Breaking News

ಬೆಂಗಳೂರು

ರಾಜ್ಯದಲ್ಲಿ ಇಂದು 8793 ಜನರಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 8793 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 6,20,630 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7094 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 4,99,506 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 1,11,986 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 125 ಮಂದಿ ಮೃತಪಟ್ಟಿದ್ದು ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9119 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇವತ್ತು …

Read More »

ಕೆಪಿಟಿಸಿಎಲ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರ

ಬೆಂಗಳೂರು: ಯಲಹಂಕದ ಅನಂತಪುರ ಗೇಟ್ ಬಳಿ ಇರುವ ಕೆಪಿಟಿಸಿಎಲ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 11 ಕೆಪಿಟಿಸಿಎಲ್, 2 ಬಿಎಚ್​​ಇಎಲ್​​ ಹಾಗೂ ಇತರೆ ಇಬ್ಬರು ಇಂಜಿಯರ್‌ಗಳು ಗಾಯಗೊಂಡಿದ್ದು, ಎಲ್ಲರನ್ನೂ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅನಂತ್‌ಪುರ ಗೇಟ್‌ ಬಳಿ ನಸುಕಿನ ಜಾವ 3.30ಕ್ಕೆ ಅವಘಡ ಸಂಭವಿಸಿರೋದಾಗಿ ಅಧಿಕಾರಿಯೊಬ್ಬರು ತಿಳಿಸಿದರು. ಆಸ್ಪತ್ರೆಗೆ ಅಲೆದಾಟ ಗಾಯಾಳುಗಳನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. …

Read More »

ಅನುಶ್ರೀ ಮೊಬೈಲ್ ತಪಾಸಣೆ ನಡೆಸಿದಾಗ ಅನುಶ್ರೀ ಕಾಲ್ ಲಿಸ್ಟ್ ನಲ್ಲಿದ್ದ ಹೆಸರು ಕಂಡು ಸ್ವತಃ ಸಿಸಿಬಿ ಅಧಿಕರಿಗಳೇ ದಂಗಾಗಿದ್ದಾರೆ.

ಮಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ನಿರೂಪಕಿ ಅನುಶ್ರೀ ಅವರ ಮೊಬೈಲ್ ಪರಿಶೀಲಿಸಿದ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಪ್ರಕರಣದಲ್ಲಿ ತಮ್ಮ ಹೆಸರು ಹೊರ ಬರುತ್ತಿದ್ದಂತೆಯೇ ಅನುಶ್ರೀ ಪ್ರಭಾವಿ ನಾಯಕರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಅನುಶ್ರೀಗೆ ನೋಟಿಸ್ ನೀಡುತ್ತಿದ್ದಂತೆಯೇ ಅನುಶ್ರೀ ಮೂವರು ಪ್ರಭಾವಿ ರಾಜಕಾರಣಿಗಳಿಗೆ ಕರೆ ಮಾಡಿದ್ದಾರೆ. ವಿಚಾರಣೆ ವೇಳೆ ಅನುಶ್ರೀ ಮೊಬೈಲ್ ತಪಾಸಣೆ ನಡೆಸಿದಾಗ ಅನುಶ್ರೀ ಕಾಲ್ ಲಿಸ್ಟ್ ನಲ್ಲಿದ್ದ ಹೆಸರು …

Read More »

ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗೆ ಪೈಪೋಟಿ : ಮುನ್ನೀರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗೆ ಪೈಪೋಟಿ ಏರ್ಪಟ್ಟಿದೆ. ಮಾಜಿ ಶಾಸಕ ಮುನಿರತ್ನ ಹಾಗೂ ತುಳಸಿ ಮುನಿರಾಜು ಗೌಡ ಅವರ ಹೆಸರುಗಳನ್ನು ಪರಿಗಣಿಸಿದ ಕೋರ್ ಕಮಿಟಿ ಸಭೆ ಕೇಂದ್ರ ಚುನಾವಣಾ ಸಮಿತಿಗೆ ರವಾನಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಸರ್ಕಾರ ರಚನೆಯಲ್ಲಿ ಸಹಕಾರ ನೀಡಿದ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಹೇಳಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ತುಳಸಿ ಮುನಿರಾಜು …

Read More »

