Breaking News

ಬೆಂಗಳೂರು

ಸೆ.21 ರಿಂದ 28ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು

ಬೆಂಗಳೂರು, ಸೆ.19- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಸೆ.21 ರಿಂದ 28ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೇಂದ್ರಗಳು, ಇಂಟರ್‍ನೆಟ್ ಕೇಂದ್ರಗಳು ಮತ್ತು ಸೈಬರ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಮುಚ್ಚುವಂತೆ …

Read More »

ಜೆಡಿಎಸ್ ನವರು ಆರ್‍ಎಸ್‍ಎಸ್ ಜೊತೆ ಸೇರಿದ್ರು ಸೇರಿಕೊಳ್ಳಬಹುದು. ಅವರಿಗೆ ಅವಕಾಶವಷ್ಟೆ ಮುಖ್ಯ

ಬೆಂಗಳೂರು: ಜೆಡಿಎಸ್ ನವರು ಆರ್‍ಎಸ್‍ಎಸ್ ಜೊತೆ ಸೇರಿದ್ರು ಸೇರಿಕೊಳ್ಳಬಹುದು. ಅವರಿಗೆ ಅವಕಾಶವಷ್ಟೆ ಮುಖ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಜೆಡಿಎಸ್ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಿದರು. ಈ ವೇಳೆ ಮಾತನಾಡಿದ ಮಾಜಿ ಸಿಎಂ, ಜೆಡಿಎಸ್ ಪಕ್ಷದ ದೇವೇಗೌಡರು ಹಾಗೂ ಕುಟುಂಬ ಒಂದು ಅವಕಾಶವಾದಿ. ಪಕ್ಷಸ್ವಾರ್ಥ ಇರುವವರು. ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುತ್ತಾರೆ. ಬಿಜೆಪಿ ಜೊತೆಯೂ …

Read More »

ಕನ್ನಡದ ಎ ವನ್ ಸ್ಟಾರ್‌ಗಳೂ ಇದರಲ್ಲಿದ್ದಾರೆ: ಪ್ರಶಾಂತ್ ಸಂಬರಗಿ

ಬೆಂಗಳೂರು: ಕನ್ನಡ ಚಿತ್ರರಂಗ ದಿನ ದಿನಕ್ಕೆ ಒಂದೊಂದೇ ಹೆಸರುಗಳನ್ನು ಕೇಳಿ ಬೆಚ್ಚುತ್ತಿದೆ. ಈಗಾಗಲೇ ಖಾಕಿ ಪಡೆ ಸ್ಯಾಂಡಲ್‍ವುಡ್ ಕೆಲವು ನಟ-ನಟಿಯರನ್ನು ಡ್ರಗ್ಸ್ ಜಾಲದ ವಿಷಯದಲ್ಲಿ ಕರೆದು ವಿಚಾರಣೆ ನಡೆಸಿದ್ದು, ಈಗಲೂ ನಡೆಸುತ್ತಿದೆ. ರಾಗಿಣಿ ಮತ್ತು ಸಂಜನಾ ಜೈಲು ಪಾಲಾಗಿದ್ದಾರೆ. ಇದರ ಬೆನ್ನಿಗೇ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದಾರೆ. ಕನ್ನಡದ ಎ ವನ್ ಸ್ಟಾರ್‌ಗಳೂ ಇದರಲ್ಲಿದ್ದಾರೆ ಎಂದು ಗುಡುಗಿದ್ದಾರೆ. ಹೌದು. ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಡ್ರಗ್ಸ್ ಸುಂಟರಗಾಳಿ ಇನ್ನೂ …

Read More »

ನಟಿಮಣಿಯರಿಗೆ ಜೈಲೂಟದ ಬದಲು ಮನೆ ಊಟ ಒದಗಿಸಲಾಗುತ್ತಿದೆ ಎಂದು ತಿಳಿದುಬಂದಿದೆ……..?

