Breaking News
Home / ಜಿಲ್ಲೆ / ಬೆಂಗಳೂರು (page 329)

ಬೆಂಗಳೂರು

ಯತೀಂದ್ರ ಸಿದ್ದರಾಮಯ್ಯಗೂ ಕೊರೊನಾ ಪಾಸಿಟಿವ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಇದೀಗ ಅವರ ಪುತ್ರ ಯತೀಂದ್ರರಿಗೂ ಕೊರೊನಾ ಪಾಸಿಟಿವ್ ದೃಢವಾಗಿದೆ. ಬಗ್ಗೆ ಟ್ವೀಟ್ ,ಆಡಿರುವ ಯತೀಂದ್ರ, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ. ಆಗಸ್ಟ್ 4ರಂದು ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ಹರಡಿರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ಮಣಿಪಾಲ್ ಆಸ್ಪತ್ರೆಗೆ …

Read More »

ಸಿಎಂ ಬಿಎಸ್‌ವೈಗೆ ಕೊರೋನಾ ಸೋಂಕು, ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸುವವರು ಯಾರು..?

ಬೆಂಗಳೂರು,ಆ.7-ಕೊರೋನಾ ಬಾಧೆಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸುವವರು ಯಾರು ಎಂಬ ಈಗ ಪ್ರಶ್ನೆ ಎದುರಾಗಿದೆ. ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರೂ ಕ್ವಾರಂಟೈನ್ ಕಟ್ಟುಪಾಡಿನ ಪ್ರಕಾರ ಯಡಿಯೂರಪ್ಪನವರು 14 ದಿನಗಳ ಕಾಲ ಅಂದರೆ 16ನೇ ತಾರೀಖಿನವರೆಗೆ ಮನೆಯಲ್ಲಿಯೇ ಇರಬೇಕಾಗುತ್ತದೆ. ಈ ಕಾರಣ ಅವರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅನುಮಾನ. ಹಾಗೊಂದು ವೇಳೆ ಅವರು ಭಾಗವಹಿಸಲೇಬೇಕು ಎಂದಾದರೇ ಕ್ವಾರಂಟೈನ್ ನಿಯಮಗಳನ್ನು ಸಡಿಲಿಸಬೇಕಾಗುತ್ತದೆ. ಸಾಮಾನ್ಯವಾಗಿ ಮುಖ್ಯಮಂತ್ರಿ ಗೈರಿನಲ್ಲಿ …

Read More »

ಬೆಂಗಳೂರು: ಸೋಮವಾರ ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು: ಸೋಮವಾರ ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಫೇಸ್‌ಬುಕ್‌ನಲ್ಲಿ ಈ ವಿಚಾರವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸುದ್ದಿ ಗೋಷ್ಠಿ ನಡೆಸಿ ಸುರೇಶ್‌ ಕುಮಾರ್‌ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕೊರೊನಾ ಸೋಂಕು ಭೀತಿಯ ನಡುವೆಯೂ ಸರ್ಕಾರವು ಯಶಸ್ವಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿತ್ತು. 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಸರಾಸರಿ ಶೇ.98 ರಷ್ಟು …

Read More »

ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ.ಗಳು ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ.ಗಳ ಪರಿಹಾರ,

ಬೆಂಗಳೂರು- ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಂತ್ರಸ್ತರಿಗೆ ಈ ಹಿಂದಿನ‌ ರೀತಿಯೇ ಪರಿಹಾರವನ್ನು ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.‌ ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ.ಗಳು ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ.ಗಳ ಪರಿಹಾರ, ಭಾಗಶಃ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಬೇಕು‌ ಎಂದು ಅವರು ಸೂಚಿಸಿದರು.   ಜಿಲ್ಲಾ ಕೇಂದ್ರಗಳ ಹಾಸ್ಟೆಲ್, ಶಾಲಾ ಕಾಲೇಜುಗಳು ಕೋವಿಡ್ ಕೇಂದ್ರಗಳಾಗಿ ಈಗಾಗಲೇ …

Read More »

