Breaking News
Home / ಜಿಲ್ಲೆ / ಬೆಂಗಳೂರು (page 299)

ಬೆಂಗಳೂರು

ಆಟಿಕೆಗಳಂತೆ ಕೊಚ್ಚಿ ಹೋಯ್ತು ಬೈಕುಗಳು –

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎರಡನೇ ದಿನವೂ ರಾತ್ರಿ ಮಳೆ ಮುಂದುವರೆದಿದೆ. ಬುಧವಾರ ರಾತ್ರಿ ಸತತವಾಗಿ ಸುರಿದ ಮಳೆಗೆ ಮನೆ, ಅಪಾರ್ಟ್‍ಮೆಂಟ್‍ಗಳು ಜಲಾವೃತವಾಗಿವೆ. ಜನರು ಹೊರ ಬರುವುದಕ್ಕೂ ಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ. ಬುಧವಾರ ಮಳೆಗೆ ಪೂರ್ತಿ ಜಲಾವೃತವಾಗಿದ್ದ ಹೊರಮಾವು ನಗರಕ್ಕೆ ರಾತ್ರಿ ಸುರಿದ ಮಳೆ ಜಲದಿಗ್ಬಂಧನ ಹಾಕಿದೆ. ಆರ್‍ಆರ್ ನಗರದಲ್ಲಿ ರಾಜಕಾಲುವೆ ಒಡೆದುಕೊಂಡು ಮನೆಗಳಿಗೆ ನೀರು ನುಗ್ಗಿದೆ. ಬೈಕುಗಳು ಕೊಚ್ಚಿಕೊಂಡು ಹೋಗಿವೆ. ಚೊಕ್ಕಸಂದ್ರ, ಶಿವಾನಂದ ಸರ್ಕಲ್, ಪೀಣ್ಯ, ದಾಸರಹಳ್ಳಿ ಮತ್ತು …

Read More »

ಕೊರೊನಾ ಸಂಕಷ್ಟದಲ್ಲೂ ರಿಲಾಯನ್ಸ್‌ಗೆ ಹಣದ ಹೊಳೆ, ಸಿಲ್ವರ್ ಲೇಕ್‍ನಿಂದ 7,500 ಕೋಟಿ ರೂ. ಹೂಡಿಕೆ..!

ನವದೆಹಲಿ, -ಕೊರೊನಾ ವೈರಸ್ ಹಾವಳಿಯಿಂದ ದೇಶದ ಅನೇಕ ಸಂಸ್ಥೆಗಳು ತೀವ್ರ ಸಂಕಷ್ಟಕ್ಕೆ ಒಳಗಾಗಿ ಅಸ್ವಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ, ಭಾರತದ ಪ್ರತಿಷ್ಠಿತ ರಿಲಾಯನ್ಸ್ ಸಂಸ್ಥೆಗೆ ನಿರಂತರವಾಗಿ ಹಣದ ಹೊಳೆ ಹರಿದುಬರುತ್ತಿದೆ. ಅಮೆರಿಕದ ಖಾಸಗಿ ಈಕ್ವಿಟಿ ಸಂಸ್ಥೆ ಸಿಲ್ವರ್ ಲೇಕ್ ಪಾರ್ಟ್‍ನರ್ಸ್, ಹೆಸರಾಂತ ಉದ್ಯಮಿ ಮುಕೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಇಂಡಸ್ಟ್ರೀಸ್‍ನ ರಿಲಾಯನ್ಸ್ ರಿಟೈಲ್‍ನಲ್ಲಿ 7,500 ಕೋಟಿ ರೂ.ಗಳ ಬಂಡವಾಳ ಹೂಡಿಕೆ ಮಾಡಿ ಶೇ.1.75ರಷ್ಟು ಪಾಲು ಪಡೆದಿದೆ. ಸಿಲ್ವರ್ ಲೇಕ್ ಕಂಪನಿಯು ರಿಲಾ …

Read More »

ಅ.1ರಿಂದ ಚಿತ್ರಮಂದಿರ ತೆರೆಯುವ ಸಾಧ್ಯತೆ

ಬೆಂಗಳೂರು,- ಅಕ್ಟೋಬರ್ 1ರಿಂದ ಚಲನಚಿತ್ರ ಮಂದಿರಗಳನ್ನು ತೆರೆಯಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ತಿಳಿಸಿದ್ದಾರೆ. ದಕ್ಷಿಣ ಮತ್ತು ಉತ್ತರ ಭಾರತದ ವಾಣಿಜ್ಯ ಮಂಡಳಿಗಳು ಕೇಂದ್ರ ಸರ್ಕಾರಕ್ಕೆ ಚಿತ್ರಮಂದಿರಗಳನ್ನು ತೆರೆಯುವ ಸಂಬಂಧ ಮನವಿ ಸಲ್ಲಿಸಿದ್ದು, ಇದಕ್ಕೆ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದರು. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಚಿತ್ರೋದ್ಯಮದ ಯಾವುದೇ ಚಟುವಟಿಕೆಗಳು ನಡೆಯದೇ ಸಂಪೂರ್ಣ ಸ್ಥಗಿತವಾಗಿದೆ. …

