Breaking News

ಬೆಂಗಳೂರು

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ದೆಹಲಿಗೆ ಭೇಟಿ ನೀಡೋದ್ರಲ್ಲಿ ತಪ್ಪಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪವರ್ ಫೈಟ್, ದಾವಣಗೆರೆ ಬೈ ಎಲೆಕ್ಷನ್ ಜಟಾಪಟಿ ನಡುವೆ ಹಿರಿಯ ಶಾಸಕರು ಮಿನಿಸ್ಟರ್ ಗಾದಿಗಾಗಿ ಡೆಲ್ಲಿ ಪರೇಡ್ ಮಾಡ್ತಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 30 ಶಾಸಕರು ಮಂತ್ರಿಗಿರಿಗೆ ಹಕ್ಕೊತ್ತಾಯ ಮಾಡಲು ಬೆಂಗಳೂರಿನಿಂದ ದೆಹಲಿಗೆ ತೆರಳಿದ್ರು. ಸುಮಾರು 30 ಜನ ಕಾಂಗ್ರೆಸ್ ಹಿರಿಯ ಶಾಸಕರು ದೆಹಲಿ ವಿಮಾನ ಹತ್ತಿದ್ದಾರೆ. …

Read More »

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: 1ನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಂಬಂಧ ರಾಜ್ಯ ಸರ್ಕಾರ  ಅಧಿಕೃತ ಆದೇಶ ಹೊರಡಿಸಿದೆ. 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳವರೆಗೆ ಮಿತಿ ಸಡಿಲ  ಮಾಡಿತ್ತು. ಇಂದು ಅಧಿಕೃತವಾಗಿ ಆದೇಶ ಮಾಡಿದೆ. ಈ ಮಿತಿ ಸಡಿಲ ಆದೇಶ 2026-27ನೇ ಸಾಲಿನ ದಾಖಲಾತಿಗೆ ಮಾತ್ರ ಅನ್ವಯ ಆಗುವಂತೆ ಆದೇಶ ಮಾಡಲಾಗಿದೆ. ಶಾಲೆಯ ಪ್ರಾರಂಭ ಜೂನ್ 1 ರಿಂದ ಅನ್ವಯವಾಗುವಂತೆ 60 ದಿನದ ಅವಧಿಗೆ ಮಗುವಿನ …

Read More »

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

ದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ  ಅವರು ಹೈಕಮಾಂಡ್‌ಗೆ   ದೂರು ನೀಡಿದ್ದಾರೆ. ಸಚಿವರಾದ ಜಮೀರ್ ಅಹಮದ್, ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮದ್ ವಿರುದ್ಧ ಎರಡು ಪುಟಗಳ ಸಂಪೂರ್ಣ ವರದಿ ಸಮೇತ ಸುರ್ಜೇವಾಲಾ ಅವರು ದೂರು ದಾಖಲಿಸಿದ್ದು, ಮೂವರ ಮೇಲೆ ಕ್ರಮವಹಿಸುವಂತೆ ಉಲ್ಲೇಖಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ …

Read More »

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಗೆ ಶುಕ್ರವಾರ (ಏ.10) ನಡೆದ ಲಿಖಿತ ಪರೀಕ್ಷೆ ಬಳಿಕ ಒಂದು ಗಂಟೆಯಲ್ಲೇ ಎಲ್ಲ ಓಎಂಆರ್ ಶೀಟ್‌ಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು, ಬೆಂಗಳೂರಿನ ಎರಡು ಮತ್ತು ಧಾರವಾಡದ ಮೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಮುಗಿದ ಕ್ಷಣದಿಂದಲೇ ಓಎಂಆರ್ ಶೀಟ್‌ಗಳನ್ನು ಸ್ಕ್ಯಾನ್ ಮಾಡಿ, ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗಿದೆ …

Read More »

ಖಾಸಗಿ ಇಂಧನ‌ ಕಂಪನಿಗಳ‌ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಆಹಾರ ಸಚಿವ:- ಮುನಿಯಪ್ಪ.

