Breaking News
Home / ಜಿಲ್ಲೆ / ಬೆಂಗಳೂರು (page 324)

ಬೆಂಗಳೂರು

ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ,

ಬೆಂಗಳೂರು,ಆ.14- ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಪತಿಗಳು ನೀಡುವ ಶೌರ್ಯ ಪ್ರಶಸ್ತಿ ಈ ಬಾರಿ ರಾಜ್ಯದ 19 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಇಗೆ ಲಭಿಸಿದೆ. ಅತ್ಯುತ್ತಮ ಸೇವೆ ಸಲ್ಲಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆಪ್ರಶಸ್ತಿ ಪುರಸ್ಕೃತರು : 1. ಹೇಮಂತ್ಕುಮಾರ್- ಉಪಪೊಲೀಸ್ ವರಿಷ್ಠಾಧಿಕಾರಿ, ಲೋಕಾಯುಕ್ತ, ಬೆಂಗಳೂರು 2. ಪರಮೇಶ್ವರ್ ಹೆಗ್ಡೆ -ಉಪಪೊಲೀಸ್ ವರಿಷ್ಠಾಧಿಕಾರಿ, ಆರ್ಥಿಕ ಅಪರಾಧ ವಿಭಾಗ, ಸಿಐಡಿ, ಬೆಂಗಳೂರು 3. …

Read More »

ನಾನು ಹುಟ್ಟಿ ಬೆಳೆದಂತಹ ಮನೆ ಸಂಪೂರ್ಣವಾಗಿ ನಾಶವಾಗಿದೆ.3 ಕೋಟಿ ನಷ್ಟ ಆಗಿದೆ: ಶ್ರೀನಿವಾಸ ಮೂರ್ತಿ

ಬೆಂಗಳೂರು: ನಾವು ಯಾರ ಮೇಲೂ ದ್ವೇಷಕ್ಕೆ ಹೋಗಿಲ್ಲ. ಎಲ್ಲರೂ ಅಣ್ಣ-ತಮ್ಮಂದಿರ ರೀತಿ ಇದ್ದೇವೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಟ್ಟಾಗಿ ಇದ್ದೇವೆ ಎಂದು ಅಖಂಡ ಶ್ರೀನಿವಾಸ ಮೂರ್ತಿ ಹೇಳಿದರು.ಮಾಧ್ಯಮಗಳ ಜೊತೆ ಮಾತನಾಡಿದ ಅಖಂಡ ಶ್ರೀನಿವಾಸ ಮೂರ್ತಿ, ಯಾರು ಈ ಕೃತ್ಯಗಳನ್ನು ಮಾಡಿದ್ದಾರೆ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಿ, ನ್ಯಾಯ ಒದಗಿಸಿಕೊಡಬೇಕು ಎಂದು ದೂರನ್ನು ಕೊಟ್ಟಿದ್ದೇವೆ. ಈ ಗಲಭೆಯಿಂದ ಏನೇನು ನಷ್ಟ ಆಗಿದೆ ಎಂದು ಒಂದು ಪಟ್ಟಿ ಮಾಡಿ ಮಾಡಿಕೊಡುತ್ತೇನೆ. …

Read More »

ಬೆಂಗಳೂರು ಗಲಭೆ ರಾಜಕೀಯ ಲಾಭಕ್ಕಾಗಿ ನಡೆದಿರುವ ಘಟನೆ: ಲಕ್ಷ್ಮಣ ಸವದಿ

ರಾಯಚೂರು: ಬೆಂಗಳೂರಿನ ಕೆಜೆ ಹಳ್ಳಿ ಹಾಗೂ ಡಿಜೆ ಹಳ್ಳಿಯ ಘಟನೆ ಪೂರ್ವ ನಿಯೋಜಿತ, ಇದು ರಾಜಕೀಯ ಲಾಭಕ್ಕಾಗಿ ನಡೆದಿರುವ ಘಟನೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಯಚೂರಿನಲ್ಲಿ ಹೇಳಿದ್ದಾರೆ. ನಗರದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಬಳಿಕ ಮಾತನಾಡಿದ ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ, ಬೆಂಗಳೂರು ಗಲಭೆಗೆ ಕಾರಣವಾದ ನವೀನ್ ಅನ್ನೋ ವ್ಯಕ್ತಿ ಕಟ್ಟಾ ಕಾಂಗ್ರೆಸ್ ಬೆಂಬಲಿಗ. ನವೀನ್‍ಗೂ ಬಿಜೆಪಿಗೂ ಯಾವುದೇ …

