Breaking News
Home / ಜಿಲ್ಲೆ / ಬೆಂಗಳೂರು (page 322)

ಬೆಂಗಳೂರು

ಮೂರು ಕಾರಣಗಳಿಗೆ ಹೊತ್ತಿ ಉರಿಯಿತು ಬೆಂಗಳೂರು

ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳು ಕೆಲ ವಿಚಾರಗಳನ್ನು ಬಾಯಿ ಬಿಟ್ಟಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ದೊಂಬಿ ಎಬ್ಬಿಸಿದ್ದಕ್ಕೆ ಕಾರಣಗಳನ್ನ ಕೊಟ್ಟಿದ್ದಾರೆ. ಮೂರು ಕಾರಣಗಳಿಂದಾಗಿ ಬೆಂಗಳೂರು ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ. ಬೆಂಗಳೂರಲ್ಲಿ ದೊಂಬಿ ಎಬ್ಬಿಸಿದ್ದಕ್ಕೆ ಕಾರಣ ಕೊಟ್ಟ ಕಿರಾತಕರು! 1. ಎನ್‍ಆರ್ ಸಿ ಸಿಟ್ಟೇ ಬೆಂಗಳೂರು ಗಲಭೆಗೆ ಕಾರಣವಂತೆ 2. ‘ನಮ್ಮನ್ನು ದೇಶ ಬಿಟ್ಟು ಓಡಿಸ್ತಾರೆ, ನಾವು ಹುಟ್ಟಿದ್ದು ಇಲ್ಲೇ’ 3. …

Read More »

ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಸ್ಥಿತಿ,ಬೆಳಗಾವಿ-ಗೋವಾ ರಸ್ತೆ ಬಂದ್

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಒಂದು ಕಡೆ ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು ಪಡೆದಿದ್ದು, ಅತ್ತ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲಟ್ ಘೋಷಿಸಲಾಗಿದೆ. ಪುಣೆ, ಸತಾರಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 20ರವರೆಗೂ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಭಾರೀ ಮಳೆ ಆಗುವ ಮುನ್ನೆಚ್ಚರಿಕೆ ನೀಡಲಾಗಿದೆ.ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ …

Read More »

ಡ್ರಗ್ಸ್‌ ಮತ್ತಲ್ಲಿ ಹಾಡಹಗಲೇ ಬೆಂಗಳೂರಲ್ಲಿ ಯುವತಿಗೆ 8 ಮಂದಿಯಿಂದ ಕಿರುಕುಳ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಹಾಡಹಗಲೇ ಯುವತಿಯೊಬ್ಬಳಿಗೆ ನಡುರಸ್ತೆಯಲ್ಲಿ ಯುವಕರು ಕಿರುಕುಳ ನೀಡಿದ್ದಾರೆ. ಬೆಂಗಳೂರಿನ ಕುರುಬರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಡ್ರಗ್ಸ್ ಮತ್ತಿನಲ್ಲಿ ೮ ಮಂದಿ ಹುಡುಗರು ಕಿರುಕುಳ ನೀಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.   ಕಿರುಕುಳ ಕೊಟ್ಟ ಡ್ರಗ್ಸ್ ಗ್ಯಾಂಗ್ ವಿರುದ್ಧ ಯುವತಿ ನಿಂತು ಪ್ರಶ್ನಿಸಿದ್ದಾಳೆ. ಈ ವೇಳೆ ಯುವಕರು ಯುವತಿಯ ಮೇಲೆ ಹಲ್ಲೆಗೆ ಯತ್ನಿಸಿ ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾರೆ. ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿದ್ದು …

Read More »

ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾದಿಂದ ಗುಣಮುಖ, ಡಿಸ್ಚಾರ್ಜ್‌

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾದಿಂದ ಗುಣಮುಖರಾಗಿದ್ದಾರೆ.ಆಗಸ್ಟ್ -9 ರಂದು ಆಸ್ಪತ್ರೆ ಗೆ ದಾಖಲಾಗಿದ್ದ ಸಚಿವ ಶ್ರೀರಾಮುಲು ಕೊರೋನಾದಿಂದ ಚೇತರಿಸಿಕೊಂಡಿದ್ದು ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಯಿಂದ ಡಿಸ್ಚಾರ್ಜ್‌ ಆಗಿದ್ದಾರೆ‌.ಸರ್ಕಾರಿ ಆಸ್ಪತ್ರೆ ಯಲ್ಲೇ ಚಿಕಿತ್ಸೆ ಪಡೆದುಕೊಂಡಿದ್ದ ಶ್ರೀರಾಮುಲು ರಿಪೋರ್ಟ್ ನೆಗೆಟಿವ್ ಬಂದಿದ್ದು, ಎಂಟು ದಿನಗಳಲ್ಲಿ ಚೇತರಿಕೆ ಕಂಡಿದ್ದಾರೆ. ಟ್ವೀಟ್‌ ಮಾಡಿರುವ ಶ್ರೀರಾಮುಲು, ನಿಮ್ಮೆಲ್ಲರ ಶುಭ ಹಾರೈಕೆಯಿಂದ ಕೋವಿಡ್ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದೇನೆ. ಕೋವಿಡ್ ಸೋಂಕು ದೃಢಪಟ್ಟಾಗ ನಮ್ಮ …

Read More »

ಕೊರೊನಾ ಸೋಂಕು ತಡೆ, ಲೋಕ ಕಲ್ಯಾಣಕ್ಕಾಗಿ ಹೋಮ

ಬೆಂಗಳೂರು: ವಿಶ್ವದಾದ್ಯಂತ ಹರಡಿರುವ ಕೊರೊನಾ ಸೋಂಕು ನಿವಾರಣೆಗಾಗಿ ಹಾಗೂ ಲೋಕ ಕಲ್ಯಾಣಕ್ಕಾಗಿ ಗ್ರಾಮಸ್ಥರು, ನಾಗರಿಕರು ಹೋಮ ಹವನ ನಡೆಸಿದ್ದಾರೆ.ನಗರದ ಹೊರವಲಯದ ನೆಲಮಂಗಲ ತಾಲೂಕಿನ ಹಂಚಿಪುರ ಗ್ರಾಮದಲ್ಲಿ ಪೂಜೆ ಕೈಗೊಂಡು, ರುದ್ರ ಮಂತ್ರ ಎಲ್ಲ ಔಷಧೀಯ, ಲಸಿಕೆಯ ಒಡೆಯನಿಗೆ ಶಾಂತಿ ಕೈಗೊಂಡಿದ್ದಾರೆ. ಉಷ್ಣಾಂಶದಿಂದ ಕ್ರಿಮಿಗಳ ನಾಶ 25 ಜನರ ಋತ್ವಿಕರಿಂದ ಹೋಮ ಹವನ ನಡೆಸಲಾಯಿತು. ವೇದ ಬ್ರಹ್ಮ ಶ್ರೀ ಸಂಪಿಗೆ ಶ್ರೀನಿವಾಸಮೂರ್ತಿ ಅರ್ಚಕರ ತಂಡದಿಂದ ಹೋಮದ ಪೂಜಾ ಕೈಂಕರ್ಯ ನಡೆದಿದೆ. ಗ್ರಾಮದ …

Read More »

ಕೆಜಿ ಹಳ್ಳಿಯಿಂದ ಸಾವಿರಾರು ಫೋನ್‌ ಕಾಲ್‌ 370ಕ್ಕೂ ಹೆಚ್ಚು ಆರೋಪಿಗಳು ಅಂದರ್

ಬೆಂಗಳೂರು: ಗಲಭೆ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಆರೋಪಿಗಳ ಫೋನ್ ಕಾಲ್ ಲೆಕ್ಕ ನೋಡಿ ಶಾಕ್ ಆಗಿದ್ದಾರೆ.ಘಟನೆ ನಡೆದ ರಾತ್ರಿ ಸುಮಾರು 30 ಆರೋಪಿಗಳ ಮೊಬೈಲ್‍ಗಳಿಂದ ಹೊರ ಜಿಲ್ಲೆಗಳಿಗೆ ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಿಂದಲೇ ಸಾವಿರಾರು ಕಾಲ್ ಹೋಗಿದೆ. ಎಲ್ಲವನ್ನು ಡಿ-ಕೋಡಿಂಗ್ ಮಾಡುವ ಕೆಲಸ ಆರಂಭಗೊಂಡಿದೆ. ಇನ್ನಷ್ಟು ಆರೋಪಿಗಳ ಪತ್ತೆಗಾಗಿ ಪೊಲೀಸರು 800ಕ್ಕೂ ಸಿಸಿಟಿವಿಗಳನ್ನು ವಶಕ್ಕೆ ಪಡೆದಿದ್ದಾರೆ. ದೊಂಬಿ ನಡೆಯುವ ಹಿಂದಿನ ದಿನ ಪುಂಡರನ್ನು ಸೇರಿಸಲು 10 ಫೇಸ್‍ಬುಕ್ …

