ಬೆಂಗಳೂರು, ಡಿ.8- ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದು ಕಪ್ಪು ಪಟ್ಟಿಯನ್ನಾದರೂ ಧರಿಸಲಿ, ಬಿಳಿ ಪಟ್ಟಿಯನ್ನಾದರೂ ಧರಿಸಲಿ. ಅದನ್ನು ಯಾರು ಕೇಳುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದರು. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಖಂಡಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಸಂಬಂಧ ವಿಧಾನಸೌಧದ ಬಳಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅವರ ಪ್ರತಿಭಟನೆಯನ್ನು ಯಾರು ಕೇಳುತ್ತಾರೆ ಎಂದು ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರ ಪರವಾಗಿರುವ ಸರ್ಕಾರ. ರೈತರಿಗೆ …
Read More »ರೈತ ಇದ್ರೆನೇ ದೇಶ- ಪ್ರತಿಭಟನೆಗೆ ಹ್ಯಾಟ್ರಿಕ್ ಹೀರೋ ಬೆಂಬಲ
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಭಾರತ ಬಂದ್‍ಗೆ ರಾಜ್ಯಾದ ಹಲವೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಮಧ್ಯೆ ಸ್ಯಾಂಡಲ್‍ವುಡ್ ಹ್ಯಾಟಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಬೆಂಬಲ ಸೂಚಿಸಿದ್ದಾರೆ. ಸಂಬಂಧ ಟ್ವೀಟ್ ಮಾಡಿರುವ ಶಿವಣ್ಣ, ರೈತ ದೇಶದ ಬೆನ್ನೆಲುಬು, ರೈತ ಇದ್ರೆನೇ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ಬರೆದುಕೊಂಡಿದ್ದಾರೆ. …
Read More »ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ ಕುಮಾರ್
ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಕ್ರಿಯ ರಾಜಕಾರಣದಿಂದ ಹೊರ ಬರುತ್ತೇನೆ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಸೇರಿದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಅಧಿಕಾರದ ದುರಾಸೆಯಾಗಿ ಅನೈತಿಕ ರಾಜಕೀಯ ಮಾಡುತ್ತಿದ್ದಾರೆ. …
Read More »ಭಾರತ್ ಬಂದ್ ಕರೆಗೆ ಬೆಂಬಲ: ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ಭಾರತ್ ಬಂದ್ ಕರೆಗೆ ಬೆಂಬಲ ಕೋರಿ ನಗರದ ಹಲವೆಡೆ ಕಾಂಗ್ರೆಸ್ ಮತ್ತು ರೈತ ಸಂಘಟನೆಗಳ ಮುಖಂಡರು ಬೈಕ್ ರ್‍ಯಾಲಿ ನಡೆಸುತ್ತಿದ್ದು, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದೆ. ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ಜಮೀರ್ ಅಹಮದ್, ಶಾಸಕ ಜಿ. ಪರಮೇಶ್ವರ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಹಾಗೂ ಇತರ ಶಾಸಕರು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ಆರಂಭಿಸಿದ್ದಾರೆ. ಶಿವಾಜಿನಗರ, ಬ್ರಿಗೇಡ್ ರಸ್ತೆ, ಸಂಪಿಗೆ ರಸ್ತೆ ಮತ್ತು …
Read More »ಮಗು ಸೇರಿ ಮೇಘನಾ ರಾಜ್‍ಗೆ ಕೊರೋನ ಪಾಸಿಟಿವ್!
