ಬೆಂಗಳೂರು: ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಈಶ್ವರ ಖಂಡ್ರೆ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ …
Read More »ಅರುಣ್ ಸಿಂಗ್‍ಗೆ ಸಚೇತಕ ಸುನೀಲ್ ಕುಮಾರ್ ದೂರು
ಬೆಂಗಳೂರು, ಡಿ.6- ಹಲವು ಸಚಿವರು ಹಾಗೂ ಶಾಸಕರ ಇತ್ತೀಚಿನ ಬಹಿರಂಗ ಹೇಳಿಕೆಗಳು ನೋವುಂಟು ಮಾಡಿದ್ದು, ಪಕ್ಷದ ಸಿದ್ಧಾಂತ, ಶಿಸ್ತಿನ ಚೌಕಟ್ಟಿನ ಉಲ್ಲಂಘನೆ ಮಾಡಿರುವವರಿಗೆ ಕೂಡಲೇ ಕಡಿವಾಣ ಹಾಕುವಂತೆ ವಿಧಾನಸಭೆಯ ಮುಖ್ಯ ಸಚೇತಕ ಹಾಗೂ ಶಾಸಕ ವಿ.ಸುನಿಲ್ ಕುಮಾರ್ ರಾಜ್ಯ ನೂತನ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪಕ್ಷದ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾದ ಸುನಿಲ್ ಕುಮಾರ್, ಮಂತ್ರಿ …
Read More »ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ನಿಂದ ಕಸಿಯಲು ಬಿಜೆಪಿ ಪ್ರಯತ್ನ
ಬೆಂಗಳೂರು – ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ನಿಂದ ಕಸಿಯಲು ಬಿಜೆಪಿ ಪ್ರಯತ್ನ ನಡೆಸಿದ್ದು, ಜೆಡಿಎಸ್ ಬೆಂಬಲದೊಂದಿಗೆ ಯಶಸಾಧಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ನ ಪ್ರತಾಪ ಚಂದ್ರ ಶೆಟ್ಟಿಯನ್ನು ಕೆಳಗಿಳಿಸಿ ಬಿಜೆಪಿಯ ಒಬ್ಬರನ್ನು ಸಭಾಪತಿ ಮಾಡುವುದು ಬಹುತೇಕ ನಿಚ್ಛಳವಾಗಿದೆ. ಜೆಡಿಎಸ್ ಬೆಂಬಲ ಪಡೆಯದಿರಲು ಕಾಂಗ್ರೆಸ್ ಈಗಾಗಲೆ ನಿರ್ಧರಿಸಿದೆ. ಹಾಗಾಗಿ ಜೆಡಿಎಸ್ ಬಿಜೆಪಿಗೆ ಬಂಬಲ ನೀಡುವುದು ಖಚಿತವಾಗಿದೆ. ಸೋಮವಾರದಿಂದ ಅಧಿವೇಶನ ಆರಂಭವಾಗಲಿದ್ದು, ಬಿಜೆಪಿಯ ಮೂವರ ಹೆಸರು ಪ್ರಸ್ತಾಪವಾಗಿದೆ. ಮಹಾಂತೇಶ ಕವಟಗಿಮಠ, …
Read More »ಮನೆ ಮುಂದೆ ವಾಹನ ನಿಲ್ಲಿಸಿದರೂ ಶುಲ್ಕ ,ಉಸಿರಾಡಲೂ ಬಿಬಿಎಂಪಿಗೆ ಶುಲ್ಕ ಕಟ್ಟಬೇಕೇ..?
