Breaking News

ಬೆಂಗಳೂರು

ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ

ತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಮಗುವಿನ ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಹೆಗ್ಗೆರೆಯಲ್ಲಿ ಈ ಘಟನೆ ನಡೆದಿದೆ. ಹಲೀಜಾ ಖಾನಂ ನಾಯಿ ದಾಳಿಗೆ ಗಂಭೀರವಾಗಿ ಗಾಯಗೊಂಡಿರುವ ಮಗು. ಗಾಯಾಳು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಗ್ಗೆರೆ ಗ್ರಾಮಸ್ಥರು ಬೀದಿ ನಾಯಿ ಹಾವಳಿಗೆ ರೋಸಿ ಹೋಗಿದ್ದು, ನೂರಾರು ಬೀದಿ ನಾಯಿಗಳು ರಸ್ತೆಯಲ್ಲಿಯೇ ಒಡಾಡುತ್ತಿವೆ. ಮಕ್ಕಳು, ಹಿರಿಯರನ್ನು …

Read More »

ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದ ರಮೇಶ ಜಾರಕಿಹೊಳಿ,ಯತ್ನಾಳ,ಬೆಳಗ್ಗೆ 11.30ಕ್ಕೆ ಪತ್ರಿಕಾಗೋಷ್ಠಿ

ಬೆಂಗಳೂರು : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಮುಖಂಡರು ಶುಕ್ರವಾರ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಬೆಳಗ್ಗೆ 11.30ಕ್ಕೆ ಈ ಪತ್ರಿಕಾಗೋಷ್ಠಿ ನಡೆಯಲಿದೆ. ಮಾಜಿ ಸಚಿವರಾದ ರಮೇಶ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ, ಕುಮಾರ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳುವರು. ಬೆಂಗಳೂರು ಸದಾಶಿವನಗರದಲ್ಲಿರುವ ಕುಮಾರ ಬಂಗಾರಪ್ಪ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಯುವುದು. ಯಾವುದೇ ಕಾರಣದಿಂದ ವಿಜಯೇಂದ್ರ ನಾಯಕತ್ವವನ್ನು ಒಪ್ಪುವುದಿಲ್ಲ ಎಂದು ಘೋಷಿಸಿರುವ ಈ ನಾಯಕರು ಈಗಾಗಲೆ ಹಲವು …

Read More »

ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

ಬೆಂಗಳೂರು: ಜಾತಿ ಗಣತಿ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿ ಕೈಗೆತ್ತಿಕೊಳ್ಳಲು ಸರಕಾರ ಉದ್ದೇಶಿಸಿರುವ ಬೆನ್ನಲ್ಲೇ ರಾಜ್ಯದ ಪ್ರಬಲ ಸಮುದಾಯ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾ, ವರದಿಯೇ ಅವೈಜ್ಞಾನಿಕ ಮತ್ತು ಅಸಂವಿಧಾನಿಕವಾಗಿದ್ದು, ಹೊಸದಾಗಿ ಸಮೀಕ್ಷೆ ನಡೆಸುವಂತೆ ಸರಕಾರವನ್ನು ಒತ್ತಾಯಿಸಲು ನಿರ್ಣಯ ಕೈಗೊಂಡಿದೆ. ಅಷ್ಟೇ ಅಲ್ಲ, ಇದಕ್ಕೆ ಪರ್ಯಾಯವಾಗಿ ಶೀಘ್ರ ತನ್ನ ಸಮುದಾಯದ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಈ ಮಹತ್ವದ …

Read More »

ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

ಬೆಂಗಳೂರು: ಬಿಗ್‌ಬಾಸ್‌ ಕನ್ನಡ -11 (Bigg Boss Kannada-11) ನಲ್ಲಿಂದು (ಅ.19 ರಂದು) ವಾರದ ಕಿಚ್ಚನ ಪಂಚಾಯ್ತಿ ನಡೆಯಲಿದೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ವಾಗ್ವಾದವೊಂದು ವಿಕೋಪಕ್ಕೆ ತಿರುಗಿ ಒಬ್ಬರಲ್ಲ, ಇಬ್ಬರು ಸ್ಪರ್ಧಿಗಳು ಒಂದೇ ದಿನ ಮನೆಯಿಂದ ಆಚೆ ಹೋಗಿದ್ದಾರೆ. ಜಗದೀಶ್‌ ಹಾಗೂ ರಂಜಿತ್‌ ದೊಡ್ಮನೆಯಿಂದ ವಾರದ ಮಧ್ಯದಲ್ಲೇ ಆಚೆ ಹೋಗಿದ್ದಾರೆ. ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹಾಗೂ ನಿಂದನೆಯ ಪದಗಳನ್ನು ಬಳಸಿದ್ದರು ಎನ್ನುವ ಕಾರಣಕ್ಕೆ ಜಗದೀಶ್ ಅವರ ಮೇಲೆ …

Read More »

5, 8,9, 11ನೇ ತರಗತಿ ವಿದ್ಯಾರ್ಥಿಗಳಿಗೆ ಶುಭಸುದ್ದಿ: ಬೋರ್ಡ್‌ ಪರೀಕ್ಷೆ ಇಲ್ಲ!

ಬೆಂಗಳೂರು: ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇನ್ನೂ ಇತ್ಯರ್ಥವಾಗದೆ ಇರುವ ಹಿನ್ನೆಲೆಯಲ್ಲಿ 5, 8, 9 ಹಾಗೂ 11ನೇ ತರಗತಿಗೆ ಈ ವರ್ಷ ಬೋರ್ಡ್‌ ಪರೀಕ್ಷೆ ನಡೆಸುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೋರ್ಡ್‌ ಪರೀಕ್ಷೆ ಬದಲು ಸಂಕಲಾತ್ಮಕ ಮೌಲ್ಯಮಾಪನ (ಎಸ್‌ಎ-2)ವನ್ನು 5, 8 ಹಾಗೂ 9ನೇ ತರಗತಿ ಮಾಡ ಲಾಗುವುದು. 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು …

Read More »

ವರ್ಗಾವಣೆ ಕೋರಿ ಆಯುಕ್ತರ ಕಚೇರಿಗೆ ಬರಬೇಡಿ : ಬಿ.ದಯಾನಂದ ಖಡಕ್‌ ಎಚ್ಚರಿಕೆ

ಬೆಂಗಳೂರು,ಅ.4- ವರ್ಗಾವಣೆ ಕೋರಿ ನೇರವಾಗಿ ಆಯುಕ್ತರ ಕಚೇರಿಗೆ ಬರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌‍ ಆಯುಕ್ತ ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ. ಅಡುಗೋಡಿಯ ಸಿಎಆರ್‌ ಕವಾಯತು ಮೈದಾನದಲ್ಲಿ ಹಮಿಕೊಂಡಿದ್ದ ಮಾಸಿಕ ಕವಾಯತಿನಲ್ಲಿ ವಂದನೇ ಸ್ವೀಕರಿಸಿ ಮಾತನಾಡಿದ ಅವರು, ನಾವು ವರ್ಷದ ಕೊನೆಯ ಘಟ್ಟಕ್ಕೆ ಬಂದಿದ್ದೇವೆ. ಆದರೂ ಸಹ ಆಯುಕ್ತರ ಕಚೇರಿಗೆ ಕೆಲವು ಅಧಿಕಾರಿ ಮತ್ತು ಸಿಬ್ಬಂದಿಗಳು ಕೋರಿಕೆ ಪತ್ರವನ್ನು ಹಿಡಿದು ವರ್ಗಾವಣೆಗಾಗಿ ಬರುತ್ತಿದ್ದಾರೆ. …

Read More »