ಬೆಂಗಳೂರು : ಹಿರಿಯ ನಟಿ ಪ್ರಮೀಳಾ ಜೋಷಾಯ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಬೆನ್ನಲ್ಲೇ ಮೇಘನಾ ರಾಜ್ ಮತ್ತು ಅವರ ಪುತ್ರನಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿರುವ ಸುಂದರ್ ರಾಜ್, ನಮ್ಮ ಕುಟುಂಬದ ಎಲ್ಲರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಮೇಘನಾ ಮತ್ತು ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ. ಮೇಘನಾ ಮತ್ತು ಮಗುವಿಗೆ ಮನೆಯಲ್ಲೇ ಐಸೊಲೇಟ್ ಆಗಿ ಚಿಕಿತ್ಸೆ ನೀಡಲಾಗುತ್ತಿದೆ. …
Read More »ಭೂಸುಧಾರಣೆ ಕಾಯ್ದೆ ತಿದ್ದುಪಡಿ: ಪರಿಷತ್‍ನಲ್ಲಿ ಕೋಲಾಹಲ
ಬೆಂಗಳೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮಂಡಿಸಿದ ಪರಿಷ್ಕøತ ಮಸೂದೆ ವಿಧಾನ ಪರಿಷತ್‍ನಲ್ಲಿ ಮತ್ತೆ ಕೋಲಾಹಲಕ್ಕೆ ಕಾರಣವಾಯಿತು. ಹಿಂದಿನ ಅಧಿವೇಶನದಲ್ಲಿ ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್ ಒಪ್ಪಿಗೆ ದೊರಕಿರಲಿಲ್ಲ. ಸೋಮವಾರ ಆರಂಭವಾದ ಅಧಿವೇಶನದಲ್ಲಿ ಕಂದಾಯ ಸಚಿವ ಆರ್. ಅಶೋಕ ಅವರು ಮಸೂದೆಗೆ ಒಪ್ಪಿಗೆ ಪಡೆಯಲು ಪ್ರಯತ್ನಿಸಿದರು. ಮಸೂದೆಯ ಕುರಿತು ವಿಸ್ತೃತ ಚರ್ಚೆ ಆಗಬೇಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಪಟ್ಟು ಹಿಡಿದರು. …
Read More »ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಏಕ ಸದಸ್ಯ ಪೀಠ ಅವಕಾಶ ನೀಡಿದೆ.
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಏಕ ಸದಸ್ಯ ಪೀಠ ಅವಕಾಶ ನೀಡಿದೆ. ಅನಾರೋಗ್ಯ ಹಿನ್ನೆಲೆ ತಮಗೆ ಜಾಮೀನು ನೀಡಬೇಕೆಂದು ನಟಿ ಸಂಜನಾ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅರವರಿದ್ದ ಪೀಠ, ವೈದ್ಯಕೀಯ ತಪಾಸಣೆಗೆ ನಡೆಸಿ, ಡಿಸೆಂಬರ್ 10ರೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ನಗರದ ವಾಣಿವಿಲಾಸ್ ಆಸ್ಪತ್ರೆಯಲ್ಲಿ ಸಂಜನಾ ಆರೋಗ್ಯ …
Read More »ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು
ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಭಾನುವಾರ ಮನೆಯಲ್ಲಿ ಬಿದ್ದ ಪರಿಣಾಮ ತಿಮ್ಮಕ್ಕ ಅವರ ಸೊಂಟದ ಮೂಳೆ ಮುರಿದಿದೆ. ಈ ಹಿನ್ನೆಲೆ ವೃಕ್ಷ ಮಾತೆಯನ್ನ ಇಂದು ಅವರ ಮಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳವಾರ ಸಾಲುಮರದ ತಿಮ್ಮಕ್ಕ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಸದ್ಯ ತಿಮ್ಮಕ್ಕ ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಲು ಮರದ ತಿಮ್ಮಕ್ಕನವರು ನೆಟ್ಟ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ: ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಡಿಕೆಶಿ ಚರ್ಚೆ
ಬೆಂಗಳೂರು: ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಈಶ್ವರ ಖಂಡ್ರೆ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ …
Read More »ಅರುಣ್ ಸಿಂಗ್‍ಗೆ ಸಚೇತಕ ಸುನೀಲ್ ಕುಮಾರ್ ದೂರು
ಬೆಂಗಳೂರು, ಡಿ.6- ಹಲವು ಸಚಿವರು ಹಾಗೂ ಶಾಸಕರ ಇತ್ತೀಚಿನ ಬಹಿರಂಗ ಹೇಳಿಕೆಗಳು ನೋವುಂಟು ಮಾಡಿದ್ದು, ಪಕ್ಷದ ಸಿದ್ಧಾಂತ, ಶಿಸ್ತಿನ ಚೌಕಟ್ಟಿನ ಉಲ್ಲಂಘನೆ ಮಾಡಿರುವವರಿಗೆ ಕೂಡಲೇ ಕಡಿವಾಣ ಹಾಕುವಂತೆ ವಿಧಾನಸಭೆಯ ಮುಖ್ಯ ಸಚೇತಕ ಹಾಗೂ ಶಾಸಕ ವಿ.ಸುನಿಲ್ ಕುಮಾರ್ ರಾಜ್ಯ ನೂತನ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪಕ್ಷದ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾದ ಸುನಿಲ್ ಕುಮಾರ್, ಮಂತ್ರಿ …
Read More »
Laxmi News 24×7