ಬೆಂಗಳೂರು, ಡಿ.6- ಮನೆ ಮುಂದೆ ವಾಹನ ನಿಲ್ಲಿಸಿದರೂ ಶುಲ್ಕ ಕಟ್ಟಬೇಕು ಎನ್ನುವ ಪ್ರಸ್ತಾವನೆ ಸಲ್ಲಿಸಿರುವ ಬಿಬಿಎಂಪಿ ಆಯುಕ್ತರ ನಿರ್ಧಾರ ನೋಡಿದರೆ ನಾವು ಬ್ರಿಟಿಷರ ಆಡಳಿತದಲ್ಲಿ ಇದ್ದೇವೆನೋ ಎನ್ನುವ ಭಾವನೆ ಬರುತ್ತಿದೆ. ಲಗಾನ್ ಸಿನಿಮಾದ ಸಂಭಾಷಣೆ ತೀನ್ ಗುನಾ ಲಗಾನ್ ಲಗೇಗಾ ಈ ಸಂದರ್ಭದಲ್ಲಿ ನೆನಪಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಉಪಾಧ್ಯಕ್ಷ ಸುರೇಶ್ ರಾಥೋಡ್ ವ್ಯಂಗ್ಯವಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಭಾರೀ ಪ್ರಮಾಣದಲ್ಲಿ ವಾಹನಗಳ ಪಾರ್ಕಿಂಗ್ …
Read More »ಡಿ. 7ರಿಂದ 15ರವರೆಗೆ ವಿಧಾನಸೌಧದ ಸುತ್ತ ನಿಷೇಧಾಜ್ಞೆ
ಬೆಂಗಳೂರು, ಡಿ.6- ವಿಧಾನಸೌಧದಲ್ಲಿ ನಡೆಯುವ ಅಧಿವೇಶನದ ಸಂಬಂಧ ಡಿ. 7ರಿಂದ 15ರವರೆಗೆ ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಬಂಧನೆಗಳಿಗೆ ಒಳಪಡುವಂತೆ ನಿಷೇದಾಜ್ಞೆಯನ್ನು ವಿಧಿಸಲಾಗಿದೆ. ವಿಧಾನಸೌಧದಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನಗಳು ನಡೆಯಲಿದ್ದು, ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ, ವಿಧಾನಸೌಧ …
Read More »ಡಿ.7ರ ವಾಟಾಳ್ ಸಭೆಯಲ್ಲಿ ಮುಂದಿನ ಹೋರಾಟದ ನಿರ್ಧಾರ: ಪ್ರವೀಣ್ ಶೆಟ್ಟಿ
ಬೆಂಗಳೂರು: ಮರಾಠಾ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯುವ ಹೋರಾಟಕ್ಕೆ ಸಂಬಂಧಪಟ್ಟಂತೆ ಸೋಮವಾರ ವಾಟಾಳ್ ನಾಗರಾಜ್ ಅವರು ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮುಂದಿನ ಹೋರಾಟದ ಹಾದಿಯ ಬಗ್ಗೆ ಚರ್ಚಿಸಿ ನಿರ್ಧರಿಸೋದಾಗಿ ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂದು ಬಂಧಿಸಿರುವ ಹೋರಾಟಗಾರರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯುವಂತೆ ಸರ್ಕಾರವನ್ನ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಇಂದು …
Read More »ಸಂಬಳ ಸಿಗದೇ ಸುಸೈಡ್ ಮಾಡಿಕೊಂಡ ಶಿಕ್ಷಕ..
