ಬೆಂಗಳೂರು, ನ.25- ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರ ಸವಾಲು ಸ್ವೀಕರಿಸಿರುವ ಕನ್ನಡಪರ ಸಂಘಟನೆಗಳು ಡಿ.1ರಂದು ವಿಜಯಪುರದ ಜಿಲ್ಲಾಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ಘೋಷಣೆ ಮಾಡಿವೆ. ಮರಾಠ ಸಮುದಾಯ ಅಭಿವೃದ್ಧಿ ನಿಗಮ ರಚನೆಯನ್ನು ವಿರೋಧಿಸಿ ಹೋರಾಟಕ್ಕಿಳಿದಿರುವ ಕನ್ನಡಪರ ಸಂಘಟನೆಗಳನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರೋಲ್‍ಕಾಲ್ ಮತ್ತು ನಕಲಿ ಹೋರಾಟಗಾರರು ಎಂದು ಟೀಕಿಸುವ ಜತೆಗೆ ವಿಜಯಪುರದಲ್ಲಿ ಪ್ರತಿಭಟನೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಸವಾಲು ಹಾಕಿದ್ದರು. ಇದಕ್ಕೆ …
Read More »ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಮಂಡನೆ: ಸಚಿವ ಪ್ರಭು ಚೌಹಾಣ್
ಬೆಂಗಳೂರು, – ಪಶು ಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು. ಅದು ಈಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ ಸಚಿವ ಪ್ರಭು ಚೌಹಾಣ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು , ಡಿ.7ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಿದ್ದು, ಅದಕ್ಕೆ ಬೇಕಾದ ಪೂರ್ವ ತಯಾರಿ …
Read More »ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ
ಬೆಂಗಳೂರು, ನ.24- ರಾಜ್ಯದ ಜನಸಂಖ್ಯೆಯಲ್ಲಿ ಎರಡನೆ ಸ್ಥಾನದಲ್ಲಿರುವ ಒಕ್ಕಲಿಗ ಸಮುದಾಯ ಎಲ್ಲ ಕ್ಷೇತ್ರಗಳಲ್ಲೂ ಹಿಂದುಳಿದಿದ್ದು, ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು ಎಂದು ಹಲವಾರು ಮುಖಂಡರು ಮನವಿ ಮಾಡಿದ್ದಾರೆ. ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬ ಒತ್ತಾಯದ ಸಮಿತಿಯ ನಿಯೋಗ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಭೇಟಿ ಮಾಡಿ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿತು. ನಿಯೋಗದಲ್ಲಿ ತಲಕಾಡು ಚಿಕ್ಕರಂಗೇ ಗೌಡ, ರಾಜ್ಯ ಬಿಜೆಪಿ ವಕ್ತಾರ ಎ.ಎಚ್.ಆನಂದ್, …
Read More »ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ.
ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ. ಈ ಕುರಿತು ಚುನಾವಣೆ ಆಯೋಗ ಸ್ಪಷ್ಟನೆ ನೀಡಿದೆ. ಆ ಪಂಚಾಯಿತಿ ವ್ಯಾಪ್ತಿಯಲ್ಲಿ ಗುತ್ತಿಗೆ ಕಾಮಗಾರಿ ನಿರ್ವಹಿಸುವವರ ಸ್ಪರ್ಧೆ ಮಾಡುವಂತಿಲ್ಲ ಎಂದು ತಿಳಿಸಿದೆ. ಸರ್ಕಾರಿ ನೌಕರಿಯಲ್ಲಿರುವವರ ಪತಿ ಅಥವಾ ಪತ್ನಿ ಚುನಾವಣೆಗೆ ಸ್ಪರ್ಧಿಸಬಹುದು ಎಂದೂ ತಿಳಿಸಿದೆ. ಅಭ್ಯರ್ಥಿ ಅದೇ ಪಂಚಾಯಿತಿಗೆ ಸೇರಿದವನಾಗಿರಬೇಕು. ಮೀಸಲು ಸ್ಥಾನಕ್ಕೆ ಜಾತಿ ಪ್ರಮಾಣ ಪತ್ರ ನೀಡಬೇಕು. ಸಾಮಾನ್ಯ ವರ್ಗಕ್ಕೆ 200ರೂ. …
Read More »ವರ ನಟ ಡಾ.ರಾಜ್‍ಕುಮಾರ್ ಕುರಿತ 209 ಪಂಚಪದಿ ಕೃತಿ ಲೋಕಾರ್ಪಣೆ
ಬೆಂಗಳೂರು, ನ.22- ವರನಟ ಡಾ.ರಾಜ್‍ಕುಮಾರ್‍ರವರ ಚಿತ್ರ ಜೀವನಕ್ಕೆ ಸಂಬಂಸಿದಂತೆ, ಅವರು ನಟಿಸಿರುವ ಮೊದಲನೇ ಚಿತ್ರ ಬೇಡರ ಕಣ್ಣಪ್ಪದಿಂದ ಹಿಡಿದು ಕೊನೆಯ ಚಿತ್ರ ಶಬ್ದವೇದಿವರೆಗಿನ 209 ಚಲನಚಿತ್ರಗಳಿಗೆ ಸಂಬಂಸಿದ 209 ಪಂಚಪದಿ ಕೃತಿ ಲೋಕಾರ್ಪಣೆಗೊಂಡಿದೆ. ಹಾಲುವಾಗಿಲು ಮಂಜುನಾಥ್ ವಿರಚಿತ ರಾಜ್ ಕುರಿತ 209 ಪಂಚಪದಿ ಕೃತಿಯನ್ನು ರಾಜ್ ಕುಟುಂಬ ವರ್ಗದವರು ಸೇರಿದಂತೆ ನೂರು ಮಹನೀಯರು, 100 ಸ್ಥಳಗಳಲ್ಲಿ ಏಕ ಕಾಲಕ್ಕೆ ಲೋಕಾರ್ಪಣೆ ಮಾಡಿದರು. ವಿಶ್ವದ ಯಾವುದೇ ಕಲಾವಿದನ ಬಗ್ಗೆ ಇದುವರೆಗೂ ಬರೆಯಲಾಗದಂತಹ …
Read More »ನ.25ಕ್ಕೆ ಒಂದೇ ದಿನ ಬಾಕಿ, ನಿಜವಾಗಲಿದಿಯಾ ಯತ್ನಾಳ್ ಹೇಳಿಕೆ ?
ಬೆಂಗಳೂರು : ನ.25ರಂದು ರಾಜ್ಯ ರಾಜಕಾರಣದಲ್ಲಿ ಏನೇನು ಆಗುತ್ತೆ ? ನೋಡ್ತಾಯಿರಿ ಎಂದಿದ್ದ ಶಾಸಕ ಬಸನಗೌಡ ಯತ್ನಾಳ ಹೇಳಿಕೆ ನಿಜವಾಗಲಿದಿಯಾ ? ಎಂಬ ಕುತೂಹಲ ರಾಜ್ಯ ರಾಜಕಾರಣದಲ್ಲಿ ಮೂಡಿದೆ. ಮೇಲಿನವರಿಗೂ ಯಡಿಯೂರಪ್ಪ ಸಾಕಾಗಿದ್ದಾರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ. ಮುಂದಿನ ಉತ್ತರಾಧಿಕಾರಿ ಉತ್ತರ ಕರ್ನಾಟಕದವರೇ ಆಗುತ್ತಾರೆ. ಪ್ರಧಾನಿ ಮಂತ್ರಿಗಳ ಮನಸ್ಸಿನಲ್ಲಿ ಈ ವಿಚಾರ ಬಂದಿದೆ. ಯಡಿಯೂರಪ್ಪ ಬಳಿಕ ಉತ್ತರ ಕರ್ನಾಟಕವದವರಿಗೆ ಸಿಎಂ ಮಾಡೋಣ ಎಂದಿದ್ದಾರೆ. …
Read More »ಸಿಎಂ ಮಾಜಿ ರಾಜಕೀಯ ಕಾರ್ಯದರ್ಶಿಯಾಗಿದ್ದ ಶಿವಶಂಕರ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ
ತಿರುವನಂತಪುರಂ:: ಕೇರಳ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪಿಣರಾಯಿ ವಿಜಯನ್ ಅವರ ಮಾಜಿ ರಾಜಕೀಯ ಕಾರ್ಯದರ್ಶಿ ಎಂ.ಶಿವಶಂಕರ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಶಂಕರ್ ಅವರನ್ನು ಬಂಧಿಸಿರುವ ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಿದ್ದು, ನ.26ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ 30 ಕೆಜಿ ಚಿನ್ನ ಸಾಗಾಟ ಪ್ರಕರಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದ ಬೆನ್ನಲ್ಲೇ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಶಿವಶಂಕರ್ ಅವರನ್ನು ವಜಾ ಮಾಡಲಾಗಿತ್ತು. ಈ …
