ಬೆಂಗಳೂರು : ಕೊರೋನಾ ಭೀತಿಯಿಂದಾಗಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿಲ್ಲ. ಆದ್ರೇ ಕೊರೋನಾ ಭೀತಿಯ ನಡುವೆಯೂ ಪದವಿ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿಪರ ಪರೀಕ್ಷೆಗಳೂ ನಡೆಸೋದಕ್ಕೆ ನಿರ್ಧರಿಸಲಾಗಿದೆ. ಆದ್ರೆ ಕೆ ಎಸ್ ಆರ್ ಟಿ ಸಿ ವಿದ್ಯಾರ್ಥಿಗಳ ಬಸ್ ಪಾಸ್ ಅವದಿ ಮುಕ್ತಾಯಗೊಂಡಿತ್ತು. ಹೀಗಾಗಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿದ್ದರ ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿ ಬಸ್ ಪಾಸ್ ಬಳಸಿಕೊಂಡು ಒಡಾಟಕ್ಕೆ ಅನುಮತಿ …
Read More »ಸುದೀಪ್ ಹುಟ್ಟುಹಬ್ಬ ಅಭಿಮಾನಿಗಳ ಹಿತಕ್ಕಾಗಿ ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ
ಬೆಂಗಳೂರು: ಸ್ಯಾಂಡಲ್‍ವುಡ್‍ನ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಕಿಚ್ಚ ಸುದೀಪ್ 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ ಕೊರೊನಾ ಹಿನ್ನೆಲೆ ಅಭಿಮಾನಿಗಳ ಹಿತಕ್ಕಾಗಿ ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ಹುಟ್ಟುಹಬ್ಬಕ್ಕೂ ಮುನ್ನವೇ ಅಭಿಮಾನಿಗಳಿಗೆ ಮನೆಯ ಬಳಿ ಬಾರದಂತೆ ಮನವಿ ಮಾಡಿಕೊಂಡಿದ್ದರು. ಆದರೂ ಅಭಿಮಾನಿಗಳು ಅವರ ಮನೆಯ ಬಳಿ ಗುಂಪು ಸೇರಿದ್ದರು.ಮಂಗಳವಾರ ಮಧ್ಯರಾತ್ರಿ ಅಭಿಮಾನಿಗಳು ಕಿಚ್ಚನ ಪುಟ್ಟೇನಹಳ್ಳಿ ನಿವಾಸ ಬಳಿ ಗುಂಪು ಸೇರಿದ್ದರು. ಹೀಗಾಗಿ …
Read More »ಮಗನ ನಾಮಕರಣ ಮಾಡಿದ ರಾಕಿಂಗ್ ಸ್ಟಾರ್ ಯಶ್ – ರಾಧಿಕಾ ದಂಪತಿ : ಹೆಸರೇನು ಗೊತ್ತಾ?
ಬೆಂಗಳೂರು : ಸ್ಯಾಂಡಲ್ ವುಡ್ ನ ಜನಪ್ರಿಯ ತಾರಾ ಜೋಡಿಗಳಾದ ‘ರಾಕಿಂಗ್ ಸ್ಟಾರ್’ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಎರಡನೇ ಮಗು ಹುಟ್ಟಿ ಹತ್ತು ತಿಂಗಳ ಬಳಿಕ ಇದೀಗ ಸರಳವಾಗಿ ನಾಮಕರಣವನ್ನು ಮಾಡಿ ಯಥರ್ವ್ ಯಶ್ ಎಂದು ಹೆಸರನ್ನಿಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ, ಶೀಘ್ರದಲ್ಲೇ ಮಗನ ಹೆಸರನ್ನು ಬಹಿರಂಗಪಡಿಸಲಾಗುವುದು’ ಎಂದು ರಾಧಿಕಾ ತಿಳಿಸಿದ್ದರು. ಇದೀಗ ಅಧಿಕೃತವಾಗಿ ‘ಯಥರ್ವ್ ಯಶ್’ ಎಂಬ ಹೆಸರನ್ನು ಘೋಷಣೆ ಮಾಡಿದ್ದಾರೆ. ಸರಳ ಸಮಾರಂಭದಲ್ಲಿ ಶಾಸ್ತ್ರೋಕ್ತವಾಗಿ …
Read More »ಆಗಸ್ಟ್‌ನಲ್ಲಿ ಕೊರೋನಾ ಅಬ್ಬರ : ದಾಖಲಾದ ಕೇಸ್‌ಗಳೆಷ್ಟು..?