ಪ್ರವಾಹದ ಭೀತಿ ಹೆಚ್ಚಾಗಿದ್ದು ರಮೇಶ್ ಜಾರಕಿಹೊಳಿ, ಬೆಂಗಳೂರಿನಿಂದ ಬೆಳಗಾವಿ ಜಿಲ್ಲೆಗೆ……

ಬೆಂಗಳೂರು: ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯಿಂದ ಪ್ರವಾಹದ ಭೀತಿ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ಜಿಲ್ಲೆಗೆ ತೆರಳುವಂತೆ ಸಿಎಂ ಬಿಎಸ್ ವೈ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿಗೆ ಸೂಚನೆ ನೀಡಿದ್ದಾರೆ. ಇಂದು ಬೆಳಗ್ಗೆ ರಮೇಶ್ ಜಾರಕಿಹೊಳಿ ಜೊತೆಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ ಸಿಎಂ, ಬೆಳಗಾವಿಯಲ್ಲಿ ಯಾವುದೇ ಅನಾಹುತಗಳು ನಡೆಯಂತೆ ಎಚ್ಚರ ವಹಿಸಿ. ಸಂಪೂರ್ಣವಾಗಿ ಬೆಳಗಾವಿಯ ಮಳೆಯ ಅನಾಹುತಗಳು ನಮ್ಮ ಹಿಡಿತದಲ್ಲಿರಬೇಕು. ಪ್ರವಾಹ ಪರಿಸ್ಥಿತಿಯನ್ನು ನಾವು ನಿಯಂತ್ರಿಸಬೇಕು. ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆಗೆ …

Read More »

ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಸಿದ್ಧರಾಮಯ್ಯ

ಬೆಂಗಳೂರು:  ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಆಸ್ಪತ್ರೆಯಲ್ಲಿರುವ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ರಾಜಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ …

Read More »

ಕೋವಿಡ್ ಕೇರ್ ಸೆಂಟರ್ ಆಗಿ ಬದಲಾಯ್ತು ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣ

ಬೆಂಗಳೂರು, ಆ.5- ಪೀಣ್ಯದಲ್ಲಿರುವ ಶ್ರೀ ಬಸವೇಶ್ವರ ಬಸ್ ನಿಲ್ದಾಣವನ್ನು ಸಾರಿಗೆ ಇಲಾಖೆ ಕೋವಿಡ್ ಆರೈಕೆ ಕೇಂದ್ರವನ್ನಾಗಿ ಪರಿವರ್ತಿಸಿದೆ.ಪ್ರಾಥಮಿಕ ಹಂತದಲ್ಲಿ 200 ಹಾಸಿಗೆಗಳ ಈ ಕೇಂದ್ರವನ್ನು ಇಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಿದರು. ನಾಳೆಯಿಂದ ಕೇಂದ್ರದಲ್ಲಿ ದಾಖಲಾತಿ ಆರಂಭಗೊಳ್ಳಲಿದೆ. ತುಮಕೂರು ಮಾರ್ಗವಾಗಿ ಬರುವ ಬಸ್‍ಗಳು ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬರುವುದರಿಂದ ಉಂಟಾಗುವ ಸಂಚಾರ ದಟ್ಟಣೆಯನ್ನು ತಪ್ಪಿಸಲು ಪಿಣ್ಯ ಬಳಿ ಬಸವೇಶ್ವರ ಬಸ್ ನಿಲ್ದಾಣ ಮತ್ತು ಬಹುಮಹಡಿಗಳ ಸಂಕೀರ್ಣವನ್ನು …

Read More »

ಕೆಎಸ್ಆರ್‌ಟಿಸಿಯ ಮಿಡಿ ಬಸ್ಸುಗಳು ಈಗ ಅಂಬುಲೆನ್ಸ್………..

