Breaking News
Home / ಜಿಲ್ಲೆ / ಬೆಂಗಳೂರು (page 26)

ಬೆಂಗಳೂರು

10 ಪ್ರಭಾವಿಗಳ ಸೆಳೆಯಲು ಬಿಜೆಪಿ ತಂತ್ರ; 150 ಟಾರ್ಗೆಟ್‌ ಗುರಿ ಮುಟ್ಟಲು ಕಾರ್ಯತಂತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿ ಹೋದ ಬೆನ್ನಲ್ಲೇ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಹತ್ತು ಮಂದಿ ಶಾಸಕರ ಸೆಳೆಯಲು ಕಾರ್ಯತಂತ್ರ ರೂಪಿಸಲಾಗಿದೆ.   ಇತ್ತೀಚೆಗೆ ದಿಲ್ಲಿಗೆ ಭೇಟಿ ನೀಡಿದ್ದ ಯಡಿಯೂರಪ್ಪ ಅವರು ಬಿಜೆಪಿಗೆ ಬರಲು ಉತ್ಸುಕರಾಗಿರುವವರ ಬಗ್ಗೆ ಮಾಹಿತಿ ನೀಡಿದ್ದರು. ಮಂಗಳೂರಿನಲ್ಲಿ ಮೋದಿ ಅವರು ಭಾಗವಹಿಸಿದ್ದ ಕೋರ್‌ ಕಮಿಟಿಯಲ್ಲೂ ವಿಷಯ ಪ್ರಸ್ತಾವವಾಗಿದ್ದು, ಬಿಜೆಪಿ ಶಾಸಕರು ಇಲ್ಲದ ಕ್ಷೇತ್ರಗಳಲ್ಲಿ ಸ್ವಸಾಮರ್ಥ್ಯ ಹಾಗೂ ವರ್ಚಸ್ಸು ಹೊಂದಿದ್ದರೆ ಸೇರಿಸಿಕೊಳ್ಳಬಹುದು ಎಂಬ ಅಭಿ ಪ್ರಾಯ …

Read More »

CET RANK’ ಪಟ್ಟಿ ರದ್ದು : ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ (RANKING) ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಹೈಕೋರ್ಟ್ ನಿರ್ದೇಶನ ನೀಡಿದೆ. ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ಅಂಕಗಳ ಜೊತೆಗೆ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ತಿಳಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ …

Read More »

ರಾಜ್ಯಾದ್ಯಂತ 4,244 ಹೊಸ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು: ರಾಜ್ಯದ ಸುಮಾರು 16 ಲಕ್ಷ ಕುಟುಂಬಗಳ ಮಕ್ಕಳ ಪೌಷ್ಟಿಕಾಂಶ ಮತ್ತು ಶಾಲಾ ಪೂರ್ವ ಶಿಕ್ಷಣದ ಪ್ರಯೋಜನ ಪಡೆಯುವ ಹಾಗೂ 8100 ಮಹಿಳೆಯರಿಗೆ ಉದ್ಯೋಗಾವಕಾಶ ನೀಡುವಂತಹ 4244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಇದಕ್ಕಾಗಿ 268.98 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಶ್ರೀ ಹಾಲಪ್ಪ …

Read More »

ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ

ಬೆಳಗಾವಿ: ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ. ಸ್ಥಳೀಯ ಬಿಜೆಪಿ ನಾಯಕ, ಬೆಳಗಾವಿ ಮಹಾನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ್ ನೇತೃತ್ವದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ. ಈ ಬಾರಿ ಗಣೇಶೋತ್ಸವ ವೀರ್ ಸಾವರ್ಕರ್ ಗಣೇಶೋತ್ಸವವನ್ನಾಗಿ ಆಚರಿಸಲು ಕರೆ ನೀಡಲಾಗಿದೆ. ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಒಟ್ಟು 378 ಸಾರ್ವಜನಿಕ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಗಣೇಶ ಪ್ರತಿಷ್ಠಾಪನೆಗೂ ಮುನ್ನವೇ …

Read More »

ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ನಟ ಸುದೀಪ್: ಪ್ರಭು ಚವ್ಹಾಣ್

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.   ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಪಶು …

Read More »

