Breaking News
Home / ಜಿಲ್ಲೆ / ಬೆಂಗಳೂರು (page 300)

ಬೆಂಗಳೂರು

ಅಧಿವೇಶನಕ್ಕೆ ಹಾಜರಾಗುವ ಸಚಿವರು-ಶಾಸಕರು-ಅಧಿಕಾರಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ

ಬೆಂಗಳೂರು,ಸೆ.8- ಇದೇ 21ರಂದು ಆರಂಭವಾಗಲಿರುವ ಮಳೆಗಾಲದ ಅಧಿವೇಶನದ ಕಲಾಪದಲ್ಲಿ ಪಾಲ್ಗೊಳ್ಳುವ ಮುಖ್ಯಮಂತ್ರಿ, ಸಚಿವರು, ಶಾಸಕರು, ಅಧಿಕಾರಿಗಳು ಹಾಗೂ ಮಾಧ್ಯಮದವರು ಸೇರಿದಂತೆ ಪ್ರತಿಯೊಬ್ಬರು ಕಡ್ಡಾಯವಾಗಿ ಮೂರು ದಿನ ಮುಂಚಿತವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿವೇಶನದಲ್ಲಿ ಪಾಲ್ಗೊಳ್ಳುವ ಜನಪ್ರತಿನಿಧಿಗಳು, ಅಧಿಕಾರಿ ವರ್ಗ ಸೇರಿದಂತೆ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಆರೋಗ್ಯ ಅಧಿಕಾರಿಗಳು ದೃಢೀಕರಿಸಿದ ಪ್ರಮಾಣ ಪತ್ರವನ್ನು ಪ್ರದರ್ಶಿಸಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ …

Read More »

ಈ ಬಾರಿಯ 2020ರ ದಸರಾವನ್ನು ಸರಳವಾಗಿ ಆಚರಿಸಲಾಗುವುದು

ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಈ ಬಾರಿಯ 2020ರ ದಸರಾವನ್ನು ಸರಳವಾಗಿ ಆಚರಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ. ದಸರಾ ಆಚರಣೆ ಕುರಿತು ಚರ್ಚಿಸಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು. ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಸಿಟಿ ರವಿ, ಚಾಮುಂಡಿ ಬೆಟ್ಟ, ಅರಮನೆಗೆ ಮಾತ್ರ ಈ ಬಾರಿ ದಸರಾ ಸೀಮಿತವಾಗಿರಬೇಕು ಎಂದು ಉನ್ನತ …

Read More »

ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನು ನಾಮಕರಣ ಮಾಡಿದೆ.

ಬೆಂಗಳೂರು: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನು ನಾಮಕರಣ ಮಾಡಿದೆ. ಇಂದು ನಾಮಕರಣದ ಕಾರ್ಯಕ್ರಮವನ್ನು ಸಿಎಂ ಯಡಿಯೂರಪ್ಪನವರು ಉದ್ಘಾಟನೆ ಮಾಡಿದ್ದಾರೆ. ಯಲಹಂಕದ ಡೈರಿ ಸರ್ಕಲ್ ಬಳಿ ಇರುವ ಮೇಲ್ಸೇತುವೆಗೆ ವೀರ ಸಾವರ್ಕರ್ ಅವರ ಹೆಸರನ್ನು ಇಡಲಾಗಿದೆ. 388.35 ಮೀಟರ್ ಉದ್ದದ ಈ ಮೇಲ್ಸೇತುವೆಯನ್ನು ಬಿಬಿಎಂಪಿಯಿಂದ 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.   ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಕಾಂಗ್ರೆಸ್, ಜೆಡಿಎಸ್ ವಿರೋಧಿಸಿತ್ತು. ಹೀಗಾಗಿ …

Read More »

ಬರೋಬ್ಬರಿ 24 ಮಂದಿಯ ಹೆಸರನ್ನು ರಿಲೀವ್ ಮಾಡಿದ್ದಾರೆ:ಸಂಜನಾ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ಮಾಡುತ್ತಿದ್ದು, ಈ ವೇಳೆ ಸಂಜನಾ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ಸಂಜನಾರನ್ನು ಅಧಿಕಾರಿಗಳು ಪ್ರಶ್ನೆ ಮಾಡುತ್ತಿದ್ದಾರೆ. ವಿಚಾರಣೆ ವೇಳೆ ಸಂಜನಾ ಬರೋಬ್ಬರಿ 24 ಮಂದಿಯ ಹೆಸರನ್ನು ರಿಲೀವ್ ಮಾಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಮೊದಲಿಗೆ ಸಂಜನಾ ಯಾವ ಪ್ರಶ್ನೆಗಳಿಗೂ ಸರಿಯಾಗಿ ಉತ್ತರ ಕೊಡುತ್ತಿರಲಿಲ್ಲ. ನಂತರ ಸಿಸಿಬಿ ಅಧಿಕಾರಿಗಳು …

Read More »

ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ : ಜಂಬೂ ಸವಾರಿಗೆ ಬ್ರೇಕ್!

