Breaking News

ಬೆಂಗಳೂರು

ರೈತರು ನಡೆಸ್ತಿರುವ ಪ್ರತಿಭಟನೆಗೆ ಇಂದು ಮೂರನೇ ದಿನ. ಇಂದು ಮತ್ತೆ ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು: ರೈತ ವಿರೋಧಿ ಕಾನೂನು ಖಂಡಿಸಿ ಬೆಂಗಳೂರಲ್ಲಿ ರೈತರು ನಡೆಸ್ತಿರುವ ಪ್ರತಿಭಟನೆಗೆ ಇಂದು ಮೂರನೇ ದಿನ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ 10 ಸಾವಿರಕ್ಕೂ ಹೆಚ್ಚು ರೈತರು ಇಂದು ಮತ್ತೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ತಡೆದಿದ್ದರು. ಮೆಜೆಸ್ಟಿಕ್‍ನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಬೆಳಗ್ಗೆ 11 ಗಂಟೆಗೆ ರೈತರು ಇವತ್ತೂ ಬೃಹತ್ ಮೆರವಣಿಗೆ ಕೈಗೊಳ್ಳಲಿದ್ದಾರೆ. ಆನಂದ್‍ರಾವ್ ಸರ್ಕಲ್, ಫ್ರೀಡಂ ಪಾರ್ಕ್,ನಿನ್ನೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ರೈತರನ್ನು ಪೊಲೀಸರು ಫ್ರೀಡಂ ಪಾರ್ಕ್ …

Read More »

ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ

ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ ನಂದವಾಡಗಿ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿಂದು ನಡೆಯಿತು. ಕೃಷ್ಣ ಭಾಗ್ಯ ಜಲನಿಗಮ ನಿಯಮಿತದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಂದವಾಡಗಿ ಏತ ನೀರಾವರಿ 2ನೇ ಹಂತದ ಯೋಜನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಕೊಪ್ಪಳ ಕ್ಷೇತ್ರದ ಲೋಕಸಭಾ ಸದಸ್ಯ ಸಂಗಣ್ಣ …

Read More »

ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿಸಭೆ

ಬೆಂಗಳೂರು,ಡಿ.9- ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ತೀರ್ಮಾನಿಸಿರುವ ಕನ್ನಡಪರ ಸಂಘಟನೆಗಳು ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಸಿದವು. ಮರಾಠ ಅಭಿವೃದ್ಧಿ ನಿಗಮ ವಿರೋಸಿ ಡಿ.5ರಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ವಿಫಲಗೊಳಿಸುವ ಯತ್ನ ಮಾಡುವ ಮೂಲಕ ಸರ್ಕಾರ ಕನ್ನಡ ದ್ರೋಹ ಮಾಡಿದೆ. ಹೀಗಾಗಿ ನಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕಿದೆ ಎಂಬ ಹಿನ್ನೆಲೆಯಲ್ಲಿ ಸಭೆ ಸೇರಿದ ಕನ್ನಡ ಒಕ್ಕೂಟದ ಮುಖಂಡರಾದ ವಾಟಾಳ್ …

Read More »

“ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ದರೆ ರೈತರ ಆತ್ಮಹತ್ಯೆಗಳು ದುಪ್ಪಟ್ಟಾಗಲಿವೆ” : ನಾರಾಯಣಗೌಡ

ಬೆಂಗಳೂರು,ಡಿ.9- ನೂತನ ಕೃಷಿ ಕಾಯ್ದೆಗಳು ರೈತರಿಗೆ ಮರಣಶಾಸನವಾಗಿದೆ. ಈ ಕಾನೂನುಗಳನ್ನು ವಾಪಸ್ ಪಡೆಯದಿದ್ದರೆ ರೈತರ ಆತ್ಮಹತ್ಯೆಗಳು ದುಪ್ಪಟ್ಟಾಗಲಿವೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ. ರಾಜ್ಯ ರೈತ ಸಂಘ, ಹಸಿರುಸೇನೆ ಇಂದು ಹಮ್ಮಿಕೊಂಡಿದ್ದ ವಿಧಾನಸೌಧ ಮುತ್ತಿಗೆ, ಬಾರುಕೋಲು ಚಳುವಳಿಗೆ ಬೆಂಬಲ ನೀಡಿದ ಕರವೇ, ಬಿಬಿಎಂಪಿಯಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಕಾಲ್ನಡಿಗೆ ಜಾಥಾ ನಡೆಸಿ ರೈತ ವಿರೋ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದೆ. ಈ …

