Breaking News
Home / ಜಿಲ್ಲೆ / ಬೆಂಗಳೂರು (page 301)

ಬೆಂಗಳೂರು

ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ

ಕಾರವಾರ: ಕಪ್ಪೆಗಳನ್ನು ಹಾವು ನುಂಗುವುದು ಸಾಮಾನ್ಯ. ಹಾಗೆಯೇ ಅಪರೂಪಕ್ಕೆ ಕಪ್ಪೆಗಳೇ ಹಾವನ್ನು ನುಂಗಿದ ಘಟನೆ ಕೂಡ ನಡೆದಿದೆ. ಆದರೆ ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಡವಾಡ ಗ್ರಾಮದಲ್ಲಿ ನಡೆದಿದೆ.   ಗೋಂಕರು ಕಪ್ಪೆ ಸಂಶೋಧಕರು ಹೇಳುವಂತೆ ಸುಮಾರು ಏಳು ಕೆಜಿ ತೂಕದ ವರೆಗೆ ದೂಡ್ಡ ಗಾತ್ರದಲ್ಲಿ ಬೆಳೆಯುತ್ತವೆ. ಈ ಕಪ್ಪೆಗಳು ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಹೆಚ್ಚು ಕಾಣಸಿಗುತ್ತವೆ. …

Read More »

ನಟಿ ಸಂಜನಾ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರ ದಾಳಿ

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ದಾಳಿ ಮಾಡಿದ್ದಾರೆ. ಇಂದಿರಾನಗರದಲ್ಲಿರುವ ನಟಿ ಸಂಜನಾ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಇನ್ಸ್‌ಪೆಕ್ಟರ್‌ ಪುನೀತ್‌ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.   ಕಳೆದ ವಾರ ನಟಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿ ಬಳಿಕ ಸಿಸಿಬಿ ಬಂಧಿಸಿತ್ತು. ಕಳೆದ ವಾರವೇ ಸಂಜನಾ …

Read More »

ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ  ಬಂಧನಕ್ಕೊಳಗಾಗಿರುವ ನಟಿ ರಾಗಿಣಿಗೆ ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.  ಇಂದು ಸಿಸಿಬಿ  ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ  ತನಿಖಾಧಿಕಾರಿಗಳು ನಟಿ ರಾಗಿಣಿಯನ್ನು   1 ನೇ  ಎಸಿಎಂಎಂ  ಕೋರ್ಟ್  ಗೆ ಹಾಜರು ಪಡಿಸಿದ್ದರು. ರಾಗಿಣಿ  3 ದಿನ ಕಸ್ಟಡಿಯಲ್ಲಿ  ವಿಚಾರಣೆಗೆ ಸರಿಯಾಗಿ  ಸ್ಪಂದಿಸಿಲ್ಲ. ಹೀಗಾಗಿ ಮತ್ತೆ  ಮತ್ತೆ 5 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ …

Read More »

ಪೊಲೀಸರಿಂದ ಬಂಧನಕ್ಕೆ ಒಳಗಾದ ನಟಿ ರಾಗಿಣಿಗೆ ಅಲರ್ಜಿ ಸಮಸ್ಯೆ

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ ಡೀಲ್ ಪ್ರಕರಣದಲ್ಲಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರಿಂದ ಬಂಧನಕ್ಕೆ ಒಳಗಾದ ನಟಿ ರಾಗಿಣಿಗೆ ಅಲರ್ಜಿ ಸಮಸ್ಯೆ ಕಾಣಿಸಿದೆ. ನನಗೆ ಅಲರ್ಜಿ ಸಮಸ್ಯೆಯಾಗುತ್ತಿದೆ. ಹೀಗಾಗಿ ಡಾಕ್ಟರ್‌ ಸೇವೆ ಅಗತ್ಯವಿದೆ ಎಂದು ರಾಗಿಣಿ ಪೊಲೀಸರ ಬಳಿ ಕೇಳಿಕೊಂಡಿದ್ದಾರೆ. ಈ ಹಿಂದೆ ರಾಗಿಣಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿತ್ತು. ರಾಗಿಣಿಯ ಮನವಿಯಂತೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದ್ದಾರೆ. ಐಷಾರಾಮಿ ಜೀವನ ನಡೆಸುತ್ತಿದ್ದ ರಾಗಿಣಿ ಸದ್ಯ ಸಾಮಾನ್ಯ ಕೊಠಡಿಯಲ್ಲಿ ಕಾಲ …