ವಸಂತನಗರ: ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ‌ ರವರು ಇಂದು ವಸಂತನಗರದ ಆಹಾರ ಭವನದಲ್ಲಿ ಖಾಸಗಿ ಇಂಧನ ಕಂಪನಿಗಳ ಮುಖ್ಯಸ್ಥರೊಂದಿಗೆ ಸಭೆಯನ್ನು ನಡೆಸಿದರು. ಮಾರುಕಟ್ಟೆಯಲ್ಲಿ ಗ್ರಾಹಕರು ನಿಮಗೆ ಅತ್ಯವಶ್ಯಕ ವಾಗಿದ್ದು ಈ ಕಷ್ಟದ ಸಂದರ್ಭದಲ್ಲಿ ಗ್ರಾಹಕರಿಗಾಗಿ ಧರ ಹೆಚ್ಚಿಸದೆ ಒಂದೆ ದರವನ್ನು ವಿಧಿಸಲು ನಿಮ್ಮ ಮಾಲಿಕರೊಂದಿಗೆ ಚರ್ಚಿಸಿ ಸರ್ಕಾರದ ದರವನ್ನು ಪಾಲಿಸುವಂತೆ ಮನವರಿಕೆ ಮಾಡಲು ಸಲಹೆ ನೀಡಿದರು ಖಾಸಗಿ ಕಂಪನಿಗಳ ಹೆಚ್ಚನ ಧರದಿಂದ ಗ್ರಾಹಕರಲ್ಲಿ ಗೊಂದಲ ಉಂಟಾಗಿದ್ದು ಆದಷ್ಟು ಕಡಿಮೆ ಮಾಡಿದರೆ ಗ್ರಾಹಕರಿಗೆ …

Read More »

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ  ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ಪ್ರಕಟಿಸಲಿದೆ. ಕಳೆದ 6 ತಿಂಗಳಿಂದ ಪ್ರಕರಣದ ವಿಚಾರಣೆ ನಡೆಸುತ್ತಾ ಇದ್ದ ನ್ಯಾಯಾಲಯ ಸಂಪೂರ್ಣ ವಾದ-ಪ್ರತಿವಾದ ಆಲಿಸಿತ್ತು. ಮಾರ್ಚ್ ಕೊನೆಯ ವಾರದಲ್ಲಿ ವಾದ ಸಂಪೂರ್ಣವಾಗಿ ಆಲಿಸಿದ್ದ ನ್ಯಾಯಾಲಯ ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಏಪ್ರಿಲ್ 2 ರಂದು ಎಲ್ಲರೂ …

Read More »

ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತ ಮರುಪರಿಶೀಲಿಸಿ, ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿಯ  ಕ್ಷೇತ್ರದಲ್ಲಿ ಮತದಾನವಾಗಿರುವ ಒಟ್ಟು ಪೋಸ್ಟಲ್ ಬ್ಯಾಲೆಟ್​ನಲ್ಲಿ ತಿರಸ್ಕೃತಗೊಂಡಿರುವ 279 ಮತಗಳನ್ನು ಮರುಪರಿಶೀಲನೆ ನಡೆಸಿ, ಹೊಸದಾಗಿ ಫಲಿತಾಂಶ ಪ್ರಕಟ ಮಾಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್  ನಿರ್ದೇಶನ ನೀಡಿದೆ. ಶೃಂಗೇರಿ ಕ್ಷೇತ್ರದಿಂದ ಜಯ ಗಳಿಸಿರುವ ಟಿ. ಡಿ. ರಾಜೇಗೌಡ  ಅವರ ಆಯ್ಕೆ ಅಸಿಂಧು ಎಂದು ಘೋಷಣೆ ಮಾಡಬೇಕು ಎಂದು ಪರಾಜಿತ ಅಭ್ಯರ್ಥಿ ಡಿ. ಎನ್. ಜೀವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. …

Read More »