Read More »

1 ಸಾವಿರ ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 1 ಸಾವಿರ ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಈ ಯೋಜನೆಯಿಂದಾಗಿ 50 ಲಕ್ಷ ರೈತರಿಗೆ ಅನುಕೂಲವಾಗಲಿದ್ದು, ನೇರವಾಗಿ ರೈತರ ಖಾತೆಗೇ ಜಮೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಫೇಸ್‌ಬುಕ್ ಲೈವ್‌ನಲ್ಲಿ ರಾಜ್ಯದ ರೈತ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಸಚಿವರು, ರೈತ ಬಾಂಧವರು ತಮ್ಮ ಖಾತೆಯನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದ್ದಾರೆ. 2019-20ನೇ ಸಾಲಿನ ಬೆಳೆವಿಮೆ ಬರುವ ಮಂಗಳವಾರದಿಂದ ರೈತರ ಖಾತೆಗೆ …

Read More »

ಗೌರಿ, ಗಣೇಶ ಹಬ್ಬಕ್ಕೆ ಕೆಎಂಎಫ್‌ ನಿಂದ ಬಂಪರ್‌ ಕೊಡುಗೆ

ಬೆಂಗಳೂರು : ಕೆಎಂಎಫ್‌ ಸ್ವಾತಂತ್ರ್ಯ ದಿನಾಚರಣೆ, ಗಣೇಶ, ಗೌರಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಬಂಪರ್‌ ಕೊಡುಗೆ ನೀಡಿದೆ. ಇಂದಿನಿಂದ ಆ.30ರವರೆಗೆ ನಡೆಯಲಿರುವ ‘ನಂದಿನಿ ಸಿಹಿ ಉತ್ಸವ’ದಲ್ಲಿ ಶೇ.10 ರಷ್ಟುರಿಯಾಯಿತಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ನಡೆಯಲಿದೆ. ಶನಿವಾರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಹಾಲಿನ ಗುಣಮಟ್ಟಕಾಯ್ದುಕೊಂಡು ಗ್ರಾಹಕರಿಗೆ ಸದಾ ಕಾಲ ಉತ್ತಮ ಹಾಲು ಮತ್ತು …

Read More »

ಬೆಂಗಳೂರು ಗಲಭೆ ಪ್ರಕರಣ: ಮತ್ತೆ 35 ಆರೋಪಿಗಳ ಬಂಧನ, ಬಂಧಿತರ ಸಂಖ್ಯೆ 340ಕ್ಕೆ ಏರಿಕೆ

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಮತ್ತೆ 35 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 340ಕ್ಕೆ ಏರಿಕೆಯಾಗಿದೆ. ಕಳೆದ ಆಗಸ್ಟ್ 11ರಂದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿದ್ದ ಪೋಸ್ಟ್ ಗೆ ಸಂಬಂಧಿಸಿದಂತೆ ಪ್ರತಿಭಟನೆ ಹೆಸರಲ್ಲಿ ಗಲಭೆ ನಡೆಸಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಗೊಂಡಿದ್ದು, ಈ ವರೆಗೂ 340 ಮಂದಿಯನ್ನು ಬಂಧಿಸಿದ್ದಾರೆ. …

Read More »

ರಾಜ್ಯದಲ್ಲಿ ಒಂದೇ ದಿನ 8818 ಜನರಿಗೆ ಕೊರೊನಾ ಸೋಂಕು ಪತ್ತೆ!!

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ದಾಖಲೆಯ 8818 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 2,19,976 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 6629 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 1,34,811 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ನಿನ್ನೆ 114 ಮಂದಿ ಮೃತಪಟ್ಟಿದ್ದು ಇದುವರೆಗೆ 3831 ಜನರು ಸಾವನ್ನಪ್ಪಿದ್ದಾರೆ. 81,276 ಸಕ್ರಿಯ ಪ್ರಕರಣಗಳಿದ್ದು, 716 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ 3495 …

Read More »