Breaking News

ಬೆಂಗಳೂರು

ಕೊರೊನಾದಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಣಮುಖ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಇದೀಗ ಕಟೀಲ್ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಳೀನ್ ಕುಮಾರ್ ಕಟೀಲ್, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ. …

Read More »

ಸೋಂಕಿತರ ಸಂಖ್ಯೆ 4 ಲಕ್ಷಕ್ಕೆ : ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖ

ಬೆಂಗಳೂರು  : ರಾಜ್ಯದಲ್ಲಿ ಭಾನುವಾರ ದಾಖಲೆಯ ಸಂಖ್ಯೆಯಲ್ಲಿ ಕೋವಿಡ್‌ ರೋಗಿಗಳು ಗುಣಮುಖರಾಗಿದ್ದರೆ, ಮತ್ತೆ 9,319 ಮಂದಿ ಕೊರೋನಾ ಸೋಂಕಿತರಾಗುವ ಮೂಲಕ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ ಒಂದು ಲಕ್ಷದ ಸಮೀಪಕ್ಕೆ ಬಂದಿದೆ. ರಾಜ್ಯದಲ್ಲಿ ಶನಿವಾರವಷ್ಟೆ9,102 ಮಂದಿ ಕೊರೋನಾ ಸೋಂಕಿನಿಂದ ಮುಕ್ತರಾಗಿ ದಾಖಲೆ ನಿರ್ಮಾಣವಾಗಿತ್ತು. ಭಾನುವಾರ ಆ ದಾಖಲೆ ಇನ್ನಷ್ಟುಉತ್ತಮಗೊಂಡು 9,575 ಮಂದಿ ಕೊರೋನಾವನ್ನು ಜಯಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಕೊರೋನಾ ಗೆದ್ದವರ ಸಂಖ್ಯೆ 2.92 ಲಕ್ಷಕ್ಕೇರಿದೆ. ಇದೇ ವೇಳೆ ಮತ್ತೆ …

Read More »

ನೆರೆ ಹಾನಿ ಅಧ್ಯಯನಕ್ಕೆ ಕೇಂದ್ರ ತಂಡ ಆಗಮನ

ಬೆಂಗಳೂರು  : ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾನಿ ಸಂಬಂಧ ಅಧ್ಯಯನಕ್ಕಾಗಿ ಕೇಂದ್ರದ ಅಧಿಕಾರಿಗಳ ತಂಡ ಸೋಮವಾರ ರಾಜ್ಯಕ್ಕೆ ಆಗಮಿಸಲಿದೆ. ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಕೆ.ವಿ. ಪ್ರತಾಪ್‌ ಅವರ ನೇತೃತ್ವದ ಎನ್‌ಡಿಆರ್‌ಎಫ್‌ ತಂಡ ಎರಡು-ಮೂರು ದಿನಗಳ ಕಾಲ ರಾಜ್ಯದಲ್ಲೇ ಉಳಿದುಕೊಂಡು ನೆರೆಯಿಂದ ಉಂಟಾದ ಹಾನಿ ಬಗ್ಗೆ ಅಧ್ಯಯನ ನಡೆಸುವ ಸಾಧ್ಯತೆ ಇದೆ. ಸೋಮವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳು …

Read More »

ಕೊರೋನಾ ಮಧ್ಯೆ ಇಂದಿನಿಂದ ಮೆಟ್ರೋ ಸಂಚಾರ ಶುರು

ಬೆಂಗಳೂರು : ಬರೋಬ್ಬರಿ ಐದು ತಿಂಗಳ ನಂತರ ನಮ್ಮ ಮೆಟ್ರೋ ರೈಲು ಸಂಚಾರ ಸೋಮವಾರ ಮತ್ತೆ ಆರಂಭವಾಗಲಿದೆ. ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಮೆಟ್ರೋ ರೈಲು ಸಂಚಾರ ಮತ್ತೆ ಆರಂಭಿಸಲು ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಕೇಂದ್ರದ ಮಾರ್ಗಸೂಚಿಯಂತೆ ಬಿಎಂಆರ್‌ಸಿಲ್‌ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಮೆಟ್ರೋ ಸೇವೆ ಆರಂಭಿಸಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಸತತ ಐದು ದಿನಗಳಿಂದ ನಮ್ಮ ಮೆಟ್ರೋ ರೈಲುಗಳನ್ನು ರಾಸಾಯನಿಕ ಬಳಸಿ ಸ್ವಚ್ಛತಾ ಮತ್ತು ಸ್ಯಾನಿಟೈಸರ್‌ ಸಿಂಪಡಣೆ …

