Breaking News

ಬೆಂಗಳೂರು

ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ದಿನೇಶ್ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಶ್ರೀರಾಮಪುರದಲ್ಲಿ ನಡೆದಿದೆ. 2 ದಿನದ ಹಿಂದೆ 4 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಕಳೆದ ಎರಡು ದಿನದಿಂದ ಉತ್ತರ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ್ದರು. ಸದ್ಯ ಇಂದು ಬೆಳಗಿನ ಜಾವ ಶ್ರೀರಾಮಪುರ ಇನ್ಸ್ಪೆಕ್ಟರ್​ಗೆ ಆರೋಪಿ ದಿನೇಶ್ ಕಾಣಿಸಿಕೊಂಡಿದ್ದ. ಹೀಗಾಗಿ ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದ್ದ ವೇಳೆ RRK ಕಲ್ಯಾಣ ಮಂಟಪದ ಬಳಿ …

Read More »

ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ ಪರೀಕ್ಷೆ ಒಳಪಡಿಸಲಾಗಿತ್ತು. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಕೂಡಲೇ ಅವರನ್ನು ಸಾಗರಿದಿಂದ ಬೆಂಗಳೂರಿಗೆ ಕರೆ ತರಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಸಿಲಿಕಾನ್ ಸಿಟಿಗೆ 300 ಐಷಾರಾಮಿ ಎಲೆಕ್ಟ್ರಿಕ್ ಬಸ್‍ಗಳು ಬರಲಿವೆ

ಬೆಂಗಳೂರು: ಬಿಎಂಟಿಸಿಯ ಬಹು ವರ್ಷಗಳ ಕನಸಿನ ಯೋಜನೆ ನನಸಾಗುತ್ತಿದೆ. ಸಿಲಿಕಾನ್ ಸಿಟಿಗೆ 300 ಐಷಾರಾಮಿ ಎಲೆಕ್ಟ್ರಿಕ್ ಬಸ್‍ಗಳು ಬರಲಿವೆ 300 ಐಷಾರಾಮಿ ಎಲೆಕ್ಟ್ರಿಕ್ ಬಸ್‍ಗಳನ್ನು ಗುತ್ತಿಗೆ ಪಡೆದು ಬಿಎಂಟಿಸಿ ಓಡಿಸಲಿದೆ. ಪ್ರಯೋಗಿಕವಾಗಿ ಬಿಎಂಟಿಸಿಯ ಡಿಪೋ ನಂಬರ್ 7ಕ್ಕೆ ಮೊದಲ ಬಸ್ ಬಂದಿದೆ. 15 ದಿನದ ಬಳಿಕ ಪ್ರಯಾಣಿಕರ ಪ್ರಯಾಣಕ್ಕೆ ಅವಕಾಶ ಸಿಗಲಿದೆ. ವಾಯು ಮಾಲಿನ್ಯ ಪ್ರಮಾಣವನ್ನು ಈ ಬಸ್‍ಗಳು ಕಡಿಮೆ ಮಾಡಲಿದ್ದು, 2 ಗಂಟೆ ಚಾರ್ಜ್ ಮಾಡಿದರೆ 120 ಕಿಲೋಮೀಟರ್ …

Read More »

ದಿಢೀರ್ ಬೆಳವಣಿಗೆ – ರಾಮುಲು ಬಳಿಯಿದ್ದ ಆರೋಗ್ಯ ಖಾತೆಗೆ ಕತ್ತರಿ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ ಸುಧಾಕರ್‍ಗೆ ಹೆಚ್ಚುವರಿಯಾಗಿ ನೀಡಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ …

Read More »

ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಸಾವನ್ನಪ್ಪಿದ್ದಾರೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಸಾವನ್ನಪ್ಪಿದ್ದಾರೆ.ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ರಾಜನ್ ಕಳೆದ ರಾತ್ರಿ 10.30ಕ್ಕೆ ಹೃದಯಾಘಾತದಿಂದ ನಿಧನರಾದ್ರು. ಮೂಲತಃ ಮೈಸೂರಿನವರಾದ ರಾಜನ್ ಸಹೋದರ ನಾಗೇಂದ್ರ ಜೊತೆಗೂಡಿ ಕನ್ನಡದ ಸುಮಾರು 375ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. 1952ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಈ ಜೋಡಿ, ಸುಮಾರು 5 ದಶಕಗಳ ಕಾಲ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿತ್ತು. 1952ರಿಂದ 1999ರವರೆಗೆ 375ಕ್ಕೂ ಅಧಿಕ ಸಿನಿಮಾಗಳಿಗೆ …

