ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಕಾಂಗ್ರೆಸ್‌ನ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಧ್ಯದ ಜಟಾಪಟಿಗೆ ವಿಧಾನಸಭೆ ಬುಧವಾರ ಸಾಕ್ಷಿಯಾಯಿತು. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಉತ್ತರ ನೀಡಿದ ಸುಧಾಕರ್, ‘ಸಚಿವರನ್ನು ಒಳಗೊಂಡ ಕಾರ್ಯಪಡೆ ಸಭೆಯಲ್ಲಿ ಚರ್ಚಿಸಿ ಪಿಪಿಇ ಕಿಟ್‌ಗಳ ಖರೀದಿ ಮಾಡಲಾಗುತ್ತಿದೆ’ ಎಂದರು. ಆಗ ಎದ್ದು ನಿಂತ ರಮೇಶ್ ಕುಮಾರ್, ‘ಪಿಪಿಇ ಕಿಟ್‌ಗಳ ಖರೀದಿ ದರದ ಏರಿಳಿತವನ್ನು ಸಚಿವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಮೊದಲು ಕಿಟ್‌ಗಳನ್ನು ₹300ಕ್ಕೆ …
Read More »ಲಾಕ್‍ಡೌನ್ ಅವಧಿಯನ್ನು ಮುಗಿಸಿ ಮತ್ತೆ ಚಿತ್ರೀಕಣಕ್ಕೆ ಹೊರಡಲು ಸಿದ್ಧರಾಗಿದ್ದಾರೆ. ಧ್ರುವ
ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಲಾಕ್‍ಡೌನ್ ಅವಧಿಯನ್ನು ಮುಗಿಸಿ ಮತ್ತೆ ಚಿತ್ರೀಕಣಕ್ಕೆ ಹೊರಡಲು ಸಿದ್ಧರಾಗಿದ್ದಾರೆ. ಸದ್ಯಕ್ಕೆ ಧ್ರುವ ಬಹು ನಿರೀಕ್ಷೆಯ ‘ಪೊಗರು’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದು, ಈಗ ಮತ್ತೊಂದು ಹಾಡಿನ ಚಿತ್ರೀಕರಣಕ್ಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಚಿತ್ರತಂಡ ‘ಪೊಗರು’ ಸಿನಿಮಾದ ಟೈಟಲ್ ಸಾಂಗ್ ಸೆರೆಹಿಡಿಯುತ್ತಿದೆ. ಈ ಹಾಡನ್ನು ಬೆಂಗಳೂರಿನಲ್ಲೇ ಚಿತ್ರೀಕರಣ ಮಾಡಲಾಗುತ್ತಿದೆ. ಅಲ್ಲದೇ ‘ಪೊಗರು’ ಚಿತ್ರದ ಟೈಟಲ್ ಹಾಡಿನ ಚಿತ್ರೀಕರಣಕ್ಕೆ ಬರೋಬ್ಬರಿ 1.50 ಕೋಟಿಯ …
Read More »ಕೆಪಿಸಿಸಿ_ಕಾರ್ಯಾಧ್ಯಕ್ಷ_ಸತೀಶ_ಜಾರಕಿಹೊಳಿ_ನೇತೃತ್ವದಲ್ಲಿ_ಸಹಕಾರ_ಸಚಿವ_ಟಿ_ಸೋಮಶೇಖರಗೆ_ಮನವಿ…
ಬೆಂಗಳೂರು- ಬೆಂಗಳೂರಲ್ಲಿ ಹಂಗೇನಿಲ್ಲ,ಎಲ್ಲಾರೂ ಸೇರ್ಕೊಂಡು ಮನವಿ ಕೊಡ್ತಾರೆ ಅನ್ನೋದು,ಪೋಟೋ ನೋಡಿದ್ರೆ ನಿಮಗೆ ಗೊತ್ತಾಗುತ್ತದೆ. ಬೆಳಗಾವಿ ಎಪಿಎಂಸಿ ಮಾರುಕಟ್ಟೆಯ ಆಡಳಿತ ಮಂಡಳಿಯ ನಿಯೋಗ ಇಂದು,ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಸಹಕಾರ,ಮತ್ತು ಎಪಿಎಂಸಿ ಸಚಿವ ಟಿ.ಸೋಮಸೇಖರ್ ಅವರು ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿತು. ಬೆಳಗಾವಿ ಎಪಿಎಂಸಿಯ ಬಾಕಿ ಉಳಿದಿರುವ ಆರ್ ಡಿ ಪಿ ಯೋಜನೆಯ 15 ಕೋಟಿ ರೂ ಅನುದಾನ ಬಿಡುಗಡೆ ಮಾಡಬೇಕು,ಬೆಳಗಾವಿ ಎಪಿಎಂಸಿ ಮಾರುಕಟ್ಟೆಯ ಅಭಿವೃದ್ಧಿಗಾಗಿ,ಹೆಚ್ಚುವರಿಯಾಗಿ 15 ಕೋಟಿ …
Read More »ದಿಗಂತ್‍ಗೆ 2ನೇ ಬಾರಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು.
