ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಾರ ಉತ್ತಮ ಮಳೆಯಾಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಬಿಡುವು ನೀಡಿರುವ ಮಳೆರಾಯ ಮತ್ತೆ ತನ್ನ ಆರ್ಭಟ ಆರಂಭಿಸಲಿದ್ದಾನೆ. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 30 ರಿಂದ ಸೆಪ್ಟೆಂಬರ್ 1 ರ ವರೆಗೆ ಮಳೆಯಾಗಲಿದೆ. ಸೆಪ್ಟೆಂಬರ್ 1 ಮತ್ತು 2 ರಂದು ವ್ಯಾಪಕ ಮಳೆ ನಿರೀಕ್ಷೆಯಿದ್ದು, ಉತ್ತರ ಕನ್ನಡ , ಉಡುಪಿ …
Read More »ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದ ಕರ್ನಾಟಕದ ನಾಲ್ವರು ಅಪಘಾತದಲ್ಲಿ ಸಾವು
ಹೈದ್ರಾಬಾದ್, ಆ.30- ತಿರುಪತಿಯ ಬಾಲಾಜಿ ದರ್ಶನ ಮಾಡಲು ತೆರಳುತ್ತಿದ್ದ ಭಕ್ತರಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಲಿಜಪಲ್ಲಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು ಮೃತಪಟ್ಟವರೆಲ್ಲರೂ ಕರ್ನಾಟಕದವರೆಂದು ತಿಳಿದುಬಂದಿದೆ. ರ್ನಾಟಕದಿಂದ ಆಂಧ್ರಪ್ರದೇಶದಲ್ಲಿರುವ ತಿರುಪತಿಯ ದರ್ಶನ ಮಾಡಲೆಂದು ತೆರಳುತ್ತಿದ್ದ ಕಾರು ಬಂಗಾರು ಪಾಲೆಂ ಮಂಡಲಂನ ಬಲಿಜಪಲ್ಲಿ ಬಳಿ ಚಲಿಸುತ್ತಿದ್ದ ಲಾರಿಯನ್ನು ಓವರ್‍ಟೇಕ್ ಮಾಡುವ ಭರದಲ್ಲಿ ಈ ದುರಂತ …
Read More »ನಟರು ಡ್ರಗ್ಸ್ ತೆಗೆದುಕೊಳ್ಳುವುದನ್ನು ನಾನು ಕಣ್ಣಾರೆ ನೋಡಿದ್ದೇನೆ”:ಆದಿ ಲೋಕೇಶ್
ಬೆಂಗಳೂರು: ನಟರು ಡ್ರಗ್ಸ್ ತೆಗೆದುಕೊಳ್ಳುವುದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ನಟ ಆದಿ ಲೋಕೇಶ್ ಲೋಕೇಶ್ ಅವರು ಹೇಳುವ ಮೂಲಕ ಹೊಸ ಬಂಬ್ ಸಿಡಿಸಿದ್ದಾರೆ. ಚಂದನವನದ ತಾರೆಯರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸುದ್ದಿ ದಿನೇ ದಿನೇ ಹೊಸ ರೂಪ ಪಡೆದುಕೊಳ್ಳುತ್ತಿದೆ. ಇಂದು ಈ ಬಗ್ಗೆ ಮಾತನಾಡಿರುವ ಆದಿ ಲೋಕೇಶ್ ಅವರು, ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ತೆಗೆದುಕೊಳ್ಳುವ ಯುವನಟರ ಬಗ್ಗೆ ಸ್ಫೋಟಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಡ್ರಗ್ಸ್ ವಿಚಾರದಲ್ಲಿ ಕೇವಲ ಸ್ಯಾಂಡಲ್‍ವುಡ್ ಅನ್ನು …
Read More »ಬೆಂಗ್ಳೂರಿಂದ ಸೊಲ್ಲಾಪುರಕ್ಕೆ ಇಂದಿನಿಂದ ರೋ ರೋ ರೈಲು
ಬೆಂಗಳೂರು : ನೈಋುತ್ಯ ರೈಲ್ವೆಯು ಬೆಂಗಳೂರು ಸಮೀಪದ ನೆಲಮಂಗಲದಿಂದ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಬಾಳೆಗೆ ಆರಂಭಿಸಿರುವ ‘ರೋಲ್ ಆನ್ ರೋಲ್ ಆಫ್’ (ರೋ ರೋ) ಎಂಬ ಸರಕು ತುಂಬಿದ ಟ್ರಕ್ ಅಥವಾ ಲಾರಿಗಳ ಸಾಗಣೆಯ ರೈಲು ಸೇವೆಯ ಪ್ರಾಯೋಗಿಕ ಸಂಚಾರಕ್ಕೆ ಇಂದು(ಭಾನುವಾರ) ಚಾಲನೆ ನೀಡಲಾಗುತ್ತಿದೆ. ಈ ಮೂಲಕ ನೈಋುತ್ಯ ರೈಲ್ವೆ ವಲಯ ಪ್ರಥಮ ಬಾರಿಗೆ ಈ ಸೇವೆ ಆರಂಭಿಸುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಳಗ್ಗೆ 9.15ಕ್ಕೆ ವೀಡಿಯೋ ಲಿಂಕ್ ಮೂಲಕ …