ಬೆಂಗಳೂರು : ರಾಜ್ಯದಲ್ಲಿ ಸೋಮವಾರ 6495 ಮಂದಿ ಹೊಸದಾಗಿ ಕೊರೋನಾ ಸೋಂಕು ಅಂಟಿಸಿಕೊಂಡಿದ್ದು 7,238 ಮಂದಿ ಗುಣಮುಖರಾಗಿದ್ದಾರೆ.113 ಮಂದಿ ಮೃತಪಟ್ಟಿದ್ದಾರೆ.747 ಮಂದಿ ರಾಜ್ಯದ ವಿವಿಧ ಕೊವೀಡ್ ಅಸ್ಪತ್ರೆಗಳಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆಯ ಸೋಮವಾರದ ವರದಿಯ ಪ್ರಕಾರ 43,132 ಮಂದಿಗೆ ಮಾತ್ರ ಕೊರೋನಾ ಪರೀಕ್ಷೆ ನಡೆಸಲಾಗಿದೆ. ಕಳೆದ ಕೆಲ ದಿನಗಳಲ್ಲಿ 60 ಸಾವಿರಕ್ಕೂ ಮಿಕ್ಕು ಕೊರೋನಾ ಪರೀಕ್ಷೆಗಳು ನಡೆಯುತ್ತಿದ್ದವು. ಬೆಂಗಳೂರಲ್ಲಿ ಅಧಿಕ: ಬೆಂಗಳೂರು ನಗರದಲ್ಲಿ ಸೋಮವಾರ ಕೊರೋನಾದಿಂದ …
Read More »ಮುಂದಿನ ತಿಂಗಳು ಗ್ರಾಮ ಪಂಚಾಯತಿ ಚುನಾವಣೆ
ಬೆಂಗಳೂರು: ಅವಧಿ ಮುಗಿದರೂ ಕೊರೋನಾ ಕಾರಣದಿಂದ ಮುಂದೂಡಲ್ಪಟ್ಟಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಕಾಲ ಕೂಡಿ ಬಂದಿದೆ. ಅಕ್ಟೋಬರ್ ಮೊದಲ ವಾರ ಇಲ್ಲವೇ ಎರಡನೇ ವಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಬಹುದು. ಸಾರ್ವತ್ರಿಕವಾಗಿ ಏಕಕಾಲಕ್ಕೆ ಚುನಾವಣೆ ನಡೆಸುವ ಬದಲು ಬಹುಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಚುನಾವಣಾ ಆಯೋಗಕ್ಕೆ ಜಿಲ್ಲಾಧಿಕಾರಿಗಳು ಈ ಕುರಿತಾಗಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಕೊರೋನಾ ನಿಯಮಗಳನ್ನು ಪಾಲಿಸುವ ಮೂಲಕ ಚುನಾವಣೆ ನಡೆಸಲು ಚುನಾವಣಾ ಆಯೋಗ ಕ್ರಮಕೈಗೊಂಡಿದೆ. …
Read More »ಸಚಿವ ಕೆಎಸ್ ಈಶ್ವರಪ್ಪಗೂ ಕೊರೋನಾ ಪಾಸಿಟಿವ್
ಬೆಂಗಳೂರು : ಕಳೆದ ನಿನ್ನೆಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಫೇಸ್ ಬುಕ್ ಹಾಗೂ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ …
Read More »ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯಲ್ಲಿಉತ್ತರ ಕರ್ನಾಟಕ ಭಾಗದ ಶಾಸಕರ ಪುತ್ರನ ವಿರುದ್ಧ ಡ್ರಗ್ಸ್ ಸೇವನೆ ಆರೋಪ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯಲ್ಲಿ ಎನ್ ಸಿಬಿ ಅಧಿಕಾರಿಗಳು ನಿರಂತರ ತನಿಖೆ ಕೈಗೊಂಡಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರತಿದೆ. ಮೈಸೂರು ಭಾಗದ ಓರ್ವ ಶಾಸಕರ ಪುತ್ರ ಹಾಗೂ ಉತ್ತರ ಕರ್ನಾಟಕ ಭಾಗದ ಮತ್ತೋರ್ವ ಶಾಸಕರ ಪುತ್ರನ ವಿರುದ್ಧ ಡ್ರಗ್ಸ್ ಸೇವನೆ ಆರೋಪ ಕೇಳಿಬಂದಿದೆ. ಇಬ್ಬರು ತಾವು ಮಾತ್ರವಲ್ಲದೆ ತಮ್ಮದೆಯಾದ ಗುಂಪು ಕಟ್ಟಿಕೊಂಡು ಡ್ರಗ್ಸ್ ಸೇವೆನೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಇವರ ವಿಚಾರಣೆ ಮತ್ತು ತನಿಖೆಗೆ ಮುಂದಾಗಿದ್ದು, ಸೂಕ್ತ …