Read More »

500 ಕನ್ನಡ ಪುಸ್ತಕ ಸಗಟು ಖರೀದಿಗೆ ಕ್ರಮ – ಸಚಿವ ಎಸ್ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯ ಗ್ರಂಥಾಲಯ ಇಲಾಖೆಯಿಂದ ವಾರ್ಷಿಕ ಸಗಟು ಖರೀದಿ ಯೋಜನೆಯಡಿ ಇನ್ನು ಮುಂದೆ ಕನ್ನಡ ಪುಸ್ತಕಗಳ 500 ಪ್ರತಿಗಳನ್ನು ಖರೀದಿಸಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬುಧವಾರ ರಾಜ್ಯ ಸಾರ್ವಜನಿಕ ಗ್ರಂಥಾಲಯ ನಿರ್ದೇಶನಾಲಯದಲ್ಲಿ ನೂತನ ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರಹಗಾರರ ಮತ್ತು ಪ್ರಕಾಶಕರ ಸಂಘದ ಕೋರಿಕೆಯಂತೆ ಬಹುದಿನಗಳ ನಿರೀಕ್ಷೆಯಾಗಿದ್ದ …

Read More »

ಮೈಸೂರಿನಲ್ಲಿ ವಿಷ್ಣು ಸ್ಮಾರಕಕ್ಕೆ ಭೂಮಿ ಪೂಜೆ

ಬೆಂಗಳೂರು: ಇದೇ ತಿಂಗಳ 15ರಂದು ಮೈಸೂರಿನಲ್ಲಿ ವಿಷ್ಣು ಸ್ಮಾರಕಕ್ಕೆ ಭೂಮಿ ಪೂಜೆ ನೆರವೇರಲಿದೆ ಎಂದು ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ಭೇಟಿ ಮಾಡಿ ವಿಷ್ಣು ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಮಾಡಿಕೊಂಡರು.   ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತಿ, 11ನೇ ವರ್ಷದ ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ ಸಿಂಎಂ ಅವರನ್ನ ಕರೆಯಲು ಬಂದಿದ್ದೇವೆ. …

Read More »

ಒಂದೇ ಕೊಠಡಿಯಲ್ಲಿ ನಟಿ ರಾಗಿಣಿ ಮತ್ತು ಸಂಜನಾ………………

ಬೆಂಗಳೂರು: ಮಹಿಳಾ ಸಾಂತ್ವನ ಕೇಂದ್ರದ ಒಂದೇ ಕೊಠಡಿಯಲ್ಲಿ ನಟಿ ರಾಗಿಣಿ ಮತ್ತು ಸಂಜನಾ ಮಂಗಳವಾರ ರಾತ್ರಿಯನ್ನು ಕಳೆದಿದ್ದಾರೆ. 5 ಹಾಸಿಗೆಗಳ ಪೈಕಿ ಮೊದಲ ಮತ್ತು ಕೊನೆಯ ಹಾಸಿಗೆಯನ್ನು ಇಬ್ಬರಿಗೆ ನೀಡಿದ್ದರೆ ಮಧ್ಯದಲ್ಲಿರುವ ಮೂರು ಬೆಡ್‌ಗಳನ್ನು ಭದ್ರತೆಗೆ ನಿಯೋಜನೆಗೊಂಡಿದ್ದ ಮಹಿಳಾ ಪೊಲೀಸರಿಗೆ ನೀಡಲಾಗಿತ್ತು. ರಾಗಿಣಿ ನೋಡಿ ನಟಿ ಸಂಜನಾ ಈಗ ಸಮಾಧಾನ ಆಯ್ತಾ ಕೇಳಿದ್ದಾರೆ. ರಾತ್ರಿ ಊಟ ಬೇಡ ಎಂದು ಹೇಳಿದ್ದ ಸಂಜನಾ ಕಣ್ಣೀರು ಹಾಕುತ್ತಾ ಕುಳಿತಿದ್ದರು. ಕೆಪಿಎಲ್‌ ವಿಚಾರದಲ್ಲಿ ಇಬ್ಬರು …

Read More »

ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಮಳೆ……………

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಮಳೆಯಾಗಿದ್ದು, ರಾತ್ರಿ ಪೂರ್ತಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಜೊತೆಗೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ನಗರ ಬಹುತೇಕ ಭಾಗಗಳಲ್ಲಿ ಮಳೆಯಾಗಿದ್ದು, ಸಿಲಿಕಾನ್ ಸಿಟಿಯ ಹೆಚ್‍ಎಸ್‍ಆರ್ ಲೇಔಟ್ ಮತ್ತು ಹೊರಮಾವು ಬಹುತೇಕ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಶಾಂತಿನಗರ, ಜಯನಗರ, ಬನಶಂಕರಿ, ಮೆಜೆಸ್ಟಿಕ್, ಮಲ್ಲೇಶ್ವರಂ, ಶಿವಾಜಿನಗರ, ಹೆಬ್ಬಾಳ, ರಾಜಾಜಿನಗರ, ಕೋರಮಂಗಲ, ಕೆಆರ್ ಪುರಂ ಮತ್ತು ಹೆಗ್ಡೆ ನಗರ ಸೇರಿದಂತೆ ಹಲವೆಡೆ ವರಣ …