ಗಣೇಶ ಹಬ್ಬದ ಹಿನ್ನೆಲೆ KSRTC ಬಸ್‌ ಮೂರೇ ದಿನಕ್ಕೆ 22 ಸಾವಿರ ಸೀಟ್ ಬುಕ್ಕಿಂಗ್

ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಬೆಂಗಳೂರಿನಿಂದ ಸಾವಿರಾರು ಜನರು ತಮ್ಮ-ತಮ್ಮ ಊರಿನತ್ತ ಮುಖ ಮಾಡಿದ್ದು, ಎಲ್ಲ ಬಸ್‌ಗಳು ಫುಲ್ ರಶ್ ಆಗಿ ಪ್ರಯಾಣಿಸುತ್ತಿವೆ. ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಈಗಾಗಲೇ ಟಿಕೆಟ್ ಬುಕ್ಕಿಂಗ್ ಹೆಚ್ಚಾಗಿದ್ದು, ಆದಾಯವೂ ಹರಿದುಬರುತ್ತಿದೆ. ಇಂದಿನಿಂದಲೇ ಬುಕ್ಕಿಂಗ್ ಹೌಸ್‌ಫುಲ್ ಆಗಿದ್ದು, ಸ್ಥಳದಲ್ಲೇ ಟಿಕೆಟ್ ಖರೀದಿಸಿ ಹೋಗುವವರು ನಿಂತುಕೊಂಡೇ ಪ್ರಯಾಣಿಸಬೇಕಿದೆ. ಸದ್ಯ ಮೂರು ದಿನಗಳ ಕಾಲ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಬಾರೀ ಬೇಡಿಕೆ ಹೆಚ್ಚಿದೆ. 22 ಸಾವಿರ …

Read More »

ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ

ಪ್ರತಿ ವರ್ಷ ಗಣೇಶ ಚತುರ್ಥಿ (Ganesh Chaturthi) ಹಬ್ಬ ಬಂತು ಎಂದರೆ ನಾನಾ ರೀತಿಯ ಗಣಪನ ಮೂರ್ತಿ ಅನಾವರಣಗೊಳ್ಳುತ್ತದೆ. ಗಣಪನ ಮೂರ್ತಿಗೂ ಚಿತ್ರರಂಗಕ್ಕೂ ಒಂದು ನಂಟು ಇದೆ. ಕೆಲವರು ಗಣೇಶನಿಗೆ ಚಿತ್ರರಂಗದ ಟಚ್ ನೀಡುತ್ತಾರೆ. ಸಿನಿಮಾದ ಥೀಮ್ ಇಟ್ಟುಕೊಂಡು ಗಣೇಶನ ವಿಗ್ರಹ ರೆಡಿ ಆದ ಉದಾಹರಣೆ ಸಾಕಷ್ಟಿದೆ. ಈ ಬಾರಿ ಮತ್ತೆ ಗಣೇಶ ಚತುರ್ಥಿ ಬಂದಿದೆ. ಆ ಪ್ರಯುಕ್ತ ಎಲ್ಲ ಕಡೆಗಳಲ್ಲಿ ವಿಘ್ನ ವಿನಾಶಕನ ಮೂರ್ತಿ ರೆಡಿ ಆಗುತ್ತಿದೆ. ಈ ಬಾರಿ ಪುನೀತ್ ರಾಜ್​ಕುಮಾರ್ (Puneeth …

Read More »

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಸೆ. 6ಕ್ಕೆ `ವೇತನ ಆಯೋಗ’ ಘೋಷಣೆ ಸಾಧ್ಯತೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯಸ ರ್ಕಾರಿ ವೇತನ ಆಯೋಗವನ್ನು ಸೆ. 6 ರಂದು ಘೋಷಣೆ ಮಾಡುವ ಸಾಧ್ಯತೆಗಳಿವೆ. ಸೆ.6 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರಿಗೆ ವೇತನ ಆಯೋಗ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.   …

Read More »

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ: ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ. ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌, ಪಬ್‌, ಬಾರ್‌ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.  

Read More »

ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಪ್ರಕಟ; ಐವರಿಗೆ ಗೌರವ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯು 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ 17ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ ಬಹುಮಾನಕ್ಕೆ ಆಯ್ಕೆಯಾದ ಕಲಾವಿದರ ಹೆಸರನ್ನು ಪ್ರಕಟಿಸಿದೆ. ಬಾಗಲಕೋಟೆಯ ಹಿರಿಯ ಕಲಾವಿದ ನಾಗಲಿಂಗಪ್ಪ ಗಂಗಪ್ಪ ಗಂಗೂರ (ಸಂಪ್ರದಾಯ ಶಿಲ್ಪ), ಉಡುಪಿಯ ರತ್ನಾಕರ ಎಸ್‌. ಗುಡಿಗಾರ್‌ (ಸಂಪ್ರದಾಯ ಶಿಲ್ಪ), ಬಳ್ಳಾರಿಯ ಪಿ. ಮುನಿರತ್ನಾಚಾರಿ (ಸಂಪ್ರದಾಯ ಶಿಲ್ಪ), ಕಲಬುರಗಿಯ ಮಾನಯ್ಯ ನಾ. ಬಡಿಗೇರ (ಎರಕ ಶಿಲ್ಪ) ಹಾಗೂ ಬೆಂಗಳೂರಿನ ಬಿ.ಸಿ. ಶಿವಕುಮಾರ್‌ (ಸಮಕಾಲೀನ ಶಿಲ್ಪ) ಅವರು …

Read More »