Read More »

ಸಾರಿಗೆ ನೌಕರರಿಗೆ ಸಂಪೂರ್ಣ ವೇತನ ನೀಡಿದ್ದೇವೆ : ಲಕ್ಷ್ಮಣ್ ಸವದಿ

ಬೆಂಗಳೂರು,ಡಿ.9- ಸಾರಿಗೆ ನೌಕರರಿಗೆ ಒಂದೇ ಒಂದು ತಿಂಗಳ ವೇತನವನ್ನು ತಡೆ ಹಿಡಿಯದೇ ಸಂಪೂರ್ಣವಾಗಿ ವೇತನ ನೀಡಿದ್ದೇವೆ. ಈ ತಿಂಗಳ ವೇತನವೂ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಶಾಸಕ ಹರ್ಷವರ್ಧನ್ ಡಿ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್ 19 ಸಂದರ್ಭದಲ್ಲಿ ಸಾರಿಗೆ ಸಂಸ್ಥೆ ದೊಡ್ಡ ಮಟ್ಟದ ನಷ್ಟಕ್ಕೆ ಸಿಲುಕಿತು. ಆದರೂ ನೌಕರರಿಗೆ ತೊಂದರೆಯಾಗದಂತೆ ಸಂಪೂರ್ಣ ವೇತನ ಬಿಡುಗಡೆ ಮಾಡಿದ್ದೇವೆ. ಈ ತಿಂಗಳ ವೇತನ ಮಾತ್ರ …

Read More »

ರೈತರ ಬಾಯಿಗೆ ಕುಮಾರಸ್ವಾಮಿ ಮಣ್ಣು ಹಾಕೋ ಕೆಲಸ ಮಾಡಿದ್ರು. ಅವರು ಒಬ್ಬ ಡೀಲಿಂಗ್ ಮಾಸ್ಟರ್: ಕೋಡಿಹಳ್ಳಿ ಚಂದ್ರಶೇಖರ್:

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ರೈತರು ಮಣ್ಣಿನ ಮಗ ಅಂತಾರೆ. ಆದ್ರೇ ರೈತರ ಬಾಯಿಗೆ ಕುಮಾರಸ್ವಾಮಿ ಮಣ್ಣು ಹಾಕೋ ಕೆಲಸ ಮಾಡಿದ್ರು. ಅವರಿಗೆ ರೈತರ ಪರ ಕಾಳಜಿಯೇ ಇಲ್ಲ. ಕುಮಾರಸ್ವಾಮಿ ಮಣ್ಣಿನ ಮಕ್ಕಳ ದ್ರೋಹಿ ಹಾಗೂ ಅವರು ಒಬ್ಬ ಡೀಲಿಂಗ್ ಮಾಸ್ಟರ್ ಎಂಬುದಾಗಿ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ. ನಗರದಲ್ಲಿ ವಿಧಾನಸೌಧ ಮುತ್ತಿಗೆ ಪ್ರತಿಭಟನೆ ಚಳುವಳಿ ನಡೆಸುತ್ತಾ ಮಾಜಿ ಸಿಎಂ ಭೂ ಸುಧಾರಣಾ ತಿದ್ದುಪಡಿ …

Read More »

ಡಿಕೆಶಿ ರಾಜಿನಾಮಗೆ ಒತ್ತಾಯ! ಸತೀಶ ಜಾರಕಿಹೋಳಿ ಹೇಳಿದ್ದೇನು

  ಬೆಂಗಳೂರು: ನಮ್ಮದು ಸಾಮೂಹಿಕ ನಾಯಕತ್ವ. ಸೋಲಿನ ಹೊಣೆಗೆ ಡಿ.ಕೆ. ಶಿವಕುಮಾರ್ ಒಬ್ಬರೇ ಕಾರಣವಲ್ಲ. ಅವರು ರಾಜೀನಾಮೆ ಕೊಡಬೇಕಾದ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷವೇ ಗೆಲ್ಲುತ್ತೆ. ಹಾಗಾಗಿ ರಾಜೀನಾಮೆ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಚುನಾವಣೆ ಸೋಲಿನ ಹೊಣೆ ಹೊತ್ತು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕೆಂಬ ಈಶ್ವರಪ್ಪ ಹೇಳಿಕೆಗೆ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.      