Read More »

ಅತಿ ದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್ ಈ ವರ್ಷ ಪ್ರಸಾರವಾಗುವುದಿಲ್ಲ

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಅನೇಕ ಧಾರಾವಾಹಿ, ಸಿನಿಮಾಗಳಿಗೆ ಬ್ರೇಕ್ ಇದ್ದಿದೆ. ಇತ್ತೀಚೆಗೆ ಒಂದೊಂದೆ ಸಿನಿಮಾದ ಚಿತ್ರೀಕರಣ ಆರಂಭವಾಗುತ್ತಿದೆ. ಈ ಕನ್ನಡ ಕಿರುತೆರೆ ಲೋಕದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್ ಈ ವರ್ಷ ಪ್ರಸಾರವಾಗುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ತೆಲುಗಿನಲ್ಲಿ ಬಿಗ್‍ಬಾಸ್ ಸೀಸನ್ 4 ಆರಂಭವಾಗಿದೆ. ಹಿಂದಿಯಲ್ಲಿ ಹೊಸ ಆವೃತ್ತಿಗೆ ಎಲ್ಲ ತಯಾರಿ ನಡೆಯುತ್ತಿದ್ದು, ಅಕ್ಟೋಬರ್‍ನಲ್ಲಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಆದರೆ ಕನ್ನಡದಲ್ಲಿ ಈ ವರ್ಷ ಅಂದರೆ 2020ರಲ್ಲಿ …

Read More »

ರಾಜ್ಯದಲ್ಲಿ ಕೊರೋನಾಕ್ಕೆ 2ನೇ ಗರಿಷ್ಠ ಸಾವು

ಬೆಂಗಳೂರು : ರಾಜ್ಯದಲ್ಲಿ ಮಂಗಳವಾರ ಕೊರೋನಾ ಹೆಮ್ಮಾರಿಗೆ 146 ಮಂದಿ ಬಲಿಯಾಗಿದ್ದು, ಹೊಸದಾಗಿ 8,225 ಮಂದಿ ಕೊರೋನಾ ಸೋಂಕಿತರಾಗಿದ್ದಾರೆ. ತನ್ಮೂಲಕ ರಾಜ್ಯದಲ್ಲಿನ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.12 ಲಕ್ಷ ತಲುಪಿದೆ. ಕರೋನಾ ಸೋಂಕಿಗೆ ಮಂಗಳವಾರ 146 ಮಂದಿ ಬಲಿಯಾಗಿರುವುದು ಇದುವರೆಗಿನ ಎರಡನೇ ಗರಿಷ್ಠ ಸಾವಿನ ಪ್ರಮಾಣವಾಗಿದೆ. ಆಗಸ್ಟ್‌ 25 ರಂದು 148 ಮಂದಿ ಸೋಂಕಿಗೆ ಮೃತಪಟ್ಟಿದ್ದು ಇದುವರೆಗಿನ ದಾಖಲೆ. ರಾಜ್ಯದಲ್ಲಿ ಸದ್ಯ 96,918 ಸಕ್ರೀಯ ಕೊರೋನಾ ಪ್ರಕರಣಗಳಿದ್ದು ಇದರಲ್ಲಿ …

Read More »

ಇಂದಿನಿಂದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಬೆಸ್ಕಾಂ ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಇರುವುದರಿಂದ ಸೆ.9ರಿಂದ 13ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.     ವ್ಯತ್ಯಯವಾಗುವ ಸ್ಥಳಗಳು: ಸೆ.9ರಂದು ಗೃಹಲಕ್ಷ್ಮೀ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, 10ರಂದು ದುಗಲಮ್ಮ ಬಡಾವಣೆ, ಕಂಠೀರವ ಸ್ಟುಡಿಯೊ ರಸ್ತೆ, ನರಸಿಂಹುಲು ಬಡಾವಣೆ, ಇಟ್ಟಮಡು ಮುಖ್ಯರಸ್ತೆ, ಮಾರುತಿ ನಗರ, ಶ್ರೀನಿವಾಸ ಕಾಲೊನಿ, ಮಂಜುನಾಥ ನಗರ, ಸೀತಾ ವೃತ್ತ, 11ರಂದು ದ್ವಾರಕಾ ನಗರ, ಹೊಸಕೆರೆಹಳ್ಳಿ, ಜನಶಕ್ತಿ …

Read More »