ಚಿಕ್ಕಬಳ್ಳಾಪುರ, ಡಿ.5-ಕೊರೊನಾದಿಂದಾಗಿ ವೇತನವಿಲ್ಲದೆ ಜೀವನ ನಿರ್ವಹಣೆಗೆ ಆರ್ಥಿಕ ಸಂಕಷ್ಟಕ್ಕೆ ನಲುಗಿದ ಖಾಸಗಿ ಶಾಲಾ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ಶಿಕ್ಷಕ ವೃಂದದಲ್ಲಿ ಆಘಾತ ಉಂಟುಮಾಡಿದೆ.ಮಂಚೇನಹಳ್ಳಿಯ ಕನಗಾನಕೊಪ್ಪದ ಕೃಷ್ಣಪ್ಪ ಎಂಬುವವರ ಏಕೈಕ ಪುತ್ರ ಚಂದ್ರಶೇಖರ್ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಎಂಎ ಇಂಗ್ಲಿಷ್ ಪದವಿ ವ್ಯಾಸಂಗ ಮಾಡಿದ್ದ ಚಂದ್ರಶೇಖರ್ ಅವರು ಮಂಚೇನಹಳ್ಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಮಾಡುತ್ತಿದ್ದರು. ಜತೆಗೆ ಟ್ಯುಟೋರಿಯಲ್ ನಡೆಸುತ್ತ ಜೀವನಕ್ಕೆ ಆಸರೆಯಾಗಿ ಮಾಡಿಕೊಂಡು ನೆಮ್ಮದಿ ಬದುಕು ಸಾಗಿಸುತ್ತಿದ್ದರು. ಈ …
Read More »ರೋಷನ್ ಬೇಗ್ ಗೆ ಷರತ್ತು ಬದ್ಧ ಜಾಮೀನು ಮಂಜೂರು
ಬೆಂಗಳೂರು: ಐಎಂಎ ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರೋಷನ್ ಬೇಗ್ ತನಿಖೆಗೆ ಸಹಕರಿಸಿದ್ದಾರೆ. ಅವರ ವಿರುದ್ಧದ ತನಿಖೆಯೂ ಮುಕ್ತಾಯವಾಗಿದೆ. ಹಾಗಾಗಿ ಬೇಗ್ ಗೆ ಜಾಮೀನು ನೀಡುವಂತೆ ಅವರ ಪರ ವಕೀಲರು ವಾದ ಮಂಡಿಸಿದ್ದರು. ಅಂತಿಮವಾಗಿ ಸಿಬಿಐ ವಿಶೇಷ ನ್ಯಾಯಾಲಯ ರೋಷನ್ ಬೇಗ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
Read More »ಲಿಕ್ಕರ್ ಮಳಿಗೆಗಳು ಮತ್ತು ಬಾರ್‍ಗಳು ಮುಚ್ಚಿದ್ದರಿಂದ ಮದ್ಯ ಮಾರಾಟದಲ್ಲಿ ಭಾರೀ ಇಳಿಕೆ
ಬೆಂಗಳೂರು, – ರಾಜ್ಯದಲ್ಲಿ ಕೋವಿಡ್-19 ಲಾಕ್‍ಡೌನ್ ಸಂದರ್ಭ ದಲ್ಲಿ ಎಲ್ಲ ಲಿಕ್ಕರ್ ಮಳಿಗೆಗಳು ಮತ್ತು ಬಾರ್‍ಗಳು ಮುಚ್ಚಿದ್ದರಿಂದ ಮದ್ಯ ಮಾರಾಟದಲ್ಲಿ ಭಾರೀ ಇಳಿಕೆಯಾಗಿತ್ತು. ಆದರೆ, ಲಾಕ್‍ಡೌನ್ ತೆರವುಗೊಂಡ ಬಳಿಕ ಅಬಕಾರಿ ಇಲಾಖೆ ತನ್ನ ಆದಾಯ ಹೆಚ್ಚಿಸಿಕೊಂಡಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಅತ್ಯಲ್ಪ ಆದಾಯ ಕುಸಿತ ಅನುಭವಿಸಿದೆ. 2019ರ ಏಪ್ರಿಲ್-ನವೆಂಬರ್ ಅವಧಿಯಲ್ಲಿ ರಾಜ್ಯ ಅಬಕಾರಿ ಇಲಾಖೆಯು 14,390.39 ಕೋಟಿ ರೂ. ಆದಾಯ ಪಡೆದಿದ್ದರೆ, ಈ ವರ್ಷ 13,778.30 ಕೋಟಿ ರೂ. …
Read More »ಕಬ್ಬಿನ ಗದ್ದೆಯಲ್ಲಿ ಕೊಲೆಯಾಗಿದ್ದ ಅಪ್ರಾಪ್ತ ಬಾಲಕಿಯ ಸಾವಿಗೆ ನ್ಯಾಯ ಸಿಗಬೇಕೆಂದ ಕಿಚ್ಚ ಸುದೀಪ್
ಬೆಂಗಳೂರು: ಮಂಡ್ಯದ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿನ ಗದ್ದೆಯಲ್ಲಿ ಕೊಲೆಯಾಗಿದ್ದ ಅಪ್ರಾಪ್ತ ಬಾಲಕಿಯ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಿಚ್ಚ, ಈ ಪ್ರಕರಣದಲ್ಲಿ ಬಾಲಕಿಗೆ ನ್ಯಾಯ ಸಿಗುತ್ತದೆ ಮತ್ತು ತಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದೆ ಈ ರೀತಿ ಮಾಡುವವರಿಗೆ ತೀವ್ರ ತರಹದ ಸಂದೇಶ ರವಾನೆಯಾಗಲಿದೆ ಎಂದು ಭಾವಿಸಿದ್ದೇನೆ. ಈ ಮೂಲಕ ಮುಂದೆ ಈ …
Read More »