ಬೆಂಗಳೂರು: ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ ಅದರ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧವೂ ಏಕವಚನದಲ್ಲೇ ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ರೈತ ಹೋರಾಟಗಾರ ಅಂತ ಹಸಿರು ಶಾಲು ಹಾಕಿಕೊಳ್ತಾನೆ. ಬಡವರ ಅಕ್ಕಿಯನ್ನ ಐದು ಕೆ.ಜಿ.ಗೆ ಇಳಿಸಿದ್ದಾನೆ. ಯಾಕೆ ಕಡಿಮೆ ಮಾಡಿದ್ರು, ಏನ್ ಅವರಪ್ಪನ ಮನೆಯಿಂದ ಕೊಡ್ತಿದ್ನಾ.. ಬಡವರ ಪರ ಹೃದಯವೇ ಇಲ್ಲದ ನಿಮ್ಮನ್ನ ಮನುಷ್ಯರು ಅಂತ ಕರೆಯಬೇಕಾ..? ಬಿಎಸ್‌ವೈ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ …
Read More »ಬೇಕಾಬಿಟ್ಟಿ ವಸೂಲಿಗೆ ನಿಂತಿರುವ ಖಾಸಗಿ ಶಾಲೆಗಳ ಜೊತೆಗೆ ಸರ್ಕಾರ ಶಾಮೀಲಾಗಿದೆ; ಸಿದ್ದರಾಮಯ್ಯ
ಬೆಂಗಳೂರು (ಡಿಸೆಂಬರ್ 20); ಕೊರೋನಾ ಸೋಂಕಿನ ಕಾರಣದಿಂದಾಗಿ ಕಳೆದ 9 ತಿಂಗಳಿನಿಂದ ಶಾಲೆಗಳು ಬಂದ್ ಆಗಿವೆ. ಆದರೆ, ಕೆಲವು ಖಾಸಗಿ ಶಾಲೆಗಳಲ್ಲಿ ಮಾತ್ರ ಆನ್ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ. ಈ ನಡುವೆ ಶಾಲೆಗಳ ಆಡಳಿತ ಮಂಡಲಿ ನಿತ್ಯ ತರಗತಿಗಳು ಇಲ್ಲದಿದ್ದರೂ ಬೇಕಾಬಿಟ್ಟಿ ಶುಲ್ಕ ವಸೂಲಾತಿ ನಡೆಸುತ್ತಿವೆ. ಈ ಕುರಿತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರೂ ಸರ್ಕಾರ ಮಾತ್ರ ಗಮನವಹಿಸುತ್ತಿಲ್ಲ. ಈ ಕುರಿತು ಸರಣಿ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ …
Read More »ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ
ಬೆಂಗಳೂರು, ಡಿ.20- ರಾಜ್ಯದಲ್ಲಿ ಕಳೆದ ಹಲವು ತಿಂಗಳುಗಳಿಂದ ರೈತರು ಮತ್ತು ಕಾರ್ಮಿಕರು ಪ್ರತಿಭಟನೆ ಹಾಗೂ ಸತ್ಯಾಗ್ರಹಗಳಲ್ಲಿ ತೊಡಗಿದ್ದಾರೆ. ಪ್ರತಿಭಟನಾ ನಿರತರನ್ನು ಮಾತುಕತೆಗೆ ಕರೆದು ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಬಿಡದಿಯ ಟೊಯೋಟಾ ಕಂಪೆನಿ ಕೈಗಾರಿಕಾ ಪ್ರದೇಶದಲ್ಲಿ ಹಲವು ಘಟಕಗಳನ್ನು ಹೊಂದಿದೆ. ಅದರ ಒಂದು ಘಟಕದಲ್ಲಿ ಸುಮಾರು ಎರಡು ಸಾವಿರ ಜನರು ಖಾಯಂ ನೌಕರರಾಗಿ ಕೆಲಸ ಮಾಡುತ್ತಿದ್ದರು. ಈ …
Read More »ಗ್ರಾ.ಪಂ.ಚುನಾವಣೆ : ಹಳ್ಳಿಗಲ್ಲಿ ಜೋರಾಗಿದೆ ಗುಂಡು ತುಂಡಿನ ಪಾರ್ಟಿ…!
