Breaking News

ಬೆಂಗಳೂರು

ಜನವರಿ 1ರಿಂದ 10-12ನೇ ತರಗತಿಗಳ ಆರಂಭ ನಿಶ್ಚಿತ

ಬೆಂಗಳೂರು,ಡಿ.23- ಈಗಾಗಲೇ ನಿರ್ಧಾರವಾಗಿರುವಂತೆ ಜ.1ರಿಂದಲೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ರಾಜ್ಯಾದ್ಯಂತ ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.  ಶಾಲಾಕಾಲೇಜುಗಳನ್ನು ತೆರೆಯುವ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಒ)ಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಆರಂಭಕ್ಕೂ ಮುನ್ನ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ಕೊರೊನಾ ರೂಪಾಂತರ ವೈರಸ್ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಹಾಗೂ ತಜ್ಞರ ಜೊತೆ ಚರ್ಚೆ ಮಾಡಲಾಗಿದೆ. ಹೀಗಾಗಿ ಈಗಾಗಲೇ ನಿಗದಿಯಾಗಿರುವಂತೆ ಜನವರಿ …

Read More »

ಅನ್ನದಾತರಿಗೆ ಸ್ಯಾಂಡಲ್‍ವುಡ್ ಕಲಾವಿದರ ಸಲಾಂ

ಬೆಂಗಳೂರು, ಡಿ. 23- ನೇಗಿಲು ಹಿಡಿದ ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ…. ಅನ್ನ ನೀಡುವರೇ ನಮ್ಮೋರು…. ನಮ್ಮಮ್ಮ ನಮ್ಮಮ್ಮ ಭೂಮಿ ತಾಯಮ್ಮ…. ಹೀಗೆ ರೈತನ ಹಾಗೂ ಅವನ ಬೆವರಿನ ಬೆಲೆ ತಿಳಿಸುವ ಅನೇಕ ಗೀತೆಗಳು ಕನ್ನಡ ಚಿತ್ರಗಳಲ್ಲಿವೆ, ಅದೇ ರೀತಿ ನಮ್ಮ ಸ್ಯಾಂಡಲ್‍ವುಡ್‍ನ ಡಾ.ರಾಜ್‍ಕುಮಾರ್, ಡಾ.ವಿಷ್ಣುವರ್ಧನ್, ಡಾ.ಅಂಬರೀಷ್ ಸೇರಿದಂತೆ ಹಲವು ನಟರು ಕೂಡ ರೈತರ ಪಾತ್ರಗಳಲ್ಲಿ ನಟಿಸುವ ಮೂಲಕ ಅನ್ನದಾತನ ಹಿರಿಮೆಯನ್ನು ಸಾರಿದ್ದಾರೆ. ಇಂದು ರಾಷ್ಟ್ರೀಯ ರೈತ ದಿನಾಚರಣೆ, …

Read More »

ಜನವರಿ 1ರಿಂದ ಶಾಲೆಗಳು ಪುನರಾರಂಭವಾಗಲಿದೆ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರ ಆತಂಕದ ಬೆನ್ನಲ್ಲೇ ನೈಟ್ ಕರ್ಫ್ಯೂ ಕೂಡ ಜಾರಿಯಾಗಿದೆ. ಈ ನಡುವೆಯೇ ನಿಗದಿಯಂತೆ ಜನವರಿ 1ರಿಂದ ಶಾಲೆಗಳು ಪುನರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಇಂದು ಸಿಇಒ, ಡಿಡಿಪಿಐ, ಡಿಡಿಪಿಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದಲ್ಲಿ ಜನವರಿ 1ರಿಂದ ಶಾಲೆಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿದೆ. ಕೊರೊನಾ ರೂಪಾಂತರ ವೈರಸ್ ಇದ್ದರೂ ಆತಂಕಪಡುವ ಅಗತ್ಯವಿಲ್ಲ ಎಂದು …

Read More »

ಶಾಲೆ ಆರಂಭದ ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು : ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ದತೆಗಳನ್ನು ಕೈಗೊಳ್ಳುತ್ತಿದೆ. ಜನವರಿಯಿಂದಲೇ ಶಾಲೆ ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮ ಅಂತಿಮಗೊಳಿಸಲಾಗುತ್ತದೆ. ಕನಿಷ್ಠ ಕಲಿಕೆಗೆ ಒತ್ತು ನೀಡಲಾಗುತ್ತದೆಯಲ್ಲದೇ, ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ …

Read More »

ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ

ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಇಂದಿನಿಂದ 9 ದಿನಗಳವರೆಗೆ ಅಂದರೆ ಜನೆವರಿ 2 ವರೆಗೆ ಈ ಆದೇಶ ಅನ್ವಯವಾಗಲಿದೆ. ಇನ್ನು ಹೊರ ದೇಶದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಗೆ ಒಳಪಡಬೇಕು. ರಾತ್ರಿ ಹೊತ್ತು …

Read More »

ಸಿದ್ದರಾಮಯ್ಯನವರ ಚೇಲಾ ಎಂದ ಶ್ರೀನಿವಾಸ್ ಪ್ರಸಾದ್ ಸ್ನೇಹದ ಮಹತ್ವದ ವ್ಯತ್ಯಾಸ ಗೊತ್ತಿಲ್ಲ”

ಮಾನ್ಯ ಸಂಸದರಾದ ಶ್ರೀನಿವಾಸ್ ಪ್ರಸಾದ್ ಅವರಿಗೆ ಅತ್ಯಂತ ಗೌರವಪೂರ್ವಕವಾಗಿ ನೀಡಿದ ಪ್ರತಿಕ್ರಿಯೆಗೆ ಎದುರಾಗಿ ಶ್ರೀನಿವಾಸ್ ಪ್ರಸಾದ್ ಅವರು ಅತ್ಯಂತ ಕೀಳು ಮಟ್ಟದಲ್ಲಿ ಪ್ರತಿಕ್ರಿಯಿಸಿದ್ದು ನನ್ನನ್ನು ಸಿದ್ದರಾಮಯ್ಯನವರ ಚೇಲಾ ಎಂದು ಕರೆದಿದ್ದು ಒಂದು ಜಿಲ್ಲಾ ಪಂಚಾಯತ್ ಸ್ಥಾನವನ್ನೂ ಸಹ ಗೆಲ್ಲಲಾಗದವ ಎಂಬ ಮಾತನ್ನು ಆಡಿರುತ್ತಾರೆ. ಸ್ನೇಹದ ಮಹತ್ವದ ವ್ಯತ್ಯಾಸ ಗೊತ್ತಿಲ್ಲದೇ ಚೇಲಾ ಎಂಬ ಪದವನ್ನು :ಬಳಸಿರುವ ಸಂಸದರು ತಮ್ಮ ಸ್ಥಾನದ ಘನತೆಯನ್ನು ಅರಿತು ಮಾತನಾಡಬೇಕು. ಇಲ್ಲವಾದರೆ ಮುತ್ಸದ್ಧಿತನಕ್ಕೂ ಅವಿವೇಕತನಕ್ಕೂ ಅಂತಹ ವ್ಯತ್ಯಾಸ …

Read More »

ಕ್ಯಾನ್ಸರ್ ಪೀಡಿತ ಮಕ್ಕಳ ಸೇವೆಯಲ್ಲಿ ಲಯನ್ಸ್ ಕ್ಲಬ್.

ಅಂತರರಾಷ್ಟ್ರೀಯ ಮಟ್ಟದ ಸೇವಾ ಸಂಸ್ಥೆಯಾದ ಲಯನ್ಸ್ ಕ್ಲಬ್ ಸದಾ ಸಮಾಜದ ಪಿಡುಗುಗಳ ವಿರುದ್ಧ ಹೋರಾಡುತ್ತಾ ಸ್ವಸ್ಥ ಸಮಾಜಕ್ಕಾಗಿ ಪರಿಶ್ರಮಿಸುತ್ತಿರುವ ಸಂಸ್ಥೆ. ಲಯನ್ಸ್ ಸಂಸ್ಥೆ ಜಿಲ್ಲೆ 317F ವತಿಯಿಂದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ, ಕ್ಯಾನ್ಸರ್ ಪೀಡಿತರಾಗಿ ತಮ್ಮ ಜೀವನದ ಕೊನೆಯ ಕ್ಷಣಗಳನ್ನು ಕಳೆಯುತ್ತಿರುವಂತಹ ಮಕ್ಕಳ ಮನೋರಂಜನೆಗಾಗಿ ಪ್ರತಿವರ್ಷದಂತೆ ಈ ವರ್ಷವೂ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಶ್ರೀಮತಿ ಶೋಭಾ ಶ್ರೀನಿವಾಸ್ ರವರು ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಲಯನ್ಸ್ ಕ್ಲಬ್ ನ ಗೌರ್ನರ್ ದೀಪಕ್ ಸುಮನ್ …

