Breaking News

ಬೆಂಗಳೂರು

ಬಾಲಿವುಡ್ ನಟ ಮುಖೇಶ್ ರಿಷಿ ಇದೀಗ ಮತ್ತೆ ಸ್ಯಾಂಡಲ್‍ವುಡ್‍ಗೆ ಕಮ್‍ಬ್ಯಾಕ್ ಆಗಿದ್ದು, ಜೇಮ್ಸ್ ಸಿನಿಮಾದಲ್ಲಿ ನಟಿಸಲಿದ್ದಾರೆ.

ಬೆಂಗಳೂರು: ಯುವರತ್ನ ಸಿನಿಮಾ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರೈಸಿರುವ ನಟ ಪುನೀತ್ ರಾಜ್‍ಕುಮಾರ್. ಇದೀಗ ಜೇಮ್ಸ್ ಚಿತ್ರೀಕರಣದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದು, ಬಳ್ಳಾರಿ ಭಾಗದಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ. ಹೀಗಾಗಿ ಸಿನಿಮಾ ಕುರಿತು ಹೆಚ್ಚು ಅಪ್‍ಡೇಟ್ ಸಿಗುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ನಾಯಕಿಯಾಗಿ ಪ್ರಿಯಾ ಆನಂದ್ ಆಯ್ಕೆಯಾಗಿರುವುದು, ಅನು ಪ್ರಭಾಕರ್ ಚಿತ್ರತಂಡ ಸೇರಿರುವುದು ಸುದ್ದಿಯಾಗಿತ್ತು. ಇದೀಗ ಮತ್ತೊಬ್ಬ ನಟ ಚಿತ್ರ ಸೇರಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಬಾಲಿವುಡ್ ನಟರೊಬ್ಬರು ಕಾಣಿಸಿಕೊಳ್ಳುತ್ತಿದ್ದಾರೆ. ಹಲವು ಲೆಜೆಂಡ್ ನಟರ …

Read More »

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಮಾರಾಟ ಮಾಡಿದರೆ ದೂರು ದಾಖಲು

ಬೆಂಗಳೂರು, ನ. 13: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಕಚೇರಿಗೆ ದೂರನ್ನು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ.     ರಾಜ್ಯ ಸರಕಾರ ಹಸಿರು ಪಟಾಕಿ ಹೊರತಾಗಿ ಬೇರೆ ಯಾವುದೇ ಪಟಾಕಿಯನ್ನು ಮಾರಾಟ ಮಾಡುವುದು ಹಾಗೂ ಸಿಡಿಸುವುದನ್ನು ನಿಷೇಧಿಸಿದೆ. ಪಟಾಕಿಗಳನ್ನು ಹಚ್ಚುವ, ಸಿಡಿಸುವ ಸಮಯ ರಾತ್ರಿ 8ರಿಂದ ಗಂಟೆಯಿಂದ …

Read More »

ಡಿ.1ರಂದು ರಾಜ್ಯಸಭೆಯ ಒಂದು ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.

ಬೆಂಗಳೂರು: ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿ.1ರಂದು ರಾಜ್ಯಸಭೆಯ ಒಂದು ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ. ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡರೂ ಸಹ ಕಾಂಗ್ರೆಸ್ ಗೆಲ್ಲಲು ಸಾಧ್ಯವಿಲ್ಲ. ಸಂಖ್ಯಾಬಲದಲ್ಲಿ ಬಿಜೆಪಿ ಸ್ಥಾನಗಳನ್ನು ಹೊಂದಿದೆ. ರಾಜ್ಯಸಭೆಗೆ ಹಾಕುವ ಮತವನ್ನು ಪಕ್ಷದ ವೀಕ್ಷಕರಿಗೆ ತೋರಿಸಬೇಕಿರುವುದರಿಂದ ಅಡ್ಡಮತದಾನ ಮಾಡಿಸುವುದು ಬಹಳ ಕಷ್ಟ. ಆಡಳಿತಾರೂಢ ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲಿಸುವುದು ಕಷ್ಟವಾಗಿರುವುದರಿಂದ …

Read More »

ಹೈಕಮಾಂಡ್ ನಡೆ ತೀವ್ರ ಕುತೂಹಲ ಇನ್ನೆರಡು ದಿನದಲ್ಲಿ ಯಡಿಯೂರಪ್ಪ ಸಂಪುಟದ ಭವಿಷ್ಯ? ಸಿಎಂ ದೆಹಲಿಗೆ ತೆರಳುವ ಸಾಧ್ಯತೆ