Read More »

ಡಿಜೆ, ಕೆಜಿ ಹಳ್ಳಿಯಲ್ಲಿ ಇಂದು ನಮಾಜ್‍ಗೆ ನಿಷೇಧ – ಡಿಸಿಪಿ ಶರಣಪ್ಪ ಖಡಕ್ ಸೂಚನೆ

ಬೆಂಗಳೂರು: ನಿಷೇದಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಇಂದು ನಮಾಜ್‍ಗೆ ನಿಷೇಧ ಮಾಡಲಾಗಿದೆ.ಇಂದು ಶುಕ್ರವಾರ ಆಗಿರುವುದರಿಂದ ಸಾಮೂಹಿಕವಾಗಿ ನಮಾಜ್ ಮಾಡುತ್ತಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಹೀಗಾಗಿ ಸಾಮೂಹಿಕ ಪ್ರಾರ್ಥನೆಗಾಗಿ ಅವಕಾಶ ನಿಷೇಧಿಸಲಾಗಿದೆ. ಕೇವಲ ಮೌಲ್ವಿ ಒಬ್ಬರು ಮಾತ್ರ ಹೋಗಿ ನಮಾಜ್ ಮಾಡಲು ಅವಕಾಶ ನೀಡಲಾಗಿದೆ. ಇಂದು ನಿಷೇದಾಜ್ಞೆ ಪ್ರದೇಶದಲ್ಲಿ ನಮಾಜ್ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ. ಕೆಎಸ್‌ಆರ್‌ಪಿ, ಸಿಎಆರ್ ತುಕಡಿ …

Read More »

ರಾಜ್ಯದಲ್ಲಿ ಎರಡು ಲಕ್ಷದ ಗಡಿ ದಾಟಿದ ಮಹಾಮಾರಿ! ಇವರಿಂದ ಪ್ರಕಟಿಸಲಾಗಿದೆ.

ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಎರಡು ಲಕ್ಷದ ಗಡಿ ದಾಟಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 6,706 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,03,200ಕ್ಕೆ ಏರಿಕೆ ಕಂಡಿದೆ. ಈ ಪೈಕಿ 78,337 ಸಕ್ರೀಯ ಪ್ರಕರಣಗಳಿವೆ. ಅಲ್ಲದೇ, ಇಂದು ಕೂಡ 103 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ 727 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಂಗಳೂರು ನಗರದಲ್ಲಿ 1,893 ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ, …

Read More »

ಎಸೆಸೆಲ್ಸಿ ಪೂರಕ ಪರೀಕ್ಷೆ: ಅರ್ಜಿ ಆಹ್ವಾನ

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಅಭ್ಯರ್ಥಿ ಗಳಿಗೆ ಸೆಪ್ಟಂಬರ್‌ನಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕಾರಣಗಳಿಂದ ಗೈರುಹಾಜರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ಅವರನ್ನು ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಅದೇ ರೀತಿ, ಈ ಪ್ರಕರಣಗಳಿಂದ ವಿದ್ಯಾರ್ಥಿಗಳು ಕೆಲ ವಿಷಯಗಳಿಗೆ ಹಾಜರಾಗಿ, ಹಲವು ವಿಷಯಗಳಿಗೆ ಗೈರುಹಾಜರಾದರೂ, ಪೂರಕ ಪರೀಕ್ಷೆಯಲ್ಲಿ ನೋಂದಾಯಿಸಿಕೊಂಡರೆ, ಅಂಥವರನ್ನೂ ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಆದರೆ, ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲದಿರುವ ಬಗ್ಗೆ ಸ್ವತಃ ವಿದ್ಯಾರ್ಥಿಗಳ ಪೋಷಕರ …

Read More »

