತಿದ್ದು, ಇದರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಜಮೀನಿನಲ್ಲಿ ಅತ್ಯಾಧುನಿಕ ಉತ್ಪನ್ನಗಳ ಮತ್ತು ಪ್ಯಾಕಿಂಗ್ ಸಾಮಗ್ರಿಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸಲು ಉದ್ಧೇಶಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕೆಎಂಎಫ್‍ಗೆ ಜಾಗೆ ನೀಡುವ ಸಂಬಂಧ …
Read More »ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭ
ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭವಾಗಲಿದ್ದು, ಬೆಳಗಾವಿ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಲಸಿಕೆ ತಾಲೀನು ಆರಂಭವಾಗಲಿದೆ. ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಬೆಳಗಾವಿ, ಬೆಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಕಲಬುರ್ಗಿಯಲ್ಲಿ ನಾಳೆಯಿಂದ ಕೊರೊನಾ ಲಸಿಗೆ ಡ್ರೈ ರನ್ ಆರಂಭವಾಗಲಿದೆ. ಬೆಂಗಳೂರಿನಲ್ಲಿ ವೀದ್ಯಾಪೀಠ, ಕಾಮಾಕ್ಷಿಪಾಳ್ಯ, ಆನೇಕಲ್ ನಲ್ಲಿ ಡ್ರೈ ರನ್ ಆರಂಭವಾಗಲಿದೆ ಎಂದರು. ಈ ನಡುವೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ಕೂಡ …
Read More »Bus Pass – ಹಿಂದಿನ ವರ್ಷದ ಬಸ್ ಪಾಸ್ನಲ್ಲೇ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ
ಬೆಂಗಳೂರು(ಜ. 01): ಇಂದಿನಿಂದ ಎಸ್ಸೆಸ್ಸೆಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ತರಗತಿಗಳು ಆರಂಭವಾಗುತ್ತಿವೆ. ಬಹಳಷ್ಟು ವಿದ್ಯಾರ್ಥಿಗಳು ಬಸ್ಸುಗಳನ್ನೇ ಅವಲಂಬಿಸಿದ್ದು ಹೊಸ ವರ್ಷದಲ್ಲಿ ಮಕ್ಕಳಿಗೆ ಪಾಸ್ ಗೊಂದಲ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಮೂಲಕವೇ ಸದ್ಯ ಓಡಾಡಲು ಅವಕಾಶ ಮಾಡಿಕೊಟ್ಟಿದೆ. 2019-20ನೇ ಸಾಲಿನಲ್ಲಿ ವಿತರಿಸಲಾಗಿದ್ದ ಸ್ವಾರ್ಟ್ಕಾರ್ಡ್ ಬಸ್ ಪಾಸ್ನಲ್ಲೇ ಈ ಎರಡು ತರಗತಿಯ ಮಕ್ಕಳು ಉಚಿತವಾಗಿ ಬಿಎಂಟಿಸಿ ಬಸ್ನಲ್ಲಿ …
Read More »ಹೊಸ ವರ್ಷದ ಮೊದಲ ಚಿತ್ರವಾಗಿ ತೆರೆಗಪ್ಪಳಿಸಲಿದೆ ‘ರಾಜತಂತ್ರ’
ಹೊಸ ವರ್ಷದ ಮೊದಲ ಚಿತ್ರವಾಗಿ ರಾಜತಂತ್ರ ಬೆಳ್ಳಿ ಪರದೆ ಮೇಲೆ ರಾರಾಜಿಸಲಿದೆ. ಕೊರೊನಾ ಹಾವಳಿಯಿಂದ ಇಡೀ ಚಿತ್ರೋದ್ಯಮವೇ ಕಂಗಾಲಾಗಿದ್ದು , ಈಗಷ್ಟೆ ಕೆಲವು ಹೊಸಬರ ಚಿತ್ರಗಳು ಬಿಡುಗಡೆಗೊಳ್ಳುತ್ತಿವೆ. ಸ್ಟಾರ್ ನಟರಗಳ ಚಿತ್ರ ನಿರೀಕ್ಷೆಯಲ್ಲಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೆ ಹುಮ್ಮಸ್ಸಿನೊಂದಿಗೆ ರಾಜ್ಯ ಪ್ರಶಸ್ತಿ ವಿಜೇತ ರಾಘವೇಂದ್ರ ರಾಜಕುಮಾರ್ ನಟಿಸಿರುವ ರಾಜತಂತ್ರ ಸಿನಿಮಾ ಇದೀಗ ರಾಜ್ಯಾದ್ಯಂತ ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆP್ಸï ಗಳಲ್ಲಿ ಬಿಡುಗಡೆಗೊಳ್ಳುತ್ತಿದೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು …
Read More »
Laxmi News 24×7