ಬೆಂಗಳೂರು: ಬಿಜೆಪಿ ಹೈಕಮಾಂಡ್ ನಡೆ ತೀವ್ರ ಕುತೂಹಲ ಹುಟ್ಟಿಸಿದ್ದು, ಇನ್ನೆರಡು ದಿನದಲ್ಲಿ ಯಡಿಯೂರಪ್ಪ ಸಂಪುಟದ ಭವಿಷ್ಯ ಗೊತ್ತಾಗಲಿದೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಹೈಕಮಾಂಡ್ ಮನಸ್ಸು ಮಾಡಿದ್ರೆ ಸಿಎಂ ದೆಹಲಿಗೆ ತೆರಳುವ ಸಾಧ್ಯತೆ ಇದೆ.     ಹೈಕಮಾಂಡ್ ಜೊತೆ ಮುಖಾಮುಖಿಯಾಗಿ ಭೇಟಿಯಾಗಿ ಸಿಎಂ ಮಾತುಕತೆ ನಡೆಸಲಿದ್ದಾರೆ. ಒಂದು ವೇಳೆ ಹೈಕಮಾಂಡ್ ಈಗ ಬೇಡ ಅಂದ್ರೆ ಡಿಸೆಂಬರ್ ಗೆ ಮುಂದೂಡಿಕೆಯಾಗುವ ಸಾಧ್ಯತೆಗಳು ಕೂಡ ಇವೆ. ಅಷ್ಟೇ ಅಲ್ಲ ಸಿಎಂ ದೆಹಲಿ …

Read More »

ವಂಶಾಡಳಿತ ಮತ್ತು ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆಕ್ರೋಶ

ಬೆಂಗಳೂರು: ಯಾರ ಹೆಸರನ್ನೂ ಉಲ್ಲೇಖಿಸದೇ ವಂಶಾಡಳಿತ ಮತ್ತು ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿರುವ ಯತ್ನಾಳ್, ಪಕ್ಷದ ಹೈಕಮಾಂಡ್ ಎಲ್ಲ ಚಟುವಟಿಕೆಗಳನ್ನು ಗಮನಿಸುತ್ತಿದೆ. ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದು ಹೇಳುವ ಮೂಲಕ ಹೆಸರನ್ನು ಹೇಳದೇ ತಮ್ಮದೇ ಪಕ್ಷದ ಕೆಲವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಪೋಸ್ಟ್ ನಲ್ಲಿ ಏನಿದೆ ನಮ್ಮ ಹೆಮ್ಮೆಯ ಪ್ರಧಾನಿ …

Read More »

ಹೊಸಗುಡ್ಡದಹಳ್ಳಿ ದುರಂತದದಲ್ಲಿ ಬೆಂಕಿಗಾಹುತಿಯಾಯ್ತು ಬದುಕು..!

# ಶಿವಣ್ಣ ಬೆಂಗಳೂರು, ನ.13- ಸುಟ್ಟು ಹೋದ ಕಟ್ಟಡ, ಬೆಂದು ಹೋದ ಮರ, ಸುಟ್ಟು ಕರಕಲಾಗಿರುವ ವಸ್ತುಗಳು, ಬೆಂಕಿಗೆ ಆಹುತಿಯಾಗಿರುವ ಬ್ಯಾರೆಲ್‍ಗಳು… ಇವು ಕಂಡುಬಂದಿದ್ದು ನಗರದ ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿಯಲ್ಲಿ. ನವೆಂಬರ್ 10ರಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ರಾಸಾಯನಿಕ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿ ನಲ್ಲಿ ಬೆಂಕಿ ಕಾಣಿಸಿಕೊಂಡು ಗೋದಾಮಿನಲ್ಲಿದ್ದ ರಾಸಾಯನಿಕ ವಸ್ತುಗಳೆಲ್ಲ ಆಹುತಿಯಾಗಿರುವುದಲ್ಲದೆ ಇಡೀ ಕಟ್ಟಡವನ್ನೇ ಆಪೋಷನ ತೆಗೆದು ಕೊಂಡಿದೆ. ಕಟ್ಟಡದ ಮುಂದಿದ್ದ ಎರಡು ವಿದ್ಯುತ್ ಕಂಬದ ಕೇಬಲ್‍ಗಳು, ಕಾರು, …

Read More »

ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆಗೂ ಅಭಿಮಾನಿ ಸಂಸ್ಥೆಗೂ ಅವಿನಾಭಾವ ಸಂಬಂಧ.