Read More »ನಮ್ಮ ಹೀರೋ ಮಾಡಿದ, ಹೀರೊಯಿನ್ ಮಾಡಿದ್ರು ಅಂತ ಮುಂದೆ ಫಾಲೋ ಮಾಡಿದ್ರೆ ಗತಿಯೇನು: ನಟಿ, ರಾಜಕಾರಣಿ ತಾರಾ
ಬೆಂಗಳೂರು: ನಮ್ಮನ್ನ ಅನುಸರಿಸುವವರು ಇದ್ದಾರೆ. ಹೀಗಾಗಿ ನಮ್ಮ ಹೀರೋ ಮಾಡಿದ, ಹೀರೊಯಿನ್ ಮಾಡಿದ್ರು ಅಂತ ಮುಂದೆ ಫಾಲೋ ಮಾಡಿದ್ರೆ ಗತಿಯೇನು ಎಂದು ನಟಿ, ರಾಜಕಾರಣಿ ತಾರಾ ಪ್ರಶ್ನಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸ್ಯಾಂಡಲ್ ವುಡ್ ಡ್ರಗ್ಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಕನ್ನಡ ಚಿತ್ರರಂಗಕ್ಕೆ ಯಾವುದೇ ದುರ್ನಾತ ಬಡಿಯದಿರಲಿ ಅಂತ ದೇವರಿಗೆ ನಮಸ್ಕಾರ ಮಾಡಿದೆ. ನಾನು ಸಿಎಂಗೆ ಇಂದು ಸಲಹೆ ನೀಡುವೆ. ನಾವೆಲ್ಲರೂ ಎಲ್ಲ ಬೆಳವಣಿಗೆ ವೀಕ್ಷಿಸುತ್ತಿದ್ದೀವಿ ಎಂದರು. ಡ್ರಗ್ಸ್ ವಿಚಾರ ನಮ್ಮ ರಂಗಕ್ಕೆ …
Read More »ಅಕ್ಟೋಬರ್ನಲ್ಲಿ ಗ್ರಾಪಂ ಚುನಾವಣೆ? ಮೀಸಲಾತಿ ಪಟ್ಟಿ ಸಿದ್ಧ; ಕರೊನಾ ಕಾಲದ ನಿಯಮ ಪಾಲನೆಗೂ ಬದ್ಧ
ಬೆಂಗಳೂರು: ಕರೊನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ರಾಜ್ಯ ಚುನಾವಣಾ ಆಯೋಗ ಅಕ್ಟೋಬರ್ ಮೊದಲ ಇಲ್ಲವೇ ಎರಡನೇ ವಾರದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದ 6025 ಗ್ರಾಪಂಗಳ ಪೈಕಿ ಶೇ.90ರ ಅವಧಿ ಜೂನ್-ಜುಲೈನಲ್ಲಿ ಅಂತ್ಯಗೊಂಡಿತ್ತು. ಕರೊನಾ ಉಲ್ಬಣ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಂವಿಧಾನದತ್ತ ಅಧಿಕಾರ ಬಳಸಿ ‘ಅಸಾಧಾರಣ ಸಂದರ್ಭ’ವೆಂದು ಪರಿಗಣಿಸಿ ಚುನಾವಣೆ ಮುಂದೂಡಿತ್ತು. ರಾಜ್ಯ ಸರ್ಕಾರ ಕೂಡ ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿತ್ತು. …
Read More »ಕೊರೋನಾಗೆ ಬಲಿಯಾದರೆ 30 ಲಕ್ಷ ರು. ವಿಮೆ
ಬೆಂಗಳೂರು : ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಕರ್ತವ್ಯದಲ್ಲಿ ತೊಡಗಿದ ರಾಜ್ಯದ ಗ್ರಾಮ ಪಂಚಾಯಿತಿ ನೌಕರರು ಸೋಂಕಿನಿಂದ ಸಾವನ್ನಪ್ಪಿದರೆ 30 ಲಕ್ಷ ರು. ವಿಮಾ ಪರಿಹಾರ ನೀಡಲಿದೆ ಮತ್ತು ಸೋಂಕಿಗೊಳಗಾದರೆ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ. ಗ್ರಾಮಪಂಚಾಯತ್ ಬಿಲ್ ಕಲೆಕ್ಟರ್, ಕ್ಲರ್ಕ್, ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್, ವಾಟರ್‌ಮೆನ್, ಜವಾನ ಮತ್ತು ಸ್ವಚ್ಛತಾಗಾರರು ಕೋವಿಡ್-19 ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸಾರ್ವಜನಿಕರಲ್ಲಿ ರೋಗದ ಬಗ್ಗೆ ಅರಿವು …
Read More »