ಬೆಂಗಳೂರು: ಡ್ರಗ್ಸ್ ಮಾಫಿಯಾ ನಂಟಿನ ಆರೋಪದ ಮೇರೆಗೆ ಸ್ಯಾಂಡಲ್‍ವುಡ್ ಸ್ಟಾರ್ ನಟ ದೂದ್‍ಪೇಡ ದಿಗಂತ್‍ರನ್ನು ಸಿಸಿಬಿ ಪೊಲೀಸರು 2ನೇ ಬಾರಿ ವಿಚಾರಣೆ ಆರಂಭಿಸಿದ್ದಾರೆ. ದಿಗಂತ್‍ಗೆ 2ನೇ ಬಾರಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಸಿಸಿಬಿ ಅಧಿಕಾರಿಗಳ ನೋಟಿಸ್ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯದಲ್ಲಿ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದ ದಿಗಂತ್, ಚಿತ್ರೀಕರಣ ಅರ್ಧಕ್ಕೆ ಮೊಟಕುಗೊಳಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬೆಳಿಗ್ಗೆ 11.30ಕ್ಕೆ ಹಾಜರಾದ ದಿಗಂತ್‍ರನ್ನು ಸಿಸಿಬಿ ತನಿಖಾಧಿಕಾರಿ ಪುನೀತ್ ತೀವ್ರ …
Read More »ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳು ಅರೆಸ್ಟ್
ಬೆಂಗಳೂರು: ನಗರದ ಬಾಣಸವಾಡಿ ಹಾಗೂ ಮಲ್ಲೇಶ್ವರಂನಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಐಪಿಎಲ್ ಪಂದ್ಯಾವಳಿಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಟ್ಟಿಂಗ್ನಲ್ಲಿ ತೊಡಗಿಸಿದ್ದ ₹6 ಲಕ್ಷ ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬಾಣಸವಾಡಿ ಹಾಗೂ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
Read More »ಶಾಸಕಾಂಗದ ಒಪ್ಪಿಗೆ ಪಡೆಯದೆ ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡಿದ್ದಾರೆ
ಬೆಂಗಳೂರು : ‘ಶಾಸಕಾಂಗದ ಒಪ್ಪಿಗೆ ಪಡೆಯದೆ ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡಿದ್ದಾರೆ. ನಂತರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಅಧಿಕಾರಿಗಳಿಗೆ ಅಂತಹ ಅಧಿಕಾರ ಕೊಟ್ಟವರಾರಯರು? ಸರ್ಕಾರ ಅಷ್ಟುಬಲಹೀನವಾಯಿತಾ?’ ಎಂದು ಜೆಡಿಎಸ್ ಸದಸ್ಯ ಎ.ಟಿ. ರಾಮಸ್ವಾಮಿ ಅವರು ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಘಟನೆ ವಿಧಾನಸಭೆಯಲ್ಲಿ ಮಂಗಳವಾರ ನಡೆಯಿತು. ಕೋವಿಡ್ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ‘ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರೆ ಕಾನೂನು (ತಿದ್ದುಪಡಿ) …
Read More »ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿರಲ್ಲ?