Read More »

ಸಾಲ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಮಹಿಳೆ ಅವಾಜ್

ಬೆಂಗಳೂರು: ಸಾಲ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಮಹಿಳೆ ಅವಾಜ್ ಹಾಕಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಮಹಿಳೆಯ ಮನೆಗೆ ಬಂದಿದ್ದಾರೆ. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿ ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ಮಹಿಳೆಯ ಈ ವಿಡಿಯೋ ಸಾಮಾಜಿಕ …

Read More »

ಪಿಪಿಇ ಕಿಟ್ ಧರಿಸಿ ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಚಿಕ್ಕಮಗಳೂರು: ಕೊರೊನಾದಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರವನ್ನು ನಾನೇ ಮಾಡಬೇಕೆಂದು ಹಠ ಹಿಡಿದು ಮಗಳೇ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಬಿಡದಿಯ ಟೊಯೋಟಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 45 ವರ್ಷದ ವ್ಯಕ್ತಿಗೆ ಕೊರೊನಾ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕೊನೆಗೆ ಕೊರೋನಾ ಚಿಕಿತ್ಸೆಯಲ್ಲಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗಿ ವ್ಯಾಪಿಸುತ್ತಿದ್ದರಿಂದ ಇತ್ತೀಚಿಗಷ್ಟೆ ಊರಿಗೆ ಬಂದಿದ್ದ ಕುಟುಂಬ ಇಬ್ಬರು ಹೆಣ್ಣು ಮಕ್ಕಳನ್ನು …

Read More »

ಮದ್ಯಪಾನ ಮಾಡಿ ಬಸ್ ಓಡಿಸುತ್ತಿದ್ದ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಂಟನೇ ಮೈಲಿಯಲ್ಲಿ ನಡೆದಿದೆ.ಸಂಜೆ 8 ಗಂಟೆಗೆ ಈ ಘಟನೆ ನಡೆದಿದ್ದು, ತುಮಕೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಸು, ಎಂಟನೇ ಮೈಲಿಯಲ್ಲಿರುವ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಮುಂಭಾಗ ಬಸ್ ನಿಲ್ದಾಣದ ಕಂಬಿಯೊಳಗೆ ಸಿಲುಕಿಕೊಂಡಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ ಬಸ್ …

Read More »

ಡ್ರಗ್ಸ್​ ಜಾಲದಲ್ಲಿ ಪ್ರಭಾವಿ ರಾಜಕಾರಣಿ ಪುತ್ರ, ನಟನ ಮೈದುನ

ಬೆಂಗಳೂರು: ಡ್ರಗ್ಸ್​ ಜಾಲ ಬಗೆದಷ್ಟೂ ಆಳವಾಗುತ್ತಿದೆ. ಸ್ಯಾಂಡಲ್​ವುಡ್​ ನಟಿ ರಾಗಿಣಿ ಈಗಾಗಲೇ ಅರೆಸ್ಟ್​ ಆಗಿದ್ದಾರೆ. ಹಾಗೇ ಸಿಸಿಬಿ A-1, A-2 ಎಂದು ಆರೋಪಿಗಳ ಪಟ್ಟಿಯನ್ನು ಮಾಡಿದ್ದು, ಅದರಲ್ಲಿ A 6(ಆರೋಪಿ-6) ಆದಿತ್ಯ ಆಳ್ವ. ಡ್ರಗ್ಸ್​ ಜಾಲದಲ್ಲಿ ಪ್ರಭಾವಿ ರಾಜಕಾರಣಿಗಳ ಮಕ್ಕಳೂ ಸೇರಿದ್ದಾರೆ ಎಂಬ ಮಾತು ಮೊದಲಿನಿಂದಲೂ ಕೇಳಿಬರುತ್ತಿತ್ತು. ಅದಕ್ಕೀಗ ಸಾಕ್ಷಿಯೆಂಬಂತೆ ಆದಿತ್ಯ ಆಳ್ವ ಹೆಸರು ಕೇಳಿಬಂದಿದೆ. ಈ ಆದಿತ್ಯ ಆಳ್ವ, ಮಾಜಿ ಸಚಿವ, ದಿವಂಗತ ಜೀವರಾಜ್​ ಆಳ್ವ-ನಂದಿನಿ ಆಳ್ವ ಅವರ ಪುತ್ರ. …