Read More »ವ್ಹೀಲಿಂಗ್ ಮಾಡಿ, ವಿಡಿಯೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬೆಂಗಳೂರು: ವ್ಹೀಲಿಂಗ್ ಮಾಡಿ, ವಿಡಿಯೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹಗಲು, ರಾತ್ರಿ ಎನ್ನದೆ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿಯನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತಿಕೆರೆ ನಿವಾಸಿ ಶೇಖ್ ಸಮೀರ್ ಬಂಧಿತ ಆರೋಪಿ, ಕೊಡಿಗೇಹಳ್ಳಿ ಜಂಕ್ಷನ್ ಹತ್ತಿರ ವ್ಹೀಲಿಂಗ್ ಮಾಡುತ್ತಿದ್ದಾಗ ಆರೋಪಿಯನ್ನು ಬಂಧಿಸಲಾಗಿದೆ. ಘಟನೆ ಸಂಬಂಧ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೆಬ್ಬಾಳ ಸಂಚಾರಿ ಠಾಣಾ ಇನ್ಸ್‍ಪೆಕ್ಟರ್ ಫೈರೋಜ್ ನೇತೃತ್ವದ ತಂಡ ಆರೋಪಿಯನ್ನು …
Read More »ಫನ್ ಗೋಸ್ಕರ ಚಟದ ಹಿಂದೆ ಬೀಳಬಾರದು.: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್
ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ ಮಾಫಿಯಾ ನಡೀತಾ ಇದೆ ಅನ್ನೋ ಸುದ್ದಿ ಮಾಧ್ಯಮಗಳ ಮೂಲಕ ನನಗೂ ಗೊತ್ತಾಗಿದೆ. ಫನ್ ಗೋಸ್ಕರ ಚಟದ ಹಿಂದೆ ಬೀಳಬಾರದು. ಫನ್ ಅನ್ನೋದು ವಿಪರೀತ ಆಗಬಾರದು ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಹೇಳಿದ್ದಾರೆ. ನನಗೆ 58 ವರ್ಷ, ಈ ರೀತಿಯ ಎಲ್ಲ ಬೆಳವಣಿಗೆಗಳನ್ನು ನೋಡಿಕೊಂಡು ಬಂದಿದ್ದೇನೆ. ನಾವು ಬೇರೆಯವರಿಗೆ ಮಾದರಿಯಾಗಿ ಇರೋ ರೀತಿ ಜೀವನ ನಡೆಸಬೇಕು. ಈ ಮಾತನ್ನ ನಾನೊಬ್ಬ ಮಗನಾಗಿ, ತಂದೆಯಾಗಿ, ಗಂಡನಾಗಿ ಹೇಳ್ತಿದ್ದೇನೆ. ಪೊಲೀಸರೇ …
Read More »ಪಾರ್ಟಿಗಳಲ್ಲಿ ಡ್ರಗ್ಸ್ ಹೇಗೆ ತಗೋತ್ತಾರೆ ಅನ್ನೋದು ನಮಗೆ ಗೊತ್ತೇ ಇಲ್ಲ: ಉಪೇಂದ್ರ
ಬೆಂಗಳೂರು: ನಾವೂ ಪಾರ್ಟಿಗಳಿಗೆ ಹೋಗುತ್ತೇವೆ ಆದರೆ ಡ್ರಗ್ಸ್ ದಂಧೆ ಎಲ್ಲ ನನಗೆ ಗೊತ್ತಿಲ್ಲ ಎಂದು ನಟ ಉಪೇಂದ್ರ ತಿಳಿಸಿದ್ದಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಡ್ರಗ್ಸ್ ಎಲ್ಲಿಂದ ಬರುತ್ತೆ, ಹೇಗೆ ಬರುತ್ತೆ ಎಂದು ಗೊತ್ತಿಲ್ಲ. ಆ ಪ್ರಪಂಚವೇ ನಮಗೆ ಗೊತ್ತಿಲ್ಲ. ಚಿತ್ರರಂಗದಲ್ಲಿ ಡ್ರಗ್ಸ್ ವಿಚಾರದ ಬಗ್ಗೆ ಕೇಳಿ ದಿಗ್ಬ್ರಮೆಯಾಯಿತು. ಸರಿಯಾಗಿ ಮಾಹಿತಿ ಸಿಗುವವರೆಗೂ ಮಾತನಾಡೋದು ಸರಿಯಲ್ಲ. ಸಿನಿಮಾ ಇಂಡಸ್ಟ್ರಿಯಲ್ಲಿ ನಾವೂ ಸಹ ಹಲವು ಪಾರ್ಟಿಗಳಿಗೆ ಹೋಗಿದ್ದೇವೆ. ಆದರೆ …
Read More »ಕೊರೋನಾ ಆತಂಕ: ಹಳ್ಳಿಗಳು, ಸಣ್ಣ ಪಟ್ಟಣಗಳಲ್ಲಿ ಮಿಂಚಿನ ವೇಗದಲ್ಲಿ ಹರಡುತ್ತಿದೆ ಸೋಂಕು!
