ಬೆಂಗಳೂರು: ಸಿಸಿಟಿವಿಗೆ ಚೂಯಿಂಗ್ ಗಮ್ ಅಂಟಿಸಿ ಎಟಿಎಂ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಮರ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಹ್‍ಯಾ ಬಂಧಿತ ಆರೋಪಿಗಳಾಗಿದ್ದು, ಜಾಲಹಳ್ಳಿ ಕೆನರಾ ಬ್ಯಾಂಕ್ ಎಟಿಎಂ ನಿಂದ 27 ಲಕ್ಷ ಹಣ ದರೋಡೆ ಮಾಡಿದ್ದರು. ಆಗಸ್ಟ್ 10ರ ರಾತ್ರಿ ಎಟಿಎಂ ಕೇಂದ್ರ ಒಳಗಿದ್ದ ಮೂವರು ಆರೋಪಿಗಳು ಮೊದಲು ಸಿಸಿಟಿವಿ ಕ್ಯಾಮೆರಾಗೆ ಚೂಯಿಂಗ್ ಗಮ್ ಅಂಟಿಸಿ ಬಳಿಕ ವೈಯರ್ ಕಟ್ ಮಾಡಿ ಕೃತ್ಯ …
Read More »ಮುಂಜಾಗ್ರತಾ ಕ್ರಮಗಳೊಂದಿಗೆ ಪದವಿ ಕಾಲೇಜುಗಳನ್ನ ಆರಂಭಿಸಲು ಮುಂದಾಗಿರುವ ಸರ್ಕಾರ
ಬೆಂಗಳೂರು: ಕೊರೊನಾ ಮುಂಜಾಗ್ರತಾ ಕ್ರಮಗಳೊಂದಿಗೆ ಪದವಿ ಕಾಲೇಜುಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿವೆ. ಸೆಪ್ಟೆಂಬರ್ 1 ರಿಂದ ಆನ್‍ಲೈನ್ ತರಗತಿಗಳು ಮತ್ತು ಅಕ್ಟೋಬರ್ 1 ರಿಂದ ಆಫ್‍ಲೈನ್ ತರಗತಿ ಪ್ರಾರಂಭಿಸಲಾಗುತ್ತಿರುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಮೂಲಗಳ ಮಾಹಿತಿ ತಿಳಿದು ಬಂದಿದೆ. ಯುಜಿಸಿ ಸೂಚನೆ ಮೇರೆಗೆ ರಾಜ್ಯದಲ್ಲಿ ತರಗತಿ ಪ್ರಾರಂಭಕ್ಕೆ ಸರ್ಕಾರದ ನಿರ್ಧಾರ ಮಾಡಿದೆ ಎನ್ನಲಾಗಿದೆ. ಅನ್‍ಲಾಕ್ 4.O ಮಾರ್ಗಸೂಚಿಗಾಗಿ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಈ …
Read More »ಶೀಘ್ರದಲ್ಲಿ ಬಾರ್, ಕ್ಲಬ್, ಪಬ್ ಓಪನ್ ಸಾಧ್ಯತೆ: ಎಚ್.ನಾಗೇಶ್
ಬೆಂಗಳೂರು: ಶೀಘ್ರದಲ್ಲಿ ಬಾರ್, ಕ್ಲಬ್ ಮತ್ತು ಪಬ್ ಓಪನ್ ಆಗುವ ಸಾಧ್ಯತೆ ಇದೆ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದರು. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಮಾತನಾಡಿದ ಎಚ್.ನಾಗೇಶ್, ಶೀಘ್ರದಲ್ಲಿ ಬಾರ್, ಕ್ಲಬ್ ಮತ್ತು ಪಬ್ ಓಪನ್ ಆಗುವ ಸಾಧ್ಯತೆ ಇದೆ. ಈ ವಿಚಾರದಲ್ಲಿ ಸಿಎಂ ಜೊತೆಗೆ ನಾನು ಚರ್ಚೆ ನಡೆಸುವೆ. ಬಾರ್ ಮತ್ತು ಪಬ್ ಕಾರ್ಮಿಕರಿಗೆ ತೊಂದರೆಯಾಗಿದೆ. ಕ್ಲಬ್‍ಗಳಲ್ಲಿ ಸ್ಪೋರ್ಟ್ಸ್ ಚಟುವಟಿಕೆಯನ್ನು ಇಂದಿನಿಂದ ಆರಂಭವಾಗಿದೆ. ಅಲ್ಲಿ ಪಾರ್ಸಲ್‍ಗಳಿಗೆ ಮಾತ್ರ ಅನುಮತಿ …
Read More »ಇತರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕೆಎಸ್‍ಆರ್‍ಟಿಸಿ ಸಿದ್ಧ