ಬೆಂಗಳೂರು, ನ.13- ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆಗೂ ಅಭಿಮಾನಿ ಸಂಸ್ಥೆಗೂ ಅವಿನಾಭಾವ ಸಂಬಂಧ. ಉಪನ್ಯಾಸಕ ವೃತ್ತಿ ತೊರೆದು 1987ರಲ್ಲಿ ಬೆಂಗಳೂರಿಗೆ ಬಂದಾಗ ಅವರು ಡಾ.ರಾಜ್‍ಕುಮಾರ್ ರಸ್ತೆಯ ಅಭಿಮಾನಿ ಪ್ರಕಾಶನದ ಬಳಿ ನಿಂತಿದ್ದರು. ಇಲ್ಲಿ ತಮ್ಮ ಪತ್ರಕರ್ತ ಜೀವನ ವೃತ್ತಿ ಕಟ್ಟಿಕೊಳ್ಳಲು ಭಾರೀ ಕನಸು ಕಂಡಿದ್ದರು. ಆಗ ಅಭಿಮಾನಿ ಪ್ರಕಾಶನ ವತಿಯಿಂದ ಹೊರತರಲಾಗುತ್ತಿದ್ದ ಪೊಲೀಸ್ ಫೈಲ್ ಹಾಗೂ ಹಲವು ನಿಯತಾಲಿಕೆಗಳು ಪ್ರಕಟಗೊಳ್ಳುತ್ತಿದ್ದವು. ಇಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರು ರವಿಬೆಳಗೆರೆ …

Read More »

KAS ಅಧಿಕಾರಿ ಸುಧಾಗೆ ಮುಂದಿದೆ ಮಾರಿಹಬ್ಬ..!

ಬೆಂಗಳೂರು,ನ.13- ಅಕ್ರಮ ಆಸ್ತಿ ಸಂಪಾದನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದಿಂದ ದಾಳಿಗೊಳಗಾಗಿರುವ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿ ಬಿ.ಸುಧಾಗೆ ಇನ್ನಷ್ಟು ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಎಸಿಬಿ ದಾಳಿ ಸಂದರ್ಭದಲ್ಲಿ ಸುಮಾರು ನೂರು ಕೋಟಿಗೂ ಅಧಿಕ ಆಕ್ರಮ ಆಸ್ತಿ ಸಂಪಾದನೆ ಮಾಡಿರುವುದು ಕಂಡು ಬಂದಿರುವ ಕಾರಣ ಜಾರಿ ನಿದೇರ್ಶನಾಲಯ(ಇಡಿ) ಹಾಗೂ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ತನಿಖೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ. ಐದು ಕೋಟಿಗೂ ಹೆಚ್ಚಿನ ಭ್ರಷ್ಟಾಚಾರದ …

Read More »

ರಾಜ್ಯದಲ್ಲಿ 7 ತಿಂಗಳ ಬಳಿಕ ನ.17ರಿಂದ ವಿದ್ಯಾರ್ಥಿ ನಿಲಯಗಳು ಓಪನ್

ಬೆಂಗಳೂರು,ನ.13- ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಏಳು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು ಇದೇ 17 ( ಮಂಗಳವಾರ)ರಿಂದ ಆರಂಭವಾಗಲಿವೆ. ಪದವಿ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ನವೆಂಬರ್ 17ರಿಂದಲೇ ಆರಂಭಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಮುಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ …

Read More »

ಬೈ ಎಲೆಕ್ಷನ್ ಜೊತೆಗೆ ಎಂಎಲ್‍ಸಿ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ

ಬೆಂಗಳೂರು: ಬೈ ಎಲೆಕ್ಷನ್ ಜೊತೆಗೆ ಎಂಎಲ್‍ಸಿ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸಿದೆ.ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ 7,335 ಮತ ಪಡೆದ್ರೆ ಜೆಡಿಎಸ್‍ನ ಎಪಿ ರಂಗನಾಥ್ 5,107 ಮತ ಗಳಿಸಿದರು. ಆದ್ರೆ ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಪೀಟರ್ ಕೇವಲ 782 ಮತ ಗಳಿಸಲಷ್ಟೇ ಶಕ್ತರಾದರು. ಗೆಲುವಿನ ಹಿನ್ನೆಲೆಯಲ್ಲಿ ಪುಟ್ಟಣ್ಣರನ್ನು ಹೊತ್ತು ಅಭಿಮಾನಿಗಳು ಸಂಭ್ರಮಿಸಿದರು. ಪಶ್ಚಿಮ ಪದವೀಧರ ಕ್ಷೇತ್ರದ …

Read More »