ಬೆಂಗಳೂರು : ಕರ್ತವ್ಯಲೋಪ ಎಸಗಿದ ಪೊಲೀಸ್ ಇನ್ಸ್ ಪೆಕ್ಟರ್ ಗೆ ಒಂದು ವಾರಗಳ ತನಕ ರಸ್ತೆ ಸ್ವಚ್ಛಗೊಳಿಸುವ ಶಿಕ್ಷೆ ನೀಡಿ ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠ (Kalburgi Bench) ಆದೇಶ ನೀಡಿದೆ. ಮಗ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಲು ತೆರಳಿದ ಮಹಿಳೆಯಿಂದ ದೂರು ಸ್ವೀಕರಿಸಲು ಮತ್ತು ತನಿಖೆ ನಡೆಸಲು ವಿಫಲವಾದ ಪೊಲೀಸ್ ಇನ್ಸ್ ಪೆಕ್ಟರ್ ಗೆ ರಾಜ್ಯ ಹೈಕೋರ್ಟ್ ಈ ಅಪರೂಪದ ಶಿಕ್ಷೆ ಪ್ರಕಟಿಸಿದೆ. ಮುಂದಿನ ಒಂದು ವಾರಗಳ ತನಕ ಠಾಣೆಯ …
Read More »ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ
ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ ನಿಶ್ಚಯವಾಗಿದ್ದು, ಡಿಸೆಂಬರ್ 28ರಂದು ವಿವಾಹ ನಡೆಯಲಿದೆ. ಮಗಳ ಮದುವೆ ತಯಾರಿಯಲ್ಲಿ ರಮೇಶ್ ಸಖತ್ ಬ್ಯುಸಿಯಾಗಿದ್ದು, ನಿಹಾರಿಕಾ ಅವರು ಅಕ್ಷಯ್ ಅವರನ್ನು ಕೈ ಹಿಡಿಯುತ್ತಿದ್ದಾರೆ. ಅಕ್ಷಯ್ ಸಿನಿಮಾ ಕ್ಷೇತ್ರದವರಲ್ಲ ಬದಲಿಗೆ ನಿಹಾರಿಕಾ ಅವರ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡೂ ಕುಟುಂಬದವರು ನಿಶ್ಚಯಿಸಿ ವಿವಾಹ ಮಾಡುತ್ತಿದ್ದಾರೆ. ಕೊರೊನಾ ಹಿನ್ನೆಲೆ ಗ್ರ್ಯಾಂಡ್ ಆಗಿ ವಿವಾಹ ಮಾಡುತ್ತಿಲ್ಲ. ಹೆಚ್ಚು ಜನರು …
Read More »ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ನಂದಿನಿಯಿಂದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ.
ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್‍ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿಂದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ಇಲ್ಲಿಯ ಕೆಎಮ್‍ಎಫ್ ಪ್ರಧಾನ ಕಛೇರಿಯಲ್ಲಿ ನಂದಿನಿ ಸಿಹಿ ಉತ್ಸವ …
Read More »ವೈಕುಂಠ ಏಕಾದಶಿಯನ್ನು ಈ ವರ್ಷ ಆಚರಿಸಲು ಸಾಧ್ಯವಿಲ್ಲ.
ಬೆಂಗಳೂರು(ಡಿ.24): ನಾಳೆ ವೈಕುಂಠ ಏಕಾದಶಿ. ಕೊರೋನಾ ಬಂದಿಲ್ಲ ಎಂದಿದ್ದರೆ ಎಲ್ಲಾ ದೇವಾಲಯಗಳಲ್ಲೂ ಭಕ್ತರದ್ದೇ ಕಾರುಬಾರು ಇರುತ್ತಿತ್ತು. ಪ್ರತೀ ವರ್ಷ ಸಂಭ್ರಮದಿಂದ ಆಚರಿಸಲಾಗುತ್ತಿದ್ದ ವೈಕುಂಠ ಏಕಾದಶಿಯನ್ನು ಈ ವರ್ಷ ಆಚರಿಸಲು ಸಾಧ್ಯವಿಲ್ಲ. ಕಾರಣ ಮಹಾಮಾರಿ ಕೊರೋನಾ. ಹೌದು, ಈ ಕೊರೋನಾ ಕಾರಣದಿಂದಾಗಿ ನಾಳಿನ ವೈಕುಂಠ ಏಕಾದಶಿಯಂದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ. ಬೆಂಗಳೂರಿನ ಬಹುತೇಕ ಎಲ್ಲಾ ದೇವಾಲಯಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗುತ್ತದೆ ಎಂದು ತಿಳಿದು ಬಂದಿದೆ. ಕೋವಿಡ್-19 ಹಿನ್ನೆಲೆಯಲ್ಲಿ ದೇವಾಲಯಗಳಿಗೆ …
Read More »ನೈಟ್ ಕರ್ಫ್ಯೂ ತೀರ್ಮಾನ ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ: ದಿನೇಶ್ ಗುಂಡೂರಾವ್
ಬೆಂಗಳೂರು: ಕೊರೊನಾ ಹೊಸ ಪ್ರಭೇದ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ವೇಳೆ ಮಾತ್ರ ಜಾರಿಗೊಳಿಸಿರುವ ನೈಟ್ ಕರ್ಫ್ಯೂ ವಿಚಾರ ತೀವ್ರ ಟೀಕೆಗೆ ಗುರಿಯಾಗಿದೆ. ವಿಪಕ್ಷ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ. ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡುರಾವ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಕಾಟಾಚಾರದ ರಾತ್ರಿ ಕರ್ಫ್ಯೂ ಹೇರಿ …
Read More »ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತೆ ಮತ್ತೆ ಎಡವಟ್ಟು ,ಮಲಗಿದ ಹೊತ್ತಲ್ಲಿ ನೈಟ್ ಕರ್ಫ್ಯೂ ದೊಡ್ಡ ಜೋಕ್ ಅಂತಿದ್ದಾರೆ ಜನ