ಬೆಂಗಳೂರು: ಡ್ರಗ್ಸ್ ಕೇಸ್ಸಲ್ಲಿ ಬಂಧಿತರಾಗಿರೋ ಸಂಜನಾ ಹಾಗೂ ರಾಗಿಣಿಗೆ ಜೈಲಲ್ಲಿ ರಾಜಾತಿಥ್ಯ ನೀಡುತ್ತಿರೋದು ಬಹಿರಂಗವಾಗಿದೆ. ಇದೀಗ ಜೈಲಲ್ಲಿ ಈ ನಟಿಮಣಿಯರಿಗೆ ಜೈಲೂಟದ ಬದಲು ಮನೆ ಊಟ ಒದಗಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಕೋರ್ಟ್ ಆದೇಶ ಇಲ್ಲದೇ ಆರೋಪಿಗಳಿಗೆ ಜೈಲು ಸಿಬ್ಬಂದಿಯೊಬ್ಬರ ಮನೆಯಿಂದ ನಿತ್ಯ ರುಚಿ ರುಚಿಯಾದ ಊಟ ಪೂರೈಕೆ ಮಾಡಲಾಗುತ್ತಿದೆ. ಈ ಬೆನ್ನಲ್ಲೇ ಸಾಮಾನ್ಯರಿಗೆ ಒಂದು ಕಾನೂನು, ಸೆಲೆಬ್ರಿಟಿಗಳಿಗೆ ಒಂದು ಕಾನೂನಾ ಅನ್ನೋ ಪ್ರಶ್ನೆ ಎದ್ದಿದೆ.   ಇತ್ತ ಕಳೆದ ನಾಲ್ಕು …

Read More »

ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಇಲ್ಲ…

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳನ್ನು ತೆರೆಯದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ತಿಂಗಳಾಂತ್ಯದವರೆಗೆ ಯಥಾ ಸ್ಥಿತಿ ಮುಂದುವರಿಸಲು ಇಲಾಖೆ ತಿಳಿಸಿದೆ ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಮಾಡದಿರುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ. ತಿಂಗಳಾಂತ್ಯದವರೆಗೂ ಶಾಲಾ-ಕಾಲೇಜು ಆರಂಭಿಸದಂತೆ ಸರ್ಕಾರ ಸೂಚಿಸಿದೆ. ಸೂಕ್ತ …

Read More »

ಆ’ ಫೋಟೋ ಹಾಕಿ ಹೊಗಳಿದ್ದ ಸಂಜನಾ!

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರಾ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಮತಾಂತರ ಸುದ್ದಿಗೆ ಪುಷ್ಠಿ ಎಂಬಂತೆ ಸಂಜನಾ ಸಿನಿಮಾ ಶೂಟಿಂಗ್ ಗೆ ಬುರ್ಖಾ ಧರಿಸಿದ್ದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಆ ಧರ್ಮವನ್ನು ಹೊಗಳಿರುವುದು ಬೆಳಕಿಗೆ ಬಂದಿದೆ. ಹೌದು, ಅಂದು ಬ್ಲಾಕ್ ಆಂಡ್ ವೈಟ್ ಫೋಟೋ ಪೋಸ್ಟ್ ಮಾಡಿದ್ದ ಸಂಜನಾ, …

Read More »

ಬಿಎಸ್‍ವೈಗೆ ಸಿಕ್ಕಿಲ್ಲ ಹೈಕಮಾಂಡ್ ಗ್ರೀನ್ ಸಿಗ್ನಲ್ – ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಡೌಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಸಿಎಂ ದೆಹಲಿ ಭೇಟಿ ಅಂತ್ಯವಾಗಿದೆ. ಆದರೆ ಸಂಪುಟ ಪುನಾರಚನೆಯೋ ಅಥವಾ ಸಂಪುಟ ವಿಸ್ತರಣೆಯೋ ಅನ್ನೋ ವಿಚಾರಕ್ಕೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಅಧಿವೇಶನಕ್ಕೆ ಮುನ್ನ ಸಂಪುಟ ವಿಸ್ತರಣೆಗೆ ಒಲವು ತೋರಿದ್ದ ಸಿಎಂಗೆ ಈ ಬೆಳವಣಿಗೆ ನಿರಾಸೆ ತಂದಿದೆ. ಭಾನುವಾರ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಶುಕ್ರವಾರ ರಾತ್ರಿಯಿಂದ ಸುದ್ದಿ ಹಬ್ಬಿತ್ತು. ಆದರೆ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. …