Read More »

ವರದಕ್ಷಿಣೆ ತಂದು ಕೊಡಲಿಲ್ಲ ಎಂದು :ಪಾಪಿ ಗಂಡ ಹೆಂಡತಿಯ ಖಾಸಗಿ ಅಂಗಕ್ಕೆ ಬೆಂಕಿ ಇಟ್ಟ

ಬೆಂಗಳೂರು :  ತವರು ಮನೆಯಿಂದ ಹಣ ತಂದು ಕೊಡಲಿಲ್ಲ ಎಂಬ ಕಾರಣಕ್ಕೆ ಪಾಪಿ ಗಂಡ ಹೆಂಡತಿಯ ಖಾಸಗಿ ಅಂಗವನ್ನೇ ಸುಟ್ಟಿದ್ದಾನೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಸೂರಜ್ ಸಿಂಗ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ 22 ವರ್ಷದ ಪತ್ನಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೂರಜ್ ಮತ್ತು ಅವರ ತಾಯಿ ಪರಾರಿಯಾಗಿದ್ದು ಪೊಲೀಸರು ಪತ್ತೆಗೆ ಬಲೆ ಬೀಸಿದ್ದಾರೆ. ಸೆಕ್ಸ್ ಮಾಡುವಾಗ ಕಾಂಡೋಮ್ ಬಳಸು ಎಂದಿದ್ದಕ್ಕೆ ಕೊಂದೆ ಬಿಟ್ಟ! ಸೂರಜ್ ಅವರು …

Read More »

ಸಾಲದ ಮೊರೆ ಹೋದ ಬಿ ಎಸ್ ವೈ ಸರ್ಕಾರ

ಬೆಂಗಳೂರು – ರಾಜ್ಯದಲ್ಲಿ ಲಾಕ್‍ಡೌನ್ ಘೋಷಣೆಯಾದ ಬಳಿಕ ಕಳೆದ ಆರು ತಿಂಗಳಿನಿಂದ ಬಹುತೇಕ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಂಡ ಪರಿಣಾಮ ಸರ್ಕಾರ ತೀವ್ರ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದು, ಸಾಲದ ಮೊರೆ ಹೋಗಲು ನಿರ್ಧರಿಸಿದೆ. ಸರ್ಕಾರದ ಬೊಕ್ಕಸಕ್ಕೆ ಆದಾಯ ತರುತ್ತಿದ್ದ ಮೂಲಗಳಿಂದ ನಿರೀಕ್ಷಿತ ಪ್ರಮಾಣದ ಪರಿಣಾಮ ವರಮಾನ ಬಾರದಿರುವುದು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ತಲೆಬಿಸಿ ತಂದಿದೆ. ಆದಾಯದ ಮೂಲಗಳೆಲ್ಲ ಬರಿದಾಗಿದ್ದು, ಬೊಕ್ಕಸ ಖಾಲಿ ಖಾಲಿಯಾಗಿದೆ. ಅನಿವಾರ್ಯ ಸ್ಥಿತಿಯಲ್ಲಿರುವ ಸರ್ಕಾರ …

Read More »

ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ

ಬೆಂಗಳೂರು : ರಾಜ್ಯ ಸರ್ಕಾರ, ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬ ರೀತಿಯಲ್ಲಿ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲಿಯೂ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು, ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ …

Read More »

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಫೇಲಾದವರಿಗೂ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಲು ತಿಳಿಸಲಾಗಿದೆ. ಅಕ್ಟೋಬರ್ 20ರ ಒಳಗೆ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ಉತ್ತಿರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಸೂಚನೆ ನೀಡಲಾಗಿದೆ. 2020 ರ ಫೆಬ್ರವರಿಯಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ ಗೈರು ಹಾಜರಾದ ಮತ್ತು ಜುಲೈ 13 …

Read More »

ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮಧ್ಯಂತರ ರಜೆಯನ್ನು ಘೋಷಿಸಿದ ಬಿಎಸ್‌ವೈ

ಬೆಂಗಳೂರು : ಕೊರೋನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಅ.12ರಿಂದ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಬಿಎಸ್‌ವೈ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರದಲ್ಲಿ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.   ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ …

Read More »