Breaking News
Home / ಜಿಲ್ಲೆ / ಬೆಂಗಳೂರು (page 24)

ಬೆಂಗಳೂರು

ಕಿಕ್‌ಬ್ಯಾಕ್‌ ಆರೋಪ: ಬಿಎಸ್‌ವೈ ವಿರುದ್ಧದ ಪ್ರಕರಣ ಮರು ವಿಚಾರಣೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಕೋಟ್ಯಂತರ ರೂಪಾಯಿ “ಕಿಕ್‌ಬ್ಯಾಕ್‌’ ಪಡೆದುಕೊಂಡಿದ್ದಾರೆ ಎಂಬ ಆರೋಪ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತವರ ಕುಟುಂಬದ ಸದಸ್ಯರು ಹಾಗೂ ಕೆಲ ಆಪ್ತರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣದ ಮರು ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್‌ ಆದೇಶಿಸಿದೆ.   ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ಮುಖ್ಯಮಂತ್ರಿಯಾಗಿದ್ದ ವೇಳೆ ಯಡಿಯೂರಪ್ಪ ಮತ್ತು ಪುತ್ರ ಬಿ.ವೈ. ವಿಜಯೇಂದ್ರ ಸಹಿತ ಅವರ ಕುಟುಂಬಸ್ಥರು ರಾಮಲಿಂಗಂ ಕನ್‌ಸ್ಟ್ರಕ್ಷನ್‌ …

Read More »

ಬಿಎಸ್​​​ವೈ ವಿರುದ್ಧದ ಭ್ರಷ್ಟಾಚಾರ ಕೇಸ್​.. ವಿಚಾರಣೆ ನಡೆಸುವಂತೆ ವಿಶೇಷ ಕೋರ್ಟ್​ಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಸರ್ಕಾರಿ ಗುತ್ತಿಗೆ ನೀಡಲು ಲಂಚ ಪಡೆದ ಆರೋಪದ ಮೇಲೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಖಾಸಗಿ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್​, ವಿಶೇಷ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆ ನಡೆಸುವಂತೆ ಸೂಚನೆ ನೀಡಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಅಂದಿನ ರಾಜ್ಯಪಾಲರು ಒಪ್ಪಿಗೆ ನೀಡಲು ನಿರಾಕರಿಸಿದ್ದರಿಂದ ಇಲ್ಲಿನ ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. …

Read More »

ಉಮೇಶ್ ಕತ್ತಿ ನಿಧನ : ಹುಕ್ಕೇರಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯೋದು ಡೌಟ್..?

ಬೆಂಗಳೂರು,ಸೆ.7-ಸಚಿವ ಉಮೇಶ್ ಕತ್ತಿ ನಿಧನದಿಂದಾಗಿ ತೆರವಾಗಿರುವ ಹುಕ್ಕೇರಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಸಾಮಾನ್ಯವಾಗಿ ತೆರವಾಗಿರುವ ಲೋಕಸಭೆ, ವಿಧಾನಸಭೆ ಸೇರಿದಂತೆ ಯಾವುದೇ ಕ್ಷೇತ್ರಗಳಿಗೆ ನಿಯಮಾವಳಿ ಪ್ರಕಾರ ಆರು ತಿಂಗಳೊಳಗೆ ಮರು ಚುನಾವಣೆ ನಡೆಯಬೇಕು. ಆದರೆ ಕರ್ನಾಟಕದ ವಿಧಾನಸಭೆ ಚುನಾವಣೆ 2023ರ ಮೇ ತಿಂಗಳ ಮಧ್ಯ ಭಾಗದಲ್ಲಿ ನಡೆಯುವ ಸಾಧ್ಯತೆ ಇರುವುದರಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಗಳು ಇಲ್ಲ …

Read More »