Read More »

ಕ್ಯಾಸಿನೋ ಕಾರ್ಯಕ್ರಮಕ್ಕೆ ನಾನು ಮುಖ್ಯ ಅತಿಥಿಯಾಗಿ ಹೋಗಿದ್ದೆ. ವಿವೇಕ್ ಒಬೇರಾಯ್ ನನ್ನ ಪಕ್ಕ ನಿಂತಿದ್ದರು, ಉಪೇಂದ್ರ ಸಹ ಭಾಗವಹಿಸಿದ್ದರು

ಬೆಂಗಳೂರು: ನಮ್ಮ ಅಮ್ಮನ ಹಾರ್ಟ್ ವೀಕ್, ಈಗಾಗಲೇ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಶಾಂತ್ ಸಂಬರಗಿ ಇನ್ನಾ ಮಾತನಾಡಿ ನಮ್ಮ ಅಮ್ಮಗೆ ಏನಾದರೂ ಆದರೆ ನಾನು ಸತ್ತೋದರೂ ಅವನನ್ನು ನಾನು ಬಿಡಲ್ಲ ಎಂದು ನಟಿ ಸಂಜನಾ ಕಣ್ಣೀರು ಹಾಕಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ನಟಿ ಸಂಜನಾ, ಕ್ಯಾಸಿನೋ ಕಾರ್ಯಕ್ರಮಕ್ಕೆ ನಾನು ಮುಖ್ಯ ಅತಿಥಿಯಾಗಿ ಹೋಗಿದ್ದೆ. ವಿವೇಕ್ ಒಬೇರಾಯ್ ನನ್ನ ಪಕ್ಕ ನಿಂತಿದ್ದರು, ಉಪೇಂದ್ರ ಸಹ ಭಾಗವಹಿಸಿದ್ದರು. ಎಲ್ಲಾ ರಾಜ್ಯಗಳಿಂದ 200 ಜನ …

Read More »

ನಟಿ ರಾಗಿಣಿಗೆ ಚಿತ್ರರಂಗದಿಂದ ನಿಷೇಧ?

ಬೆಂಗಳೂರು : ಡ್ರಗ್ಸ್‌ ಆರೋಪ ಸಾಬೀತಾದರೆ ನಟಿ ರಾಗಿಣಿ ಅವರಿಗೆ ಚಿತ್ರರಂಗದಿಂದ ನಿಷೇಧ ಶಿಕ್ಷೆ ಎದುರಾಗುವ ಸಾಧ್ಯತೆ ಇದೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದ್ದು, ಡ್ರಗ್ಸ್‌ ಜಾಲದಲ್ಲಿ ರಾಗಿಣಿ ಪಾತ್ರ ಇರುವುದು ಸಾಕ್ಷ್ಯಸಮೇತ ಸಾಬೀತಾದರೆ ಅವರನ್ನು ಚಿತ್ರರಂಗದಿಂದ ದೂರ ಇಡುವ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ. ಆದರೆ, ಈ ಕುರಿತು ಪ್ರತಿಕ್ರಿಯೆ ನೀಡಲು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್‌.ಜೈರಾಜ್‌ ನಿರಾಕರಿಸಿದ್ದು, ಈ ಹಂತದಲ್ಲಿ …

Read More »

ಕೊರೊನಾದಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಣಮುಖ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಇದೀಗ ಕಟೀಲ್ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಳೀನ್ ಕುಮಾರ್ ಕಟೀಲ್, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ. …

Read More »

ಸೋಂಕಿತರ ಸಂಖ್ಯೆ 4 ಲಕ್ಷಕ್ಕೆ : ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖ

ಬೆಂಗಳೂರು  : ರಾಜ್ಯದಲ್ಲಿ ಭಾನುವಾರ ದಾಖಲೆಯ ಸಂಖ್ಯೆಯಲ್ಲಿ ಕೋವಿಡ್‌ ರೋಗಿಗಳು ಗುಣಮುಖರಾಗಿದ್ದರೆ, ಮತ್ತೆ 9,319 ಮಂದಿ ಕೊರೋನಾ ಸೋಂಕಿತರಾಗುವ ಮೂಲಕ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ ಒಂದು ಲಕ್ಷದ ಸಮೀಪಕ್ಕೆ ಬಂದಿದೆ. ರಾಜ್ಯದಲ್ಲಿ ಶನಿವಾರವಷ್ಟೆ9,102 ಮಂದಿ ಕೊರೋನಾ ಸೋಂಕಿನಿಂದ ಮುಕ್ತರಾಗಿ ದಾಖಲೆ ನಿರ್ಮಾಣವಾಗಿತ್ತು. ಭಾನುವಾರ ಆ ದಾಖಲೆ ಇನ್ನಷ್ಟುಉತ್ತಮಗೊಂಡು 9,575 ಮಂದಿ ಕೊರೋನಾವನ್ನು ಜಯಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಕೊರೋನಾ ಗೆದ್ದವರ ಸಂಖ್ಯೆ 2.92 ಲಕ್ಷಕ್ಕೇರಿದೆ. ಇದೇ ವೇಳೆ ಮತ್ತೆ …

Read More »

ನೆರೆ ಹಾನಿ ಅಧ್ಯಯನಕ್ಕೆ ಕೇಂದ್ರ ತಂಡ ಆಗಮನ

ಬೆಂಗಳೂರು  : ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾನಿ ಸಂಬಂಧ ಅಧ್ಯಯನಕ್ಕಾಗಿ ಕೇಂದ್ರದ ಅಧಿಕಾರಿಗಳ ತಂಡ ಸೋಮವಾರ ರಾಜ್ಯಕ್ಕೆ ಆಗಮಿಸಲಿದೆ. ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಕೆ.ವಿ. ಪ್ರತಾಪ್‌ ಅವರ ನೇತೃತ್ವದ ಎನ್‌ಡಿಆರ್‌ಎಫ್‌ ತಂಡ ಎರಡು-ಮೂರು ದಿನಗಳ ಕಾಲ ರಾಜ್ಯದಲ್ಲೇ ಉಳಿದುಕೊಂಡು ನೆರೆಯಿಂದ ಉಂಟಾದ ಹಾನಿ ಬಗ್ಗೆ ಅಧ್ಯಯನ ನಡೆಸುವ ಸಾಧ್ಯತೆ ಇದೆ. ಸೋಮವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳು …

Read More »

ಕೊರೋನಾ ಮಧ್ಯೆ ಇಂದಿನಿಂದ ಮೆಟ್ರೋ ಸಂಚಾರ ಶುರು

ಬೆಂಗಳೂರು : ಬರೋಬ್ಬರಿ ಐದು ತಿಂಗಳ ನಂತರ ನಮ್ಮ ಮೆಟ್ರೋ ರೈಲು ಸಂಚಾರ ಸೋಮವಾರ ಮತ್ತೆ ಆರಂಭವಾಗಲಿದೆ. ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಮೆಟ್ರೋ ರೈಲು ಸಂಚಾರ ಮತ್ತೆ ಆರಂಭಿಸಲು ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಕೇಂದ್ರದ ಮಾರ್ಗಸೂಚಿಯಂತೆ ಬಿಎಂಆರ್‌ಸಿಲ್‌ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಮೆಟ್ರೋ ಸೇವೆ ಆರಂಭಿಸಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಸತತ ಐದು ದಿನಗಳಿಂದ ನಮ್ಮ ಮೆಟ್ರೋ ರೈಲುಗಳನ್ನು ರಾಸಾಯನಿಕ ಬಳಸಿ ಸ್ವಚ್ಛತಾ ಮತ್ತು ಸ್ಯಾನಿಟೈಸರ್‌ ಸಿಂಪಡಣೆ …

Read More »