ರಾಹುಲ್ ಗಾಂಧಿ ಅವರನ್ನು ತಡೆದು, ಬಂಧಿಸಿದ ಉತ್ತರ ಪ್ರದೇಶದ ಪೊಲೀಸರ ಕ್ರಮ ಸರಿಯಲ್ಲ: ದೇವೇಗೌಡ

ಬೆಂಗಳೂರು : ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಉತ್ತರ ಪ್ರದೇಶದ ಹತ್ರಾಸ್‍ಗೆ ತೆರಳುತ್ತಿದ್ದ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರನ್ನು ತಡೆದು, ಬಂಧಿಸಿದ ಉತ್ತರ ಪ್ರದೇಶದ ಪೊಲೀಸರ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿರುವ ಜೆಡಿಎಸ್ ವರಿಷ್ಟ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಗುರುವಾರ ಟ್ವೀಟ್ ಮಾಡಿರುವ ದೇವೇಗೌಡರು, ಎಐಸಿಸಿ ಮುಖಂಡ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು …

Read More »

‘ಸೋಂಕಿತ ವ್ಯಕ್ತಿ ಸೀನಿದಾಗ ಅಥವಾ ಕೆಮ್ಮಿದಾಗ ಹೊರ ಹೊಮ್ಮುವ ತುಂತುರು ಹನಿಗಳ ಗಾತ್ರವು 5 ಮೈಕ್ರಾನ್‌ಗಳಿಗಿಂತ ಕಡಿಮೆ ಇದ್ದಲ್ಲಿ ವೈರಾಣು ಗಾಳಿಯಲ್ಲಿ ತೇಲಿ,

ಬೆಂಗಳೂರು: ‘ಸೋಂಕಿತ ವ್ಯಕ್ತಿ ಸೀನಿದಾಗ ಅಥವಾ ಕೆಮ್ಮಿದಾಗ ಹೊರ ಹೊಮ್ಮುವ ತುಂತುರು ಹನಿಗಳ ಗಾತ್ರವು 5 ಮೈಕ್ರಾನ್‌ಗಳಿಗಿಂತ ಕಡಿಮೆ ಇದ್ದಲ್ಲಿ ವೈರಾಣು ಗಾಳಿಯಲ್ಲಿ ತೇಲಿ, ಆರು ಅಡಿಗಿಂತಲೂ ದೂರ ವ್ಯಾಪಿಸಿಕೊಳ್ಳುವ ಸಾಧ್ಯತೆ ಇರುತ್ತದೆ’ ಎಂದು ಆರೋಗ್ಯ ಕ್ಷೇತ್ರದ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಪ್ರೆಸ್ ಇನ್ಫರ್ಮೇಷನ್ ಬ್ಯುರೊದ (ಪಿಐಬಿ) ಬೆಂಗಳೂರು ಕೇಂದ್ರವು ಗುರುವಾರ ಆಯೋಜಿಸಿದ ‘ಕೊರೊನಾ ಸೋಂಕು: ಮುನ್ನೆಚ್ಚರಿಕೆಯೇ ಚಿಕಿತ್ಸೆ’ ವೆಬಿನಾರ್‌ನಲ್ಲಿ ತಜ್ಞರು ಮಾತನಾಡಿದರು. ರಾಜ್ಯ ಸರ್ಕಾರದ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ …

Read More »

ಡಿಜೆ ಹಳ್ಳಿ ಗಲಭೆ: ಸರ್ಕಾರದ ಕೈ ಸೇರಿದ ಘಟನೆಯ ಸತ್ಯಶೋಧನಾ ವರದಿ

ಬೆಂಗಳೂರು: ಡಿಜೆ ಹಳ್ಳಿ‌ ಮತ್ತು ಕೆಜಿ‌ ಹಳ್ಳಿ ಗಲಭೆ ಪ್ರಕರಣದ NIA ತನಿಖೆಗೆ ಬಿಜೆಪಿಯಲ್ಲಿ ಆಗ್ರಹ ವ್ಯಕ್ತವಾಗಿದೆ.‌ ಈ ಸಂಬಂಧ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲಾಗಿದ್ದು, SDPI ನಿಷೇಧಕ್ಕೂ ಪಕ್ಷ ಒತ್ತಾಯಿಸಿದೆ. ಡಿಜೆ ಹಳ್ಳಿಯಲ್ಲಿ ಪೊಲೀಸರನ್ನೇ ಟಾರ್ಗೆಟ್ ಮಾಡಿದ್ದ ಕಿರಾತಕರು, ರಸ್ತೆಯಲ್ಲಿ ನಿಂತಿದ್ದ ಪೊಲೀಸ್ ವಾಹನವನ್ನ ಪಲ್ಟಿ ಮಾಡಿ ಬೆಂಕಿ ಹಚ್ಚಿದ್ರು. ಪೊಲೀಸ್ ಠಾಣೆ ಆವರಣದಲ್ಲಿ ನಿಂತಿದ್ದ ವಾಹನಗಳಿಗೆ ಬೆಂಕಿ ಇಟ್ಟು, ವಾಹನವನ್ನ ಜಖಂ ಮಾಡಿದ್ರು. ಎರಡು ಪ್ರದೇಶಗಳನ್ನ ಕಟುಕರಪ …