ಬೆಂಗಳೂರು: ಕೋವಿಡ್ -19 ರ ಪಟ್ಟಿಯಲ್ಲಿ ಕರ್ನಾಟಕವು ಮೂರು ಲಕ್ಷ ಗಡಿ ದಾಟುತ್ತಿದ್ದಂತೆ – ತಿಂಗಳಾರಂಭದಲ್ಲಿ 1.29 ಲಕ್ಷ ಸಕಾರಾತ್ಮಕ ಪ್ರಕರಣಗಳಿಂದ ಭಾರಿ ಜಿಗಿತ ಕಂಡಿದೆ. ಸಣ್ಣ ಪಟ್ಟಣಗಳು ಮತ್ತು ಹಳ್ಳಿಗಳಲ್ಲಿ ಈ ವೈರಸ್ ವೇಗವಾಗಿ ಹರಡುತ್ತಿದೆ. ಶನಿವಾರ, ರಾಜ್ಯವು 8,324 ಹೊಸ ಪ್ರಕರಣಗಳನ್ನು ವರದಿ ಮಾಡಿದೆ, ಇದುವರೆಗೆ ರಾಜ್ಯದಲ್ಲಿ 32,7076 ಪ್ರಕರಣಗಳು ವರದಿಯಾಗಿದೆ. ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸಿದ ನಂತರ ಜನ ಮುಕ್ತ ಸಂಚಾರ, ನಗರಗಳಿಗೆ ಮರಳುವಿಕೆಮತ್ತು ಪರೀಕ್ಷೆಗಳ ಸಂಖ್ಯೆಯಲ್ಲಿನ …
Read More »ಥಿಯೇಟರ್, ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್-ಅನ್‍ಲಾಕ್ 4.O ಮಾರ್ಗಸೂಚಿ ಪ್ರಕಟ
ನವದೆಹಲಿ: ಕೇಂದ್ರ ಸರ್ಕಾರ ಅನ್‍ಲಾಕ್ 4.Oರ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಸೆಪ್ಟೆಂಬರ್ 7ರಿಂದ ಮೆಟ್ರೋ ರೈಲುಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಸೆಪ್ಟೆಂಬರ 30ರವರೆಗೆ ಲಾಕ್‍ಡೌನ್ ಮುಂದುವರಿಯಲಿದೆ./ ಸಾಮಾಜಿಕ/ರಾಜಕೀಯ/ಕ್ರೀಡೆ/ಮನೋರಂಜನೆ/ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿದೆ. ಕಾರ್ಯಕ್ರಮದಲ್ಲಿ 100 ಜನರು ಮಾತ್ರ ಪಾಲ್ಗೊಳ್ಳುವದರ ಜೊತೆ ಕೋವಿಡ್ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ಆದೇಶ ಸೆಪ್ಟೆಂಬರ್ 21ರಿಂದ ಅನ್ವಯವಾಗಲಿದೆ. ಹವಾನಿಯಂತ್ರಣ ರಹಿತ ಚಿತ್ರಮಂದಿರಗಳನ್ನು ಸೆಪ್ಟೆಂಬರ್ 21ರಿಂದ ತೆರೆಯಲು ಸರ್ಕಾರ ಅನುಮತಿ ನೀಡಿದೆ …
Read More »ಚಿತ್ರರಂಗದಲ್ಲಿ ವಾಮ ಮಾರ್ಗದಲ್ಲಿ ಗೆದ್ದವರೇ ಡ್ರಗ್ಸ್ ದಾಸರು: ಜಗ್ಗೇಶ್
ಬೆಂಗಳೂರು: ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೇ ನಶೆಹಾದರದ ದಾಸರು. ಉಪ್ಪುತಿಂದವ ನೀರು ಕುಡಿಯುವ ಎಂದು ಜಗ್ಗೇಶ್ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಆಕ್ರೋಶದಿಂದ ಪ್ರತಿಕ್ರಿಯಿಸಿದ್ದಾರೆ. ಸ್ಯಾಂಡಲ್‍ವುಡ್‍ನ ಕೆಲ ಕಲಾವಿದರಿಗೆ ಡ್ರಗ್ಸ್ ಪೂರೈಕೆ ವಿಚಾರವಾಗಿ ನಟ ಜಗ್ಗೇಶ್ ಅವರು ಆಕ್ರೋಶ ಭರಿತವಾಗಿ ಟ್ವೀಟ್ ಮಾಡುವ ಮೂಲಕ ಡ್ರಗ್ಸ್ ಮಾಫಿಯಾದ ಬಗ್ಗೆ ಮಾತನಾಡಿದರು. “ಸರಿಯಾಗಿ ಬಾಳಿಬದುಕುವ ನಿರ್ಧಾರ ಮಾಡಿ ಶ್ರಮಿಸುವರು ಎಲ್ಲೇ ಇದ್ದರು ಶ್ರೇಷ್ಠವಾಗಿ ಉಳಿಯುತ್ತಾರೆ. ನಾನು ನನ್ನಿಷ್ಟ, ನನ್ನ ಬದುಕು ಎನ್ನುವರ …
Read More »