Read More »

ಸ್ಯಾಂಡಲ್‍ವುಡ್ ನಟನ ಮಗನಿಗೂ, ನಟಿಗೆ ಸಿಸಿಬಿ ನೋಟಿಸ್ ಸಾಧ್ಯತೆ…..?

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‍ವುಡ್ ಹಿರಿಯ ನಟರೊಬ್ಬರ ಮಗ ಮತ್ತು ಓರ್ವ ನಟಿಗೆ ಸಿಸಿಬಿ ನೋಟಿಸ್ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕರಾದ ಅಕುಲ್ ಬಾಲಾಜಿ, ಸಂತೋಷ್ ಕುಮಾರ್ ಮತ್ತು ಮಾಜಿ ಶಾಸಕ ಆರ್.ವಿ.ದೇವರಾಜ್ ಪುತ್ರ ಆರ್.ವಿ.ಯುವರಾಜ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಈ ಮೂವರ ವಿಚಾರಣೆ ಬಳಿಕ ನಟನ ಮಗನಿಗೆ ಸಿಸಿಬಿ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ನಟನ ಮಗ …

Read More »

ಡ್ರಗ್ಸ್ ಕೇಸ್ – ನಟ ಸಂತೋಷ್, ಐಂದ್ರಿತಾ ಕಾಲೆಳೆದ ಪ್ರಶಾಂತ್ ಸಂಬರಗಿ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಯವರು ಫೇಸ್‍ಬುಕ್ ಪೋಸ್ಟ್ ಹಾಕುವ ಮೂಲಕ ಡ್ರಗ್ಸ್ ಜಾಲಕ್ಕೆ ಸಂಬಂಧಿಸದಂತೆ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ನಟಿ ಐಂದ್ರಿತಾ ರೈ ಮತ್ತು ನಟ ಸಂತೋಷ್ ಕುಮಾರ್ ಅವರ ಕಾಲೆಳೆದಿದ್ದಾರೆ. ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ವಿಚಾರದಲ್ಲಿ ಕನ್ನಡದ ಸ್ಟಾರ್ ನಟ-ನಟಿಯರು ಸಿಲುಕಿ ಹಾಕಿಕೊಂಡಿದ್ದಾರೆ. ಇಂದು ನಿರೂಪಕ ಅಕುಲ್ ಬಾಲಾಜಿ ಮತ್ತು ನಟ ಸಂತೋಷ್ ಕುಮಾರ್ ಅವರನ್ನು ಸಿಸಿಬಿ ವಿಚಾರಣೆ ಮಾಡಿದೆ. ಈಗಾಗಲೇ ಈ ಪ್ರಕರಣದಲ್ಲಿ ನಟಿ ರಾಗಿಣಿ …

Read More »

ಬ್ರೇಕಿಂಗ್ : ದೆಹಲಿಯಿಂದ ಬೆಂಗಳೂರಿಗೆ ಸಿಎಂ ಯಡಿಯೂರಪ್ಪ ವಾಪಾಸ್ : ಸದ್ಯದಲ್ಲೇ ಸಂಪುಟ ವಿಸ್ತರಣೆ.?

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿದಂತೆ ಕೇಂದ್ರದ ಬಿಜೆಪಿ ವರಿಷ್ಠರ ಭೇಟಿಯ ಬಳಿಕ, ದೆಹಲಿಯಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿಗೆ ಹಿಂದಿರುಗಿದ್ದಾರೆ. ಹೀಗಾಗಿ ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗುತ್ತಾ ಎನ್ನುವ ಕುತೂಲಹ ಮೂಡಿಸಿದೆ. BIG BREAKING : ಮುಂದಿನವಾರ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲು …

Read More »