2022 ಇಂದು ನೀಟ್ ಪರೀಕ್ಷೆ ಫಲಿತಾಂಶ,

ಬೆಂಗಳೂರು: ಬುಧವಾರ(ಸೆ.7) ಬಹುನಿರೀಕ್ಷಿತ ರಾಷ್ಟ್ರೀಯ ಅರ್ಹತಾ & ಪ್ರವೇಶ ಪರೀಕ್ಷೆ(NEET UG 2022) ಫಲಿತಾಂಶ ಹೊರ ಬೀಳಲಿದೆ. ಜುಲೈ 17ರಂದು ದೇಶದ 546 ನಗರಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ನಡೆದಿದ್ದ ನೀಟ್ ಪರೀಕ್ಷೆ ಫಲಿತಾಂಶ ಇಂದು ಹೊರ ಬೀಳಲಿದೆ. NTA ಅಧಿಕೃತ ವೆಬ್‌ಸೈಟ್‌ neet.nta.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ಇಲ್ಲಿ ಲಾಗಿನ್ ಆಗಿ ತಮ್ಮ ರಿಸಲ್ಟ್ ಪರಿಶೀಲಿಸಬಹುದು. ಈ ವರ್ಷ ಒಟ್ಟು 18 ಲಕ್ಷ ವಿದ್ಯಾರ್ಥಿಗಳು …

Read More »

ಹಿಂದಿ ಹೇರಿಕೆಗೆ ಉತ್ತರ: ಕರ್ನಾಟಕದ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ!

ಬೆಂಗಳೂರು, ಸೆಪ್ಟೆಂಬರ್ 6: ಕರ್ನಾಟಕದಲ್ಲಿ ನಡೆಯುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡವೇ ಕಡ್ಡಾಯ ಭಾಷೆ ಆಗಿರಬೇಕು ಎಂದು ರಾಜ್ಯ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ. ಕನ್ನಡವನ್ನು ಕರ್ನಾಟಕದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಹಾಗೂ ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನ ಅನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.     ಕರ್ನಾಟಕದ ಆಡಳಿತ ಭಾಷೆಯಾಗಿ ಕನ್ನಡವೇ ಇರಬೇಕು ಎಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ …

Read More »

ಪ್ರೌಢಶಾಲಾ ಸಹ ಶಿಕ್ಷಕರ ಅಕ್ರಮ ನೇಮಕ: 11 ಶಿಕ್ಷಕರ ಬಂಧನ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಪ್ರೌಢ ಶಾಲೆಗಳ ಗ್ರೇಡ್‌ 2 ಸಹ ಶಿಕ್ಷಕರು ಮತ್ತು ಗ್ರೇಡ್‌-1ರ ದೈಹಿಕ ಶಿಕ್ಷಕರ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತುಮಕೂರು ಮತ್ತು ವಿಜಯಪುರ ಜಿಲ್ಲೆಯಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ 11 ಮಂದಿ ಶಾಲಾ ಶಿಕ್ಷಕರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.   ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನ ಕಣಿವೆ ಗ್ರಾಮದ ಶಾಲೆಯ ಶಮೀನಾಜ್‌ ಬಾನು (34), ಕುಣಿಗಲ್‌ ತಾಲೂಕಿನ ಕೊಡವತ್ತಿ ಗ್ರಾಮದ …

Read More »