ಬೆಂಗಳೂರು: ದೇಶಾದ್ಯಂತ ಲಾಕ್‍ಡೌನ್ ಸಡಿಲಗೊಳಿಸಿರುವುದರಿಂದ ರಾಜ್ಯದಿಂದ ಇತರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕೆಎಸ್‍ಆರ್‍ಟಿಸಿ ಸಿದ್ಧವಾಗಿದ್ದು, ನೆರೆಯ ರಾಜ್ಯಗಳು ಒಪ್ಪಿಗೆ ಸೂಚಿಸಿದರೆ ಇತರೆ ರಾಜ್ಯಗಳಿಗೆ ಬಸ್ ಸಂಚಾರ ಆರಂಭವಾಗಲಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಡಿಸಿಎಂ, ನೆರೆಯ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಜ್ಯಗಳು ಒಪ್ಪಿಗೆ ಸೂಚಿಸಿದರೆ …
Read More »ಮೆಕಾಲೆ ಶಿಕ್ಷಣ ವ್ಯವಸ್ಥೆಗೆ ವಿದಾಯ ಹೇಳುವ ಕ್ಷಣ ಸನ್ನಿಹಿತವಾಗಿದೆ : ಸುರೇಶ್ ಕುಮಾರ್
ಬೆಂಗಳೂರು: ಲಾರ್ಡ್ ಮೆಕಾಲೆ ತಳಹದಿಯ ಶಿಕ್ಷಣ ವ್ಯವಸ್ಥೆಗೆ ಇಂದು ನಾವು ವಿದಾಯ ಹೇಳುವ ಕ್ಷಣ ಸನ್ನಿಹಿತವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆದ ಹೊಸ ಶಿಕ್ಷಣ ನೀತಿಯ ಕುರಿತಾದ ಸಂವಾದದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕವಾದ ಬದಲಾವಣೆಗೆ ನಾಂದಿ ಹಾಡಿದ್ದು, ಈ ನೀತಿ ಪ್ರೇರಿತವಾದ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳ ಜ್ಞಾನಾರ್ಜನೆ, ತರ್ಕಬದ್ಧ ಆಲೋಚನೆ …
Read More »ಸಚಿವಾಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದ ವರಿಷ್ಠರು, ಸಂಪುಟ ವಿಸ್ತರಣೆಗೆ ರೆಡ್ ಸಿಗ್ನಲ್
ಬೆಂಗಳೂರು,ಆ.25- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ವರಿಷ್ಠರು ರೆಡ್ ಸಿಗ್ನಲ್ ಕೊಟ್ಟಿದ್ದು, ಅವೇಶನ ಆರಂಭದೊಳಗೆ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದೆ. ಖಾಲಿ ಇರುವ 6 ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಅಲ್ಲದೆ ಅವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಮಾಡಿದರೆ ಶಾಸಕರು ಮುನಿಸಿಕೊಳ್ಳಬಹುದೆಂಬ ಕಾರಣಕ್ಕಾಗಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದಿದ್ದರೆ ಸೆಪ್ಟೆಂಬರ್ 21ರಿಂದ ಆರಂಭವಾಗಲಿರುವ ಮಳೆಗಾಲದ ಅವೇಶನಕ್ಕೂ ಮುನ್ನವೇ …
Read More »ಕಂಡಕಂಡಲ್ಲಿ ಮೂತ್ರ ಮಾಡುವವರಿಗೆ500 ರೂಪಾಯಿ ದಂಡ
ಬೆಂಗಳೂರು, ಆ.25- ಎಚ್ಚರ ಇನ್ನು ಮುಂದೆ ಶೌಚಾಲಯದಲ್ಲಿ ಮೂತ್ರ ಮಾಡಿ, ತುರ್ತು ಎಂದು ಎಲ್ಲೆಂದರಲ್ಲಿ ನಿಂತು ಮೂತ್ರ ಮಾಡಿದರೆ ದಂಡ ಬೀಳಲಿದೆ. ಈವರೆಗೂ ಬೇಕಾಬಿಟ್ಟಿ ಕಸ ಎಸೆಯುವವರನ್ನು ಹಿಡಿದು ದಂಡ ಹಾಕಲಾಗುತ್ತಿತ್ತು. ಕೊರೊನಾ ಸಾಂಕ್ರಾಮಿಕ ಸೋಂಕಿನ ಸಂದರ್ಭದಲ್ಲಿ ಮಾಸ್ಕ್ ಧರಿಸದವರ, ಎಲ್ಲೆಂದರಲ್ಲಿ ಉಗುಳುವವರ ವಿರುದ್ಧ ಬಿಬಿಎಂಪಿ ಮಾರ್ಷಲ್‍ಗಳು ದಂಡ ವಿಸುತ್ತಿದ್ದರು ಇದೇ ಮೊದಲ ಬಾರಿಗೆ ಬೀದಿ ಬದಿಯಲ್ಲಿ ನಿಂತು ಮೂತ್ರ ಮಾಡುವವರಿಗೂ ದಂಡ ಹಾಕಿದ್ದಾರೆ. ವಾರ್ಡ್ ನಂಬರ್ 176ರ ಶಾಖಾಂಬರಿ …