Read More »

ಮರು ಮೌಲ್ಯಮಾಪನ ಮಾಡ್ಸಿ ರಾಜ್ಯಕ್ಕೆ ಸೆಕೆಂಡ್ ಬಂದ SSLC ವಿದ್ಯಾರ್ಥಿನಿ: ಇದು ಕಾನ್ಫಿಡೆಂಟ್ ಅಂದ್ರೆ

ಶಿವಮೊಗ್ಗ(ಸೆ: ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನದಲ್ಲಿ ಬಂದ ಅಂಕಗಳಿಂದ ಶಿವಮೊಗ್ಗದ ವಿದ್ಯಾರ್ಥಿನಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಶಿವಮೊಗ್ಗ ನಗರದ ಕಲ್ಲಹಳ್ಳಿ ಬಡಾವಣೆಯ ಪ್ರಿಯದರ್ಶಿನಿ ಶಾಲೆಯ ಕಾವ್ಯ ಆರ್. ಮರು ಮೌಲ್ಯಮಾಪನದಿಂದ ರಾಜ್ಯಕ್ಕೆ ಸೆಕೆಂಡ್ ಬಂದ ವಿದ್ಯಾರ್ಥಿನಿ. ಇತ್ತೀಚೆಗೆ ಪ್ರಕಟಗೊಂಡಿದ್ದ ಎಸ್​​ಎಸ್‌ಎಲ್​​ಸಿ ಫಲಿತಾಂಶದಲ್ಲಿ ಈಕೆಗೆ 625ಕ್ಕೆ 620 ಅಂಕಗಳು ಬಂದಿದ್ದವು. ಇಷ್ಟು ಬಂದಿದ್ದರೂ ಕಾವ್ಯಗೆ ಸಮಾಧಾನ ಆಗಿರಲಿಲ್ಲ. ಇನ್ನೂ ಅಂಕಗಳು ಬರಬೇಕೆಂಬ ಲೆಕ್ಕಾಚಾರ ಹಾಕಿ ಕೊನೆಗೆ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದಳು. …

Read More »

ವಾಯು ಮಾಲಿನ್ಯದಿಂದ ಕೊರೋನ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಳ; ಸಮೀಕ್ಷೆ ವರದಿ

ಬೆಂಗಳೂರು,  : ರಾಜಧಾನಿಯಲ್ಲಿ ಕೊರೋನ ಸೋಂಕಿನಿಂದ ಮೃತರಾಗುತ್ತಿರುವವರ ಸಂಖ್ಯೆ ಹೆಚ್ಚಳಕ್ಕೆ ವಾಯುಮಾಲಿನ್ಯವು ರೋಗ ನಿರೋಧಕ ಶಕ್ತಿಯನ್ನು ಕುಗ್ಗಿಸುವುದೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಫಿಟ್ ಇಂಡಿಯಾದ 2020ರ ಸಮೀಕ್ಷೆ ಪ್ರಕಾರ ಶೇ.20.8 ಜನರು ತಮ್ಮಲ್ಲಿನ ಕಡಿಮೆ ರೋಗ ನಿರೋಧಕ ಶಕ್ತಿಯ ಕಾರಣಕ್ಕಾಗಿ ರಾಜಧಾನಿಯಲ್ಲಿ ಶೇ.22ರಷ್ಟ್ಟು ಜನರು ವರ್ಷವೊಂದಕ್ಕೆ 3 ಬಾರಿಯಂತೆ ವಿವಿಧ ರೋಗಗಳಿಗೆ ಒಳಗಾಗುತ್ತಿದ್ದಾರೆ. ನಗರವಾರು ಹೋಲಿಸಿದಾಗ ಹೆಚ್ಚು ವಾಯುಮಾಲಿನ್ಯಕ್ಕೆ ಒಳಗಾದ ನಗರಗಳ ಜನರು ಅತ್ಯಂತ ಕಡಿಮೆ ರೋಗನಿರೋಧಕ ಶಕ್ತಿಯನ್ನು ಹೊಂದಿರುವುದು …

Read More »