ಮುಡಾ ಹಗರಣ : ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ನೋಟಿಸ್‌‍

ಬೆಂಗಳೂರು,ಅ.2- ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್‌‍ ನೀಡಿದ್ದಾರೆ. ಮೊದಲ ಬಾರಿಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಪ್ರಕರಣದ ಸಾಕ್ಷ್ಯಾಧಾರ ಮತ್ತು ದಾಖಲೆ ಸಲ್ಲಿಸುವಂತೆ ಇ.ಡಿ ಸಮನ್‌್ಸ ನೀಡಿದೆ. ಈ ಮೂಲಕ ಇ.ಡಿ ಅಧಿಕೃತವಾಗಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದಂತಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದಲ್ಲಿರುವ ನಿರ್ದೇಶನಾಲಯದ ಕಚೇರಿಗೆ …

Read More »

ಬಿಗ್ ಬಾಸ್ ಮನೆಯಿಂದ ಫೈರ್ ಬ್ರ್ಯಾಂಡ್ ‘ಚೈತ್ರಾ ಕುಂದಾಪುರ’ ಔಟ್ ..?

ಬೆಂಗಳೂರು : ಕಳೆದ ಭಾನುವಾರದಿಂದ ಬಿಗ್ ಬಾಸ್ ಸೀಸನ್ 11 ಆರಂಭವಾಗಿದ್ದು , ಸ್ಪರ್ಧಿಗಳ ಅಸಲಿ ಆಟ ಶುರುವಾಗಿದೆ. ಮೊದಲ ವಾರವೇ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಔಟ್ ಆಗಲಿದ್ದಾರಾ ಎಂಬ ಪ್ರಶ್ನೆ ಹಲವರನ್ನು ಕಾಡುತ್ತಿದೆ. ಹೌದು. ಚೈತ್ರಾ ಕುಂದಾಪುರ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರ ಕಳುಹಿಸುವಂತೆ ಕಲರ್ಸ್ ಕನ್ನಡ ಚಾನಲ್ ಗೆ ನೊಟೀಸ್ ನೀಡಲಾಗಿದೆ.     ವರ್ಷದ ಹಿಂದಷ್ಟೇ ಖ್ಯಾತ ಉದ್ಯಮಿ ಗೋವಿಂದಬಾಬು ಪೂಜಾರಿ …

Read More »

ಇನ್ಮುಂದೆ ಇವರಿಗೆ ಬರಲ್ಲ `ಗೃಹಲಕ್ಷ್ಮಿ’ ಹಣ!

ಬೆಂಗಳೂರು: ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಲಾಗಿದೆ.   ಗೃಹ ಲಕ್ಷ್ಮೀ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ …

Read More »

ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

ಬೆಂಗಳೂರು: ಅಭ್ಯರ್ಥಿಗಳಿಗೆ ಆಗುತ್ತಿದ್ದ ಅನನು ಕೂಲ ಮತ್ತು ಆ ಸಂಬಂಧ ನ್ಯಾಯಾ ಲಯದ ಸೂಚನೆ ಮೇರೆಗೆ ಸರಕಾರ ಕೊನೆಗೂ ಮತ್ತೂಮ್ಮೆ ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ. ಇದರೊಂದಿಗೆ ಯುಪಿಎಸ್ಸಿ ಮುಖ್ಯ ಪರೀಕ್ಷೆ ಬರೆಯಲಿರುವ 102 ಅಭ್ಯರ್ಥಿಗಳು ನಿಟ್ಟುಸಿರು ಬಿಡು ವಂತಾಗಿದೆ. ಸೂಕ್ತ ದಿನಾಂಕ ವನ್ನು ಒಂದೆರಡು ದಿನಗಳಲ್ಲಿ ಪ್ರಕ ಟಿಸ ಲಾಗುವುದು ಎಂದು ಗೃಹ ಸಚಿವ ಡಾ| ಪರಮೇಶ್ವರ್‌ ಹೇಳಿದ್ದಾರೆ. 402 ಪಿಎಸ್‌ಐಗಳ ನೇಮಕಾತಿಗಾಗಿ ಸೆ. 22ರಂದು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿ ವೇಳಾಪಟ್ಟಿ ಯನ್ನೂ ಪ್ರಕಟಿಸಿತ್ತು. ಆದರೆ …

Read More »