ಬೆಂಗಳೂರು: ವಿದ್ಯುತ್, ಭೂಸುಧಾರಣಾ ಕಾಯ್ದೆ ಸುಗ್ರೀವಾಜ್ಞೆ ವಿರೋಧಿಸಿ ಶುಕ್ರವಾರ ರೈತ ಸಂಘಟನೆಗಳು, ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು ಸೇರಿದಂತೆ 32 ಕ್ಕೂ ಹೆಚ್ಚು ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿವೆ ಎನ್ನಲಾಗಿದೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ರೈತರು ಬಂದ್ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗುವ ಸಾಧ್ಯತೆ ಇದೆ. ಹಾಗಾದ್ರೆ ಕರ್ನಾಟಕ …
Read More »ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ದಾಖಲಾದವರ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್
ಬೆಂಗಳೂರು : ಸರಕಾರದ ಮೂಲಕ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ದಾಖಲಾದವರ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಕೋವಿಡ್ ಚಿಕಿತ್ಸೆ ಹೆಸರಿನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ನಿಯಮ 69ರ ಅಡಿ ಪ್ರಸ್ತಾಪಿಸಿದ ವಿಷಯಗಳಿಗೆ ಮಂಗಳವಾರ ಅವರು ಉತ್ತರ ನೀಡಿದರು. ಚರ್ಚೆ ವೇಳೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು, ಕೊರೋನ ಚಿಕಿತ್ಸೆ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚು …
Read More »ರವಿಶಂಕರ್ನನ್ನು ಸಿಸಿಬಿ ಪೊಲೀಸರು ಬಂಧಿಸಿ ಮೊಬೈಲ್ ರಿಟ್ರೈವ್ ಮಾಡಿದಾಗ ಡ್ರಗ್ಸ್ ಜತೆ ಆತ ಹವಾಲಾ ದಂಧೆ
ಬೆಂಗಳೂರು : ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲ ನಂಟು ಆರೋಪ ಪ್ರಕರಣ ಸಂಬಂಧ ಸದ್ಯ ಬಂಧನವಾಗಿರೋ ಆರೋಪಿಗಳು ಕೇವಲ ಡ್ರಗ್ಸ್ ಪೆಡ್ಲಿಂಗ್ ಮತ್ತು ಸೇವನೆ ಅಷ್ಟೇ ಮಾಡುತ್ತಿರಲಿಲ್ಲ. ಇವರ ಜಾಲ ಕಂಡು ಸಿಸಿಬಿ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಆರೋಪಿ ರವಿಶಂಕರ್ನನ್ನು ಸಿಸಿಬಿ ಪೊಲೀಸರು ಬಂಧಿಸಿ ಮೊಬೈಲ್ ರಿಟ್ರೈವ್ ಮಾಡಿದಾಗ ಡ್ರಗ್ಸ್ ಜತೆ ಆತ ಹವಾಲಾ ದಂಧೆಯಲ್ಲೂ ತೊಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ ಎನ್ನಲಾಗ್ತಿದೆ. 5, 10 ರೂಪಾಯಿ ನೋಟುಗಳನ್ನು ಹವಾಲಾಗೆ ಬಳಸಿ, ಲಕ್ಷಕ್ಕೆ ಕೆ.ಜಿ …
Read More »ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದಿದ್ದಕ್ಕೆ ರಾಡ್‌ನಿಂದ ಹಲ್ಲೆ!
ನೆಲಮಂಗಲ: ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದ ಹಿನ್ನೆಲೆಯಲ್ಲಿ ಬಸ್ ಚಾಲಕನ ತಲೆಗೆ ರಾಡ್‌ನಿಂದ ಹಲ್ಲೆ ಮಾಡಿರುವ ಘಟನೆ ನೆಲಮಂಗಲ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡಲಿಲ್ಲ ಎಂದು ಶೌಚಾಲಯ ನಿರ್ವಹಣೆ ಮಾಡುತ್ತಿದ್ದ ರಾಜೇಶ್ ಎಂಬಾತ ಬಸ್ ಚಾಲಕ ವೆಂಕಟೇಶ್ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ. ಗಾಯಾಳು ವೆಂಕಟೇಶ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. …
Read More »