ಶಿಕ್ಷಕರ ಹಾಜರಾತಿಗೆ ಬಯೋಮೆಟ್ರಿಕ್‌ ಕಡ್ಡಾಯ; 15 ನಿಮಿಷ ಬೇಗ ಶಾಲೆಗೆ ಬರುವಂತೆ ಸೂಚನೆ

ಬೆಂಗಳೂರು: ನಿಗದಿತ ಸಮಯಕ್ಕೆ ಸರಿಯಾಗಿ ಶಾಲೆಗೆ ಹಾಜರಾಗದೆ ಕಳ್ಳಾಟವಾಡುವ ಶಿಕ್ಷಕರಿಗೆ ಬಿಸಿ ಮುಟ್ಟಿಸಿರುವ ಶಿಕ್ಷಣ ಇಲಾಖೆ, ಶಾಲೆ ಆರಂಭದ ಸಮಯಕ್ಕಿಂತ 15 ನಿಮಿಷ ಬೇಗ ಬರಬೇಕು ಮತ್ತು ಕಡ್ಡಾಯವಾಗಿ ಬಯೋಮೆಟ್ರಿಕ್‌ ಹಾಜರಾಗಿ ಹಾಕುವಂತೆ ಸೂಚಿಸಿದೆ.   ಶಾಲೆಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ವಿಚಾರಗಳಲ್ಲಿ ಶಿಕ್ಷಕರ ಅಶಿಸ್ತಿನಿಂದ ಮಕ್ಕಳ ಕಲಿಕಾ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿವೆ. ಆದ್ದರಿಂದ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು …

Read More »

ಉಮೇಶ್ ಕತ್ತಿ ನಿಧನದಿಂದ ತೀವ್ರ ಆಘಾತವಾಗಿದೆ :H.D.K.

ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.   ಉಮೇಶ್ ಕತ್ತಿ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ. ಜನತಾ ಪರಿವಾರದ ಹಿರಿಯರಾಗಿದ್ದ ಕತ್ತಿ ಅವರು ಸ್ನೇಹಜೀವಿ ಆಗಿದ್ದರಲ್ಲದೆ, ತಮ್ಮ ನೇರ …

Read More »

ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲಿ ಸಂಜೆ ಉಮೇಶ್‌ ಕತ್ತಿ ಅಂತ್ಯಸಂಸ್ಕಾರ

ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲಿ ಸಂಜೆ ಉಮೇಶ್‌ ಕತ್ತಿ ಅಂತ್ಯಸಂಸ್ಕಾರ ಬೆಂಗಳೂರು: ಕಳೆದ ರಾತ್ರಿ ಬೆಂಗಳೂರಿನಲ್ಲಿ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ಮೃತದೇಹದ ಅಂತಿಮ ಸಂಸ್ಕಾರ ಇಂದು ಸಂಜೆ ಬೆಳಗಾವಿಯ ಬೆಲ್ಲದ ಬಾಗೇವಾಡಿಯಲ್ಲಿ ನೆರವೇರಲಿದೆ. ಬೆಳಗಾವಿಯ ಶಿವಬಸವ ನಗರದಲ್ಲಿರುವ ಸಚಿವರ ಸ್ವಗೃಹ ಮತ್ತು ಬೆಳಗ್ಗೆ 10.30ಕ್ಕೆ ಸಂಕೇಶ್ವರದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮಧ್ಯಾಹ್ನ 12ಕ್ಕೆ ಸ್ವಗ್ರಾಮ ಬೆಲ್ಲದ ಬಾಗೇವಾಡಿಗೆ ಮೃತದೇಹವನ್ನು ರವಾನಿಸಲಿದ್ದು, …

Read More »

 ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವೆ.: ಸಿಎಂ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವೆ. ಅಕ್ಟೋಬರ್​ನಲ್ಲಿ ನೂತನ ವೇತನ ಆಯೋಗ ರಚಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಘೋಷಿಸಿದರು. ವಿಧಾನಸೌಧ ಬ್ಯಾಂಕ್ವೆಟ್ ಹಾಲ್​ನಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನ ಉದ್ಘಾಟಿಸಿದ ಬಳಿಕ ಸರ್ವೋತ್ತಮ ಸೇವಾ‌ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ, ವೇತನ ಪರಿಷ್ಕರಣೆಗೆ ಸಂಬಂಧಿಸಿದ ಶಿಫಾರಸು ಹಾಗೂ ವರದಿ ಸಲ್ಲಿಸಲು ಈ ಆಯೋಗ ರಚಿಸಲಿದ್ದು, ನೌಕರರ ಇನ್ನುಳಿದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದರು.   …

Read More »