ಜನರ ಬಳಿ ಕ್ಷಮೆ ಕೇಳಿದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ

ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ತನ್ನ ಕ್ಷೇತ್ರದ ಜನರ ಬಳಿ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ. ಇಂದು ಪುಂಡರ ಕೃತ್ಯಕ್ಕೆ ಬಲಿಯಾಗಿರುವ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಯನ್ನು ಮಹಜರ್ ಮಾಡಲು ಪೊಲೀಸರು ಆಗಮಿಸಿದ್ದರು. ಜೊತೆಗೆ ಸುಟ್ಟ ವಾಹನಗಳು ಹಾನಿಯಾಗಿರುವ ಸಾರ್ವಜನಿಕ ಆಸ್ತಿಪಾಸ್ತಿಗಳ ವೀಕ್ಷಣೆ ಮಾಡಿದರು. ಈ ವೇಳೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಅಖಂಡ ಶ್ರೀನಿವಾಸ್ ಅವರು ಮನೆ ನೋಡಲು ಬಂದಿದ್ದರು. ಈ ವೇಳೆ …

Read More »

ಗಲಭೆಯ 7ನೇ ಆರೋಪಿ ಸಚಿವ ಕೆಜೆ ಜಾರ್ಜ್‌ ಅವರ ಜೊತೆ ಸುತ್ತಾಡಿದ ವಿಡಿಯೋ ಈಗ ಲಭ್ಯ

ಬೆಂಗಳೂರು: ಎಫ್‌ಬಿ ಪೋಸ್ಟ್‌ನಿಂದ ಹೊತ್ತಿ ಉರಿದ ಬೆಂಗಳೂರು ಪ್ರಕರಣದ ಮುಖ್ಯ ಆರೋಪಿಯೊಬ್ಬ ಮಾಜಿ ಗೃಹ ಸಚಿವ ಕೆಜೆ ಜಾರ್ಜ್‌ ಅವರ ಜೊತೆ ಸುತ್ತಾಡಿದ ವಿಡಿಯೋ ಈಗ ಲಭ್ಯವಾಗಿದೆ.ಹೌದು. ನಾಗವಾರ ವಾರ್ಡ್‌ನ ಕಾಂಗ್ರೆಸ್‌ ಪಾಲಿಕೆ ಸದಸ್ಯೆ ಇರ್ಷಾದ್‌ ಬೇಗಂ ಪತಿ ಖಲೀಂ ಪಾಷಾ ಬೆಂಗಳೂರು ಗಲಭೆಯ 7ನೇ ಆರೋಪಿಯಾಗಿದ್ದಾನೆ. ಗಲಾಟೆ ನಡೆದ ರಾತ್ರಿ ಈತನ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಈತ ಮನೆಯಲ್ಲಿ ಇರಲಿಲ್ಲ. ಆದರೆ ಖಲೀಂ ಜಾರ್ಜ್‌ ಜೊತೆ …

Read More »

ನಾವು ಮನುಷ್ಯರ ಪರ ಅಂತಾ ಟಾಂಗ್ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು:  ಸಿದ್ದರಾಮಯ್ಯ ಮತ್ತು  ಡಿ.ಕೆ. ಶಿವಕುಮಾರ್ ದಲಿತರ ಪರವೋ ಅಥವಾ ಭಯೋತ್ಪಾದಕರ ಪರವೋ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ  ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ನಾವು ಮನುಷ್ಯರ ಪರ ಅಂತಾ ಟಾಂಗ್ ಕೊಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರೋ ವಿಪಕ್ಷ ನಾಯಕ ಸಿದ್ದರಾಮಯ್ಯ.. ಕಟೀಲ್ ಅವರೇ, ನಾವು ಮನುಷ್ಯರ ಪರ, ಮನುಷ್ಯ ವಿರೋಧಿಗಳ ಪರ ಅಲ್ಲ. ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ …

Read More »

ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ  ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

ಬೆಂಗಳೂರು: ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ  ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ‌ ಶುಭ ಕೋರಿದರು. ಈ ಸಂದರ್ಭದಲ್ಲಿ  ಉಪಮುಖ್ಯಮಂತ್ರಿ , ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಚಿವ ಗೋಪಾಲಯ್ಯ ಸೇರಿದಂತೆ ಇತರರು ಇದ್ದರು.

Read More »