ಬೆಂಗಳೂರು, ಡಿ.20- ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದ್ದು, ನಾನಾ ತಂತ್ರಗಳ ಮೂಲಕ ಮತದಾರರ ಮನಗೆಲ್ಲಲು ಕಣದಲ್ಲಿರುವ ಅಭ್ಯರ್ಥಿಗಳು ಅಂತಿಮ ಕಸರತ್ತು ನಡೆಸಿದ್ದಾರೆ.ನಗರ, ಪಟ್ಟಣ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಗ್ರಾಪಂಗಳಲ್ಲಿ ಹಣ ಹಂಚಿಕೆ, ಗುಂಡು-ತುಂಡು ಪಾರ್ಟಿ ಭರ್ಜರಿಯಾಗಿಯೇ ನಡೆದಿದೆ. ತೋಟದ ಮನೆ, ಡಾಬಾ, ಇಟ್ಟಿಗೆ ಶೆಡ್ ಎಲ್ಲೆಂದರಲ್ಲಿ ಪಾರ್ಟಿಗಳನ್ನು ಆಯೋಜಿಸಿ ಮತದಾರರ ಮನವೊಲಿಕೆಯ ಕಸರತ್ತು ನಡೆಯುತ್ತಿದೆ. ಅದರ ಜತೆಗೆ ಹಣ ಇನ್ನಿತರ ಆಮಿಷಗಳ ಸುರಿಮಳೆಯಾಗುತ್ತಿದೆ. ಇನ್ನು …
Read More »ಸೋಮವಾರದಿಂದ ಶಾಲೆಗಳನ್ನು ಮುಚ್ಚುವುದಲ್ಲದೆ ಆನ್ ಲೈನ್ ಕ್ಲಾಸ್ ಗಳನ್ನು ಕೂಡ ಬಂದ್
ಬೆಂಗಳೂರು – ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಖಾಸಗಿ ಶಾಲೆಗಳನ್ನು ಬಂದ್ ಮಾಡಲು ಖಾಸಗಿ ಶಾಲೆಗಳ ಒಕ್ಕೂಟ- ರುಪ್ಸ್ ನಿರ್ಧರಿಸಿದೆ. ಸೋಮವಾರದಿಂದ ಶಾಲೆಗಳನ್ನು ಮುಚ್ಚುವುದಲ್ಲದೆ ಆನ್ ಲೈನ್ ಕ್ಲಾಸ್ ಗಳನ್ನು ಕೂಡ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ರುಪ್ಸ್ ನಲ್ಲಿ ನೋಂದಾಯಿತ 12800 ಶಾಲೆಗಳಿವೆ. ಶಾಲೆಗಳ ನೋಂದಣಿ ನವೀಕರಿಸುವ ನೂತನ ರೂಲ್ಸ್ ಸೇರಿದಂತೆ ವಿವಿಧ 15 ಬೇಡಿಕೆಗಳನ್ನು ಒಕ್ಕೂಟ ಸರಕಾರದ ಮುಂದಿಟ್ಟಿದೆ. ಸರಕಾರ ಬೇಡಿಕೆಗಳಿಗೆ ಮಣಿಯುವವರೆಗೂ ಹೋರಾಟ ನಡೆಸಲಾಗುವುದು. …
Read More »ಜನೆವರಿ 6ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ
ಬೆಂಗಳೂರು – ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಶಾಲೆಗಳನ್ನು ಆರಂಭಿಸುವ ಕುರಿತಂತೆ ರಾಜ್ಯ ಸರಕಾರ ಇಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಜನೆವರಿ 6ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಹಾಗೆಯೇ 6ರಿಂದ 9ನೇ ತರಗತಿಯವರೆಗೆ ವಿದ್ಯಾಗಮ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ ಕುಮಾರ ಸಭೆಯ ನಂತರ ಈ ಕುರಿತು ಮಾಹಿತಿ ನೀಡಿದರು. ತರಗತಿಗಳ ಅವಧಿ ಮತ್ತಿತರ ವಿಷಯಗಳ …
Read More »ಟ್ವಿಟ್ಟರ್ ನಲ್ಲಿ ಸಿದ್ದು ವಿರುದ್ಧ ಕುಮ್ಮಿ ಕಿಡಿ….