Read More »ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡುವಂತೆ ಕುಮಾರಸ್ವಾಮಿ ಮುಖ್ಯಮಂತ್ರಿಗಳಿಗೆ ಮನವಿ
ಬೆಂಗಳೂರು: ಶಾಸಕರ ಅನುದಾನವನ್ನು ಕಡಿತ ಮಾಡಬೇಡಿ ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿಯವರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.ಕೊರೊನಾ ಕಾಲದಿಂದ ಕ್ಷೇತ್ರಗಳ ಅಭಿವೃದ್ಧಿ ಕುಂಠಿತವಾಗಿದೆ. ಹೀಗಾಗಿ ಶಾಸಕರಿಗೆ ನೀಡುವ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಕುಮಾರಸ್ವಾಮಿಯವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ .ಹಿಂದಿನ ಸರ್ಕಾರದಲ್ಲಿ ಪಕ್ಷಾತೀತವಾಗಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಘೋಷಿಸಲಾಗಿದ್ದ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡುವಂತೆ ಕುಮಾರಸ್ವಾಮಿ …
Read More »ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ರಾಜಕೀಯ ಕಣಕ್ಕೆ ಇಳಿಯುವ ಮೂಲಕ ಅವರು, ತಮ್ಮ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರಾವ್ ಹಾಗೂ ಗಣ್ಯರ ಸಮ್ಮುಖದಲ್ಲಿ ಅಣ್ಣಾಮಲೈ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದರು. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ರಾಜ್ಯದಲ್ಲಿ ಡಿಸಿಪಿ ಮತ್ತು ಅನೇಕ ಜಿಲ್ಲೆಗಳಲ್ಲಿ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಸ್ವಯಂನಿವೃತ್ತಿ …
Read More »ಕ್ಲಬ್‍ಗಳಲ್ಲಿ ಎಣ್ಣೆ ಇಲ್ಲದೆ ಮೋಜು ಮಾಡಬಹುದು
ಬೆಂಗಳೂರು: ಸಾಮಾಜಿಕ ಕಬ್‍ಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲ ನಿರ್ಬಂಧಗಳನ್ನು ಹೇರಿದೆ.ಅಂತರಾಜ್ಯ ಪ್ರಯಾಣಿಕರು ರಾಜ್ಯಕ್ಕೆ ಪ್ರವೇಶಿಸಬೇಕಾದರೆ ಪಾಲಿಸಬೇಕಾದ ಕೊರೊನಾ ನಿಯಮಗಳಲ್ಲಿ ಸಹ ರಾಜ್ಯಸರ್ಕಾರ ಸಡಿಲಿಕೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಸಾಮಾಜಿಕ ಕ್ಲಬ್‍ಗಳನ್ನು ತೆರೆಯಲು ಸಹ ಅನುಮತಿ ನೀಡಿದೆ. ಕ್ಲಬ್ ಗಳಲ್ಲಿ ಮೇಜಿನ ಮೇಲೆ ಆಹಾರ ವ್ಯವಸ್ಥೆಯನ್ನು ಕಲ್ಪಿಸಲು ಅವಕಾಶ ನೀಡಲಾಗಿದ್ದು, ಸಾಮಾಜಿಕ ಕ್ಲಬ್ ಗಳಲ್ಲಿ ಮದ್ಯ ಸರಬರಾಜನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಲ್ಲದೆ …
Read More »
Laxmi News 24×7