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಈ ಬಾರಿ ಸರಳವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಸಚಿವ ಸಿ.ಟಿ. ರವಿ, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ. ದಸರಾದಲ್ಲಿ ಜಂಬೂ ಸವಾರಿ ಇರಲ್ಲ, ಕೇವಲ ಅರಮನೆ ಒಳಗಡೆ ಮಾತ್ರ …

Read More »

ಗುಡ್ ನ್ಯೂಸ್: ಬಿಡುಗಡೆಯಾದವರ ಸಂಖ್ಯೆ ಭಾರೀ ಹೆಚ್ಚಳ – 5773 ಜನರಿಗೆ ಸೋಂಕು, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ 5773 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 4,04,324 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ನಿನ್ನೆ 8015 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 3,00,770 ಜನ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ 141 ಮಂದಿ ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 6134 ಕ್ಕೆ ಏರಿಕೆಯಾಗಿದೆ. 97,001 ಸಕ್ರಿಯ ಪ್ರಕರಣಗಳಿದ್ದು, 794 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ಬಾಗಲಕೋಟೆ 126, ಬಳ್ಳಾರಿ 266, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು …

Read More »

ಕರಾವಳಿ: ಇಂದು ಧಾರಾಕಾರ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಸೆ.8ರಿಂದ 11ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.3. ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು …

Read More »

ಪೃಥ್ವಿ ಶೆಟ್ಟಿ ನೀಡಿದ ಹೇಳಿಕೆಯ ಆಧಾರದ ಮೇಲೆ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಇವೆಂಟ್‌ ಮ್ಯಾನೇಜ್ಮೆಂಟ್‌ ಕಂಪನಿ ನಡೆಸುತ್ತಿರುವ ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ನೀಡಿದ ಹೇಳಿಕೆಯ ಆಧಾರದ ಮೇಲೆ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ದಾಳಿ ನಡೆಸಿದೆ ಎನ್ನಲಾಗಿದೆ. ಇಂದಿರಾನಗರದಲ್ಲಿರುವ ನಟಿ ಸಂಜನಾ ನಿವಾಸದ ಮೇಲೆ ಇಂದು ಬೆಳ್ಳಬೆಳಗ್ಗೆ ಇನ್ಸ್‌ಪೆಕ್ಟರ್‌ ಪುನೀತ್‌ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.ಕಳೆದ ವಾರ ನಟಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿ ಬಳಿಕ …

Read More »

ಜಮೀರ್, ರಾಗಿಣಿ ಯಾರೇ ಆಗಲಿ-ಡ್ರಗ್ಸ್ ಮಾಫಿಯಾ ಕುರಿತು ತನಿಖೆ ಮಾಡಲಿ: ಸಿದ್ದರಾಮಯ್ಯ

ಬೆಂಗಳೂರು: ಸೆಪ್ಟಂಬರ್ 21 ರಿಂದ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಡ್ರಗ್ಸ್ ಮಾಫಿಯದ ವಿರುದ್ಧ ಧ್ವನಿ ಎತ್ತೋಣ. ಡ್ರಗ್ಸ್ ಮಾಫಿಯದ ಬಗ್ಗೆಯೇ ಮೊದಲ ದಿನ ಸದನದಲ್ಲಿ ಚರ್ಚೆ ಮಾಡೋಣ. ಆನಂತರ ಬೇರೆ ವಿಷಯ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಶಾಸಕರಿಗೆ ಸೂಚನೆ ನೀಡಿದ್ದಾರೆ. ಇಂದು ಪಕ್ಷದ ಎಂಎಲ್‍ಎ, ಎಂಎಲ್‍ಸಿಗಳ ಜೊತೆಗೆ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ವಿಧಾನಮಂಡಲ ಅಧಿವೇಶನದ …

Read More »

ಈ ಬಾರಿಯ ಪ್ರವಾಹದಿಂದಾಗಿ ರಾಜ್ಯದಲ್ಲಿ ಒಟ್ಟು 8,071 ಕೋಟಿ ರೂ.ಗಳಷ್ಟು ನಷ್ಟ:B.S.Y.

ಬೆಂಗಳೂರು: ಪ್ರವಾಹದಿಂದಾಗಿ ಈ ಬಾರಿ ಸಹ ಭಾರೀ ಪ್ರಮಾಣದಲ್ಲಿ ಹಾನಿಯಾಗಿದ್ದು, 8,071 ಕೋಟಿ ರೂ.ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೇಂದ್ರ ಅಧ್ಯಯನ ತಂಡಕ್ಕೆ ಮಾಹಿತಿ ನೀಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪ್ರವಾಹದ ಹಾನಿಯ ಸಮೀಕ್ಷೆಗೆ ಕೇಂದ್ರ ಗೃಹ ಮಂತ್ರಾಲಯದ ಕೆ.ವಿ.ಪ್ರತಾಪ್ ನೇತೃತ್ವದ ತಂಡ ಆಗಮಿಸಿತ್ತು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ತಂಡ ಭೇಟಿ ಮಾಡಿ ವಿವರ ಪಡೆಯಿತು. ಈ ವೇಳೆ ರಾಜ್ಯದಲ್ಲಿ ಹಾನಿಯಾಗಿರುವ ಕುರಿತು ಸಿಎಂ ವಿವರಿಸಿದರು. ಈ …

Read More »