ಬೆಂಗಳೂರು,ಡಿ.19- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಒಳ ಒಪ್ಪಂದಗಳ ಜನಕ ಎಂದು ಆರೋಪಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಪ್ರಾದೇಶಿಕ ಪಕ್ಷ ಕಟ್ಟಿ ನಿಮ್ಮ ಸಾಮಥ್ರ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ ಎಂದು ಸವಾಲು ಹಾಕಿದ್ದಾರೆ. ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜಕೀಯ ಒಳ ಒಪ್ಪಂದದ ಬಗ್ಗೆ ಮಾತನಾಡಬೇಡಿ. ತಾವು ರಾಜಕೀಯ ಒಳ ಒಪ್ಪಂದಗಳ ಜನಕ ಎಂಬುದು ಯಾವಾಗಲೋ ಸಾಬೀತಾಗಿದೆ. ಇನ್ನೆಂದೂ …
Read More »ರೈಲ್ವೆ ಪ್ಲಾಟ್‍ಫಾರಂ ಟಿಕೆಟ್ ದರ ಹೆಚ್ಚಳಕ್ಕೆ ವ್ಯಾಪಕ ಆಕ್ರೋಶ
ಬೆಂಗಳೂರು, ಡಿ.17- ರೈಲಿನಲ್ಲಿ ಹೋಗುವವರನ್ನು ಬೀಳ್ಕೊಡಲು ಅಪ್ಪಿತಪ್ಪಿಯೂ ರೈಲ್ವೆ ನಿಲ್ದಾಣಗಳತ್ತ ತಲೆ ಹಾಕಬೇಡಿ. ಏಕೆಂದರೆ, ಬೆಂಗಳೂರಿನ ಪ್ರಮುಖ ರೈಲ್ವೆ ಪ್ಲಾಟ್‍ಫಾರಂಗಳ ಟಿಕೆಟ್ ದರವನ್ನು ಐದು ಪಟ್ಟು ಹೆಚ್ಚಿಸಲಾಗಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಕಂಟೋನ್ಮೆಂಟ್, ಯಶವಂತಪುರ, ಕೆಂಗೇರಿ, ಕೆಆರ್ ಪುರಂ, ಬಾಣಸವಾಡಿ, ಯಲಹಂಕ, ವೈಟ್‍ಫೀಲ್ಡ್, ಬೆಂಗಳೂರು ಹೊರತುಪಡಿಸಿ ಬಂಗಾರಪೇಟೆ, ತುಮಕೂರು, ಹೊಸೂರು, ಮಂಡ್ಯ ರೈಲ್ವೆ ನಿಲ್ದಾಣಗಳ ಪ್ಲಾಟ್‍ಫಾರಂ ಟಿಕೆಟ್‍ಗಳನ್ನು 10ರೂ.ನಿಂದ 50ರೂ.ಗೆ ಹೆಚ್ಚಿಸಲಾಗಿದೆ. ಇದು ನವೆಂಬರ್ 30 …
Read More »ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ನಿಗದಿ
ಬೆಂಗಳೂರು,ಡಿ.17-ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ನಿಗದಿಯಾಗಿದೆ. ರಾಜ್ಯಸಭಾ ಸದಸ್ಯರೂ ಆದ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅಧ್ಯಕ್ಷತೆಯಲ್ಲಿ ಇದೇ 19ರಂದು ಕೋರಮಂಗಲದ ಕಲಾದ್ವಾರಕಾ ಸಭಾಂಗಣದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಂದು ಬೆಳಿಗ್ಗೆ 10.30ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕಾರಿಣಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇತ್ತೀಚೆಗೆ ಜಾರಿಗೊಳಿಸಿದ ರೈತಪರ ಕೃಷಿ ಸುಧಾರಣಾ ಮಸೂದೆಗಳನ್ನು ಬೆಂಬಲಿಸಿ ಅಭಿನಂದಿಸುವ …
Read More »ಗ್ರಾಮ ಪಂಚಾಯಿತಿ ಚುನಾವಣೆ ಗುಂಡು ಹಾಗೂ ತುಂಡುಗಳ ಪಾರ್ಟಿಗಳನ್ನು ಜೋರ: ಮದ್ಯ ಮಾರಾಟದಲ್ಲಿ ಶೇ.125ರಷ್ಟು ಏರಿಕೆ..!
ಬೆಂಗಳೂರು,ಡಿ.17- ಗ್ರಾಮ ಪಂಚಾಯಿತಿ ಚುನಾವಣೆ ದಿನಕಳೆದಂತೆ ರಂಗೇರುತ್ತಿದ್ದು, ಮತದಾರರ ಮನಗೆಲ್ಲಲು ಸಾಕಷ್ಟು ಕಣದಲ್ಲಿರುವ ಅಭ್ಯರ್ಥಿಗಳು ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಕಾರ್ಯಕರ್ತರು, ಬೆಂಬಲಿಗರಿಗಾಗಿ ಪ್ರತಿನಿತ್ಯ ಅಭ್ಯರ್ಥಿಗಳು ತಮ್ಮ ತಮ್ಮ ಫಾರ್ಮ್‍ಹೌಸ್‍ಗಳಲ್ಲಿ ಗುಂಡು ಹಾಗೂ ತುಂಡುಗಳ ಪಾರ್ಟಿಗಳನ್ನು ಜೋರಾಗಿ ನಡೆಸುತ್ತಿದ್ದಾರೆ. ಈ ನಡುವೆ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಮದ್ಯದ ಅಭಾವ ಎದುರಾಗುವ ಸಾಧ್ಯತೆಗಳಿದ್ದು, ಹೀಗಾಗಿ ಜನರು ಮುಂಚಿತವಾಗಿಯೇ ಮದ್ಯ ಖರೀದಿ ಮಾಡಲು ಆರಂಭಿಸಿದ್ದು, ಕಳೆದ 15 ದಿನಗಳಿಂದ ಮದ್ಯ ಮಾರಾಟ ಶೇ.125ರಷ್ಟು …
Read More »
Laxmi News 24×7