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಮಾಣ ಹೆಚ್ಚುತ್ತಿರುವ ಕಾರಣ ಕೆಎಸ್‍ಆರ್‍ಟಿಸಿಯ ಮಿಡಿ ಬಸ್ಸುಗಳನ್ನು ಅಂಬುಲೆನ್ಸ್ ಗಳನ್ನಾಗಿ ಬಳಸಿಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ.ಇದರ ಬಗ್ಗೆ ಮಾಹಿತಿ ನೀಡಿ ಸುತ್ತೋಲೆ ಹೊರಡಿಸಿರುವ ಕೆ.ಎಸ್.ಆರ್.ಟಿ.ಸಿ. ಈ ಅಂಬುಲೆನ್ಸ್ ಗಳಲ್ಲಿ ತುರ್ತುಸ್ಥಳದಿಂದ ರೋಗಿಯನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ವರ್ಗಾಹಿಸಲು ಮತ್ತು ಆಸ್ವತ್ರೆಯನ್ನು ತಲುಪಿದ ನಂತರ ತುರ್ತುಕೋಣಿಗೆ ರೋಗಿಯನ್ನು ತ್ವರಿತವಾಗಿ ಮತ್ತು ಆರಾಮದಾಯಕವಾಗಿ ತೆಗೆದುಕೊಂಡು ಹೋಗಲು ಅನುಕೂಲವಾಗುವಂತೆ 2 ಸ್ಟ್ರೆಚರ್ ಗಳನ್ನು ನಿರ್ಮಾಣ ಮಾಡಲಾಗಿದೆ. ಬ್ಯಾಂಡೇಜ್, ಕ್ರಿಮಿನಾಶಕ, …

Read More »

ಉತ್ತಮ ಮಳೆ,ಅರ್ಧದಷ್ಟು ಭರ್ತಿಯಾಗಿಲ್ಲ ಜಲಾಶಯಗಳು

ಬೆಂಗಳೂರು, ಆ.5-ಪ್ರಸಕ್ತ ಮುಂಗಾರಿನಲ್ಲಿ ರಾಜ್ಯದ ಪ್ರಮುಖ ಜಲಾಶಯಗಳು ಇನ್ನೂ ಅರ್ಧದಷ್ಟು ಭರ್ತಿಯಾಗಿಲ್ಲ. ಮುಂಗಾರು ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ನೀರು ಜಲಾಶಗಳಿಗೆ ಬಂದಿಲ್ಲ. ಕೃಷ್ಣಾ ಕೊಳ್ಳದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳು ಮಾತ್ರ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಹಂತಕ್ಕೆ ತಲುಪಿವೆ. ಉಳಿದ ಜಲಾಶಯಗಳು ನೀರಿನ ಕೊರತೆಯನ್ನು ಎದುರಿಸುತ್ತಿವೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದೆರಡು ದಿನಗಳಿಂದ ನಿರಂತರವಾಗಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದ್ದು, ಈ ವಾರ ಒಳ ಹರಿವು …

Read More »

ಸಿದ್ದರಾಮಯ್ಯ ಅವರ ಸ್ಥಿತಿಯಲೆಟಿನ್ ಬಿಡುಗಡೆಗೊಳಿಸಿದ ಮಣಿಪಾಲ್ ಆಸ್ಪತ್ರೆ

ಬೆಂಗಳೂರು:  ವಿರೋಧ ಪಕ್ಷದ  ನಾಯಕ ಸಿದ್ದರಾಮಯ್ಯ ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದಾರೆ  ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. “ಪ್ರಸ್ತುತ ಅವರಿಗೆ ಜ್ವರವಿಲ್ಲ ಮತ್ತು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸೂಕ್ತವಾದ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ ಮತ್ತು ಅವರನ್ನು ನಮ್ಮ ತಜ್ಞರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಆಸ್ಪತ್ರೆಗೆ ಬಂದ  ನಂತರ ಅವರ ಲಕ್ಷಣಗಳು ಸುಧಾರಿಸಿದೆ ಮತ್ತು ಪ್ರಸ್ತುತ ಅವರು ಆರಾಮವಾಗಿದ್ದಾರೆ” ಎಂದು ಮಣಿಪಾಲ್ ಆಸ್ಪತ್ರೆ ಆರೋಗ್ಯ ಬುಲೆಟಿನ್ ನಲ್ಲಿ ತಿಳಿಸಿದೆ. …

Read More »