Read More »ಯಡಿಯೂರಪ್ಪ ಈ ಹಂತಕ್ಕೆ ಇಳೀತಾರೆ ಅಂದ್ಕೊಂಡಿರ್ಲಿಲ್ಲ – ಮಗಳ ಎಂಗೇಜ್ಮೆಂಟ್‍ನಂದೇ ನೋಟಿಸ್ ಕೊಟ್ಟಿದ್ದಾರೆ
ಕಲಬುರಗಿ: ಒಂದು ವರ್ಷದಿಂದ ಸುಮ್ಮನೆ ಇದ್ದವರು ನನ್ನ ಮನೆಯಲ್ಲಿ ಕಾರ್ಯಕ್ರಮ ಇದ್ದಾಗಲೇ ನೋಟಿಸ್ ಕೊಡಲು ಬಂದಿದ್ದಾರೆ. ನನಗೆ ಚಳಿ ಯಾವುದು, ಮಳೆ ಯಾವುದು ಗೊತ್ತಿಲ್ಲ. ಎಲ್ಲವನ್ನೂ ಒಂದೇ ರೀತಿಯಾಗಿ ಅನುಭವಿಸಿದ್ದೇನೆ. ನನ್ನ ಮೇಲೆ ಎಫ್‍ಐಆರ್ ಹಾಕಿದ್ದೇ ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಬಿಐ ನೋಟಿಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಮನೆಯಲ್ಲೆ ನನ್ನ ಮಗಳ ಎಂಗೆಜ್ಮೆಂಟ್ ಕಾರ್ಯಕ್ರಮ ಇದ್ದಾಗ ಮನೆ …
Read More »ರೋಷನ್ ಬೇಗ್ ಬಂಧನ ಬೆನ್ನಲ್ಲೇ ಮನ್ಸೂರ್ ಅಲಿಖಾನ್ ಸಿಬಿಐ ವಶಕ್ಕೆ
ಬೆಂಗಳೂರು: ಐಎಂಎಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಸೂರ್ ಅಲಿಖಾನ್ ನನ್ನು ಸಿಬಿಐ ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನನ್ನು ಸಿಬಿಐ ಅಧಿಕಾರಿಗಳು ಇಂದು ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಮಾಜಿ ಸಚಿವ ರೋಷನ್ ಬೇಗ್ ಅವರ ಬಂಧನದ ಬೆನ್ನಲ್ಲೇ ಮನ್ಸೂರ್ ಖಾನ್ ನನ್ನು ಇನ್ನಷ್ಟು ವಿಚಾರಣೆಗೊಳಪಡಿಸಲು ತನ್ನ …
Read More »ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್‍ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳ ವಶಕ್ಕೆ
ಬೆಂಗಳೂರು: ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್‍ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಅನಧಿಕೃತವಾಗಿ ಸಂಚರಿಸುತಿದ್ದ ಬಸ್ಸುಗಳನ್ನು ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಎರಡು ಬಸ್ಸುಗಳು ಒಂದೇ ನಂಬರ್, ಒಂದೇ ಕಲ್ಲರ್, ಒಂದೇ ಬಸ್ ವಿನ್ಯಾಸ ಹೊಂದಿದ್ದು, ಸರ್ಕಾರಕ್ಕೆ ಲಕ್ಷ ಲಕ್ಷ ವಂಚನೆ ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಬಸ್‍ಗಳನ್ನು ವಶಕ್ಕೆ ಪಡೆದು …
Read More »
Laxmi News 24×7