ನೂರಕ್ಕೆ ನೂರರಷ್ಟು ಸಮರ್ಥ್‌ ಗೆಲ್ಲಿಸುವ ಕೆಲಸ ಮಾಡ್ತೀನಿ: ಜಮೀರ್ ಅಹ್ಮದ್

ದಾವಣಗೆರೆ: ಇಲ್ಲಿನ ದಕ್ಷಿಣ ಕ್ಷೇತ್ರದ  ಉಪಚುನಾವಣೆಯಲ್ಲಿ  ಕಾಂಗ್ರೆಸ್‌  ಅಭ್ಯರ್ಥಿ ಸಮರ್ಥ್‌ ಶಾಮನೂರು  ಅವರನ್ನು ನೂರಕ್ಕೆ ನೂರರಷ್ಟು ಗೆಲ್ಲಿಸುವ ಕೆಲಸ ಮಾಡ್ತೀನಿ ಎಂದು ಜಮೀರ್ ಅಹ್ಮದ್  ಹೇಳಿದ್ದಾರೆ. ದಾವಣಗೆರೆಯಲ್ಲಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್‌ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಾನು ಕೇರಳದಲ್ಲಿ ಸ್ಟಾರ್ ಪ್ರಚಾರಕನಾಗಿದ್ದೆ. ಹತ್ತು ಕ್ಷೇತ್ರ ಕೊಟ್ಟಿದ್ದರು. ಇಂದು (ಏ.5) ಇಲ್ಲಿಗೆ ಬರುತ್ತೇನೆ ಎಂದು ಹೇಳಿದ್ದೆ. ದಾವಣಗೆರೆಗೆ ಬಂದಿದ್ದೇನೆ ಸಮರ್ಥ್ ಗೆಲ್ಲಿಸಿಕೊಂಡು ಹೋಗುತ್ತೇನೆ. ನೂರಕ್ಕೆ ನೂರರಷ್ಟು ಸಮರ್ಥ್ ಗೆಲ್ಲಿಸುವ ಕೆಲಸ ಮಾಡುತ್ತೇನೆ …

Read More »

ಮುಖ್ಯಮಂತ್ರಿ ,ಉಪ ಮುಖ್ಯಮಂತ್ರಿ ಹಾಗೂ ಮಹದೇವಪ್ಪ ರವರ ನೇತೃತ್ವದಲ್ಲಿ ಒಳಮೀಸಲಾತಿ ಅನುಷ್ಠಾನವಾಗಲಿದೆ ವೀನಾ ಕಾರಣ ಗೊಂದಲಕ್ಕೆ ಒಳಗಾಗದಿರಿ ಆಹಾರ ಸಚಿವ:- ಕೆಹೆಚ್. ಮುನಿಯಪ್ಪ

ಹಸಿರುಕ್ರಾಂತಿ ಹರಿಕಾರ, ರಾಷ್ಟ್ರ ನಾಯಕ, ಮಾಜಿ ಉಪ ಪ್ರಧಾನಿ ಹಾಗೂ ತಳ ಸಮುದಾಯಗಳ ಆಶಾಕಿರಣ ಡಾ. ಬಾಬು ಜಗಜೀವನರಾಮ್ ರವರ 119ನೇ ಜಯಂತೋತ್ಸವದಲ್ಲಿ ಬಾಬುಜಿ ರವರ ಪ್ರತಿಮೆಗೆ ಪುಷ್ಪಾರ್ಚನೆ ನಡೆಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರ. ವಿಧಾನ ಸೌಧದ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು. ಹಸಿರುಕ್ರಾಂತಿ ಹರಿಕಾರ, ರಾಷ್ಟ್ರ ನಾಯಕ, ಮಾಜಿ ಉಪ ಪ್ರಧಾನಿ ಸಮರ್ಥ ಸಂಸದೀಯ ಹೋರಾಟಗಾರ ಮತ್ತು ಹಿರಿಯ ದಲಿತ …

Read More »

ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ತಮಟೆ ಚಳುವಳಿ

ರಾಮನಗರ: ಗ್ಯಾಸ್ ಸಮಸ್ಯೆ  ಬಗೆಹರಿಸದ ಸರ್ಕಾರದ ವಿರುದ್ಧ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್  ಪ್ರತಿಭಟನೆ ನಡೆಸಿದ್ದು, ರಾಮನಗರದ ಐಜೂರು ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತಮಟೆ ಚಳುವಳಿ ನಡೆಸಿದ್ದಾರೆ. ಗ್ಯಾಸ್ ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ. ರಾಜ್ಯದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳು ಉಪಚುನಾವಣೆಯಲ್ಲಿ ಮುಳುಗಿವೆ. ಆಟೋ ಚಾಲಕರು, ಹೋಟೆಲ್ ಮಾಲೀಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ನಿತ್ಯ ಬಂಕ್ ಮುಂದೆ ಆಟೋ …

Read More »