Read More »

ನಾನು ಫೋಟೋಶೂಟ್ ಮಾಡಿಸಿದ್ದೆ ಅಷ್ಟೆ. ಆ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತೇನೆ. ಸದ್ಯ ನಾನು ಬೆಂಗಳೂರಿನಲ್ಲಿಯೇ ಇದ್ದೇನೆ.

ಬೆಂಗಳೂರು: ನಾನು ಬೆಂಗಳೂರಲ್ಲಿಯೇ ಇದ್ದೀನಿ. ಆರಾಮಾಗಿದ್ದೀನಿ ಎಂದು ನಟಿ ಹರ್ಷಿಕಾ ಪೂಣಚ್ಚ ಸ್ಪಷ್ಟಪಡಿಸಿದ್ದಾರೆ. ವಿಡಿಯೋ ಮೂಲಕ ಲಂಡನ್ ಪ್ರವಾಸದ ಬಗ್ಗೆ ಮಾಹಿತಿ ನೀಡಿರುವ ನಟಿ, ಹೌದು ನಾನು ಲಂಡನ್ ಗೆ ಹೋಗಿದ್ದೆ. ಆದರೆ ಎರಡು ವಾರಗಳ ಹಿಂದೆನೆ ನಾನು ಅಲ್ಲಿಂದ ವಾಪಸ್ ಬಂದಿದ್ದೇನೆ. ಮತ್ತೆ ಅಲ್ಲಿಗೆ ಹೋಗಲಿಲ್ಲ. ಲಂಡನ್ ನನಗೆ ತುಂಬಾ ಇಷ್ಟವಾದ ಜಾಗವಾಗಿರುವುದರಿಂದ ಆಗಾಗ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುತ್ತೇನೆ. ಎಂದರು. ವಾರದ ಹಿಂದೆ ಅಲ್ಲಿ ನಾನು ಫೋಟೋಶೂಟ್ …

Read More »

ಶಾಲೆಗಳು ಓಪನ್ ಆಗೋದು ಡೌಟ್..!ಡಾ.ಸುಧಾಕರ್

ಬೆಂಗಳೂರು, ಡಿ.22- ರಾಜ್ಯದಲ್ಲಿ ಜನವರಿ ಒಂದರಿಂದ ಶಾಲೆ ಪ್ರಾರಂಭಿಸಬೇಕೆ, ಬೇಡವೆ ಎಂಬ ವಿಚಾರ ಕುರಿತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಕೇಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಾಣು ಹೊಸ ರೂಪಾಂತರ ಪಡೆದಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ವರದಿ ಕೇಳಿದ್ದು, ವರದಿ ಬಂದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. …

Read More »

ಭಾಗ್ಯ ಲಕ್ಷ್ಮಿ ಯೋಜನೆ ಕುರಿತು ಚರ್ಚಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗ್ಯ ಲಕ್ಷ್ಮಿ ಯೋಜನೆಯಡಿ ಎಲ್ ಐ ಸಿ ಯವರು ನೀಡಬಹುದಾದ ಅತ್ಯುತ್ತಮ ಕೊಡುಗೆಯ ಕುರಿತು ಪರಿಶೀಲಿಸಿ, ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ತಮ್ಮನ್ನು ಭೇಟಿಯಾದ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಎಲ್ ಐ ಸಿ ವಲಯ ವ್ಯವಸ್ಥಾಪಕಿ ಮಿನಿ ಇಪೆ ಅವರ ನೇತೃತ್ವದ ಎಲ್ ಐಸಿ ಅಧಿಕಾರಿಗಳ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಭಾಗ್ಯ ಲಕ್ಷ್ಮಿ ಯೋಜನೆಯನ್ನು ಎಲ್ ಐ ಸಿ ಮೂಲಕವೇ …

Read More »