: ಬೆಂಗಳೂರು: ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತೆ ಮತ್ತೆ ಎಡವಟ್ಟು, ಎಡಬಿಡಂಗಿ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ಮಧ್ಯಾಹ್ನವಷ್ಟೇ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ ಹೇರುವುದಾಗಿ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದರು. ಕ್ರಿಸ್‍ಮಸ್ ಮಿಡ್ ನೈಟ್ ಪ್ರಾರ್ಥನೆ, ಹೊಸ ವರ್ಷಕ್ಕೆ ನಿರ್ಬಂಧ ಹೇರುವ ಸಲುವಾಗಿ ಈ ನಿರ್ಧಾರ ಅಂತಲೂ ಘೋಷಣೆ ಮಾಡಿದ್ದರು. ಆದ್ರೆ, ಸಂಜೆ ಹೊತ್ತಿಗೆ ಸರ್ಕಾರದ ನಿರ್ಧಾರವೇ ಬದಲಿ ಹೋಗಿದೆ. ಕೇವಲ …
Read More »ಜನವರಿ 1ರಿಂದ 10-12ನೇ ತರಗತಿಗಳ ಆರಂಭ ನಿಶ್ಚಿತ
ಬೆಂಗಳೂರು,ಡಿ.23- ಈಗಾಗಲೇ ನಿರ್ಧಾರವಾಗಿರುವಂತೆ ಜ.1ರಿಂದಲೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ರಾಜ್ಯಾದ್ಯಂತ ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಶಾಲಾಕಾಲೇಜುಗಳನ್ನು ತೆರೆಯುವ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಒ)ಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಆರಂಭಕ್ಕೂ ಮುನ್ನ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ಕೊರೊನಾ ರೂಪಾಂತರ ವೈರಸ್ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಹಾಗೂ ತಜ್ಞರ ಜೊತೆ ಚರ್ಚೆ ಮಾಡಲಾಗಿದೆ. ಹೀಗಾಗಿ ಈಗಾಗಲೇ ನಿಗದಿಯಾಗಿರುವಂತೆ ಜನವರಿ …
Read More »ಅನ್ನದಾತರಿಗೆ ಸ್ಯಾಂಡಲ್‍ವುಡ್ ಕಲಾವಿದರ ಸಲಾಂ
ಬೆಂಗಳೂರು, ಡಿ. 23- ನೇಗಿಲು ಹಿಡಿದ ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ…. ಅನ್ನ ನೀಡುವರೇ ನಮ್ಮೋರು…. ನಮ್ಮಮ್ಮ ನಮ್ಮಮ್ಮ ಭೂಮಿ ತಾಯಮ್ಮ…. ಹೀಗೆ ರೈತನ ಹಾಗೂ ಅವನ ಬೆವರಿನ ಬೆಲೆ ತಿಳಿಸುವ ಅನೇಕ ಗೀತೆಗಳು ಕನ್ನಡ ಚಿತ್ರಗಳಲ್ಲಿವೆ, ಅದೇ ರೀತಿ ನಮ್ಮ ಸ್ಯಾಂಡಲ್ವುಡ್ನ ಡಾ.ರಾಜ್ಕುಮಾರ್, ಡಾ.ವಿಷ್ಣುವರ್ಧನ್, ಡಾ.ಅಂಬರೀಷ್ ಸೇರಿದಂತೆ ಹಲವು ನಟರು ಕೂಡ ರೈತರ ಪಾತ್ರಗಳಲ್ಲಿ ನಟಿಸುವ ಮೂಲಕ ಅನ್ನದಾತನ ಹಿರಿಮೆಯನ್ನು ಸಾರಿದ್ದಾರೆ. ಇಂದು ರಾಷ್ಟ್ರೀಯ ರೈತ ದಿನಾಚರಣೆ, …
Read More »ಜನವರಿ 1ರಿಂದ ಶಾಲೆಗಳು ಪುನರಾರಂಭವಾಗಲಿದೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರ ಆತಂಕದ ಬೆನ್ನಲ್ಲೇ ನೈಟ್ ಕರ್ಫ್ಯೂ ಕೂಡ ಜಾರಿಯಾಗಿದೆ. ಈ ನಡುವೆಯೇ ನಿಗದಿಯಂತೆ ಜನವರಿ 1ರಿಂದ ಶಾಲೆಗಳು ಪುನರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಇಂದು ಸಿಇಒ, ಡಿಡಿಪಿಐ, ಡಿಡಿಪಿಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದಲ್ಲಿ ಜನವರಿ 1ರಿಂದ ಶಾಲೆಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿದೆ. ಕೊರೊನಾ ರೂಪಾಂತರ ವೈರಸ್ ಇದ್ದರೂ ಆತಂಕಪಡುವ ಅಗತ್ಯವಿಲ್ಲ ಎಂದು …
Read More »ಶಾಲೆ ಆರಂಭದ ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್
ಬೆಂಗಳೂರು : ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ದತೆಗಳನ್ನು ಕೈಗೊಳ್ಳುತ್ತಿದೆ. ಜನವರಿಯಿಂದಲೇ ಶಾಲೆ ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮ ಅಂತಿಮಗೊಳಿಸಲಾಗುತ್ತದೆ. ಕನಿಷ್ಠ ಕಲಿಕೆಗೆ ಒತ್ತು ನೀಡಲಾಗುತ್ತದೆಯಲ್ಲದೇ, ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ …
Read More »
Laxmi News 24×7