ಬೆಂಗಳೂರು: ಪೊಲೀಸ್ ಇಲಾಖೆ ನ್ಯಾಯ ಕೊಡಬೇಕು. ಚಿತ್ರರಂಗ ಸ್ವಚ್ಛ ಆಗಬೇಕು ಅನ್ನೊದು ನನ್ನ ಉದ್ದೇಶ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿಕೆಗೆ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಮಾತನಾಡಿದ ಇಂದ್ರಜಿತ್ ಲಂಕೇಶ್, ಪೊಲೀಸ್ ಕಮಿಷನರ್ ಅವರ ತನಿಖೆಗೆ ಸಹಕರಿಸುತ್ತೀನಿ, ಭದ್ರತೆ ಕೊಡುತ್ತೀನಿ ಅಂತ ಹೇಳಿರೋದು ಸಂತೋಷ. ಆದರೆ ಪೊಲೀಸ್ ಇಲಾಖೆ ಚಿತ್ರರಂಗಕ್ಕೆ ನ್ಯಾಯ ಕೊಡಬೇಕು ಎಂದು ಕಮಲ್ ಪಂತ್ ಅವರ ಹೇಳಿಕೆಯನ್ನು ಸ್ವಾಗತಿಸಿದ್ದಾರೆ. ಅಲ್ಲದೇ ಚಿತ್ರರಂಗ ಸ್ವಚ್ಛ ಆಗಬೇಕು …
Read More »ನೂತನ ಶಿಕ್ಷಣ ನೀತಿ ಜಾರಿ; ರಾಜ್ಯಪಾಲರ ಜತೆ ಡಿಸಿಎಂ ಮಹತ್ವದ ಚರ್ಚೆ
ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ, ರಾಜ್ಯಪಾಲ ವಜೂಭಾಯಿ ವಾಲ ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ಶುಕ್ರವಾರ ಬೆಂಗಳೂರಿನಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಡಿಸಿಎಂ, ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಈವರೆಗೆ ಸರಕಾರ ಕೈಗೊಂಡಿರುವ ಕ್ರಮಗಳು, ಕಾರ್ಯಪಡೆ ರಚನೆ, ಆ ಕಾರ್ಯಪಡೆ ಜತೆ ನಡೆಸಿರುವ ಸಭೆಗಳು, ವಿಚಾರ ವಿನಿಮಯ ಇತ್ಯಾದಿ …
Read More »ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಕನ್ನಡಿಗರು ಹರಸಾಹಸ ಪಡಬೇಕಾ…?
ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕರ್ನಾಟಕದ ಅಸ್ಮಿತೆ. ಅಂತಹವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ನಾಡದ್ರೋಹದ ಕೆಲಸ. ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲು ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ? ಎಂದು ನಿಖಿಲ್ ಕುಮಾರ ಸ್ವಾಮಿ ಪ್ರಶ್ನಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರು ಅವರು ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ನಮ್ಮ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಪ್ರತಿಷ್ಠಾಪನೆ ವಿರೋಧಿಸಿ ಪುಂಡಾಟಿಕೆ ಮಾಡುತ್ತಿರುವ ಕೆಲವು ಸಂಘಟನೆಗಳನ್ನು ಸರ್ಕಾರ ಕೂಡಲೇ …
Read More »ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಜೆ ಜಾರ್ಜ್‍ಗೆ ಮತ್ತೆ ಸಂಕಷ್ಟ
ಬೆಂಗಳೂರು: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಜೆ ಜಾರ್ಜ್‍ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿದೆ. ಆರೋಪಿಗಳಾದ ಕೆ.ಜೆ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೋಹಂತಿ ಮತ್ತು ಎ.ಎಂ ಪ್ರಸಾದ್ ವಿಚಾರಣೆಗೆ ನೊಟೀಸ್ ನೀಡಿದೆ. ಪ್ರಕರಣದಲ್ಲಿ ಕೆ.ಜೆ.ಜಾರ್ಜ್, ಪ್ರಣಬ್ ಮೋಹಂತಿ, ಎ.ಎಂ.ಪ್ರಸಾದ್ ಆತ್ಮಹತ್ಯೆಗೆ ಪ್ರಚೋದನೆ ನೀಡಿಲ್ಲ ಎಂದು ಸಿಬಿಐ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನ ಪ್ರಶ್ನಿಸಿ ಮೃತ ಗಣಪತಿ …
Read More »ಕಣ್ವ ಹಗರಣ: ನಂಜುಂಡಯ್ಯ 7 ದಿನ ಇ.ಡಿ ವಶಕ್ಕೆ
ಬೆಂಗಳೂರು: ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಂಸ್ಥಾಪಕ ಎನ್.ನಂಜುಂಡಯ್ಯ ಅವರನ್ನು ಏಳು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇ.ಡಿ) ವಶಕ್ಕೆ ಪಡೆದಿದೆ. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೂರು ಎಫ್‌ಐಆರ್ ಆಧರಿಸಿ ಇ.ಡಿ ತನಿಖೆ ಆರಂಭಿಸಿ ನಂಜುಂಡಯ್ಯ ಅವರನ್ನು ವಶಕ್ಕೆ ಪಡೆದಿತ್ತು. ‘₹180 ಕೋಟಿ ವಂಚಿಸಿರುವ ಪ್ರಕರಣದಲ್ಲಿ ನಂಜುಂಡಯ್ಯ ಅವರೇ ಪ್ರಮುಖ ಆರೋಪಿ ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಇ.ಡಿ ಹೇಳಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ …
Read More »ರಾಯಣ್ಣ ಪ್ರತಿಮೆ ಸ್ಥಾಪನೆಯ ಹೋರಾಟಗಾರರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ – ಸಿದ್ದರಾಮಯ್ಯ
ಬೆಂಗಳೂರು : ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ. ನಾನು ಈಗಷ್ಟೆ ಅಲ್ಲಿನ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಪೀರನವಾಡಿಯಲ್ಲಿನ ಘಟನೆ ಸಂಬಂಧ ಟ್ವಿಟ್ ಮಾಡಿರುವ ಅವರು, ಸಂಗೊಳ್ಳಿ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು ರಾಜ್ಯ ಬಿಜೆಪಿ ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ,ಜಲ,ಭಾಷೆ …
Read More »ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ
ಬೆಂಗಳೂರು,ಆ.28-ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ …
Read More »ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ದೂರವಾಣಿ ಕರೆ:B.S.Y.
ಬೆಂಗಳೂರು: ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ಪೀರನವಾಡಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಮೂರ್ತಿ ಗಲಾಟೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೆನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿ ತಾಲ್ಲೂಕಿನ ಪೀರನವಾಡಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಪ್ರತಿಕ್ರಿಯಿಸಿದ ಸಿಎಂ ಅವರು, ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು. ಎಂದು ಡಿಸಿಗೆ …
Read More »ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವ್ಯಕ್ತಿಯಕೊಲೆ
ಬೆಳಗಾವಿ: ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವ್ಯಕ್ತಿಯನ್ನು ಕೊಲೆಗೈದಿರುವ ಘಟನೆ ಕಾಕತಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಲ್ಲಾವುದ್ದಿನ್ ನಜೀರಸಾಬ ಪಕಾಲಿ (32) ಕೊಲೆಯಾದ ವ್ಯಕ್ತಿ. ಅಮರ ಶ್ಯಾಮ ಮೇತ್ರಿ, ಅಖೀಲ ಶಿವಪ್ಪಾ ಮೇತ್ರಿ ಎಂಬ ಇಬ್ಬರು ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂಬೇಡ್ಕರ್ ಗಲ್ಲಿಯ ಯುವಕರು ಬೇರೊಂದು ಯುವಕರ ಗುಂಪಿನೊಂದಿಗೆ ಗಲಾಟೆ ನಡೆದಿತ್ತು. ಆ ಸಂದರ್ಭದಲ್ಲಿ ಸಲ್ಲಾವುದ್ದಿನ್ ಜಗಳ ಬಿಡಿಸಲು ಹೋಗಿದ್ದನು. ಆ ಸಂದರ್ಭದಲ್ಲಿ ಅಮರ …
Read More »ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಲಿಷ್ಠ ಸಂಭಾವ್ಯ XI ಹೀಗಿದೆ ನೋಡಿ!
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿ ಆರಂಭಗೊಳ್ಳಲು ಇನ್ನು ಮೂರು ವಾರಗಳು ಬಾಕಿ ಉಳಿದಿವೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ. ಎಲ್ಲಾ ಎಂಟು ಫ್ರಾಂಚೈಸಿಗಳು ಈಗಾಗಲೇ ಯುಎಇ ತಲುಪಿದ್ದು, ಅಲ್ಲಿ 6 ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸುತ್ತಿವೆ. ಆರ್‌ಸಿಬಿಯ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದೆ. ಆಗಸ್ಟ್ 27ರ ಗುರುವಾರದಿಂದ 3 ವಾರಗಳ ತರಬೇತಿಯಲ್ಲಿ ಬೆಂಗಳೂರು ತಂಡ ತೊಡಗಿಕೊಳ್ಳಲಿದೆ. ಐಪಿಎಲ್‌ನ ಆಕರ್ಷಣೀಯ …
Read More »