Read More »

ಡ್ರಗ್ಸ್ ಪ್ರಕರಣದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಒಬ್ಬರನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ

ಮಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಅನೇಕರನ್ನು ಬಂಧಿಸಿ, ಜೈಲಿಗಟ್ಟಿರುವ ಸಿಸಿಬಿ ಪೊಲೀಸರು, ತಮ್ಮ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಇಂದು ಡ್ರಗ್ಸ್ ಪ್ರಕರಣದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಒಬ್ಬರನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ.ಹೀಗೆ ಬಂಧಿಸಲ್ಪಟ್ಟ ಆರೋಪಿಯೇ ಕಿಶೋರ್ ನ ಹಳೆಯ ದೋಸ್ತ್ ಆದಂತ ಸ್ಯಾಂ ಫರ್ನಾಂಡಿಸ್ ಆಗಿದ್ದಾನೆ. ಬಂದಿತ ಆರೋಪಿಯಿಂದ ನಿರೂಪಕಿ ಅನುಶ್ರೀ ಬಗ್ಗೆ ಮತ್ತಷ್ಟು ಸ್ಪೋಟಕ ಮಾಹಿತಿಯನ್ನು ಬಾಯ್ ಬಿಟ್ಟಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.ಬಂಧಿತ ಆರೋಪಿ ಸ್ಯಾಂ ಫರ್ನಾಂಡಿಸ್ ಅನ್ನು …

Read More »

50 ಜನರಿಗಿಂತ ಹೆಚ್ಚು ಜನರು ಮದುವೆಗೆ ಸೇರುವಂತಿಲ್ಲ

ಬೆಂಗಳೂರು : ಇದುವರೆಗೆ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಮದುವೆಗೆ ಅವಕಾಶ ನೀಡಲಾಗಿತ್ತು. 50 ಜನರಿಗೆ ಮಾತ್ರವೇ ಸೀಮಿತಗೊಳಿಸಲಾಗಿತ್ತು. ಆದ್ರೇ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, 50 ಜನರಿಗಿಂತ ಹೆಚ್ಚು ಜನರು ಮದುವೆಗೆ ಸೇರುವಂತಿಲ್ಲ. ಒಂದು ವೇಳೆ ಅದಕ್ಕಿಂತಲೂ ಹೆಚ್ಚಿನ ಜನರು ಸೇರಿದ್ದೇ ಆದಲ್ಲಿ, ಮದುವೆ ನಡೆಸುತ್ತಿರುವವರಿಗೆ ದಂಡ ವಿಧಿಸಲಾಗುತ್ತದೆ ಎಂಬುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ …

Read More »

ರೌಡಿಶೀಟರ್​ವೊಬ್ಬ, ಬೋಂಡಾ ತಿಂದ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಕುದಿಯುವ ಎಣ್ಣೆ ಎರಚಿ ಪರಾರಿಯಾದ ಘಟನೆ

ಬೆಂಗಳೂರು: ರೌಡಿಶೀಟರ್​ವೊಬ್ಬ, ಬೋಂಡಾ ತಿಂದ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಕುದಿಯುವ ಎಣ್ಣೆ ಎರಚಿ ಪರಾರಿಯಾದ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೇಘಲಾ ಅನ್ನೋರು ಸಂಪಿಗೆಹಳ್ಳಿ ಬಳಿ ಪಕೋಡ ಸ್ಟಾಲ್ ನಡೆಸುತ್ತಾರೆ. ನಿನ್ನೆ ಸಂಜೆ 7:30ರ ಸುಮಾರಿಗೆ ಆರೋಪಿ ಹನೀಫ್, ಮೇಘಲಾರ ಅಂಗಡಿಯಲ್ಲಿ ಬೋಂಡಾ ತಿಂದು ಸಿಗರೇಟ್ ಸೇದಿದ್ದಾನೆ. ನಂತರ ಹಣ ಕೇಳಿದ್ದಕ್ಕೆ ಬೋಂಡಾ ಕರಿಯುತ್ತಿದ್ದ ಕುದಿಯುವ ಎಣ್ಣೆಯನ್ನ ಮೇಘಲಾ ಅವರ ಮೇಲೆ ಎರಚಿದ್ದಾನೆ. ಇದರಿಂದ ಮೇಘಲಾ …

Read More »