Read More »

ವಿಧಾನಪರಿಷತ್ ನಲ್ಲಿ ಭೂ ಸುಧಾರಣಾ ಕಾಯ್ದೆ ಅಂಗೀಕಾರ

ಬೆಂಗಳೂರು: ಕೂತುಹಲಕಾರಿ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಭೂ ಸುಧಾರಣಾ ಕಾಯ್ದೆ ವಿಧಾನಪರಿಷತ್ ನಲ್ಲೂ ಅಂಗೀಕಾರಗೊಂಡಿದೆ. ಕಳೆದ ಎರಡು ದಿನಗಳಿಂದ ಸುಧೀರ್ಘ ಚರ್ಚೆ ನಡೆದು ಇಂದು ಸಂಜೆ ವಿಧೇಯಕವನ್ನು ಮತಕ್ಕೆ ಹಾಕಿದಾಗ ಬಿಜೆಪಿ ಹಾಗೂ ಜೆಡಿಎಸ್ ನ 37 ಮಂದಿ ಪರವಾಗಿ ಮತ ಚಲಾಯಿಸಿದರು. ಕಾಂಗ್ರೆಸ್ ನ ಸದಸ್ಯರು, ಜೆಡಿಎಸ್ ನ ಮರಿತಿಬ್ಬೇಗೌಡ ಸೇರಿದಂತೆ ಒಟ್ಟು 21 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ಕೊನೆಗೆ ವಿಧೇಯಕ ಅಂಗೀಕಾರಗೊಂಡಿದೆ ಎಂದು ಸಭಾಪತಿ …

Read More »

ಬೆಂಗಳೂರಲ್ಲಿ ಭಾರತ್ ಬಂದ್ ಹೇಗಿತ್ತು..? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಬೆಂಗಳೂರು, ಡಿ.8- ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆಯ ಬಿಸಿ ಏರಿತ್ತು. ಮೈಸೂರು ಬ್ಯಾಂಕ್ ವೃತ್ತ, ಟೌನ್‍ಹಾಲ್, ಮೌರ್ಯ ವೃತ್ತದಲ್ಲಿ ರೈತ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ರಾಜಕೀಯ ಪಕ್ಷಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳವರು ಪ್ರತಿಭಟನೆ ನಡೆಸಿ ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದವು. ರಾಜ್ಯ ರೈತ ಸಂಘ, ಹಸಿರು ಸೇನೆ, ಸಿಪಿಎಂ, ಎಎಪಿ, ಕಾಂಗ್ರೆಸ್ , ಜೆಡಿಎಸ್ ಪಕ್ಷಗಳು, ಕನ್ನಡ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ, …

Read More »

ಸಿಎಂ ಕಾರ್ಯವೈಖರಿ ವಿರುದ್ಧ ಶಾಸಕರ ಅಸಮಾಧಾನ, ವರದಿ ಕೇಳಿದ ಹೈಕಮಾಂಡ್..!

ಬೆಂಗಳೂರು,ಡಿ.8- ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯವೈಖರಿ ವಿರುದ್ಧ ಶಾಸಕರು ಅಸಮಾಧಾನ ವ್ಯಕ್ಯಪಡಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ವರದಿ ನೀಡುವಂತೆ ಬಿಜೆಪಿ ಹೈಕಮಾಂಡ್ ಪಕ್ಷದ ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವಂತೆ ಪಕ್ಷದ ಕೆಲ ನಾಯಕರು ಹೈಕಮಾಂಡ್‍ಗೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಈ ಬೆಳವಣಿಗೆಗಳ ನಡುವೆಯೇ ಯಡಿಯೂರಪ್ಪ ವಿರುದ್ದ ಸಿಡಿದೆದ್ದಿರುವ ಅತೃಪ್ತ ಬಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ …

Read More »